Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 15:16 - ಕನ್ನಡ ಸತ್ಯವೇದವು C.L. Bible (BSI)

16 ಮೆನಹೇಮನು ತಿರ್ಚದಿಂದ ತಿಪ್ಸಹುವಿಗೆ ಹೋದಾಗ ಅಲ್ಲಿಯವರು ತಮ್ಮ ಊರುಬಾಗಿಲನ್ನು ಅವನಿಗೆ ತೆರೆಯಲಿಲ್ಲ. ಆದುದರಿಂದ ಅವನು ಅದನ್ನೂ ಅದಕ್ಕೆ ಸೇರಿದ ಪ್ರದೇಶವನ್ನೂ ಹಾಳುಮಾಡಿದನು. ಅದರ ನಿವಾಸಿಗಳನ್ನು ಸಂಹರಿಸಿದನು. ಅದರಲ್ಲಿದ್ದ ಎಲ್ಲಾ ಗರ್ಭಿಣಿಯರ ಹೊಟ್ಟೆ ಸೀಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಮೆನಹೇಮನು ತಿರ್ಚದಿಂದ ತಿಪ್ಸಹುವಿಗೆ ಹೋದಾಗ ಅಲ್ಲಿಯವರು ತಮ್ಮ ಊರುಬಾಗಿಲನ್ನು ಅವನಿಗೆ ತೆರೆಯಲಿಲ್ಲ, ಆದುದರಿಂದ ಅವನು ಆ ಊರನ್ನು ಅದಕ್ಕೆ ಸೇರಿದ ಪ್ರದೇಶವನ್ನೂ ಹಾಳುಮಾಡಿ ಅದರ ನಿವಾಸಿಗಳನ್ನು ಸಂಹರಿಸಿದನು. ಅದರಲ್ಲಿದ್ದ ಎಲ್ಲಾ ಗರ್ಭಿಣಿಗಳ ಹೊಟ್ಟೆಯನ್ನು ಸೀಳಿಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಮೆನಹೇಮನು ತಿರ್ಚದಿಂದ ತಿಪ್ಸಹುವಿಗೆ ಹೋದಾಗ ಅಲ್ಲಿಯವರು ತಮ್ಮ ಊರುಬಾಗಲನ್ನು ಅವನಿಗೆ ತೆರೆದುಕೊಡಲಿಲ್ಲವಾದದರಿಂದ ಅವನು ಅದನ್ನೂ ಅದಕ್ಕೆ ಸೇರಿದ ಪ್ರದೇಶವನ್ನೂ ಹಾಳುಮಾಡಿ ಅದರ ನಿವಾಸಿಗಳನ್ನು ಸಂಹರಿಸಿದನು; ಅದರಲ್ಲಿದ್ದ ಎಲ್ಲಾ ಗರ್ಭಿಣಿಗಳ ಹೊಟ್ಟೆಸೀಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಶಲ್ಲೂಮನು ಸತ್ತನಂತರ, ಮೆನಹೇಮನು ತಿಪ್ಸಹುವನ್ನು ಮತ್ತು ಅದರ ಸುತ್ತಲಿನ ಪ್ರದೇಶವನ್ನು ಸೋಲಿಸಿದನು. ಜನರು ನಗರದ ಬಾಗಿಲನ್ನು ಅವನಿಗೆ ತೆರೆಯಲು ನಿರಾಕರಿಸಿದರು. ಆದ್ದರಿಂದ ಮೆನಹೇಮನು ಅವರನ್ನು ಸೋಲಿಸಿ ಆ ನಗರದಲ್ಲಿದ್ದ ಗರ್ಭಿಣಿ ಸ್ತ್ರೀಯರ ಹೊಟ್ಟೆಗಳನ್ನು ಸೀಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆ ಸಮಯದಲ್ಲಿ ಮೆನಹೇಮನು ತಿರ್ಚದಿಂದ ತಿಪ್ಸಹು ಪಟ್ಟಣಕ್ಕೆ ಹೋದಾಗ ಅಲ್ಲಿಯವರು ತಮ್ಮ ಊರುಬಾಗಿಲುಗಳನ್ನು ತನಗೆ ತೆರೆಯದೆ ಇದ್ದುದರಿಂದ ಎಲ್ಲರನ್ನೂ, ಅದರ ಮೇರೆಗಳಲ್ಲಿದ್ದವರೆಲ್ಲರನ್ನೂ ಸಂಹರಿಸಿದನು. ತಿಪ್ಸಹವನ್ನು ಹಾಳು ಮಾಡಿ, ಎಲ್ಲಾ ಗರ್ಭಿಣಿಯರ ಹೊಟ್ಟೆಗಳನ್ನು ಸೀಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 15:16
6 ತಿಳಿವುಗಳ ಹೋಲಿಕೆ  

ಹಜಾಯೇಲನು, “ನನ್ನೊಡೆಯಾ, ಏಕೆ ಅಳುತ್ತೀರಿ?” ಎಂದು ಕೇಳಿದನು. ಅದಕ್ಕೆ ಅವನು, “ನೀನು ಇಸ್ರಯೇಲರಿಗೆ ಎಷ್ಟು ಕೇಡು ಮಾಡುವೆಯೆಂಬುದು ನನಗೆ ಪ್ರಕಟವಾಯಿತು. ನೀನು ಅವರ ಕೋಣೆಗಳಿಗೆ ಬೆಂಕಿ ಹೊತ್ತಿಸುವೆ; ಯೌವನಸ್ಥರನ್ನು ಕತ್ತಿಯಿಂದ ಸಂಹರಿಸುವೆ; ಮಕ್ಕಳನ್ನು ಬಂಡೆಗೆ ಅಪ್ಪಳಿಸುವೆ; ಗರ್ಭಿಣಿಯರ ಹೊಟ್ಟೆಯನ್ನು ಸೀಳುವೆ,” ಎಂದು ಉತ್ತರಕೊಟ್ಟನು.


ಸಮಾರ್ಯವು ತನ್ನ ದೇವರಿಗೆ ವಿರುದ್ಧ ದಂಗೆ ಎದ್ದಿದೆ. ಅದಕ್ಕೆ ತಕ್ಕ ಪ್ರತಿಫಲವನ್ನು ಅನುಭವಿಸಲೇಬೇಕು. ಅದರ ಜನರು ಖಡ್ಗದಿಂದ ಹತರಾಗುವರು; ಶತ್ರುಗಳು ಅಲ್ಲಿನ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳಿಹಾಕುವರು.”


ಅವನು ಯೂಫ್ರೆಟಿಸ್ ನದಿಯ ಈಚೆಯಲ್ಲಿ ತಿಪ್ಸಹು ಮೊದಲ್ಗೊಂಡು ಗಾಜದವರೆಗಿರುವ ಈಚೆಯ ಎಲ್ಲಾ ರಾಜರಿಗೂ ಅಧಿಪತಿಯಾಗಿದ್ದನು. ಸುತ್ತಮುತ್ತಲಿನ ರಾಜರೊಡನೆ ಶಾಂತಿಸಮಾಧಾನದಿಂದಿದ್ದನು.


ಸರ್ವೇಶ್ವರ ಇಂತೆನ್ನುತ್ತಾರೆ: “ಅಮ್ಮೋನ್ಯರು ಪದೇಪದೇ ಮಾಡಿದ ಪಾಪಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ತಮ್ಮ ನಾಡಿನ (ಗಡಿ) ವಿಸ್ತರಣೆಗಾಗಿ ಗರ್ಭಿಣಿಯರ ಹೊಟ್ಟೆಯನ್ನೇ ತಿವಿದು ಸೀಳಿಬಿಟ್ಟಿದ್ದಾರೆ.


ಶಲ್ಲೂಮನ ಉಳಿದ ಚರಿತ್ರೆ ಹಾಗು ಅವನ ಒಳಸಂಚಿನ ವಿವರ ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಅಬೀಮೆಲೆಕನು ಅಲ್ಲಿಗೆ ಬಂದು ಯುದ್ಧಮಾಡುತ್ತಾ ಗೋಪುರದ ಬಾಗಿಲಿಗೆ ಬೆಂಕಿ ಹೊತ್ತಿಸಬೇಕೆಂದು ಅದರ ಸಮೀಪಕ್ಕೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು