Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 13:3 - ಕನ್ನಡ ಸತ್ಯವೇದವು C.L. Bible (BSI)

3 ಆದುದರಿಂದ ಸರ್ವೇಶ್ವರಸ್ವಾಮಿ ಇಸ್ರಯೇಲರ ಮೇಲೆ ಕೋಪಗೊಂಡು, ಅವರನ್ನು ಸಿರಿಯಾದವರ ಅರಸನಾದ ಹಜಾಯೇಲನ ಕೈಗೂ ಅವನ ಮಗನಾದ ಬೆನ್ಹದದನ ಕೈಗೂ ಒಪ್ಪಿಸಿದರು. ಇಸ್ರಯೇಲರು ಯೆಹೋವಾಹಾಜನ ಜೀವಮಾನದಲ್ಲೆಲ್ಲಾ ಸಿರಿಯಾದವರ ಕೈಕೆಳಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆದುದರಿಂದ ಯೆಹೋವನು ಇಸ್ರಾಯೇಲರ ಮೇಲೆ ಕೋಪಗೊಂಡು ಅವರನ್ನು ಅರಾಮ್ಯರ ಅರಸನಾದ ಹಜಾಯೇಲನ ಕೈಗೂ ಅವನ ಮಗನಾದ ಬೆನ್ಹದದನ ಕೈಗೂ ಒಪ್ಪಿಸಿದನು. ಅವರು ಯೆಹೋವಾಹಾಜನ ಜೀವಮಾನದಲ್ಲೆಲ್ಲಾ ಅವರ ಅಧೀನದಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆದದರಿಂದ ಯೆಹೋವನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು ಅವರನ್ನು ಅರಾಮ್ಯರ ಅರಸನಾದ ಹಜಾಯೇಲನ ಕೈಗೂ ಅವನ ಮಗನಾದ ಬೆನ್ಹದದನ ಕೈಗೂ ಒಪ್ಪಿಸಿದನು. ಅವರು ಯೆಹೋವಾಹಾಜನ ಜೀವಮಾನದಲ್ಲೆಲ್ಲಾ ಇವರ ಕೈಯಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆಗ ಯೆಹೋವನು ಇಸ್ರೇಲಿಗೆ ವಿರುದ್ಧವಾಗಿ ಕೋಪಗೊಂಡು ಅರಾಮ್ಯರ ರಾಜನಾದ ಹಜಾಯೇಲನ ಮತ್ತು ಅವನ ಮಗನಾದ ಬೆನ್ಹದದನ ಅಧೀನಕ್ಕೆ ಇಸ್ರೇಲನ್ನು ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದ್ದರಿಂದ ಯೆಹೋವ ದೇವರು ಇಸ್ರಾಯೇಲಿನ ಮೇಲೆ ಕೋಪಿಸಿಕೊಂಡು, ಅವರನ್ನು ಅರಾಮ್ಯರ ಅರಸನಾದ ಹಜಾಯೇಲನ ಕೈಯಲ್ಲಿಯೂ, ಹಜಾಯೇಲನ ಮಗ ಬೆನ್ಹದದನ ಕೈಯಲ್ಲಿಯೂ ಬಹುಕಾಲ ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 13:3
16 ತಿಳಿವುಗಳ ಹೋಲಿಕೆ  

ಹಜಾಯೇಲನ ಕತ್ತಿಗೆ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುವನು; ಇವನ ಕತ್ತಿಗೆ ತಪ್ಪಿಸಿಕೊಂಡವರನ್ನು ಎಲೀಷನು ಕೊಲ್ಲುವನು.


ಆದ್ದರಿಂದ ಸರ್ವೇಶ್ವರನ ಕೋಪ ಅವರ ಮೇಲೆ ಉರಿಯಹತ್ತಿತು; ಅವರನ್ನು ಕೊಳ್ಳೆಹೊಡೆಯುವವರ ಕೈಗೆ ಒಪ್ಪಿಸಿದರು. ಶತ್ರುಗಳು ಅವರನ್ನು ಸುಲಿಗೆ ಮಾಡಿದರು. ಸರ್ವೇಶ್ವರ ಅವರನ್ನು ಅಕ್ಕಪಕ್ಕದ ವೈರಿಗಳಿಗೆ ಮಾರಿಬಿಟ್ಟರು. ಆ ಶತ್ರುಗಳ ಮುಂದೆ ಇಸ್ರಯೇಲರು ನಿಲ್ಲಲಾರದೆ ಹೋದರು.


ಇದೇ ಕಾಲದಲ್ಲಿ ಸಿರಿಯಾದವರ ಅರಸನಾದ ಹಜಾಯೇಲನು ಬಂದು ಗತ್ ಊರಿಗೆ ಮುತ್ತಿಗೆಹಾಕಿ ಅದನ್ನು ಸ್ವಾಧೀನಪಡಿಸಿಕೊಂಡು ಅಲ್ಲಿಂದ ಜೆರುಸಲೇಮಿಗೆ ದಾಳಿಯಿಡಲು ಹೊರಟನು.


ಏಕೆಂದರೆ, ನಮ್ಮ ದೇವರು ದಹಿಸುವ ಅಗ್ನಿ.


ಸಿರಿಯಾದವರ ಅರಸನಾದ ಹಜಾಯೇಲನು ಯೆಹೋವಾಹಾಜನ ಆಳ್ವಿಕೆಯಲ್ಲೆಲ್ಲಾ ಇಸ್ರಯೇಲರನ್ನು ಪೀಡಿಸುತ್ತಿದ್ದನು.


ಆದುದರಿಂದ ಸರ್ವೇಶ್ವರ ಇಸ್ರಯೇಲರ ಮೇಲೆ ಕೋಪಗೊಂಡು ಅವರನ್ನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸ ಕೂಷನ್ ರಿಷಾತಯಿಮ್ ಎಂಬವನಿಗೆ ಮಾರಿಬಿಟ್ಟರು. ಈ ಕಾರಣ ಇಸ್ರಯೇಲರು ಎಂಟು ವರ್ಷಗಳವರೆಗೆ ಅವನಿಗೆ ಗುಲಾಮರಾಗಿದ್ದರು.


ಶತ್ರುಗಳಿಂದ ನೀವುಪರಾಜಯವನ್ನು ಹೊಂದುವಂತೆ ಸರ್ವೇಶ್ವರ ಮಾಡುವರು; ನೀವು ಒಂದೇ ದಾರಿಯಿಂದ ಅವರ ಮೇಲೆ ದಾಳಿಮಾಡಲು ಹೋಗಿ ಏಳು ದಾರಿ ಹಿಡಿದು ಓಡಿಹೋಗುವಿರಿ. ಜಗದ ರಾಜ್ಯಗಳೆಲ್ಲವೂ ಇದನ್ನು ಕಂಡು ಬೆರಗಾಗುವುವು.


ನಾನು ನಿಮ್ಮ ಮೇಲೆ ಕಡುಕೋಪಗೊಳ್ಳುವೆನು; ನೀವು ನಿಮ್ಮ ಶತ್ರುಗಳ ಮುಂದೆಯೇ ಸೋತುಬೀಳುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು. ಯಾರೂ ಬೆನ್ನಟ್ಟಿ ಬರದಿದ್ದರೂ ನೀವು ಹೆದರಿ ಓಡುವಿರಿ.


ಆಗ ದಮಸ್ಕದ ಕೋಟೆಯಲ್ಲಿ ಬೆಂಕಿ ಹೊತ್ತಿಸುವೆನು. ಅದು ಬೆನ್‍ಹದದನ ಅರಮನೆಗಳನ್ನು ದಹಿಸಿಬಿಡುವುದು. ಇದು ಸರ್ವಶಕ್ತ ಸರ್ವೇಶ್ವರನಾದ ನನ್ನ ನುಡಿ.”


“ಹಿಂದೊಮ್ಮೆ ಈಜಿಪ್ಟಿಗೆ ನಾನು ಮಾಡಿದಂತೆ ನಿಮ್ಮನ್ನು ವ್ಯಾಧಿಯಿಂದ ಬಾಧಿಸಿದೆ. ನಿಮ್ಮ ಯುವಜನರು ಖಡ್ಗಕ್ಕೆ ತುತ್ತಾಗುವಂತೆ ಮಾಡಿದೆ. ನಿಮ್ಮ ಕುದುರೆಗಳು ಸೂರೆಯಾಗುವಂತೆ ಮಾಡಿದೆ. ನಿಮ್ಮ ದಂಡಿನವರ ಹೆಣಗಳು ಕೊಳೆತು ನಾರುವ ದುರ್ವಾಸನೆ ನಿಮ್ಮ ಮೂಗಿಗೆ ಬಡಿಯುವಂತೆ ಮಾಡಿದೆ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವೇಶ್ವರಸ್ವಾಮಿ.


ಇಸ್ರಯೇಲ್ ಕುಲಗಳಲ್ಲಿ ಉಳಿದಿದ್ದ ಇವರನ್ನೂ ಹೇಸಿ, ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟು, ಸೂರೆಮಾಡುವವರಿಗೆ ಒಪ್ಪಿಸಿ, ಶಿಕ್ಷಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು