Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 14:8 - ಕನ್ನಡ ಸತ್ಯವೇದವು C.L. Bible (BSI)

8 ಅನಂತರ ಅಮಚ್ಯನು ಯೇಹುವಿನ ಮೊಮ್ಮಗನೂ ಯೆಹೋವಾಹಾಜನ ಮಗನೂ ಇಸ್ರಯೇಲರ ಅರಸನೂ ಆದ ಯೋವಾಷನ ಬಳಿಗೆ ದೂತರನ್ನು ಕಳುಹಿಸಿದನು. ಅವನಿಗೆ, “ನಾವು ಒಬ್ಬರನ್ನೊಬ್ಬರು ಎದುರುಗೊಳ್ಳೋಣ ಬಾ,” ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅನಂತರ ಅಮಚ್ಯನು ಯೇಹುವಿನ ಮೊಮ್ಮಗನೂ, ಯೆಹೋವಾಹಾಜನ ಮಗನೂ, ಇಸ್ರಾಯೇಲರ ಅರಸನಾದ ಯೆಹೋವಾಷನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾವು ಒಬ್ಬರನ್ನೊಬ್ಬರು ಒಂದು ಕೈ ನೋಡೋಣ ಬಾ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅನಂತರ ಅಮಚ್ಯನು ಯೇಹುವಿನ ಮೊಮ್ಮಗನೂ ಯೆಹೋವಾಹಾಜನ ಮಗನೂ ಇಸ್ರಾಯೇಲ್ಯರ ಅರಸನೂ ಆದ ಯೋವಾಷನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ - ನಾವು ಒಬ್ಬರನ್ನೊಬ್ಬರು ಎದುರುಗೊಳ್ಳೋಣ ಬಾ ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಇಸ್ರೇಲರ ರಾಜನೂ ಯೇಹುವಿನ ಮೊಮ್ಮಗನೂ ಯೆಹೋವಾಹಾಜನ ಮಗನೂ ಆದ ಯೋವಾಷನ ಬಳಿಗೆ ಅಮಚ್ಯನು ಸಂದೇಶಕರನ್ನು ಕಳುಹಿಸಿದನು. ಅಮಚ್ಯನು ಸಂದೇಶದಲ್ಲಿ, “ಬಾ, ನಾವು ಪರಸ್ಪರ ಯುದ್ಧ ಮಾಡೋಣ!” ಎಂದು ಹೇಳಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಅಮಚ್ಯನು, ಯೇಹುವಿನ ಮೊಮ್ಮಗನೂ ಯೆಹೋವಾಹಾಜನ ಮಗನೂ ಇಸ್ರಾಯೇಲರ ಅರಸನಾದ ಯೋವಾಷನಿಗೆ, “ನಾವು ಒಬ್ಬರನ್ನೊಬ್ಬರು ಎದುರಿಸೋಣ ಬಾ,” ಎಂದು ದೂತರ ಮುಖಾಂತರ ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 14:8
12 ತಿಳಿವುಗಳ ಹೋಲಿಕೆ  

ಅಮಚ್ಯನು ಇದನ್ನು ಲಕ್ಷಿಸಲಿಲ್ಲವಾದುದರಿಂದ ಇಸ್ರಯೇಲರ ಅರಸನಾದ ಯೋವಾಷನು ಯುದ್ಧಕ್ಕೆ ಹೊರಟನು; ಅವರು ಜುದೇಯ ಪ್ರಾಂತ್ಯದ ಬೇತ್ಷೆಮೆಷಿನಲ್ಲಿ ಒಬ್ಬರನ್ನೊಬ್ಬರು ಎದುರುಗೊಂಡರು.


ದುಡುಕಿ ನೆರೆಯವನ ಮೇಲೆ ವ್ಯಾಜ್ಯಕ್ಕೆ ಓಡಬೇಡ; ಕಡೆಗೆ ಅವನು ನಿನ್ನ ಮಾನಕಳೆದಾಗ ಏನು ಮಾಡುವೆ, ಯೋಚಿಸು.


ಉದ್ದೇಶಗಳು ಕೈಗೂಡುವುವು ಹಿತಾಲೋಚನೆಯಿಂದ; ಬುದ್ಧಿವಂತರ ಆಲೋಚನೆ ಕೇಳದೆ ಹೂಡಬೇಡ ಯುದ್ಧ.


ಕಲಹವೆಬ್ಬಿಸುವುದು ಬುದ್ಧಿಹೀನನ ತುಟಿ; ಪೆಟ್ಟಿಗಾಗಿ ಕೂಗಿಕೊಳ್ಳುವುದು ಅವನ ಬಾಯಿ.


ವಾಗ್ವಾದವು ಏರಿಗೆ ಬಿರುಕು ಬಿದ್ದಂತೆ; ಸಿಟ್ಟೇರುವುದಕ್ಕೆ ಮುಂಚೆ ಜಗಳವನ್ನು ತೊರೆದುಬಿಡು.


ಗರ್ವದಿಂದ ಹುಟ್ಟುವುದು ಕಲಹಕದನ; ಆಲೋಚನೆಯನ್ನು ಕೇಳುವುದು ಸುಜ್ಞಾನ.


“ಅವರು ಯುದ್ಧಕ್ಕಾಗಿಯೇ ಬಂದಿರಲಿ, ಸಮಾಧಾನಕ್ಕಾಗಿಯೇ ಬಂದಿರಲಿ, ಅವರನ್ನು ಸಜೀವಿಗಳನ್ನಾಗಿ ಹಿಡಿದುತನ್ನಿ,” ಎಂದು ಆಜ್ಞಾಪಿಸಿದನು.


ಇವನ ಉಳಿದ ಚರಿತ್ರೆ, ಶೂರಕೃತ್ಯಗಳ ಹಾಗು ಇವನು ಯೆಹೂದ್ಯರ ಅರಸನಾದ ಅಮಚ್ಯನು ಎಂಬವನೊಡನೆ ನಡೆಸಿದ ಯುದ್ಧದ ವಿವರವು ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಈ ಜನರ ಮೇಲೆ ನನಗೆ ಅಧಿಕಾರವಿದ್ದರೆ ಅಬೀಮೆಲೆಕನನ್ನು ಓಡಿಸಿ ಬಿಡುತ್ತಿದ್ದೆ,” ಎಂದು ಹೇಳಿದನು. ಅಷ್ಟು ಮಾತ್ರವಲ್ಲದೆ, “ಎಲಾ, ಅಬೀಮೆಲೆಕನೇ, ಸೈನ್ಯವನ್ನು ತೆಗೆದುಕೊಂಡು ನನ್ನೊಡನೆ ಯುದ್ಧಕ್ಕೆ ಬಾ,” ಎಂದು ಕೊಚ್ಚಿಕೊಂಡನು.


ಅಮಚ್ಯನು ಎದೋಮ್ಯರನ್ನು ಸೋಲಿಸಿ ಮನೆಗೆ ಬಂದ ಮೇಲೆ, ತಾನು ತೆಗೆದುಕೊಂಡು ಬಂದಿದ್ದ ಸೇಯೀರಿನವರ ದೇವತಾಪ್ರತಿಮೆಗಳನ್ನು ತನ್ನ ದೇವರುಗಳೆಂದು ನಿಲ್ಲಿಸಿ, ಅವುಗಳಿಗೆ ಅಡ್ಡಬಿದ್ದು ಧೂಪಾರತಿ ಎತ್ತುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು