Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 13:7 - ಕನ್ನಡ ಸತ್ಯವೇದವು C.L. Bible (BSI)

7 ಯೆಹೋವಾಹಾಜನಿಗೆ ಐವತ್ತುಮಂದಿ ರಾಹುತರು, ಹತ್ತು ರಥಗಳು, ಹತ್ತುಸಾವಿರ ಮಂದಿ ಕಾಲಾಳುಗಳು ಮಾತ್ರ ಉಳಿದಿದ್ದರು. ಸಿರಿಯಾದವರ ಅರಸನು ಬೇರೆ ಎಲ್ಲರನ್ನೂ ಸಂಹರಿಸಿ, ಕಣದ ಧೂಳಿಪಟದಂತೆ ಮಾಡಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವಾಹಾಜನಿಗೆ ಐವತ್ತು ಮಂದಿ ರಾಹುತರು, ಹತ್ತು ರಥಗಳು, ಹತ್ತು ಸಾವಿರ ಮಂದಿ ಕಾಲಾಳುಗಳು ಮಾತ್ರ ಉಳಿದರು. ಅರಾಮ್ಯರ ಅರಸನು ಬೇರೆ ಎಲ್ಲರನ್ನೂ ಸಂಹರಿಸಿ ಕಣದ ಧೂಳಿನಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋವಾಹಾಜನಿಗೆ ಐವತ್ತು ಮಂದಿ ರಾಹುತರು, ಹತ್ತು ರಥಗಳು, ಹತ್ತುಸಾವಿರ ಮಂದಿ ಕಾಲಾಳುಗಳು ಮಾತ್ರ ಉಳಿದರು. ಅರಾಮ್ಯರ ಅರಸನು ಬೇರೆ ಎಲ್ಲರನ್ನೂ ಸಂಹರಿಸಿ ಕಣದ ಧೂಳಿನಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅರಾಮ್ಯರ ರಾಜನು ಯೆಹೋವಾಹಾಜನ ಸೇನೆಯನ್ನು ಸೋಲಿಸಿದನು. ಅರಾಮ್ಯರ ರಾಜನು ಐವತ್ತು ಮಂದಿ ರಾಹುತರನ್ನು, ಹತ್ತು ರಥಗಳನ್ನು ಮತ್ತು ಹತ್ತು ಸಾವಿರ ಭೂಸೈನಿಕರನ್ನು ಬಿಟ್ಟು ಉಳಿದವರೆಲ್ಲರನ್ನು ಸುಗ್ಗಿಯ ಕಾಲದಲ್ಲಿ ಗಾಳಿಗೆ ಹಾರಿಹೋಗುವ ಹೊಟ್ಟಿನಂತೆ ನಾಶಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆಹೋವಾಹಾಜನ ಸೈನ್ಯದಲ್ಲಿ ಐವತ್ತು ಕುದುರೆ ರಾಹುತರು, ಹತ್ತು ರಥಗಳು, ಹತ್ತು ಸಾವಿರ ಜನ ಕಾಲಾಳುಗಳ ಹೊರತು ಏನೂ ಉಳಿಯಲಿಲ್ಲ. ಏಕೆಂದರೆ ಅರಾಮಿನ ಅರಸನು ಉಳಿದವರನ್ನು ಸಂಹರಿಸಿ, ತುಳಿದು, ಧೂಳಿನ ಹಾಗೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 13:7
17 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಇಂತೆನ್ನುತ್ತಾರೆ: ದಮಸ್ಕದ ಜನರು ಪದೇಪದೇ ಮಾಡಿರುವ ದ್ರೋಹಗಳಿಗಾಗಿ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಕಬ್ಬಿಣದ ಬಡಿಗೆಯಿಂದ ಧಾನ್ಯಗಳನ್ನು ಒಕ್ಕುವಂತೆ ಅವರು ಗಿಲ್ಯಾದ್ ಜನರನ್ನು ಬಡಿದುಬಿಟ್ಟಿದ್ದಾರೆ.


ಈ ಕಾಲದಲ್ಲಿ ಇಸ್ರಯೇಲರನ್ನು ಸರ್ವೇಶ್ವರ ಕುಗ್ಗಿಸತೊಡಗಿದರು.


“ಇಗೋ, ನ್ಯಾಯತೀರ್ಪಿನ ಕಣಿವೆಯಲ್ಲಿ ತಂಡೋಪತಂಡವಾದ ಜನಸ್ತೋಮ! ತೀರ್ಪಿನ ಕಣಿವೆಯಲ್ಲಿರುವವರಿಗೆ ಸರ್ವೇಶ್ವರನ ದಿನ ಸನ್ನಿಹಿತ!


ಕರೆತಂದವರಾರು ಆ ಪರಾಕ್ರಮಿಯನ್ನು ಪೂರ್ವದಿಂದ? ಅವನು ಗೆದ್ದುಬರುವಂತೆ ಮಾಡಿದವರಾರು ದಿಗ್ವಿಜಯದಿಂದ? ರಾಷ್ಟ್ರಗಳನ್ನು, ರಾಜರುಗಳನ್ನು ಸೋಲಿಸಿದವರಾರು ಅವನ ಕೈಯಿಂದ? ಧೂಳು ಧೂಳಾಗಿಸುತ್ತಾನೆ ಅವರನ್ನು ಅವನ ಖಡ್ಗದಿಂದ ಗಾಳಿಗೆ ತೂರಿಹೋಗುವ ಹುಲ್ಲನ್ನಾಗಿಸುತ್ತಾನೆ ಅವನ ಬಿಲ್ಲಿನಿಂದ.


ಆದುದರಿಂದ ಬಾ, ಎಂದು ನನ್ನ ಒಡೆಯನಾದ ಅಸ್ಸೀರಿಯದ ಅರಸನೊಂದಿಗೆ ಒಂದು ಒಪ್ಪಂದ ಮಾಡಿಕೊ. ಅವನು ನಿನಗೆ ಎರಡು ಸಾವಿರ ಕುದುರೆಗಳನ್ನು ಕೊಡುವನು; ಅವುಗಳ ಮೇಲೆ ಕೂರಿಸುವಷ್ಟು ಮಂದಿ ಸವಾರರು ನಿನಗಿದ್ದಾರೋ?


ಪುಡಿಪುಡಿ ಮಾಡಿದೆ ನಾನವರನು ಗಾಳಿಗೆ ತೂರುವ ಧೂಳಿನಂತೆ I ಎತ್ತೆಸೆದುಬಿಟ್ಟೆ ನಾನವರನು ಮೋರಿಯ ಕೆಸರಿನಂತೆ II


ಹಜಾಯೇಲನು, “ನನ್ನೊಡೆಯಾ, ಏಕೆ ಅಳುತ್ತೀರಿ?” ಎಂದು ಕೇಳಿದನು. ಅದಕ್ಕೆ ಅವನು, “ನೀನು ಇಸ್ರಯೇಲರಿಗೆ ಎಷ್ಟು ಕೇಡು ಮಾಡುವೆಯೆಂಬುದು ನನಗೆ ಪ್ರಕಟವಾಯಿತು. ನೀನು ಅವರ ಕೋಣೆಗಳಿಗೆ ಬೆಂಕಿ ಹೊತ್ತಿಸುವೆ; ಯೌವನಸ್ಥರನ್ನು ಕತ್ತಿಯಿಂದ ಸಂಹರಿಸುವೆ; ಮಕ್ಕಳನ್ನು ಬಂಡೆಗೆ ಅಪ್ಪಳಿಸುವೆ; ಗರ್ಭಿಣಿಯರ ಹೊಟ್ಟೆಯನ್ನು ಸೀಳುವೆ,” ಎಂದು ಉತ್ತರಕೊಟ್ಟನು.


ಇಸ್ರಯೇಲರು ಸಹ ಆಹಾರ ಸಾಮಗ್ರಿಗಳನ್ನು ಒದಗಿಸಿಕೊಂಡು ಅವರಿಗೆ ವಿರುದ್ಧ ಕೂಡಿಬಂದರು. ಸಿರಿಯಾದವರು ನಾಡಿನಲ್ಲೆಲ್ಲಾ ವ್ಯಾಪಿಸಿಕೊಂಡಿದ್ದರು. ಆಡುಮರಿಗಳ ಎರಡು ಹಿಂಡುಗಳಂತಿದ್ದ ಇಸ್ರಯೇಲರು ಅವರ ಎದುರಿನಲ್ಲೇ ಪಾಳೆಯಮಾಡಿಕೊಂಡರು.


ಅಹಾಬನು ಪ್ರದೇಶಾಧಿಪತಿಗಳ ಆಳುಗಳನ್ನು ಲೆಕ್ಕಿಸಿದಾಗ ಇನ್ನೂರ ಮೂವತ್ತೆರಡು ಮಂದಿ ಇದ್ದರು; ಇಸ್ರಯೇಲರ ಸೈನ್ಯವನ್ನು ಲೆಕ್ಕಿಸಿದಾಗ ಏಳು ಸಾವಿರ ಮಂದಿಯಿದ್ದರು.


ಅನಂತರ ಸಮುವೇಲನು ಗಿಲ್ಗಾಲನ್ನು ಬಿಟ್ಟು ಬೆನ್ಯಾಮೀನ್ಯರ ಗಿಬೆಯಕ್ಕೆ ಹೋದನು. ಸೌಲನು ತನ್ನ ಜೊತೆಯಲ್ಲಿದ್ದ ಸೈನಿಕರನ್ನು ಎಣಿಸಿದಾಗ ಆರುನೂರು ಮಂದಿಯಿದ್ದರು.


ಪುಡಿಪುಡಿ ಮಾಡಿದೆ ನಾನವರನು ಮಣ್ಣಿನ ಹೆಂಟೆಯಂತೆ ಎತ್ತೆಸೆದುಬಿಟ್ಟೆ ನಾನವರನು ಮೋರಿಯ ಕೆಸರಿನಂತೆ.


ಯೆಹೋವಾಹಾಜನ ಉಳಿದ ಚರಿತ್ರೆ ಹಾಗು ಅವನ ಶೂರಕೃತ್ಯಗಳ ವಿವರ ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


“ಹಿಂದೊಮ್ಮೆ ಈಜಿಪ್ಟಿಗೆ ನಾನು ಮಾಡಿದಂತೆ ನಿಮ್ಮನ್ನು ವ್ಯಾಧಿಯಿಂದ ಬಾಧಿಸಿದೆ. ನಿಮ್ಮ ಯುವಜನರು ಖಡ್ಗಕ್ಕೆ ತುತ್ತಾಗುವಂತೆ ಮಾಡಿದೆ. ನಿಮ್ಮ ಕುದುರೆಗಳು ಸೂರೆಯಾಗುವಂತೆ ಮಾಡಿದೆ. ನಿಮ್ಮ ದಂಡಿನವರ ಹೆಣಗಳು ಕೊಳೆತು ನಾರುವ ದುರ್ವಾಸನೆ ನಿಮ್ಮ ಮೂಗಿಗೆ ಬಡಿಯುವಂತೆ ಮಾಡಿದೆ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವೇಶ್ವರಸ್ವಾಮಿ.


ನಾನು ನಿಮ್ಮ ಮೇಲೆ ಕಡುಕೋಪಗೊಳ್ಳುವೆನು; ನೀವು ನಿಮ್ಮ ಶತ್ರುಗಳ ಮುಂದೆಯೇ ಸೋತುಬೀಳುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು. ಯಾರೂ ಬೆನ್ನಟ್ಟಿ ಬರದಿದ್ದರೂ ನೀವು ಹೆದರಿ ಓಡುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು