Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 14:10 - ಕನ್ನಡ ಸತ್ಯವೇದವು C.L. Bible (BSI)

10 ನೀನು ಎದೋಮ್ಯರನ್ನು ಸೋಲಿಸಿದ್ದರಿಂದ ಬಹಳವಾಗಿ ಉಬ್ಬಿಕೊಂಡಿರುವೆ; ಆ ಕೀರ್ತಿ ಸಾಕೆಂದು ನೆನಸಿ ಸುಮ್ಮನೆ ಮನೆಯಲ್ಲೇ ಕುಳಿತುಕೋ. ನನ್ನನ್ನು ಕೆಣಕಿ ನಿನ್ನ ಮೇಲೆಯೂ ನಿನ್ನ ರಾಜ್ಯದ ಮೇಲೆಯೂ ಏಕೆ ಕೇಡನ್ನು ಬರಮಾಡಿಕೊಳ್ಳುವೆ?” ಎಂದು ಉತ್ತರಕೊಟ್ಟು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀನು ಎದೋಮ್ಯರನ್ನು ಸೋಲಿಸಿದರಿಂದ ಬಹಳವಾಗಿ ಉಬ್ಬಿಕೊಂಡಿದ್ದೀ; ಆ ಕೀರ್ತಿಯು ಸಾಕೆಂದು ನೆನದು ಸುಮ್ಮನೆ ಮನೆಯಲ್ಲಿ ಕುಳಿತುಕೋ. ನನ್ನನ್ನು ಕೆಣಕಿ ನಿನ್ನ ಮೇಲೆಯೂ, ನಿನ್ನ ರಾಜ್ಯವಾದ ಯೆಹೂದದ ಮೇಲೆಯೂ ಯಾಕೆ ಕೇಡನ್ನು ಬರಮಾಡಿಕೊಳ್ಳುತ್ತೀ?” ಎಂದು ಉತ್ತರ ಕೊಟ್ಟುಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನೀನು ಎದೋಮ್ಯರನ್ನು ಸೋಲಿಸಿದದರಿಂದ ಬಹಳವಾಗಿ ಉಬ್ಬಿಕೊಂಡಿದ್ದೀ; ಆ ಕೀರ್ತಿಯು ಸಾಕೆಂದು ನೆನಸಿ ಸುಮ್ಮನೆ ಮನೆಯಲ್ಲಿ ಕೂತುಕೋ. ನನ್ನನ್ನು ಕೆಣಕಿ ನಿನ್ನ ಮೇಲೆಯೂ ನಿನ್ನ ರಾಜ್ಯದ ಮೇಲೆಯೂ ಯಾಕೆ ಕೇಡನ್ನು ಬರಮಾಡಿಕೊಳ್ಳುತ್ತೀ ಎಂದು ಉತ್ತರಕೊಟ್ಟು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನೀನು ಎದೋಮ್ಯರನ್ನು ಸೋಲಿಸಿದೆಯೆಂಬುದು ನಿಜ. ಆದರೆ ನೀನು ಎದೋಮ್ಯರ ಮೇಲೆ ಜಯಗಳಿಸಿದ್ದರಿಂದ ಗರ್ವಿತನಾಗಿರುವೆ. ನೀನು ನಿನ್ನ ಮನೆಯಲ್ಲೇ ಕುಳಿತು ಬಡಾಯಿಕೊಚ್ಚಿಕೋ. ನಿನಗೆ ತೊಂದರೆಯನ್ನು ತಂದುಕೊಳ್ಳಬೇಡ. ಇಲ್ಲವಾದರೆ ನೀನೂ ಬೀಳುವುದಲ್ಲದೆ, ಯೆಹೂದವೂ ನಿನ್ನೊಂದಿಗೆ ಬಿದ್ದುಹೋಗುವುದು!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನೀನು ಎದೋಮ್ಯರನ್ನು ಸೋಲಿಸಿದ್ದರಿಂದ ಗರ್ವಪಡುತ್ತಿರುವೆ, ನಿನ್ನ ಜಯದಲ್ಲಿ ಘನಪಡುತ್ತಾ, ಮನೆಯಲ್ಲಿ ಸುಮ್ಮನೆ ಕೂತಿರು. ನೀನೂ, ನಿನ್ನ ಸಂಗಡ ಯೆಹೂದವೂ ಬಿದ್ದುಹೋಗುವಂತೆ ನಿನ್ನ ಕೇಡಿಗೆ ನೀನೇ ಕೈ ಹಾಕುವುದೇಕೆ?” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 14:10
26 ತಿಳಿವುಗಳ ಹೋಲಿಕೆ  

ಆದರೆ ಅವನು ಬಲಿಷ್ಠನಾದ ಮೇಲೆ, ಗರ್ವಿಷ್ಠನೂ ಭ್ರಷ್ಠನೂ ಆದನು. ತನ್ನ ದೇವರಾದ ಸರ್ವೇಶ್ವರನಿಗೆ ದ್ರೋಹಿಯಾಗಿ, ಧೂಪವೇದಿಯ ಮೇಲೆ ತಾನೇ ಧೂಪಾರತಿ ಎತ್ತಬೇಕೆಂದು ಸರ್ವೇಶ್ವರನ ಆಲಯದ ಒಳಕ್ಕೆ ಹೋದನು.


ನೀವು ಗರ್ವಗೊಂಡು ನಿಮ್ಮ ದೇವರಾದ ಸರ್ವೇಶ್ವರನನ್ನು ಮರೆತುಬಿಟ್ಟೀರಿ!


ಆದರೆ ಹಿಜ್ಕೀಯನು ಈ ಉಪಕಾರಕ್ಕೆ ತಕ್ಕಂತೆ ನಡೆಯದೆ ಅಹಂಕಾರಿಯಾದನು. ಆದ್ದರಿಂದ ಜುದೇಯದ ಮೇಲೂ ಜೆರುಸಲೇಮಿನವರ ಮೇಲೂ ದೇವರ ಕೋಪವೆರಗಿತು.


ಕಲಹಕ್ಕೆ ದೂರವಿರುವವನು ಮಾನಕ್ಕೆ ಯೋಗ್ಯನು; ಕಲಹಕ್ಕೆ ಕೈಹಾಕುವ ಪ್ರತಿಯೊಬ್ಬನು ಮೂರ್ಖನು.


ವಿನಾಶಕ್ಕೆ ಮುಂಚೆ ವಿಪರೀತ ಬುದ್ಧಿ; ನೆಲಕ್ಕುರುಳುವುದಕ್ಕೆ ಮುಂಚೆ ನೆತ್ತಿಗೇರಿತು ಸೊಕ್ಕು.


ಉಗ್ರಕೋಪಿ ವ್ಯಾಜ್ಯವೆಬ್ಬಿಸುತ್ತಾನೆ; ದೀರ್ಘಶಾಂತನು ಜಗಳ ತೀರಿಸುತ್ತಾನೆ.


ನಿನಗೆ ಕೇಡು ಮಾಡದವನ ಸಂಗಡ, ಕಾರಣವಿಲ್ಲದೆ ಜಗಳವಾಡಬೇಡ.


ದೇವರು ನಮಗೆ ದಯಪಾಲಿಸುವ ವರಪ್ರಸಾದ ಅತ್ಯಧಿಕವಾದುದು. ಎಂತಲೇ, “ದೇವರು ಗರ್ವಿಷ್ಠರನ್ನು ವಿರೋಧಿಸುತ್ತಾರೆ. ದೀನದಲಿತರಿಗೆ ಕೃಪಾವರವನ್ನು ಅನುಗ್ರಹಿಸುತ್ತಾರೆ,” ಎಂದು ಲಿಖಿತವಾಗಿದೆ.


ದೀನದಲಿತನಾದ ಸಹೋದರನು, ದೇವರು ತನ್ನನ್ನು ಉನ್ನತ ಸ್ಥಿತಿಗೆ ಏರಿಸಿದಾಗ ಆನಂದಿಸಲಿ.


ನೋಡು, ನೇರಮನಸ್ಕನಲ್ಲದವನು, ಉಬ್ಬಿಹೋಗಿರುವ ಆ ದುರ್ಜನನು ಉಳಿಯನು; ದೇವರೊಂದಿಗೆ ಸತ್ಸಂಬಂಧ ಹೊಂದಿರುವ ಸಜ್ಜನನು ವಿಶ್ವಾಸದಿಂದಲೇ ಬಾಳುವನು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ‘ನನ್ನ ದಾಸರಾದ ಇಸ್ರಯೇಲಿನ ಪ್ರವಾದಿಗಳು ಪುರಾತನಕಾಲದಲ್ಲಿ ಬಹು ವರ್ಷ ಪ್ರವಾದಿಸುತ್ತಾ ನಾನು ಒಬ್ಬನನ್ನು ಇಸ್ರಯೇಲರ ಮೇಲೆ ಬೀಳಮಾಡುವೆನು, ಎಂದು ಮುಂತಿಳಿಸಿದ್ದರು; ನಾನು ಅವರ ಮುಖಾಂತರ ಮುಂತಿಳಿಸಿದವನು ನೀನೇ ಅಲ್ಲವೇ?’


ಮತ್ತು ಎಲ್ಲ ಖೇಡ್ಯಶಿರಸ್ತ್ರಾಣಧಾರಿಗಳಾದ ಪರ್ಷಿಯರು, ಕೂಸ್ಯರು, ಪೂಟ್ಯರು ಇವರನ್ನು ಹಾಗು


“ನರಪುತ್ರನೇ, ರೋಷಿನವರನ್ನು, ಮೆಷೆಕಿನವರನ್ನು ಹಾಗು ತೂಬಲಿನವರನ್ನು ಆಳುವ ಮಾಗೋಗ್ ದೇಶದ ದೊರೆಯಾದ ಗೋಗನ ಕಡೆಗೆ ಮುಖಮಾಡಿ ಅವನಿಗೆ ಈ ದೈವೋಕ್ತಿಯನ್ನು ನುಡಿ:


ಬೇರೆಯವರ ವ್ಯಾಜ್ಯದಲ್ಲಿ ತಲೆಹಾಕುವವನು ಬೀದಿ ನಾಯಿಯ ಬಾಲ ಎಳೆದ ದಾರಿಹೋಕನಿಗೆ ಸಮಾನನು.


ದುಡುಕಿ ನೆರೆಯವನ ಮೇಲೆ ವ್ಯಾಜ್ಯಕ್ಕೆ ಓಡಬೇಡ; ಕಡೆಗೆ ಅವನು ನಿನ್ನ ಮಾನಕಳೆದಾಗ ಏನು ಮಾಡುವೆ, ಯೋಚಿಸು.


ವಾಗ್ವಾದವು ಏರಿಗೆ ಬಿರುಕು ಬಿದ್ದಂತೆ; ಸಿಟ್ಟೇರುವುದಕ್ಕೆ ಮುಂಚೆ ಜಗಳವನ್ನು ತೊರೆದುಬಿಡು.


ಯೋಷೀಯನು ಅವನಿಗೆ ವಿರುದ್ಧ ಹೊರಟನು. ನೆಕೋವನು ಅವನ ಬಳಿಗೆ ದೂತರನ್ನು ಕಳುಹಿಸಿ, “ಜುದೇಯದ ಅರಸನೇ, ನನ್ನ ಗೊಡವೆ ನಿನಗೇಕೆ? ನಾನು ಈ ಸಾರಿ ಯುದ್ಧಕ್ಕೆ ಹೊರಟಿದ್ದು ನಿನಗೆ ವಿರೋಧವಾಗಿ ಅಲ್ಲ, ನನ್ನ ಶತ್ರುವಂಶಕ್ಕೆ ವಿರೋಧವಾಗಿಯೇ, ನಾನು ಮುನ್ನುಗ್ಗಬೇಕೆಂದು ದೇವರ ಅಪ್ಪಣೆ ಆಗಿದೆ. ನನ್ನೊಂದಿಗಿರುವ ದೇವರಿಗೆ ವಿರೋಧವಾಗಿ ನೀನು ಕೈಯೆತ್ತುವುದನ್ನು ಬಿಡು. ಇಲ್ಲವಾದರೆ, ಅವರು ನಿನ್ನನ್ನು ನಾಶಮಾಡುವರು,” ಎಂದು ಹೇಳಿಸಿದನು.


ಇದಲ್ಲದೆ, ಉಪ್ಪಿನ ಕಣಿವೆಯಲ್ಲಿ ಎದೋಮ್ಯರ ಹತ್ತು ಸಾವಿರ ಮಂದಿ ಸೈನಿಕರನ್ನು ಸದೆಬಡಿದು ಅವರಿಂದ ‘ಸೆಲ’ ದುರ್ಗವನ್ನು ಕಿತ್ತುಕೊಂಡು ಅದಕ್ಕೆ ಯೊಕ್ತೆಯೇಲ್ ಎಂಬ ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಇದೇ ಹೆಸರಿರುತ್ತದೆ.


ಅದಕ್ಕೆ ಮೋಶೆ, "ಈ ಕಪ್ಪೆಗಳು ತಮ್ಮ ಬಳಿಯಿಂದಲೂ ತಮ್ಮ ಮನೆ ಮಾರುಗಳಿಂದಲೂ ತೊಲಗಿಹೋಗಿ ನದಿಯಲ್ಲಿ ಮಾತ್ರ ಉಳಿಯುವಂತೆ ನಾನು ಯಾವಾಗ ತಮ್ಮ ಪರವಾಗಿ, ತಮ್ಮ ಪ್ರಜಾಪರಿವಾರದ ಪರವಾಗಿ ಪ್ರಾರ್ಥನೆ ಸಲ್ಲಿಸಬೇಕು? ತಮ್ಮ ಘನಚಿತ್ತಕ್ಕೆ ಸರಿತೋರಿದಂತೆ ತಾವೇ ಅದಕ್ಕೊಂದು ಕಾಲವನ್ನು ನಿಗದಿಮಾಡಬೇಕು,” ಎಂದು ಫರೋಹನನ್ನು ವಿನಂತಿಸಿದನು.


ಐಶ್ವರ್ಯ ಮೋಸಕರ, ಮದವೇರಿದವನು ಮತ್ತನಾದವನಂತೆ ಅಸ್ಥಿರ. ಅವನ ಅತಿಯಾಸೆ ಪಾತಾಳದಷ್ಟು ವಿಶಾಲ. ಮೃತ್ಯುವಿನಂತೆ ಅವನಿಗೆ ತೃಪ್ತಿಯೇ ಇಲ್ಲ. ಸಕಲ ಜನಾಂಗಗಳನ್ನು ಬಲೆಯೊಳಗೆ ಎಳೆದುಕೊಳ್ಳುತ್ತಾನೆ. ಸಮಸ್ತ ಜನಾಂಗಗಳನ್ನು ರಾಶಿಮಾಡಿಕೊಳ್ಳುತ್ತಾನೆ.


ಅಬೀಮೆಲೆಕನು ಅಲ್ಲಿಗೆ ಬಂದು ಯುದ್ಧಮಾಡುತ್ತಾ ಗೋಪುರದ ಬಾಗಿಲಿಗೆ ಬೆಂಕಿ ಹೊತ್ತಿಸಬೇಕೆಂದು ಅದರ ಸಮೀಪಕ್ಕೆ ಹೋದನು.


ನಿನ್ನ ಅಧಿಕ ಜ್ಞಾನದಿಂದ ಹಾಗು ವ್ಯಾಪಾರದಿಂದ ಸಿರಿಸಂಪತ್ತನ್ನು ವೃದ್ಧಿಮಾಡಿಕೊಂಡಿರುವೆ. ಆದುದರಿಂದ ನಿನ್ನ ಮನಸ್ಸು ನಿನ್ನ ಆಸ್ತಿಯ ನಿಮಿತ್ತ ಉಬ್ಬಿಹೋಗಿದೆ.


ಇದರಿಂದಾಗಿ ಅವನು ಗರ್ವಿಷ್ಠನಾಗುವನು. ಲಕ್ಷಾಂತರ ಸೈನಿಕರನ್ನು ಸದೆಬಡಿದಿದ್ದರೂ ಪ್ರಾಬಲ್ಯಕ್ಕೆ ಬಾರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು