Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 14:13 - ಕನ್ನಡ ಸತ್ಯವೇದವು C.L. Bible (BSI)

13 ಇಸ್ರಯೇಲರ ಅರಸ ಯೋವಾಷನು, ಅಹಜ್ಯನ ಮೊಮ್ಮಗನೂ ಯೆಹೋವಾಷನ ಮಗನೂ ಜುದೇಯದ ಅರಸನೂ ಆದ ಅಮತ್ಯನನ್ನು, ಬೇತ್ಷೆಮೆಷಿನಲ್ಲಿ ಹಿಡಿದು, ಅವನನ್ನು ಜೆರುಸಲೇಮಿಗೆ ಕರೆದುಕೊಂಡುಬಂದು, ಎಫ್ರಯಿಮ್ ಬಾಗಿಲಿಗೂ ಮೂಲೆಯ ಬಾಗಿಲಿಗೂ ಮಧ್ಯದಲ್ಲಿದ್ದ ಜೆರುಸಲೇಮಿನ ನಾನೂರು ಮೊಳ ಗೋಡೆಯನ್ನು ಕೆಡವಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇಸ್ರಾಯೇಲರ ಅರಸನಾದ ಯೋವಾಷನೂ, ಅಹಜ್ಯನ ಮೊಮ್ಮಗನೂ, ಯೆಹೋವಾಷನ ಮಗನೂ ಯೆಹೂದದ ಅರಸನೂ ಆದ ಅಮಚ್ಯನನ್ನು ಇಸ್ರಾಯೇಲರ ಅರಸನಾದ ಯೆಹೋವಾಷನು ಬೇತ್ಷೆಮೆಷಿನಲ್ಲಿ ಹಿಡಿದು ಅವನನ್ನು ಯೆರೂಸಲೇಮಿಗೆ ಕರೆದುಕೊಂಡು ಬಂದು, ಎಫ್ರಾಯೀಮ್ ಬಾಗಿಲಿನಿಂದ ಮೂಲೆಯ ಬಾಗಿಲಿನವರೆಗೂ ಇದ್ದ ಯೆರೂಸಲೇಮಿನ ನಾನೂರು ಮೊಳ ಗೋಡೆಯನ್ನು ಕೆಡವಿ ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇಸ್ರಾಯೇಲ್ಯರ ಅರಸನಾದ ಯೋವಾಷನು ಅಹಜ್ಯನ ಮೊಮ್ಮಗನೂ ಯೆಹೋವಾಷನ ಮಗನೂ ಯೆಹೂದದ ಅರಸನೂ ಆದ ಅಮಚ್ಯನನ್ನು ಬೇತ್ಷೆಮೆಷಿನಲ್ಲಿ ಹಿಡಿದು ಅವನನ್ನು ಯೆರೂಸಲೇವಿುಗೆ ಕರಕೊಂಡುಬಂದು ಎಫ್ರಾಯೀಮ್ ಬಾಗಲಿಗೂ ಮೂಲೆಯ ಬಾಗಲಿಗೂ ಮಧ್ಯದಲ್ಲಿದ್ದ ಯೆರೂಸಲೇವಿುನ ನಾನೂರು ಮೊಳ ಗೋಡೆಯನ್ನು ಕೆಡವಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಇಸ್ರೇಲಿನ ರಾಜನಾದ ಯೋವಾಷನು ಬೇತ್ಷೆಮೆಷಿನಲ್ಲಿ ಯೆಹೂದದ ರಾಜನಾದ ಅಮಚ್ಯನನ್ನು ಸೆರೆಹಿಡಿದನು. ಅಮಚ್ಯನು ಯೆಹೋವಾಷನ ಮಗನೂ ಅಹಜ್ಯನ ಮೊಮ್ಮಗನೂ ಆಗಿದ್ದನು. ಯೋವಾಷನು ಜೆರುಸಲೇಮಿಗೆ ಬಂದು ಎಫ್ರಾಯೀಮ್ ಬಾಗಿಲಿನಿಂದ ಮೂಲೆಯ ಬಾಗಿಲಿನವರೆಗೆ ಆರುನೂರು ಅಡಿ ಉದ್ದದ ಗೋಡೆಯನ್ನು ಒಡೆದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ಇಸ್ರಾಯೇಲಿನ ಅರಸನಾದ ಯೋವಾಷನು ಅಹಜ್ಯನ ಮೊಮ್ಮಗನೂ ಯೆಹೋವಾಷನ ಮಗನೂ ಯೆಹೂದದ ಅರಸನೂ ಆದ ಅಮಚ್ಯನನ್ನು ಬೇತ್ ಷೆಮೆಷ್ ಬಳಿಯಲ್ಲಿ ವಶಪಡಿಸಿಕೊಂಡನು. ಅನಂತರ ಅವನನ್ನು ಯೆರೂಸಲೇಮಿಗೆ ತೆಗೆದುಕೊಂಡು, ಎಫ್ರಾಯೀಮಿನ ಬಾಗಿಲು ಮೊದಲುಗೊಂಡು ಮೂಲೆಯ ಬಾಗಿಲವರೆಗೂ, ಆರುನೂರು ಅಡಿ ಉದ್ದದ ಯೆರೂಸಲೇಮಿನ ಗೋಡೆಯನ್ನು ಕೆಡವಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 14:13
16 ತಿಳಿವುಗಳ ಹೋಲಿಕೆ  

ಈ ಆಜ್ಞಾನುಸಾರ ಜನರು ಹೋಗಿ ಕೊಂಬೆಗಳನ್ನು ತೆಗೆದುಕೊಂಡು ಬಂದು, ತಮ್ಮ ತಮ್ಮ ಅಂಗಳಮಾಳಿಗೆಗಳಲ್ಲಿಯೂ, ದೇವಾಲಯದ ಪ್ರಾಕಾರಗಳಲ್ಲಿಯೂ, ನೀರುಬಾಗಿಲು, ಹಾಗು ಎಫ್ರಯಿಮ್ ಬಾಗಿಲು ಇವುಗಳ ಮುಂದಣ ಬಯಲುಗಳಲ್ಲಿಯೂ ಪರ್ಣಕುಟೀರಗಳನ್ನು ಮಾಡಿಕೊಂಡರು.


ಉತ್ತರದಲ್ಲಿರುವ ಗೆಬದಿಂದ ದಕ್ಷಿಣದಲ್ಲಿರುವ ರಿಮ್ಮೋನಿನವರೆಗೆ ನಾಡೆಲ್ಲ ಸಮತಟ್ಟಾಗಿರುವುದು. ಜೆರುಸಲೇಮ್ ನಗರ ಮಾತ್ರ ಸುತ್ತಮುತ್ತಲಿನ ಪ್ರದೇಶಗಳಿಗಿಂತ ಎತ್ತರವಾಗಿ ನಿಲ್ಲುವುದು. ಒಂದು ಕಡೆ ಬೆನ್ಯಾಮಿನ್ ಬಾಗಿಲಿನಿಂದ ಪೂರ್ವಕಾಲದ ಮೂಲೆಯ ಬಾಗಿಲ ತನಕವೂ ಹನನೇಲಿನ ಗೋಪುರದಿಂದ ಅರಸನ ದ್ರಾಕ್ಷೆಯ ಆಲೆಗಳ ಪರಿಯಂತವೂ ಹರಡಿರುವುದು.


ಸರ್ವೇಶ್ವರ ಹೀಗೆನ್ನುತ್ತಾರೆ: “ಇಗೋ ಕಾಲ ಬರಲಿದೆ. ಆಗ ಸರ್ವೇಶ್ವರನಾದ ನನ್ನ ಮಹಿಮೆಗಾಗಿ ಈ ನಗರವನ್ನು ಹನನೇಲನ ಗೋಪುರದಿಂದ ಮೂಲೆ ಬಾಗಿಲವರೆಗೆ ವಿಸ್ತರಿಸಲಾಗುವುದು.


ಅಲ್ಲಿಂದ ಎಫ್ರಯಿಮ್ ಬಾಗಿಲು, ಯೆಷಾನಾ ಬಾಗಿಲು, ಮೀನು ಬಾಗಿಲು, ಹನನೇಲ್ ಬುರುಜು, ಹಮ್ಮೇಯಾ ಬುರುಜು ಇವುಗಳ ಮಾರ್ಗವಾಗಿ ಕುರಿಬಾಗಿಲಿನವರೆಗೂ ಹೋಗಿ ಸೆರೆಮನೆಯ ಬಾಗಿಲಿನ ಬಳಿಯಲ್ಲಿ ನಿಂತೆವು.


ಅಂತೆಯೇ, ತನ್ನನ್ನು ತಾನೇ ಮೇಲಕ್ಕೆ ಏರಿಸಿಕೊಳ್ಳುವವನನ್ನು ದೇವರು ಕೆಳಗಿಳಿಸುವರು; ತನ್ನನ್ನು ತಾನೇ ತಗ್ಗಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು,” ಎಂದರು.


ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ, ಕೀರ್ತಿಸುತ್ತೇನೆ: ಆತನ ಕಾರ್ಯಗಳೆಲ್ಲವು ಸತ್ಯ, ಆತನ ಮಾರ್ಗಗಳೆಲ್ಲವು ನ್ಯಾಯ, ಗರ್ವಿಷ್ಠರನ್ನು ಆತ ತಗ್ಗಿಸಬಲ್ಲ.


ಗರ್ವವು ಮನುಷ್ಯನನ್ನು ದೀನಸ್ಥಿತಿಗೆ ಇಳಿಸುವುದು; ನಮ್ರತೆ ಅವನನ್ನು ಗೌರವಸ್ಥಿತಿಗೆ ಏರಿಸುವುದು.


ವಿನಾಶಕ್ಕೆ ಮುಂಚೆ ವಿಪರೀತ ಬುದ್ಧಿ; ನೆಲಕ್ಕುರುಳುವುದಕ್ಕೆ ಮುಂಚೆ ನೆತ್ತಿಗೇರಿತು ಸೊಕ್ಕು.


ನೆಬೂಕದ್ನೆಚ್ಚರನು ವರ್ಷಾರಂಭದಲ್ಲಿ ಅವನನ್ನೂ ದೇವಾಲಯದ ಮೌಲ್ಯವಸ್ತುಗಳನ್ನು ಬಾಬಿಲೋನಿಗೆ ತರಿಸಿಕೊಂಡು, ಅವನ ಸಹೋದರನಾದ ಚಿದ್ಕೀಯನನ್ನು ಜುದೇಯದ ಮತ್ತು ಜೆರುಸಲೇಮಿನ ಅರಸನನ್ನಾಗಿ ಮಾಡಿದನು.


ಬಾಬಿಲೋನಿನ ರಾಜ ನೆಬೂಕದ್ನೆಚ್ಚರನು ಅವನ ಮೇಲೆ ಯುದ್ಧಕ್ಕೆ ಬಂದು ಬಾಬಿಲೋನಿಗೆ ಕೊಂಡೊಯ್ಯುವುದಕ್ಕಾಗಿ ಅವನಿಗೆ ಬೇಡಿಹಾಕಿದನು.


ಆದುದರಿಂದ ಅಸ್ಸೀರಿಯದ ಅರಸನ ಸೈನ್ಯಾಧಿಪತಿಗಳನ್ನು ಅವನ ಮೇಲೆ ಬರಮಾಡಿದರು. ಆ ಸೇನಾಧಿಪತಿಗಳು ಮನಸ್ಸೆಯನ್ನು ಹಿಡಿದು ಅವನನ್ನು ಬಂಧಿಸಿ, ಬೇಡಿಹಾಕಿ, ಬಾಬಿಲೋನಿಗೆ ಒಯ್ದರು.


ಅನಂತರ ಬಾಬಿಲೋನಿಯರು ಅವನನ್ನು ರಿಬ್ಲದಲ್ಲಿದ್ದ ತಮ್ಮ ಅರಸನ ಬಳಿಗೆ ಎಳೆದು ತಂದು ಅವನಿಗೆ ಶಿಕ್ಷೆಯನ್ನು ವಿಧಿಸಿದರು.


ಅವನ ಜೊತೆಯಲ್ಲಿ ಬಂದಿದ್ದ ಬಾಬಿಲೋನಿಯದ ಸೈನ್ಯದವರು ಜೆರುಸಲೇಮಿನ ಸುತ್ತುಗೋಡೆಗಳನ್ನೆಲ್ಲ ಕೆಡವಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು