Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 14:22 - ಕನ್ನಡ ಸತ್ಯವೇದವು C.L. Bible (BSI)

22 ಅರಸನು ಮೃತನಾಗಿ ಪಿತೃಗಳ ಬಳಿ ಸೇರಿದ ಮೇಲೆ, ಇವನು ಏಲತ್ ಎಂಬ ಪಟ್ಟಣವನ್ನು ಮತ್ತೆ ಜುದೇಯ ರಾಜ್ಯಕ್ಕೆ ಸೇರಿಸಿ, ಭದ್ರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅರಸನಾದ ಅಮಚ್ಯನು ಪೂರ್ವಿಕರ ಬಳಿಗೆ ಸೇರಿದ ಮೇಲೆ ಉಜ್ಜೀಯನು ಏಲತ್ ಎಂಬ ಪಟ್ಟಣವನ್ನು ಪುನಃ ಯೆಹೂದರಾಜ್ಯಕ್ಕೆ ಸೇರಿಸಿ ಭದ್ರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅರಸನು ಪಿತೃಗಳ ಬಳಿಗೆ ಸೇರಿದ ಮೇಲೆ ಇವನು ಏಲತ್ ಎಂಬ ಪಟ್ಟಣವನ್ನು ತಿರಿಗಿ ಯೆಹೂದರಾಜ್ಯಕ್ಕೆ ಸೇರಿಸಿ ಭದ್ರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ರಾಜನಾದ ಅಮಚ್ಯನು ಸತ್ತಮೇಲೆ ಅವನನ್ನು ಅವನ ಪೂರ್ವಿಕರ ಸ್ಮಶಾನದಲ್ಲಿ ಸಮಾಧಿ ಮಾಡಿದರು. ನಂತರ ಅಜರ್ಯನು ಏಲತ್ ಪಟ್ಟಣವನ್ನು ಮತ್ತೆ ನಿರ್ಮಿಸಿ ಅದನ್ನು ಯೆಹೂದ ರಾಜ್ಯಕ್ಕೆ ಸೇರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅಮಚ್ಯನು ಮೃತನಾಗಿ ತನ್ನ ಪಿತೃಗಳ ಸಂಗಡ ಸೇರಿದ ತರುವಾಯ, ಅಜರ್ಯನು ಏಲತನ್ನು ಪುನಃ ಕಟ್ಟಿಸಿ, ಅದನ್ನು ಯೆಹೂದಕ್ಕೆ ತಿರುಗಿ ಸೇರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 14:22
7 ತಿಳಿವುಗಳ ಹೋಲಿಕೆ  

ಇದೇ ಕಾಲದಲ್ಲಿ ಸಿರಿಯಾದವರ ಅರಸನಾದ ರೆಚೀನನು ಏಲತ್ ಪಟ್ಟಣವನ್ನು ಸಿರಿಯಾ ರಾಜ್ಯಕ್ಕೆ ಸೇರಿಸಿಕೊಂಡು ಅದರಲ್ಲಿದ್ದ ಯೆಹೂದ್ಯರನ್ನೆಲ್ಲಾ ಓಡಿಸಿದನು. ಎದೋಮ್ಯರು ಬಂದು ಅಲ್ಲಿ ವಾಸಿಸಿದರು. ಇಂದಿನವರೆಗೂ ಅದರಲ್ಲಿ ಅವರೇ ವಾಸವಾಗಿದ್ದಾರೆ.


ಎದೋಮ್ ದೇಶದಲ್ಲಿ ಎಲೋತಿನ ಹತ್ತಿರ ಕೆಂಪುಸಮುದ್ರದ ತೀರದಲ್ಲಿರುವ ಎಚ್ಯೋನ್ಗೆಬೆರಿನಲ್ಲಿ ಅರಸ ಸೊಲೊಮೋನನು ಹಡಗುಗಳನ್ನು ಕಟ್ಟಿಸಿದನು.


“ಆದಕಾರಣ ನಾವು ಸೇಯೀರಿನಲ್ಲಿರುವ ನಮ್ಮ ಬಂಧುಗಳಾದ ಏಸಾವ್ಯರ ಕಡೆಯಿಂದ ಓರೆಯಾಗಿ ಪ್ರಯಾಣಮಾಡಿ ಅರಾಬದ ಮಾರ್ಗವನ್ನು ಬಿಟ್ಟು ಏಲತ್, ಎಚ್ಯೋನ್ಗೆಬೆರ್ ಎಂಬ ಪಟ್ಟಣಗಳಿಂದ ಪ್ರಯಾಣಮಾಡಿ ಮೋವಾಬ್ಯರ ಅಡವಿಯ ದಾರಿಯಲ್ಲಿ ನಡೆದೆವು.


ಅರಸನು ಸತ್ತು ಪಿತೃಗಳ ಬಳಿಗೆ ಸೇರಿದ ಮೇಲೆ ಇವನು ಏಲೋತ್ ಪಟ್ಟಣವನ್ನು ಮತ್ತೆ ಜುದೇಯ ರಾಜ್ಯಕ್ಕೆ ಸೇರಿಸಿಕೊಂಡು ಭದ್ರಪಡಿಸಿದನು.


ಆಮೇಲೆ, ಸೊಲೊಮೋನನು ಎದೋಮ್ ದೇಶದ ಸಮುದ್ರತೀರದಲ್ಲಿರುವ ಎಚ್ಯೋನ್ಗೆಬೆರ್ ಹಾಗೂ ಏಲೋತ್ ಎಂಬ ಊರುಗಳಿಗೆ ಹೋದನು.


ಅನಂತರ ಎಲ್ಲಾ ಯೆಹೂದ್ಯರು ಕೂಡಿ ಹದಿನಾರು ವರ್ಷದವನಾದ ಅಜರ್ಯನನ್ನು ಅವನ ತಂದೆ ಅಮಚ್ಯನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು.


ಜುದೇಯದ ಅರಸನೂ ಯೆಹೋವಾಷನ ಮಗನೂ ಆದ ಅಮಚ್ಯನ ಆಳ್ವಿಕೆಯ ಹದಿನೈದನೆಯ ವರ್ಷದಲ್ಲಿ, ಇಸ್ರಯೇಲರ ಅರಸನಾದ ಯೋವಾಷನ ಮಗ ಯಾರೊಬ್ಬಾಮನು, ಅರಸನಾಗಿ ಸಮಾರಿಯದಲ್ಲಿ ನಾಲ್ವತ್ತೊಂದು ವರ್ಷ ಆಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು