Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 15:15 - ಕನ್ನಡ ಸತ್ಯವೇದವು C.L. Bible (BSI)

15 ಶಲ್ಲೂಮನ ಉಳಿದ ಚರಿತ್ರೆ ಹಾಗು ಅವನ ಒಳಸಂಚಿನ ವಿವರ ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಶಲ್ಲೂಮನ ಉಳಿದ ಚರಿತ್ರೆಯೂ ಮತ್ತು ಅವನ ಒಳಸಂಚಿನ ವಿವರವೂ ಇಸ್ರಾಯೇಲ್ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಶಲ್ಲೂಮನ ಉಳಿದ ಚರಿತ್ರೆಯೂ ಅವನ ಒಳಸಂಚಿನ ವಿವರವೂ ಇಸ್ರಾಯೇಲ್‍ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಶಲ್ಲೂಮನು ಮಾಡಿದ ಕಾರ್ಯಗಳನ್ನೂ ಜೆಕರ್ಯನ ವಿರುದ್ಧವಾಗಿ ಅವನು ಯೋಜಿಸಿದ ಉಪಾಯಗಳನ್ನೂ ಬರೆಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಶಲ್ಲೂಮನ ಇತರ ಕ್ರಿಯೆಗಳೂ ಅವನು ಮಾಡಿದ ಒಳಸಂಚೂ ಇಸ್ರಾಯೇಲಿನ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 15:15
6 ತಿಳಿವುಗಳ ಹೋಲಿಕೆ  

ಜೆಕರ್ಯನ ಉಳಿದ ಚರಿತ್ರೆ ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.


ಅಹಾಬನ ಉಳಿದ ಚರಿತ್ರೆ, ಅವನು ಕಟ್ಟಿಸಿದ ದಂತಮಂದಿರ, ಪಟ್ಟಣಗಳು, ಇವುಗಳ ವಿವರ, ಹಾಗು ಅವನ ಬೇರೆ ಕಾರ್ಯಸಾಧನೆಗಳು ಇಸ್ರಯೇಲರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ರೆಹಬ್ಬಾಮನ ಉಳಿದ ಚರಿತ್ರೆ ಹಾಗು ಅವನ ಎಲ್ಲಾ ಕೃತ್ಯಗಳು ಯೆಹೂದ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಯಾರೊಬ್ಬಾಮನ ಇತರ ಕಾರ್ಯಕಲಾಪಗಳು, ಅವನ ಯುದ್ಧಗಳು ಹಾಗು ರಾಜ್ಯಭಾರಗಳ ವಿವರವು, ‘ಇಸ್ರಯೇಲ್ ರಾಜರ ಇತಿಹಾಸ’ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಗಾದಿಯ ಮಗ ಮೆನಹೇಮನೆಂಬವನು ತಿರ್ಚದಿಂದ ಸಮಾರಿಯಕ್ಕೆ ಬಂದು ಅಲ್ಲಿದ್ದ ಯಾಬೇಷನ ಮಗ ಶಲ್ಲೂಮನನ್ನು ಕೊಂದು ಅವನ ಸ್ಥಾನದಲ್ಲಿ ತಾನೇ ಅರಸನಾದನು.


ಮೆನಹೇಮನು ತಿರ್ಚದಿಂದ ತಿಪ್ಸಹುವಿಗೆ ಹೋದಾಗ ಅಲ್ಲಿಯವರು ತಮ್ಮ ಊರುಬಾಗಿಲನ್ನು ಅವನಿಗೆ ತೆರೆಯಲಿಲ್ಲ. ಆದುದರಿಂದ ಅವನು ಅದನ್ನೂ ಅದಕ್ಕೆ ಸೇರಿದ ಪ್ರದೇಶವನ್ನೂ ಹಾಳುಮಾಡಿದನು. ಅದರ ನಿವಾಸಿಗಳನ್ನು ಸಂಹರಿಸಿದನು. ಅದರಲ್ಲಿದ್ದ ಎಲ್ಲಾ ಗರ್ಭಿಣಿಯರ ಹೊಟ್ಟೆ ಸೀಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು