Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 15:8 - ಕನ್ನಡ ಸತ್ಯವೇದವು C.L. Bible (BSI)

8 ಜುದೇಯದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೆಂಟನೆಯ ವರ್ಷದಲ್ಲಿ ಯಾರೊಬ್ಬಾಮನ ಮಗ ಜೆಕರ್ಯ ಎಂಬವನು ಇಸ್ರಯೇಲರ ಅರಸನಾಗಿ ಸಮಾರಿಯದಲ್ಲಿ ಆರು ತಿಂಗಳು ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೆಂಟನೆಯ ವರ್ಷದಲ್ಲಿ ಯಾರೊಬ್ಬಾಮನ ಮಗನಾದ ಜೆಕರ್ಯ ಎಂಬುವವನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಆರು ತಿಂಗಳು ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೂದದ ಅರಸನಾದ ಅಜರ್ಯನ ಆಳಿಕೆಯ ಮೂವತ್ತೆಂಟನೆಯ ವರುಷದಲ್ಲಿ ಯಾರೊಬ್ಬಾಮನ ಮಗನಾದ ಜೆಕರ್ಯ ಎಂಬವನು ಇಸ್ರಾಯೇಲ್ಯರ ಅರಸನಾಗಿ ಸಮಾರ್ಯದಲ್ಲಿ ಆರು ತಿಂಗಳು ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯಾರೊಬ್ಬಾಮನ ಮಗನಾದ ಜೆಕರ್ಯನು ಇಸ್ರೇಲಿನ ಸಮಾರ್ಯದಲ್ಲಿ ಆರು ತಿಂಗಳ ಕಾಲ ಆಳಿದನು. ಅದು ಯೆಹೂದದ ರಾಜನಾಗಿದ್ದ ಅಜರ್ಯನ ಆಳ್ವಿಕೆಯ ಮೂವತ್ತೆಂಟನೆಯ ವರ್ಷವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೆಂಟನೆಯ ವರ್ಷದಲ್ಲಿ ಯಾರೊಬ್ಬಾಮನ ಮಗನಾದ ಜೆಕರ್ಯನು ಸಮಾರ್ಯದಲ್ಲಿ ಇಸ್ರಾಯೇಲರ ಅರಸನಾದನು. ಅವನು ಆರು ತಿಂಗಳು ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 15:8
14 ತಿಳಿವುಗಳ ಹೋಲಿಕೆ  

ಅವನು ನಿಧನನಾಗಿ ಇಸ್ರಯೇಲ್ ರಾಜರಾಗಿದ್ದ ತನ್ನ ಪಿತೃಗಳ ಬಳಿ ಸೇರಿದನು. ಅವನ ಸ್ಥಾನದಲ್ಲಿ ಅವನ ಮಗ ಜೆಕರ್ಯನು ಅರಸನಾದನು.


ಅನಂತರ ಎಲ್ಲಾ ಯೆಹೂದ್ಯರು ಕೂಡಿ ಹದಿನಾರು ವರ್ಷದವನಾದ ಅಜರ್ಯನನ್ನು ಅವನ ತಂದೆ ಅಮಚ್ಯನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು.


ಇಸ್ರಯೇಲರ ಅರಸ ಯಾರೊಬ್ಬಾಮನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ ಅಮಚ್ಯನ ಮಗ ಅಜರ್ಯನು ಜುದೇಯದ ಅರಸನಾದನು.


ಅವನು ಸತ್ತು ಪಿತೃಗಳ ಬಳಿ ಸೇರಿದಾಗ ಅವನ ಶವವನ್ನು ದಾವೀದನಗರದೊಳಗೆ ರಾಜಕುಟುಂಬದ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಯೋತಾಮನು ಅರಸನಾದನು.


ಅವನು ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗ ಯಾರೊಬ್ಬಾಮನ ದುರ್ಮಾರ್ಗವನ್ನು ಬಿಡದೆ ತನ್ನ ಪೂರ್ವಿಕರಂತೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.


ಜುದೇಯದ ಅರಸ ಉಜ್ಜೀಯನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಯಾಬೇಷನ ಮಗ ಶಲ್ಲೂಮನು ಇಸ್ರಯೇಲರ ಅರಸನಾಗಿ ಸಮಾರಿಯದಲ್ಲಿ ಒಂದು ತಿಂಗಳು ಆಳಿದನು.


ಜುದೇಯದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಗಾದಿಯ ಮಗ ಮೆನಹೇಮನು ಇಸ್ರಯೇಲರ ಅರಸನಾಗಿ ಸಮಾರಿಯದಲ್ಲಿ ಹತ್ತು ವರ್ಷ ಆಳಿದನು.


ಜುದೇಯದ ಅರಸ ಅಜರ್ಯನ ಆಳ್ವಿಕೆಯ ಐವತ್ತೆಂಟನೆಯ ವರ್ಷದಲ್ಲಿ ಮೆನಹೇಮನ ಮಗನಾದ ಪೆಕಹ್ಯ ಎಂಬವನು ಇಸ್ರಯೇಲರ ಅರಸನಾಗಿ ಸಮಾರಿಯದಲ್ಲಿ ಎರಡು ವರ್ಷ ಆಳಿದನು.


ಅರಾಜಕತೆಯಿಂದ ನಾಡಿನಲ್ಲಿ ನಾಯಕರನೇಕರು ತಲೆಯೆತ್ತುವರು; ಜ್ಞಾನ ಹಾಗೂ ವಿವೇಕದಿಂದ ನಾಡು ಸುಸ್ಥಿರವಾಗುವುದು.


ಆಗ ಸರ್ವೇಶ್ವರ, ಹೊಶೇಯನಿಗೆ, “ಈ ಮಗುವಿಗೆ ಜೆಸ್ರೀಲ್ ಎಂದು ಹೆಸರಿಡು. ಏಕೆಂದರೆ, ಇಸ್ರಯೇಲ್‍ನಲ್ಲಿ ಹರಿಸಿದ ರಕ್ತಪಾತಕ್ಕೆ ಪ್ರತಿಯಾಗಿ ಸ್ವಲ್ಪಕಾಲದಲ್ಲೆ ಯೇಹುವಿನ ಮನೆತನವನ್ನು ದಂಡಿಸುವೆನು; ಇಸ್ರಯೇಲ್ ರಾಜ್ಯವನ್ನು ಅಂತ್ಯಗೊಳಿಸುವೆನು.


ಇಸಾಕನ ವಂಶದವರ ಎತ್ತರವಾದ ಪೂಜಾಮಂದಿರಗಳು ನೆಲಸಮವಾಗುವುವು. ಇಸ್ರಯೇಲಿನ ಪವಿತ್ರಾಲಯಗಳು ಪಾಳುಬೀಳುವುವು. ಯಾರೊಬ್ಬಾಮನ ಮನೆತನ ಕತ್ತಿಗೆ ತುತ್ತಾಗುವುದು,” ಎಂದರು.


ಸರ್ವೇಶ್ವರ ಯೇಹುವಿಗೆ, “ನೀನು ನನ್ನ ದೃಷ್ಟಿಗೆ ಸರಿಯಾದದ್ದನ್ನು ನಡೆಸಿ ನನ್ನ ಮೆಚ್ಚಿಕೆಯನ್ನು ಪಡೆದೆ; ಅಹಾಬನ ಮನೆಯವರನ್ನು ಕುರಿತು ನನ್ನ ಚಿತ್ತವನ್ನು ನೆರವೇರಿಸಿದೆ. ಆದುದರಿಂದ ನಿನ್ನ ಸಂತಾನದವರು ನಾಲ್ಕೆನೆಯ ತಲೆಯವರೆಗೂ ಇಸ್ರಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು