Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 15:1 - ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲರ ಅರಸ ಯಾರೊಬ್ಬಾಮನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ ಅಮಚ್ಯನ ಮಗ ಅಜರ್ಯನು ಜುದೇಯದ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಸ್ರಾಯೇಲರ ಅರಸನಾದ ಯಾರೊಬ್ಬಾಮನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ ಅಮಚ್ಯನ ಮಗನಾದ ಅಜರ್ಯನು ಯೆಹೂದದ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಸ್ರಾಯೇಲ್ಯರ ಅರಸನಾದ ಯಾರೊಬ್ಬಾಮನ ಆಳಿಕೆಯ ಇಪ್ಪತ್ತೇಳನೆಯ ವರುಷದಲ್ಲಿ ಅಮಚ್ಯನ ಮಗನಾದ ಅಜರ್ಯನು ಯೆಹೂದದ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯಾರೊಬ್ಬಾಮನು ಇಸ್ರೇಲಿನ ರಾಜನಾಗಿದ್ದ ಇಪ್ಪತ್ತೇಳನೆಯ ವರ್ಷದಲ್ಲಿ ಅಮಚ್ಯನ ಮಗನಾದ ಅಜರ್ಯನು ಯೆಹೂದದ ರಾಜನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ, ಯೆಹೂದದ ಅರಸನಾಗಿರುವ ಅಮಚ್ಯನ ಮಗ ಅಜರ್ಯನು ಆಳಲು ಆರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 15:1
13 ತಿಳಿವುಗಳ ಹೋಲಿಕೆ  

ಅನಂತರ ಎಲ್ಲ ಯೆಹೂದ್ಯರೂ ಕೂಡಿ ಹದಿನಾರು ವರ್ಷದವನಾಗಿದ್ದ ಉಜ್ಜೀಯನನ್ನು ಅವನ ತಂದೆ ಅಮಚ್ಯನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು.


ಜುದೇಯದ ಅರಸ ಉಜ್ಜೀಯನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಯಾಬೇಷನ ಮಗ ಶಲ್ಲೂಮನು ಇಸ್ರಯೇಲರ ಅರಸನಾಗಿ ಸಮಾರಿಯದಲ್ಲಿ ಒಂದು ತಿಂಗಳು ಆಳಿದನು.


ಅನಂತರ ಎಲ್ಲಾ ಯೆಹೂದ್ಯರು ಕೂಡಿ ಹದಿನಾರು ವರ್ಷದವನಾದ ಅಜರ್ಯನನ್ನು ಅವನ ತಂದೆ ಅಮಚ್ಯನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು.


ಜುದೇಯದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೆಂಟನೆಯ ವರ್ಷದಲ್ಲಿ ಯಾರೊಬ್ಬಾಮನ ಮಗ ಜೆಕರ್ಯ ಎಂಬವನು ಇಸ್ರಯೇಲರ ಅರಸನಾಗಿ ಸಮಾರಿಯದಲ್ಲಿ ಆರು ತಿಂಗಳು ಆಳಿದನು.


ಅವನು ನಿಧನನಾಗಿ ಇಸ್ರಯೇಲ್ ರಾಜರಾಗಿದ್ದ ತನ್ನ ಪಿತೃಗಳ ಬಳಿ ಸೇರಿದನು. ಅವನ ಸ್ಥಾನದಲ್ಲಿ ಅವನ ಮಗ ಜೆಕರ್ಯನು ಅರಸನಾದನು.


ಜುದೇಯದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಗಾದಿಯ ಮಗ ಮೆನಹೇಮನು ಇಸ್ರಯೇಲರ ಅರಸನಾಗಿ ಸಮಾರಿಯದಲ್ಲಿ ಹತ್ತು ವರ್ಷ ಆಳಿದನು.


ಜುದೇಯದ ಅರಸ ಅಜರ್ಯನ ಆಳ್ವಿಕೆಯ ಐವತ್ತೆಂಟನೆಯ ವರ್ಷದಲ್ಲಿ ಮೆನಹೇಮನ ಮಗನಾದ ಪೆಕಹ್ಯ ಎಂಬವನು ಇಸ್ರಯೇಲರ ಅರಸನಾಗಿ ಸಮಾರಿಯದಲ್ಲಿ ಎರಡು ವರ್ಷ ಆಳಿದನು.


ಜುದೇಯ ನಾಡಿನ ಅರಸರಾಗಿದ್ದ ಉಜ್ಜೀಯ, ಯೋತಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಜುದೇಯ ಮತ್ತು ಜೆರುಸಲೇಮ್ ನಗರವನ್ನು ಕುರಿತು ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ ಇದು :


ಜುದೇಯದ ಅರಸನೂ ಯೆಹೋವಾಷನ ಮಗನೂ ಆದ ಅಮಚ್ಯನ ಆಳ್ವಿಕೆಯ ಹದಿನೈದನೆಯ ವರ್ಷದಲ್ಲಿ, ಇಸ್ರಯೇಲರ ಅರಸನಾದ ಯೋವಾಷನ ಮಗ ಯಾರೊಬ್ಬಾಮನು, ಅರಸನಾಗಿ ಸಮಾರಿಯದಲ್ಲಿ ನಾಲ್ವತ್ತೊಂದು ವರ್ಷ ಆಳಿದನು.


ಜುದೇಯದ ಅರಸ ಅಜರ್ಯನ ಆಳ್ವಿಕೆಯ ಐವತ್ತೆರಡನೆಯ ವರ್ಷದಲ್ಲಿ ರೆಮಲ್ಯನ ಮಗನಾದ ಪೆಕಹ್ಯನು ಇಸ್ರಯೇಲರ ಅರಸನಾಗಿ ಸಮಾರಿಯದಲ್ಲಿ ಇಪ್ಪತ್ತು ವರ್ಷ ಆಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು