Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 14:19 - ಕನ್ನಡ ಸತ್ಯವೇದವು C.L. Bible (BSI)

19 ಜೆರುಸಲೇಮಿನವರು ಅವನಿಗೆ ವಿರುದ್ಧ ಒಳಸಂಚು ಮಾಡಿದ್ದರಿಂದ ಅವನು ಲಾಕೀಷಿಗೆ ಓಡಿಹೋದನು; ಆದರೆ ಅವರು ಅಲ್ಲಿಗೆ ಆಳುಗಳನ್ನು ಕಳುಹಿಸಿ ಅವನನ್ನು ಕೊಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯೆರೂಸಲೇಮಿನವರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿದ್ದರಿಂದ ಅವನು ಲಾಕೀಷಿಗೆ ಓಡಿಹೋದನು. ಆದರೆ ಅವರು ಅಲ್ಲಿಗೆ ಆಳುಗಳನ್ನು ಕಳುಹಿಸಿ ಅವನನ್ನು ಕೊಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯೆರೂಸಲೇವಿುನವರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿದ್ದರಿಂದ ಅವನು ಲಾಕೀಷಿಗೆ ಓಡಿಹೋದನು; ಆದರೆ ಅವರು ಅಲ್ಲಿಗೆ ಆಳುಗಳನ್ನು ಕಳುಹಿಸಿ ಅವನನ್ನು ಕೊಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಜನರು ಜೆರುಸಲೇಮಿನಲ್ಲಿ ಅಮಚ್ಯನ ವಿರುದ್ಧವಾಗಿ ಒಳಸಂಚು ಮಾಡಿದರು. ಅಮಚ್ಯನು ಲಾಕೀಷಿಗೆ ಓಡಿಹೋದನು. ಆದರೆ ಜನರು ಅಮಚ್ಯನ ಹಿಂದೆ ಲಾಕೀಷಿಗೆ ಆಳುಗಳನ್ನು ಕಳುಹಿಸಿದರು. ಅವರು ಲಾಕೀಷಿನಲ್ಲಿ ಅಮಚ್ಯನನ್ನು ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯೆರೂಸಲೇಮಿನವರು ಅಮಚ್ಯನ ವಿರೋಧವಾಗಿ ಒಳಸಂಚು ಮಾಡಿದ್ದರಿಂದ, ಅವನು ಲಾಕೀಷಿಗೆ ಓಡಿಹೋದನು. ಆದರೆ ಅವರು ಅವನ ಹಿಂದೆ ಲಾಕೀಷಿಗೆ ಜನರನ್ನು ಕಳುಹಿಸಿ, ಅಲ್ಲಿ ಅವನನ್ನು ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 14:19
17 ತಿಳಿವುಗಳ ಹೋಲಿಕೆ  

ಅಲ್ಲಿಂದ ಯೆಹೋಶುವನು ಇಸ್ರಯೇಲರ ಸಹಿತ ಲಾಕೀಷಿಗೆ ಹೋಗಿ ಮುತ್ತಿಗೆ ಹಾಕಿ ಯುದ್ಧಮಾಡಿದನು.


ಲಾಕೀಷಿನ ನಿವಾಸಿಗಳೇ, ನಿಮ್ಮ ಕುದುರೆಗಳನ್ನು ರಥಕ್ಕೆ ಹೂಡಿರಿ. ನಿಮ್ಮ ಊರೇ ಸಿಯೋನ್ ನಗರದ ಪಾಪಕ್ಕೆ ಮೂಲ ಕಾರಣ. ಹೌದು, ಇಸ್ರಯೇಲಿನ ದ್ರೋಹಗಳು ನಿಮ್ಮಲ್ಲಿಯೇ ಕಾಣಿಸಿಕೊಂಡವು.


ಅವನ ಸೇವಕರು ಅವನಿಗೆ ವಿರುದ್ಧ ಒಳಸಂಚು ಮಾಡಿ ಅವನನ್ನು ಅರಮನೆಯಲ್ಲಿಯೇ ಕೊಂದರು.


ಅಸ್ಸೀರಿಯದ ಅರಸನು ಲಾಕೀಷಿನಿಂದ ಮಹಾ ಸೈನ್ಯಸಹಿತರಾದ ತರ್ತಾನ್, ರಬ್ಸಾರೀಸ್, ರಬ್ಷಾಕೆ ಎಂಬವರನ್ನು ಜೆರುಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಇವರು ದಿಣ್ಣೆ ಹತ್ತಿ ಜೆರುಸಲೇಮಿಗೆ ಬಂದು, ಅಗಸರ ಹೊಲದ ಮೇಲೆ ಹಾದುಹೋಗುವ ರಾಜಮಾರ್ಗದ ಹತ್ತಿರವಿರುವ, ಕೆರೆಯ ಕಾಲುವೆಯ ಬಳಿ, ಪಾಳೆಯ ಮಾಡಿಕೊಂಡು ಅರಸನನ್ನು ಕೂಗಿ ಕರೆದರು.


ಆಗ ಜುದೇಯದ ಅರಸನಾದ ಹಿಜ್ಕೀಯನು ಲಾಕೀಷಿನಲ್ಲಿದ್ದ ಅಸ್ಸೀರಿಯದ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನಾನು ಅಪರಾಧಿ; ತಾವು ನನ್ನನ್ನು ಬಿಟ್ಟುಹೋಗಬೇಕು; ತಾವು ನನಗೆ ವಿಧಿಸುವಷ್ಟನ್ನೂ ಕೊಡುತ್ತೇನೆ,” ಎಂದು ಹೇಳಿ ಕಳುಹಿಸಿದನು. ಅಸ್ಸೀರಿಯದ ಅರಸನು ಹತ್ತು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನೂ ಒಂದು ಸಾವಿರ ಕಿಲೋಗ್ರಾಂ ಬಂಗಾರವನ್ನೂ ಕೊಡಬೇಕೆಂದು ಆಜ್ಞಾಪಿಸಿದನು.


ಆಗ ಏಲನ ಮಗ ಹೋಶೇಯನು, ರೆಮಲ್ಯನ ಮಗ ಪೆಕಹನಿಗೆ ವಿರುದ್ಧ ಒಳಸಂಚು ಮಾಡಿ, ಇವನನ್ನು ಉಜ್ಜೀಯನ ಮಗ ಯೋತಾಮನ ಆಳ್ವಿಕೆಯ ಇಪ್ಪತ್ತನೆಯ ವರ್ಷದಲ್ಲಿ ಕೊಂದು, ಇವನ ಸ್ಥಾನದಲ್ಲಿ ತಾನೇ ಅರಸನಾದನು.


ಇವನ ಸರದಾರನೂ ರೆಮಲ್ಯನ ಮಗನೂ ಆಗಿದ್ದ ಪೆಕಹ್ಯನು ಗಿಲ್ಯಾದಿನ ಐವತ್ತು ಮಂದಿ ಜನರನ್ನು ಕೂಡಿಸಿಕೊಂಡು ಇವನಿಗೆ ವಿರುದ್ಧ ಒಳಸಂಚುಮಾಡಿ ಸಮಾರಿಯದಲ್ಲಿರುವ ಅರಮನೆಯ ಗರ್ಭಗೃಹದಲ್ಲೇ ಇವನನ್ನು ಮತ್ತು ಅರ್ಗೋಬ್, ಅರ್ಯೇ ಎಂಬವರನ್ನು ಕೊಂದು ಇವನಿಗೆ ಬದಲಾಗಿ ತಾನೇ ಅರಸನಾದನು.


ಗಾದಿಯ ಮಗ ಮೆನಹೇಮನೆಂಬವನು ತಿರ್ಚದಿಂದ ಸಮಾರಿಯಕ್ಕೆ ಬಂದು ಅಲ್ಲಿದ್ದ ಯಾಬೇಷನ ಮಗ ಶಲ್ಲೂಮನನ್ನು ಕೊಂದು ಅವನ ಸ್ಥಾನದಲ್ಲಿ ತಾನೇ ಅರಸನಾದನು.


ಯಾಬೇಷನ ಮಗ ಶಲ್ಲೂಮನು ಅವರಿಗೆ ವಿರುದ್ಧ ಒಳಸಂಚುಮಾಡಿ ಪ್ರಜೆಗಳ ಮುಂದೆಯೇ ಅವನನ್ನು ಕೊಂದು ಅವನಿಗೆ ಬದಲಾಗಿ ತಾನೇ ಅರಸನಾದನು.


ಆದುದರಿಂದ ಹೆಬ್ರೋನಿನ ಅರಸ ಹೋಹಾಮ್, ಯರ್ಮೂತಿನ ಅರಸ ಪಿರಾಮ್, ಲಾಕೀಷಿನ ಅರಸ ಯಾಫೀಯ, ಎಗ್ಲೋನಿನ ಅರಸ ದೆಬೀರ್ ಇವರ ಬಳಿಗೆ ದೂತರನ್ನು ಕಳುಹಿಸಿದನು.


ಲಾಕೀಷ್, ಬೊಚ್ಕತ್, ಎಗ್ಲೋನ್,


ಅವನ ಉಳಿದ ಚರಿತ್ರೆ ಜುದೇಯ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತದೆ.


ಅವನ ಜನರು ಅವನ ಶವವನ್ನು ಕುದುರೆಗಳ ಮೇಲೆ ಜೆರುಸಲೇಮಿಗೆ ತಂದು ದಾವೀದ ನಗರದೊಳಗೆ ಅವನ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿ ಮಾಡಿದರು.


ಆಗ ಬಾಬಿಲೋನಿನ ಅರಸನ ಸೈನ್ಯವು ಜೆರುಸಲೇಮಿಗೂ ಮತ್ತು ಜುದೇಯದೊಳಗೆ ಕೋಟೆಕೊತ್ತಲದ ನಗರಗಳಾಗಿದ್ದ ಲಾಕೀಷಿಗೂ ಅಜೇಕಕ್ಕೂ ವಿರುದ್ಧ ಯುದ್ಧಮಾಡುತ್ತಿತ್ತು.


ಜುದೇಯದ ಅರಸನಾದ ಅಹಜ್ಯನು ಇದನ್ನೆಲ್ಲಾ ಕಂಡು ಬೇತ್‍ಹಗ್ಗನಿನ ಮಾರ್ಗವಾಗಿ ಓಡಿಹೋದನು. ಯೇಹುವು ಅವನನ್ನು ಹಿಂದಟ್ಟಿ, “ಅವನನ್ನೂ ರಥದಲ್ಲಿಯೇ ಹೊಡೆಯಿರಿ,” ಎಂದು ಕೂಗಲು ಅವನ ಜನರು ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್ ಗಟ್ಟದ ಮೇಲೆ ಅವನನ್ನು ಗಾಯಪಡಿಸಿದರು. ಅಹಜ್ಯನು ಮೆಗಿದ್ದೋವಿಗೆ ಓಡಿಹೋಗಿ ಅಲ್ಲಿ ಸತ್ತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು