2 ಅರಸುಗಳು 14:4 - ಕನ್ನಡ ಸತ್ಯವೇದವು C.L. Bible (BSI)4 ಇವನ ಕಾಲದಲ್ಲೂ ಪೂಜಾಸ್ಥಳಗಳು ಹಾಗೆಯೇ ಇದ್ದವು. ಜನರು ಅವುಗಳಲ್ಲಿ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಇವನ ಕಾಲದಲ್ಲಿ ಪೂಜಾಸ್ಥಳಗಳು ಇನ್ನೂ ತೆಗೆಯಲ್ಪಟ್ಟಿರಲಿಲ್ಲ, ಆದ್ದರಿಂದ ಜನರು ಅವುಗಳಲ್ಲಿ ಯಜ್ಞಧೂಪಗಳನ್ನು ಅರ್ಪಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಇವನ ಕಾಲದಲ್ಲಿ ಪೂಜಾಸ್ಥಳಗಳು ಇನ್ನೂ ತೆಗೆಯಲ್ಪಡಲಿಲ್ಲವಾದದರಿಂದ ಜನರು ಅವುಗಳಲ್ಲಿ ಯಜ್ಞಧೂಪಗಳನ್ನು ಅರ್ಪಿಸುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆದರೆ ಅವನು ಉನ್ನತ ಪೂಜಾಸ್ಥಳಗಳನ್ನು ನಾಶಗೊಳಿಸಲಿಲ್ಲ. ಜನರು ಪೂಜಾಸ್ಥಳಗಳಲ್ಲಿ ಇನ್ನೂ ಯಜ್ಞಗಳನ್ನು ಅರ್ಪಿಸುತ್ತಿದ್ದರು ಮತ್ತು ಧೂಪ ಹಾಕುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆದರೂ ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ ಆದ್ದರಿಂದ ಜನರು ಪೂಜಾಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುವುದನ್ನು ಮುಂದುವರೆಸಿದ್ದರು. ಅಧ್ಯಾಯವನ್ನು ನೋಡಿ |
ಯೆಹೋವಾಷನು ಯಾಜಕರಿಗೆ, “ಸರ್ವೇಶ್ವರನ ಆಲಯಕ್ಕೆ ಸೇರುವ ಎಲ್ಲಾ ಪರಿಶುದ್ಧ ದ್ರವ್ಯವನ್ನು, ಅಂದರೆ ಜನಗಣತಿಯಲ್ಲಿ ಎಣಿಕೆಯಾದ ಪ್ರತಿಯೊಬ್ಬನು ತಂದುಕೊಡುವ ಹಣ, ದೇವರಿಗೆ ಪ್ರತಿಷ್ಟಿತನಾದ ವ್ಯಕ್ತಿ ತನ್ನ ಪ್ರಾಣವನನ್ನು ಬಿಡಿಸಿಕೊಳ್ಳುವುದಕ್ಕಾಗಿ ತೆರುವ ಹಣ, ಜನರು ಸರ್ವೇಶ್ವರನ ಆಲಯಕ್ಕೆ ಸ್ವೇಚ್ಛೆಯಿಂದ ತಂದು ಒಪ್ಪಿಸುವ ಹಣ, ಇವುಗಳನ್ನು ತೆಗೆದುಕೊಂಡು ದೇವಾಲಯವು ಎಲ್ಲೆಲ್ಲಿ ಶಿಥಿಲವಾಗಿ ಇರುತ್ತದೆ ಎಂದು ನೋಡಿ ಅದನ್ನು ಸರಿಮಾಡುವುದಕ್ಕಾಗಿ ವಿನಿಯೋಗಿಸಿರಿ.