Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 16:1 - ಕನ್ನಡ ಸತ್ಯವೇದವು C.L. Bible (BSI)

1 ರೆಮಲ್ಯನ ಮಗ ಪೆಕಹನ ಆಳ್ವಿಕೆಯ ಹದಿನೇಳನೆಯ ವರ್ಷದಲ್ಲಿ ಜುದೇಯದ ರಾಜನಾದ ಯೋತಾಮನ ಮಗ ಆಹಾಜನು ಆಳತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ರೆಮಲ್ಯನ ಮಗನಾದ ಪೆಕಹನ ಆಳ್ವಿಕೆಯ ಹದಿನೇಳನೆಯ ವರ್ಷದಲ್ಲಿ ಯೆಹೂದ ರಾಜನಾದ ಯೋತಾಮನ ಮಗ ಆಹಾಜನು ಆಳತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ರೆಮಲ್ಯನ ಮಗನಾದ ಪೆಕಹನ ಆಳಿಕೆಯ ಹದಿನೇಳನೆಯ ವರುಷದಲ್ಲಿ ಯೆಹೂದರಾಜನಾದ ಯೋತಾಮನ ಮಗ ಆಹಾಜನು ಆಳತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ರೆಮಲ್ಯನ ಮಗನಾದ ಪೆಕಹನು ಇಸ್ರೇಲಿನ ರಾಜನಾಗಿದ್ದ ಹದಿನೇಳನೆಯ ವರ್ಷದಲ್ಲಿ ಯೋತಾಮನ ಮಗನಾದ ಅಹಾಜನು ಯೆಹೂದದ ರಾಜನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ರೆಮಲ್ಯನ ಮಗ ಪೆಕಹನ ಆಳ್ವಿಕೆಯ ಹದಿನೇಳನೆಯ ವರ್ಷದಲ್ಲಿ ಯೆಹೂದದ ಅರಸನಾಗಿರುವ ಯೋತಾಮನ ಮಗ ಆಹಾಜನು ಆಳಲು ಆರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 16:1
12 ತಿಳಿವುಗಳ ಹೋಲಿಕೆ  

ಜುದೇಯ ನಾಡಿನ ಅರಸರಾಗಿದ್ದ ಉಜ್ಜೀಯ, ಯೋತಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಜುದೇಯ ಮತ್ತು ಜೆರುಸಲೇಮ್ ನಗರವನ್ನು ಕುರಿತು ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ ಇದು :


ಯೋಥಾಮ, ಆಹಾಜ, ಹಿಜ್ಕೀಯ ಇವರು ಜುದೇಯದ ಅರಸರು. ಇವರ ಕಾಲದಲ್ಲಿ ಮೋರೆಷೆತ್ ಊರಿನವನಾದ ಮೀಕನಿಗೆ ಒಂದು ದೈವದರ್ಶನವಾಯಿತು. ಅದು ಸಮಾರ್ಯ ಮತ್ತು ಜೆರುಸಲೇಮನ್ನು ಕುರಿತದ್ದಾಗಿತ್ತು.


ಜುದೇಯ ನಾಡಿನಲ್ಲಿ ಉಜ್ಜೀಯ, ಯೋತಾಮ, ಆಹಾಜ ಮತ್ತು ಹಿಜ್ಕೀಯ ಇವರು ಅರಸರಾಗಿದ್ದಾಗ ಹಾಗೂ ಇಸ್ರಯೇಲ್ ನಾಡಿನಲ್ಲಿ ಯೋವಾಷನ ಮಗ ಯಾರೊಬ್ಬಾಮನು ಆಳುತ್ತಿದ್ದ ಕಾಲದಲ್ಲಿ, ಬೆಯೇರಿಯನ ಮಗನಾದ ಹೊಶೇಯನಿಗೆ ದೇವರು ದಯಪಾಲಿಸಿದ ಸಂದೇಶವಿದು:


ಅದು ಆಹಾಜನ ಕಾಲ. ಇವನು ಯೋತಾಮನ ಮಗ, ಉಜ್ಜೀಯನ ಮೊಮ್ಮಗ, ಜುದೇಯದ ಅರಸ. ಇವನ ಕಾಲದಲ್ಲಿ ಸಿರಿಯದ ಅರಸ ರೆಚೀನ ಮತ್ತು ರೆಮೆಲ್ಯನ ಮಗನೂ ಇಸ್ರಯೇಲಿನ ಅರಸನೂ ಆದ ಪೆಕಹ ಎಂಬವರು ಜೆರುಸಲೇಮಿನ ಮೇಲೆ ದಂಡೆತ್ತಿಬಂದರು. ಆದರೆ ಅದನ್ನು ಜಯಿಸಲು ಅವರಿಂದಾಗಲಿಲ್ಲ.


ಯೋತಾಮನು ಸತ್ತು ಪಿತೃಗಳ ಬಳಿ ಸೇರಲು ಅವನ ಶವವನ್ನು ಅವನ ಪೂರ್ವಜನಾದ ದಾವೀದನ ಪಟ್ಟಣದೊಳಗೆ ಕುಟುಂಬ ಸ್ಮಶಾನದಲ್ಲಿ ಸಮಾಧಿಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಅಹಾಜನು ಅರಸನಾದನು.


ಜುದೇಯದ ಅರಸನಾದ ಆಹಾಜನ ಆಳ್ವಿಕೆಯ ಹನ್ನೆರಡನೆಯ ವರ್ಷದಲ್ಲಿ ಏಲನ ಮಗ ಹೋಶೇಯನು ಇಸ್ರಯೇಲರ ಅರಸನಾಗಿ ಸಮಾರಿಯದಲ್ಲಿ ಒಂಬತ್ತು ವರ್ಷ ಆಳಿದನು.


ಆಗ ಸರ್ವೇಶ್ವರಸ್ವಾಮಿ ಯೆಶಾಯನಿಗೆ ಹೀಗೆಂದರು : “ನಿನ್ನ ಮಗ ಶೆಯಾರ್ ಯಾಶೂಬನನ್ನು ಕರೆದುಕೊಂಡು ಆಹಾಜಾರಸನನ್ನು ಕಾಣಲುಹೋಗು. ಅಗಸರ ಹೊಲದ ಮೇಲೆ ಹಾದುಹೋಗುವ ರಾಜಮಾರ್ಗದಲ್ಲಿ ಕೆರೆಯ ಕಾಲುವೆಯ ತುದಿಯ ಬಳಿ ಆತ ನಿನಗೆ ಸಿಕ್ಕುವನು. ಅವನಿಗೆ ಈ ಪ್ರಕಾರ ತಿಳಿಸು :


ಪುನಃ ಸರ್ವೇಶ್ವರಸ್ವಾಮಿ ಆಹಾಜನಿಗೆ ಹೇಳಿದ್ದೇನೆಂದರೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು