Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 14:26 - ಕನ್ನಡ ಸತ್ಯವೇದವು C.L. Bible (BSI)

26 “ಇಸ್ರಯೇಲರು ಘೋರಕಷ್ಟವನ್ನು ಅನುಭವಿಸುತ್ತಿರುತ್ತಾರೆ. ಅವರಲ್ಲಿದ್ದ ಸ್ವತಂತ್ರರೂ ಪರತಂತ್ರರೂ ನಾಶವಾಗಿದ್ದಾರೆ, ಅವರನ್ನು ರಕ್ಷಿಸುವವನು ಒಬ್ಬನೂ ಇಲ್ಲ,” ಎಂಬುದನ್ನು ಸರ್ವೇಶ್ವರ ನೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಇಸ್ರಾಯೇಲರು ಯೆಹೋವನಿಗೆ ಅವಿಧೇಯರಾಗಿ ಘೋರಕಷ್ಟವನ್ನು ಅನುಭವಿಸುತ್ತಿದ್ದರು. ಅವರಲ್ಲಿ ಸ್ವತಂತ್ರರೂ, ಪರತಂತ್ರರೂ ನಾಶವಾಗುತ್ತಿದ್ದರೆ, ಅವರನ್ನು ರಕ್ಷಿಸುವವನು ಒಬ್ಬನೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಇಸ್ರಾಯೇಲ್ಯರು ಘೋರಕಷ್ಟವನ್ನು ಅನುಭವಿಸುತ್ತಿರುತ್ತಾರೆ, ಅವರಲ್ಲಿದ್ದ ಸ್ವತಂತ್ರರೂ ಪರತಂತ್ರರೂ ನಾಶವಾಗಿದ್ದಾರೆ, ಅವರನ್ನು ರಕ್ಷಿಸುವವನು ಒಬ್ಬನೂ ಇಲ್ಲ ಎಂಬದನ್ನು ಯೆಹೋವನು ನೋಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಇಸ್ರೇಲಿನ ಸ್ವತಂತ್ರರಾದ ಜನರೂ ಗುಲಾಮರೂ ಬಾಧೆಪಡುತ್ತಿರುವುದನ್ನು ಯೆಹೋವನು ನೋಡಿದನು. ಇಸ್ರೇಲರಿಗೆ ಸಹಾಯ ಮಾಡುವವರು ಯಾರೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಇಸ್ರಾಯೇಲಿನಲ್ಲಿ ಪ್ರತಿಯೊಬ್ಬರೂ ಸ್ವತಂತ್ರನಾಗಿರಲಿ, ಗುಲಾಮನಾಗಿರಲಿ, ಎಲ್ಲರು ಎಷ್ಟು ಕಷ್ಟದಲ್ಲಿದ್ದಾರೆಂಬುದನ್ನು ಯೆಹೋವ ದೇವರು ನೋಡಿದರು. ಅವರಿಗೆ ಸಹಾಯ ಮಾಡುವವರು ಯಾರೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 14:26
14 ತಿಳಿವುಗಳ ಹೋಲಿಕೆ  

ಸ್ವತಂತ್ರರು, ಪರತಂತ್ರರು ನಿರಾಶ್ರಯರಾದಾಗ ಅವರೆಲ್ಲರು ನಿಶ್ಯೇಷರಾದವರು ಎಂದು ತಿಳಿದುಬಂದಾಗ ದೊರಕಿಸುವನು ಸರ್ವೇಶ್ವರನು ನ್ಯಾಯವನು ತನ್ನ ಪ್ರಜೆಗೆ ತೋರುವನು ಅನುಕಂಪವನು ತನ್ನ ಭಕ್ತಾದಿಗಳಿಗೆ.


ಯೆಹೋವಾಹಾಜನು ಸರ್ವೇಶ್ವರನಿಗೆ ಮೊರೆ ಇಟ್ಟನು. ಅವರು ಅವನ ಮೊರೆಗೆ ಓಗೊಟ್ಟು, ಸಿರಿಯಾದವರ ಅರಸನಿಂದ ಬಹಳವಾಗಿ ಶೋಷಿತರಾದ ಇಸ್ರಯೇಲರ ಮೇಲೆ ಕಟಾಕ್ಷವಿಟ್ಟು, ಅವರಿಗೆ ಒಬ್ಬ ವಿಮೋಚಕನನ್ನು ಅನುಗ್ರಹಿಸಿದರು.


ಆಗ ಸರ್ವೇಶ್ವರ, “ಈಜಿಪ್ಟಿನಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಾನು ಕಣ್ಣಾರೆ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡಿಸಿಕೊಳ್ಳುವವರ ಬಗ್ಗೆ ಅವರು ಇಟ್ಟ ಮೊರೆ ನನಗೆ ಕೇಳಿಸಿದೆ. ಅವರ ಕಷ್ಟದುಃಖವನ್ನೆಲ್ಲಾ ನಾನು ಬಲ್ಲೆ.


ಆ ಜನರ ಕಷ್ಟದುಃಖಗಳಲ್ಲಿ ಸಂರಕ್ಷಿಸಿದರು. ದಯೆಯಿಂದಲೂ ಪ್ರೀತಿಯಿಂದಲೂ ಅವರಿಗೆ ಬಿಡುಗಡೆ ನೀಡಿದರು. ಪುರಾತನ ಕಾಲದಲ್ಲೆಲ್ಲಾ ಅವರನ್ನು ಎತ್ತಿ ಹೊತ್ತು ಆದರಿಸಿದರು.


ಸರ್ವೇಶ್ವರ ನಿನ್ನನ್ನು ಕುರಿತು, ‘ನಾನು ನಿನ್ನ ಮೈಮೇಲೆ ಕೇಡನ್ನು ಬರಮಾಡಿ, ನಿನ್ನನ್ನು ಕಸದಂತೆ ತೆಗೆದುಹಾಕುವೆನು; ನಿನ್ನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಲಿ, ಪರತಂತ್ರರಾಗಲಿ ಎಲ್ಲರನ್ನೂ ಇಸ್ರಯೇಲರ ಮಧ್ಯೆಯಿಂದ ಕಡಿದುಬಿಡುವೆನು.


ಆದುದರಿಂದ ಯಾರೊಬ್ಬಾಮನೇ, ಕೇಳು; ನಾನು ನಿನ್ನ ಮನೆಯವರ ಮೇಲೆ ಕೇಡನ್ನು ಬರಮಾಡುವೆನು; ನಿನ್ನ ಕುಟುಂಬದ ಗಂಡಸರಲ್ಲಿ, ಸ್ವತಂತ್ರರಾಗಲಿ, ಪರತಂತ್ರರಾಗಲಿ, ಎಲ್ಲರನ್ನೂ ಇಸ್ರಯೇಲರ ಮಧ್ಯೆಯಿಂದ ಸಂಹರಿಸಿಬಿಡುವೆನು. ಕಸವನ್ನು ಗುಡಿಸಿ ಎಸೆಯುವಂತೆ ನಾನು ನಿನ್ನ ಮನೆಯವರನ್ನು ಎಸೆದುಬಿಡುವೆನು; ಅವರು ನಿರ್ನಾಮವಾಗುವರು.


ಆಗ ಇಸ್ರಯೇಲರ ಸಂಕಟದ ನಿಮಿತ್ತ ಸರ್ವೇಶ್ವರ ಬಹಳವಾಗಿ ನೊಂದುಕೊಂಡರು.


ಈಗ ಕೇಳು; “ಇಸ್ರಯೇಲರ ಮೊರೆ ನನಗೆ ಮುಟ್ಟಿದೆ. ಈಜಿಪ್ಟಿನವರು ಅವರಿಗೆ ಕೊಡುತ್ತಿರುವ ಉಪದ್ರವವನ್ನು ನಾನು ನೋಡಿದ್ದೇನೆ.


ಅಹಾಬನ ಕುಟುಂಬದವರೆಲ್ಲಾ ನಿರ್ನಾಮವಾಗಬೇಕು. ಅವನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಿರಲಿ, ಪರತಂತ್ರರಾಗಿರಲಿ ಎಲ್ಲರನ್ನೂ ಇಸ್ರಯೇಲರ ಮಧ್ಯೆಯಿಂದ ತೆಗೆದುಹಾಕುವೆನು.


ದುರುಳರು ಅರುಗಲೇ ಇರೆ, ನೆರವಿಗಾರೂ ಇಲ್ಲ I ನನ್ನಿಂದ ನೀ ದೂರಸರಿವುದು ಸರಿಯಲ್ಲ II


ಆದರೂ ಸರ್ವೇಶ್ವರ ಅವರನ್ನು ಸಂಪೂರ್ಣವಾಗಿ ಹಾಳುಮಾಡಗೊಡಲಿಲ್ಲ. ಅವರನ್ನು ಈ ಕಾಲದಲ್ಲಿಯೂ ತಮ್ಮ ಸನ್ನಿಧಿಯಿಂದ ತಳ್ಳಿಬಿಡಲಿಲ್ಲ. ತಾವು ಅಬ್ರಹಾಮ್, ಇಸಾಕ್, ಯಕೋಬರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಸ್ಮರಿಸಿ, ಅವರಿಗೆ ದಯೆತೋರಿಸಿದರು; ಕರುಳುಕರಗಿದವರಾಗಿ ಅವರಿಗೆ ಪ್ರಸನ್ನರಾದರು.


ಕರಗಿತ್ತವರ ಹೃದಯ ಕಡುಕಷ್ಟದಿಂದ I ಎಡವಿ ಬಿದ್ದಿದ್ದರು ಅಸಹಾಯತೆಯಿಂದ II


ನಾನು ದೇಶವನ್ನು ಹಾಳುಮಾಡದಂತೆ ನನ್ನೆದುರಿಗೆ ದೇಶ ರಕ್ಷಣೆಗಾಗಿ, ಪೌಳಿಯ ಒಡಕಿನಲ್ಲಿ ನಿಲ್ಲುವುದಕ್ಕೂ ಗೋಡೆಯನ್ನು ಗಟ್ಟಿಮಾಡುವುದಕ್ಕೂ ತಕ್ಕವನನ್ನು ನಾನು ಹುಡುಕಿದರೂ ಯಾರೂ ಸಿಕ್ಕಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು