Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 15:18 - ಕನ್ನಡ ಸತ್ಯವೇದವು C.L. Bible (BSI)

18 ಇವನು ಜೀವದಿಂದಿರುವವರೆಗೂ ಇಸ್ರಯೇಲರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗ ಯಾರೊಬ್ಬಾಮನ ದುರ್ಮಾರ್ಗವನ್ನು ಬಿಡದೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇವನು ಜೀವದಿಂದ ಇರುವವರೆಗೂ ಇಸ್ರಾಯೇಲರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ದುರ್ಮಾರ್ಗವನ್ನು ಬಿಡದೆ ತನ್ನ ಪೂರ್ವಿಕರಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇವನು ಜೀವದಿಂದಿರುವವರೆಗೂ ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಮೆನಹೇಮನು ಮಾಡಿದನು. ಇಸ್ರೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಕೃತ್ಯಗಳನ್ನು ಮೆನಹೇಮನು ಮುಂದುವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವನು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಅವನು ತನ್ನ ದಿವಸಗಳಲ್ಲೆಲ್ಲಾ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 15:18
11 ತಿಳಿವುಗಳ ಹೋಲಿಕೆ  

ಜುದೇಯದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಗಾದಿಯ ಮಗ ಮೆನಹೇಮನು ಇಸ್ರಯೇಲರ ಅರಸನಾಗಿ ಸಮಾರಿಯದಲ್ಲಿ ಹತ್ತು ವರ್ಷ ಆಳಿದನು.


ಅಸ್ಸೀರಿಯಾ ದೇಶದ ಅರಸನಾದ ಪೂಲನೆಂಬವನು ಇಸ್ರಯೇಲ್ ದೇಶಕ್ಕೆ ವಿರುದ್ಧ ದಾಳಿಯಿಟ್ಟಾಗ, ಮೆನಹೇಮನು ಅವನ ಮುಖಾಂತರ ತನ್ನ ಅರಸುತನವನ್ನು ದೃಢಪಡಿಸಿಕೊಳ್ಳುವುದಕ್ಕಾಗಿ, ಅವನಿಗೆ ಮೂವತ್ತನಾಲ್ಕು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನು ಕೊಟ್ಟನು.


ಯಾರೊಬ್ಬಾಮನ ಪಾಪಗಳ ನಿಮಿತ್ತ ಹಾಗು ಅವನ ಪ್ರೇರಣೆಯಿಂದ ಇಸ್ರಯೇಲರು ಮಾಡಿದ ಪಾಪಗಳ ನಿಮಿತ್ತ ಸರ್ವೇಶ್ವರ ಅವರನ್ನು ಶತ್ರುಗಳಿಗೆ ಒಪ್ಪಿಸುವರು,” ಎಂದು ಆಕೆಗೆ ಹೇಳಿದನು.


ಆದರೂ ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗ ಯಾರೊಬ್ಬಾಮನ ಮಾರ್ಗವನ್ನು ಬಿಡಲೇ ಇಲ್ಲ.


ಆದರೂ ಅವನು ಇಸ್ರಯೇಲರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗ ಯಾರೊಬ್ಬಾಮನ ಮಾರ್ಗವನ್ನು ಕೈಬಿಡದೆ, ಬೇತೇಲ್, ದಾನ್ ಎಂಬ ಊರುಗಳಲ್ಲಿದ್ದ ಚಿನ್ನದ ಹೋರಿಕರುಗಳನ್ನು ಪೂಜಿಸುತ್ತಿದ್ದನು.


ಅವನು ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗ ಯಾರೊಬ್ಬಾಮನ ದುರ್ಮಾರ್ಗವನ್ನು ಬಿಡದೆ ತನ್ನ ಪೂರ್ವಿಕರಂತೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.


ಇವನು ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗ ಯಾರೊಬ್ಬಾಮನ ದುರ್ಮಾರ್ಗವನ್ನು ಬಿಡದೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.


ಇವನು ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗ ಯಾರೊಬ್ಬಾಮನ ದುರ್ಮಾರ್ಗವನ್ನು ಬಿಡದೆ, ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.


ಇವನು ತನ್ನ ಪೂರ್ವಿಕರಾದ ಇಸ್ರಯೇಲಿನ ಅರಸರಷ್ಟು ಕೆಟ್ಟವನಾಗಿರಲಿಲ್ಲ. ಆದರೂ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.


ಇಸ್ರಯೇಲ್ ಕುಲಗಳಲ್ಲಿ ಉಳಿದಿದ್ದ ಇವರನ್ನೂ ಹೇಸಿ, ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟು, ಸೂರೆಮಾಡುವವರಿಗೆ ಒಪ್ಪಿಸಿ, ಶಿಕ್ಷಿಸಿದರು.


ನ್ಯಾಯಪಾಲಕ ರಾಜನಿಂದ ನಾಡಿನ ಅಭಿವೃದ್ಧಿ; ಲಂಚಕೋರ ಅರಸನಿಂದ ದೇಶ ಹಿಡಿವುದು ವಿನಾಶದ ಹಾದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು