Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 14:23 - ಕನ್ನಡ ಸತ್ಯವೇದವು C.L. Bible (BSI)

23 ಜುದೇಯದ ಅರಸನೂ ಯೆಹೋವಾಷನ ಮಗನೂ ಆದ ಅಮಚ್ಯನ ಆಳ್ವಿಕೆಯ ಹದಿನೈದನೆಯ ವರ್ಷದಲ್ಲಿ, ಇಸ್ರಯೇಲರ ಅರಸನಾದ ಯೋವಾಷನ ಮಗ ಯಾರೊಬ್ಬಾಮನು, ಅರಸನಾಗಿ ಸಮಾರಿಯದಲ್ಲಿ ನಾಲ್ವತ್ತೊಂದು ವರ್ಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯೆಹೂದದ ಅರಸನೂ, ಯೆಹೋವಾಷನ ಮಗನೂ ಆದ ಅಮಚ್ಯನ ಆಳ್ವಿಕೆಯ ಹದಿನೈದನೆಯ ವರ್ಷದಲ್ಲಿ ಇಸ್ರಾಯೇಲರ ಅರಸನಾದ ಯೋವಾಷನ ಮಗನಾದ ಯಾರೊಬ್ಬಾಮನು ಅರಸನಾಗಿ ಸಮಾರ್ಯದಲ್ಲಿ ನಲ್ವತ್ತೊಂದು ವರ್ಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಯೆಹೂದದ ಅರಸನೂ ಯೆಹೋವಾಷನ ಮಗನೂ ಆದ ಅಮಚ್ಯನ ಆಳಿಕೆಯ ಹದಿನೈದನೆಯ ವರುಷದಲ್ಲಿ ಇಸ್ರಾಯೇಲ್ಯರ ಅರಸನಾದ ಯೋವಾಷನ ಮಗ ಯಾರೊಬ್ಬಾಮನು ಅರಸನಾಗಿ ಸಮಾರ್ಯದಲ್ಲಿ ನಾಲ್ವತ್ತೊಂದು ವರುಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯೆಹೂದದ ರಾಜನೂ ಯೆಹೋವಾಷನ ಮಗನೂ ಆದ ಅಮಚ್ಯನ ಆಳ್ವಿಕೆಯ ಹದಿನೈದನೆಯ ವರ್ಷದಲ್ಲಿ ಇಸ್ರೇಲರ ರಾಜನೂ ಯೋವಾಷನ ಮಗನೂ ಆದ ಯಾರೊಬ್ಬಾಮನು ಸಮಾರ್ಯದಲ್ಲಿ ಆಳಲಾರಂಭಿಸಿದನು. ಯಾರೊಬ್ಬಾಮನು ನಲವತ್ತೊಂದು ವರ್ಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಯೆಹೂದದ ಅರಸನಾದ ಯೋವಾಷನ ಮಗನಾದ ಅಮಚ್ಯನ ಆಳ್ವಿಕೆಯ ಹದಿನೈದನೆಯ ವರ್ಷದಲ್ಲಿ ಇಸ್ರಾಯೇಲಿನ ಅರಸನಾದ ಯೋವಾಷನ ಮಗನಾದ ಯಾರೊಬ್ಬಾಮನು ಸಮಾರ್ಯದಲ್ಲಿ ಆಳಲು ಆರಂಭಿಸಿ, ನಾಲ್ವತ್ತೊಂದು ವರ್ಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 14:23
13 ತಿಳಿವುಗಳ ಹೋಲಿಕೆ  

ಜುದೇಯದಲ್ಲಿ ಮಹಾ ಭೂಕಂಪ ಆಗುವುದಕ್ಕೆ ಎರಡು ವರ್ಷಗಳ ಮುಂಚೆ, ತೆಕೋವದ ಕುರುಬರಲ್ಲೊಬ್ಬನಾದ ಆಮೋಸನಿಗೆ ಇಸ್ರಯೇಲಿನ ವಿಷಯವಾಗಿ ದೇವರಿಂದ ಬಂದ ಪ್ರಕಟನೆಗಳು ಇವು. ಆಗ ಜುದೇಯ ನಾಡನ್ನು ಉಜ್ಜೀಯನೆಂಬ ಅರಸನು ಆಳುತ್ತಿದ್ದ ಕಾಲ. ಅಂತೆಯೇ, ಯೋವಾಷನ ಮಗನಾದ ಯಾರೊಬ್ಬಾಮನು ಇಸ್ರಯೇಲನ್ನು ಆಳುತ್ತಿದ್ದ ಕಾಲ.


ಜುದೇಯ ನಾಡಿನಲ್ಲಿ ಉಜ್ಜೀಯ, ಯೋತಾಮ, ಆಹಾಜ ಮತ್ತು ಹಿಜ್ಕೀಯ ಇವರು ಅರಸರಾಗಿದ್ದಾಗ ಹಾಗೂ ಇಸ್ರಯೇಲ್ ನಾಡಿನಲ್ಲಿ ಯೋವಾಷನ ಮಗ ಯಾರೊಬ್ಬಾಮನು ಆಳುತ್ತಿದ್ದ ಕಾಲದಲ್ಲಿ, ಬೆಯೇರಿಯನ ಮಗನಾದ ಹೊಶೇಯನಿಗೆ ದೇವರು ದಯಪಾಲಿಸಿದ ಸಂದೇಶವಿದು:


ಆ ಜನರನ್ನು ಭೂಲೋಕದಿಂದ ನಿರ್ನಾಮಮಾಡುವುದಕ್ಕೆ ಮನಸ್ಸಿಲ್ಲದೆ, ಯೋವಾಷನ ಮಗ ಯಾರೊಬ್ಬಾಮನ ಮುಖಾಂತರ ಅವರನ್ನು ರಕ್ಷಿಸಿದರು.


ಅರಸನು ಮೃತನಾಗಿ ಪಿತೃಗಳ ಬಳಿ ಸೇರಿದ ಮೇಲೆ, ಇವನು ಏಲತ್ ಎಂಬ ಪಟ್ಟಣವನ್ನು ಮತ್ತೆ ಜುದೇಯ ರಾಜ್ಯಕ್ಕೆ ಸೇರಿಸಿ, ಭದ್ರಪಡಿಸಿದನು.


ಇವನು ಇಸ್ರಯೇಲರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ದುರ್ಮಾರ್ಗವನ್ನು ಬಿಡದೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.


ಸರ್ವೇಶ್ವರ ಯೇಹುವಿಗೆ, “ನೀನು ನನ್ನ ದೃಷ್ಟಿಗೆ ಸರಿಯಾದದ್ದನ್ನು ನಡೆಸಿ ನನ್ನ ಮೆಚ್ಚಿಕೆಯನ್ನು ಪಡೆದೆ; ಅಹಾಬನ ಮನೆಯವರನ್ನು ಕುರಿತು ನನ್ನ ಚಿತ್ತವನ್ನು ನೆರವೇರಿಸಿದೆ. ಆದುದರಿಂದ ನಿನ್ನ ಸಂತಾನದವರು ನಾಲ್ಕೆನೆಯ ತಲೆಯವರೆಗೂ ಇಸ್ರಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು,” ಎಂದು ಹೇಳಿದರು.


ಇವನು ನಿಧನನಾಗಿ ಪಿತೃಗಳ ಬಳಿ ಸೇರಲು ಇವನ ಶವವನ್ನು ಸಮಾರಿಯದೊಳಗೆ ಇಸ್ರಯೇಲ್ ರಾಜಸ್ಮಶಾನದಲ್ಲಿ ಸಮಾಧಿ ಮಾಡಿದರು. ಇವನ ತರುವಾಯ ಯಾರೊಬ್ಬಾಮನು ಸಿಂಹಾಸನವನ್ನೇರಿದನು.


ಇಸ್ರಯೇಲರ ಅರಸನಾದ ಯೆಹೋವಾಹಾಜನ ಮಗ ಯೋವಾಷನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಜುದೇಯದ ಅರಸನಾದ ಯೆಹೋವಾಷನ ಮಗ ಅಮಚ್ಯ ಎಂಬವನು ಅರಸನಾದನು.


ಯೋವಾಷನ ಉಳಿದ ಚರಿತ್ರೆ, ಅವನ ಶೂರಕೃತ್ಯಗಳ ಮತ್ತು ಜುದೇಯದ ರಾಜನಾದ ಅಮಚ್ಯನೊಡನೆ ನಡೆಸಿದ ಯುದ್ಧದ ವಿವರ, ಇವು ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಅವನು ನಿಧನನಾಗಿ ಪಿತೃಗಳ ಬಳಿ ಸೇರಲು ಅವನ ಶವವನ್ನು ಸಮಾರಿಯದೊಳಗೆ ಇಸ್ರಯೇಲರ ರಾಜಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗ ಯಾರೊಬ್ಬಾಮನು ಅರಸನಾದನು.


ಇಸ್ರಯೇಲರ ಅರಸ ಯಾರೊಬ್ಬಾಮನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ ಅಮಚ್ಯನ ಮಗ ಅಜರ್ಯನು ಜುದೇಯದ ಅರಸನಾದನು.


ಈ ದಾಖಲೆಗಳನ್ನು ಯೆಹೂದ ಅರಸ ಯೋತಾಮನ ಹಾಗು ಇಸ್ರಯೇಲ ಅರಸ ಯಾರೊಬ್ಬಾಮನ ಆಳ್ವಿಕೆಯ ದಿನಗಳಲ್ಲಿ ಸಂಗ್ರಹಿಸಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು