Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 15:19 - ಕನ್ನಡ ಸತ್ಯವೇದವು C.L. Bible (BSI)

19 ಅಸ್ಸೀರಿಯಾ ದೇಶದ ಅರಸನಾದ ಪೂಲನೆಂಬವನು ಇಸ್ರಯೇಲ್ ದೇಶಕ್ಕೆ ವಿರುದ್ಧ ದಾಳಿಯಿಟ್ಟಾಗ, ಮೆನಹೇಮನು ಅವನ ಮುಖಾಂತರ ತನ್ನ ಅರಸುತನವನ್ನು ದೃಢಪಡಿಸಿಕೊಳ್ಳುವುದಕ್ಕಾಗಿ, ಅವನಿಗೆ ಮೂವತ್ತನಾಲ್ಕು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅಶ್ಶೂರ ದೇಶದ ಅರಸನಾದ ಪೂಲನೆಂಬವನು ಇಸ್ರಾಯೇಲ್ ದೇಶಕ್ಕೆ ವಿರುದ್ಧವಾಗಿ ಬಂದಾಗ ಮೆನಹೇಮನು ಅವನ ಮುಖಾಂತರವಾಗಿ ತನ್ನ ಅರಸುತನವನ್ನು ಜನರು ದೃಢಪಡಿಸಿಕೊಳ್ಳುವುದಕ್ಕೋಸ್ಕರ ಅವನಿಗೆ ಸಾವಿರ ತಲಾಂತು ಬೆಳ್ಳಿಯನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅಶ್ಶೂರ್‍ದೇಶದ ಅರಸನಾದ ಪೂಲನೆಂಬವನು ಇಸ್ರಾಯೇಲ್‍ದೇಶಕ್ಕೆ ವಿರೋಧವಾಗಿ ಬಂದಾಗ ಮೆನಹೇಮನು ಅವನ ಮುಖಾಂತರವಾಗಿ ತನ್ನ ಅರಸುತನವನ್ನು ದೃಢಪಡಿಸಿಕೊಳ್ಳುವದಕ್ಕೋಸ್ಕರ ಅವನಿಗೆ ಸಾವಿರ ತಲಾಂತು ಬೆಳ್ಳಿಯನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅಶ್ಶೂರ್ ದೇಶದ ರಾಜನಾದ ಪೂಲನು ಇಸ್ರೇಲಿನ ವಿರುದ್ಧ ಯುದ್ಧಕ್ಕೆ ಬಂದನು. ಮೆನಹೇಮನು ಪೂಲನಿಗೆ ಮೂವತ್ನಾಲ್ಕು ಕಿಲೋಗ್ರಾಂ ಬೆಳ್ಳಿಯನ್ನು ಕೊಟ್ಟನು. ಪೂಲನು ಮೆನಹೇಮನಿಗೆ ಬೆಂಬಲವನ್ನು ನೀಡಲು ಮತ್ತು ಮೆನಹೇಮನ ರಾಜ್ಯವನ್ನು ಬಲಪಡಿಸಲು ಹೀಗೆ ಮಾಡಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅಸ್ಸೀರಿಯಾ ದೇಶದ ಅರಸನಾದ ಪೂಲನು ಇಸ್ರಾಯೇಲ್ ದೇಶದ ಮೇಲೆ ಯುದ್ಧಕ್ಕೆ ಬಂದನು. ಆಗ ಮೆನಹೇಮನು ಅವನ ಬೆಂಬಲವನ್ನು ಪಡೆಯಲು ಮತ್ತು ರಾಜ್ಯವನ್ನು ದೃಢಪಡಿಸಲು ಪೂಲನಿಗೆ ಮೂವತ್ತು ನಾಲ್ಕು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 15:19
18 ತಿಳಿವುಗಳ ಹೋಲಿಕೆ  

ಇವನು ರಾಜ್ಯವನ್ನು ಭದ್ರಪಡಿಸಿಕೊಂಡ ಕೂಡಲೆ ತನ್ನ ತಂದೆಯನ್ನು ಕೊಂದ ಉದ್ಯೋಗಸ್ಥರಿಗೆ ಮರಣ ವಿಧಿಸಿದನು.


ತಾನು ಸರ್ವೇಶ್ವರನ ಆಲಯದ ಕದಗಳಿಗೂ ಕಂಬಗಳಿಗೂ ಹೊದಿಸಿದ್ದ ಬಂಗಾರದ ತಗಡನ್ನೂ ತೆಗೆದುಕೊಂಡು ಅಸ್ಸೀರಿಯದ ಅರಸನಿಗೆ ಕಳುಹಿಸಿದನು.


ಆ ವಿಗ್ರಹವನ್ನು ಅಸ್ಸೀರಿಯದ ಜಗಳಗಂಟಿ ರಾಜನಿಗೆ ಕಾಣಿಕೆಯಾಗಿ ಕೊಡಲಾಗುವುದು. ಎಫ್ರಯಿಮಿಗೆ ಅವಮಾನವಾಗುವುದು. ಇಸ್ರಯೇಲ್ ತಾನು ಕೆತ್ತಿಸಿಕೊಂಡ ವಿಗ್ರಹಕ್ಕಾಗಿ ನಾಚಿಕೆಗೀಡಾಗುವುದು.


ಇವು ಸರ್ವೇಶ್ವರನ ಮಾತುಗಳು : “ಮಾನವ ಮಾತ್ರದವರಲ್ಲಿ ಭರವಸೆಯಿಟ್ಟು ನರಜನ್ಮದವರನ್ನೇ ತನ್ನ ಭುಜಬಲವೆಂದುಕೊಂಡು ಸರ್ವೇಶ್ವರನನ್ನೇ ತೊರೆಯುವಂಥ ಹೃದಯವುಳ್ಳವನು ಶಾಪಗ್ರಸ್ತನು !


ಆದರೂ ಕಷ್ಟಸಂಕಷ್ಟಗಳನ್ನು ಅನುಭವಿಸಿದ ಆ ನಾಡಿಗೆ ಇನ್ನು ಮುಂದೆ ಕತ್ತಲಿರುವುದಿಲ್ಲ. ಒಮ್ಮೆ ಜೆಬುಲೋನ್ ಮತ್ತು ನಪ್ತಾಲಿಯ ಗೋತ್ರಗಳಿಗೆ ಬೀಡಾಗಿದ್ದ ಆ ಪ್ರಾಂತ್ಯವು ಅವಮಾನಕ್ಕೆ ಗುರಿಯಾಗಿತ್ತು. ಆದರೆ ಇನ್ನು ಮುಂದೆ ಅದಕ್ಕೆ ಘನತೆಗೌರವ ಬರುವುದು: ಸಮುದ್ರದ ಹಾದಿಯಿಂದ ಹಿಡಿದು ಜೋರ್ಡನಿನ ಆಚೆಯಲ್ಲಿ ಇರುವ ಪ್ರಾಂತ್ಯದವರೆಗೆ ಮಾತ್ರವಲ್ಲ, ಅನ್ಯಜನರು ಇರುವ ಗಲಿಲೇಯ ಪ್ರಾಂತ್ಯದವರೆಗೂ ಘನತೆಗೌರವ ಬಂದೊದಗುವುದು.


ಇದಲ್ಲದೆ ಆಹಾಜನು ಸರ್ವೇಶ್ವರನ ಆಲಯದಲ್ಲೂ ಅರಮನೆಯ ಭಂಡಾರದಲ್ಲೂ ಇದ್ದ ಬೆಳ್ಳಿ ಬಂಗಾರವನ್ನು ತೆಗೆದುಕೊಂಡು ಅಸ್ಸೀರಿಯಾದ ಅರಸನಿಗೆ ಕಪ್ಪವಾಗಿ ಕಳುಹಿಸಿದನು.


ಜುದೇಯದ ಅರಸ ಯೆಹೋವಾಷನು ಇದನ್ನು ಕೇಳಿ, ತಾನು ಮತ್ತು ತನ್ನ ಪೂರ್ವಿಕರಾದ ಯೆಹೋಷಾಫಾಟ್, ಯೆಹೋರಾಮ್, ಅಹಜ್ಯಾ ಎಂಬ ಯೆಹೂದರಾಜರು ದೇವಸ್ಥಾನಕ್ಕೆ ಕಾಣಿಕೆಯಾಗಿ ಕೊಟ್ಟ ಒಡವೆಗಳನ್ನು ಹಾಗು ಸರ್ವೇಶ್ವರನ ಆಲಯದ ಮತ್ತು ಅರಮನೆ ಭಂಡಾರಗಳಲ್ಲಿ ಇದ್ದ ಬಂಗಾರದ ವಸ್ತುಗಳನ್ನು ಸಿರಿಯಾದವರ ಅರಸನಾದ ಹಜಾಯೇಲನಿಗೆ ಕಳುಹಿಸಿದನು. ಆಗ ಅವನು ಜೆರುಸಲೇಮನ್ನು ಬಿಟ್ಟುಹೋದನು.


“ಎಫ್ರಯಿಮ್ ತನ್ನ ರೋಗವನ್ನು ಅರಿತುಕೊಂಡಿತು; ಜುದೇಯವು ತನ್ನ ಹುಣ್ಣನ್ನು ಕಂಡುಕೊಂಡಿತು. ಆಗ ಎಫ್ರಯಿಮ್ ಅಸ್ಸೀರಿಯಾದ ಕಡೆಗೆ ತಿರುಗಿಕೊಂಡು ಜಗಳಗಂಟಿಯಾದ ರಾಜನ ಬಳಿಗೆ ದೂತರನ್ನು ಕಳುಹಿಸಿತು. ಆದರೆ ಅವನು ನಿಮ್ಮ ರೋಗವನ್ನು ವಾಸಿಮಾಡಲಾರನು, ನಿಮ್ಮ ಹುಣ್ಣನ್ನು ಗುಣಪಡಿಸಲಾರನು.


ಇವನು ಜೀವದಿಂದಿರುವವರೆಗೂ ಇಸ್ರಯೇಲರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗ ಯಾರೊಬ್ಬಾಮನ ದುರ್ಮಾರ್ಗವನ್ನು ಬಿಡದೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.


ಅಸ್ಸೀರಿಯದ ಅರಸನಿಗೆ ಆ ಹಣವನ್ನು ಕೊಡುವುದಕ್ಕಾಗಿ ಇಸ್ರಯೇಲರ ಪ್ರತಿಯೊಬ್ಬ ಐಶ್ವರ್ಯವಂತನಿಂದ ಐವತ್ತು ಬೆಳ್ಳಿ ನಾಣ್ಯಗಳನ್ನು ತೆಗೆದುಕೊಂಡನು. ಆ ಹಣ ಸಿಕ್ಕಿದ ನಂತರ ಅಸ್ಸೀರಿಯದ ಅರಸನು ಅಲ್ಲಿ ನಿಲ್ಲದೆ ಹಿಂದಿರುಗಿ ಹೋದನು.


ಇಸ್ರಯೇಲರ ಅರಸನಾದ ಪೆಕಹನ ಕಾಲದಲ್ಲಿ ಅಸ್ಸೀರಿಯಾ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬವನು ಬಂದು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನೂ ಮತ್ತು ಗಿಲ್ಯಾದ್ ಹಾಗು ಗಲಿಲೇಯ ಪ್ರಾಂತ್ಯಗಳನ್ನೂ ಸ್ವಾಧೀನಪಡಿಸಿಕೊಂಡು, ಅವುಗಳ ನಿವಾಸಿಗಳನ್ನು ಅಸ್ಸೀರಿಯಾ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡು ಹೋದನು.


ಓ ನಮ್ಮ ದೇವರೇ, ನೀವು ಮಹೋನ್ನತರು, ಶಕ್ತಿಸಾಮರ್ಥ್ಯರು, ಭಯಭಕ್ತಿಗೆ ಪಾತ್ರರು, ಕೃಪಾವಾಗ್ದಾನಗಳ ನೆರವೇರಿಸುವವರು. ಅಲ್ಪವೆಂದೆಣಿಸಬೇಡಿ - ನಮ್ಮ ರಾಜರು, ರಾಜ್ಯಪಾಲರು. ಯಾಜಕರು, ಪ್ರವಾದಿಗಳು, ಹಿರಿಯರು, ಪ್ರಜೆಗಳು ಸಹಿಸಬೇಕಾಗಿಬಂದಿರುವ ಈ ಕಷ್ಟಕಾರ್ಪಣ್ಯಗಳನು.


ಇವರೊಡನೆ ಕೂಡಿಕೊಂಡಿಹ ಅಸ್ಸೀರ್ಯರು I ಲೋಟನ ವಂಶಕ್ಕೆ ಭುಜಬಲವಾಗಿಹರು II


“ಇಸ್ರಯೇಲ್ ಚದರಿಹೋದ ಮಂದೆ. ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ. ಮೊಟ್ಟಮೊದಲು ಅಸ್ಸೀರಿಯಾದ ಅರಸನು ಅದನ್ನು ಕಬಳಿಸಿದನು. ಕಟ್ಟಕಡೆಗೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು.


ಒಹೊಲಳು ನನ್ನವಳಾಗಿದ್ದರೂ ಹಾದರ ನಡೆಸಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು