Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 15:27 - ಕನ್ನಡ ಸತ್ಯವೇದವು C.L. Bible (BSI)

27 ಜುದೇಯದ ಅರಸ ಅಜರ್ಯನ ಆಳ್ವಿಕೆಯ ಐವತ್ತೆರಡನೆಯ ವರ್ಷದಲ್ಲಿ ರೆಮಲ್ಯನ ಮಗನಾದ ಪೆಕಹ್ಯನು ಇಸ್ರಯೇಲರ ಅರಸನಾಗಿ ಸಮಾರಿಯದಲ್ಲಿ ಇಪ್ಪತ್ತು ವರ್ಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಐವತ್ತೆರಡನೆಯ ವರ್ಷದಲ್ಲಿ ರೆಮಲ್ಯನ ಮಗನಾದ ಪೆಕಹನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಇಪ್ಪತ್ತು ವರ್ಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಯೆಹೂದದ ಅರಸನಾದ ಅಜರ್ಯನ ಆಳಿಕೆಯ ಐವತ್ತೆರಡನೆಯ ವರುಷದಲ್ಲಿ ರೆಮಲ್ಯನ ಮಗನಾದ ಪೆಕಹನು ಇಸ್ರಾಯೇಲ್ಯರ ಅರಸನಾಗಿ ಸಮಾರ್ಯದಲ್ಲಿ ಇಪ್ಪತ್ತು ವರುಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಅಜರ್ಯನು ಯೆಹೂದದ ರಾಜನಾಗಿದ್ದ ಐವತ್ತೆರಡನೆಯ ವರ್ಷದಲ್ಲಿ ರೆಮಲ್ಯನ ಮಗನಾದ ಪೆಕಹನು ಸಮಾರ್ಯದಲ್ಲಿ ಇಸ್ರೇಲನ್ನು ಆಳಲಾರಂಭಿಸಿದನು. ಪೆಕಹನು ಇಪ್ಪತ್ತು ವರ್ಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಐವತ್ತೆರಡನೆಯ ವರುಷದಲ್ಲಿ ರೆಮಲ್ಯನ ಮಗ ಪೆಕಹನು ಸಮಾರ್ಯದಲ್ಲಿ ಇಸ್ರಾಯೇಲರ ಅರಸನಾಗಿ, ಇಪ್ಪತ್ತು ವರ್ಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 15:27
13 ತಿಳಿವುಗಳ ಹೋಲಿಕೆ  

ಅದು ಆಹಾಜನ ಕಾಲ. ಇವನು ಯೋತಾಮನ ಮಗ, ಉಜ್ಜೀಯನ ಮೊಮ್ಮಗ, ಜುದೇಯದ ಅರಸ. ಇವನ ಕಾಲದಲ್ಲಿ ಸಿರಿಯದ ಅರಸ ರೆಚೀನ ಮತ್ತು ರೆಮೆಲ್ಯನ ಮಗನೂ ಇಸ್ರಯೇಲಿನ ಅರಸನೂ ಆದ ಪೆಕಹ ಎಂಬವರು ಜೆರುಸಲೇಮಿನ ಮೇಲೆ ದಂಡೆತ್ತಿಬಂದರು. ಆದರೆ ಅದನ್ನು ಜಯಿಸಲು ಅವರಿಂದಾಗಲಿಲ್ಲ.


ಜೋಕೆ, ಸುಮ್ಮನಿರು, ಹೆದರಬೇಡ. ರೆಚೀನ, ಸಿರಿಯ ಮತ್ತು ಪೆಕಹ - ಇವರೆಲ್ಲರ ಕೋಪ ಎಷ್ಟು ಉಗ್ರವಾಗಿದ್ದರೂ ಅದು ಹೊಗೆಯಾಡುವ ಎರಡು ಮೋಟುಕೊಳ್ಳಿಗಳಿಗೆ ಸಮಾನ. ಆದ್ದರಿಂದ ಎದೆಗುಂದಬೇಡ.


ಜುದೇಯದ ಅರಸ ಅಜರ್ಯನ ಆಳ್ವಿಕೆಯ ಐವತ್ತೆಂಟನೆಯ ವರ್ಷದಲ್ಲಿ ಮೆನಹೇಮನ ಮಗನಾದ ಪೆಕಹ್ಯ ಎಂಬವನು ಇಸ್ರಯೇಲರ ಅರಸನಾಗಿ ಸಮಾರಿಯದಲ್ಲಿ ಎರಡು ವರ್ಷ ಆಳಿದನು.


ಅಂತೆಯೇ, ರಾಜಧಾನಿಯಾದ ಸಮಾರ್ಯಕ್ಕಿಂತ ಇಸ್ರಯೇಲ್ ಹೆಚ್ಚಲ್ಲ. ರಾಜನಾದ ಪೆಕಹನಿಗಿಂತ ಸಮಾರ್ಯ ಹೆಚ್ಚಲ್ಲ. ನಿಮ್ಮ ವಿಶ್ವಾಸ ಸ್ಥಿರವಿಲ್ಲದಿದ್ದರೆ, ನಿಮಗೆ ಸ್ಥಿರತೆ ಇರುವುದಿಲ್ಲ.”


ರೆಮಲ್ಯನ ಮಗ ಪೆಕಹ ಎಂಬವನು ಒಂದೇ ದಿವಸ ಯೆಹೂದ್ಯರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಲ್ಲಿಸಿದನು. ಇವರೆಲ್ಲರು ರಣವೀರರು. ಯೆಹೂದ್ಯರು ತಮ್ಮ ಪಿತೃಗಳ ದೇವರಾದ ಸರ್ವೇಶ್ವರನನ್ನು ಬಿಟ್ಟದ್ದೇ ಇದಕ್ಕೆ ಕಾರಣವಾಗಿತ್ತು.


ಸರ್ವೇಶ್ವರ ಆ ಕಾಲದಲ್ಲಿ ಸಿರಿಯಾದ ಅರಸ ರೆಚೀನನನ್ನೂ ರೆಮಲ್ಯನ ಮಗ ಪೆಕಹನನ್ನೂ ಯೆಹೂದ್ಯರಿಗೆ ವಿರುದ್ಧ ಕಳುಹಿಸತೊಡಗಿದರು.


ಇವನ ಸರದಾರನೂ ರೆಮಲ್ಯನ ಮಗನೂ ಆಗಿದ್ದ ಪೆಕಹ್ಯನು ಗಿಲ್ಯಾದಿನ ಐವತ್ತು ಮಂದಿ ಜನರನ್ನು ಕೂಡಿಸಿಕೊಂಡು ಇವನಿಗೆ ವಿರುದ್ಧ ಒಳಸಂಚುಮಾಡಿ ಸಮಾರಿಯದಲ್ಲಿರುವ ಅರಮನೆಯ ಗರ್ಭಗೃಹದಲ್ಲೇ ಇವನನ್ನು ಮತ್ತು ಅರ್ಗೋಬ್, ಅರ್ಯೇ ಎಂಬವರನ್ನು ಕೊಂದು ಇವನಿಗೆ ಬದಲಾಗಿ ತಾನೇ ಅರಸನಾದನು.


ಜುದೇಯದ ಅರಸ ಉಜ್ಜೀಯನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಯಾಬೇಷನ ಮಗ ಶಲ್ಲೂಮನು ಇಸ್ರಯೇಲರ ಅರಸನಾಗಿ ಸಮಾರಿಯದಲ್ಲಿ ಒಂದು ತಿಂಗಳು ಆಳಿದನು.


ಜುದೇಯದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೆಂಟನೆಯ ವರ್ಷದಲ್ಲಿ ಯಾರೊಬ್ಬಾಮನ ಮಗ ಜೆಕರ್ಯ ಎಂಬವನು ಇಸ್ರಯೇಲರ ಅರಸನಾಗಿ ಸಮಾರಿಯದಲ್ಲಿ ಆರು ತಿಂಗಳು ಆಳಿದನು.


ಪಟ್ಟಕ್ಕೆ ಬಂದಾಗ ಇವನಿಗೆ ಹದಿನಾರು ವರ್ಷ ವಯಸ್ಸು. ಆ ಜೆರುಸಲೇಮಿನಲ್ಲಿ ಐವತ್ತೆರಡು ವರ್ಷ ಆಳಿದನು. ಜೆರುಸಲೇಮಿನವಳಾದ ಯೆಕೊಲ್ಯ ಎಂಬಾಕೆ ಇವನ ತಾಯಿ.


ಪೆಕಹ್ಯನ ಉಳಿದ ಚರಿತ್ರೆ ಹಾಗು ಕಾರ್ಯಕಲಾಪಗಳು ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಇವನು ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗ ಯಾರೊಬ್ಬಾಮನ ದುರ್ಮಾರ್ಗವನ್ನು ಬಿಡದೆ, ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.


ಇಸ್ರಯೇಲರ ಅರಸ ಯಾರೊಬ್ಬಾಮನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ ಅಮಚ್ಯನ ಮಗ ಅಜರ್ಯನು ಜುದೇಯದ ಅರಸನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು