2 ಅರಸುಗಳು 16:10 - ಕನ್ನಡ ಸತ್ಯವೇದವು C.L. Bible (BSI)10 ಅರಸ ಆಹಾಜನು ಅಸ್ಸೀರಿಯದ ಅರಸ ತಿಗ್ಲತ್ಪಿಲೆಸರನ ದರ್ಶನಕ್ಕಾಗಿ ದಮಸ್ಕಕ್ಕೆ ಹೋದನು; ಅಲ್ಲಿದ್ದ ಬಲಿಪೀಠವನ್ನು ಕಂಡು ಅದರ ಒಂದು ಚಿತ್ರವನ್ನೂ ಅದರ ಎಲ್ಲಾ ಅಲಂಕಾರದ ನಕ್ಷೆಯನ್ನೂ ಬರೆಯಿಸಿ ಯಾಜಕ ಊರೀಯನಿಗೆ ಕಳುಹಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅರಸನಾದ ಆಹಾಜನು ಅಶ್ಶೂರದ ಅರಸನಾದ ತಿಗ್ಲತ್ಪಿಲೆಸೆರನ ದರ್ಶನಕ್ಕಾಗಿ ದಮಸ್ಕಕ್ಕೆ ಹೋದನು. ಅವನು ಅಲ್ಲಿದ್ದ ಯಜ್ಞವೇದಿಯನ್ನು ಕಂಡು, ಅದರ ಒಂದು ಪ್ರತಿಮೆಯನ್ನೂ, ಅದರ ಎಲ್ಲಾ ಅಲಂಕಾರದ ನಕ್ಷೆಯನ್ನೂ ಬರೆಯಿಸಿ, ಯಾಜಕನಾದ ಊರೀಯನಿಗೆ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅರಸನಾದ ಆಹಾಜನು ಅಶ್ಶೂರದ ಅರಸನಾದ ತಿಗ್ಲತ್ಪಿಲೆಸೆರನ ದರ್ಶನಕ್ಕಾಗಿ ದಮಸ್ಕಕ್ಕೆ ಹೋದನು. ಅವನು ಅಲ್ಲಿದ್ದ ಯಜ್ಞವೇದಿಯನ್ನು ಕಂಡು ಅದರ ಒಂದು ಚಿತ್ರವನ್ನೂ ಅದರ ಎಲ್ಲಾ ಅಲಂಕಾರದ ನಕ್ಷೆಯನ್ನೂ ಬರೆಯಿಸಿ ಯಾಜಕನಾದ ಊರೀಯನಿಗೆ ಕಳುಹಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ರಾಜನಾದ ಅಹಾಜನು ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನನ್ನು ಭೇಟಿಮಾಡಲು ದಮಸ್ಕಕ್ಕೆ ಹೋದನು. ಅಹಾಜನು ದಮಸ್ಕದಲ್ಲಿದ್ದ ಯಜ್ಞವೇದಿಕೆಯನ್ನು ನೋಡಿದನು. ರಾಜನಾದ ಅಹಾಜನು ಯಜ್ಞವೇದಿಕೆಯ ವಿನ್ಯಾಸವನ್ನು ಮತ್ತು ಮಾದರಿಯನ್ನು ಯಾಜಕನಾದ ಊರೀಯನಿಗೆ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅರಸನಾದ ಆಹಾಜನು ಅಸ್ಸೀರಿಯದ ಅರಸನಾದ ತಿಗ್ಲತ್ಪಿಲೆಸೆರನನ್ನು ಎದುರುಗೊಳ್ಳಲು ದಮಸ್ಕಕ್ಕೆ ಹೋಗಿ, ದಮಸ್ಕದಲ್ಲಿ ಒಂದು ಬಲಿಪೀಠವನ್ನು ಕಂಡನು. ಅರಸನಾದ ಆಹಾಜನು ಆ ಬಲಿಪೀಠದ ರೂಪವನ್ನೂ, ಅದರ ಎಲ್ಲಾ ಕೈಕೆಲಸದ ಪ್ರಕಾರ ಮಾದರಿಯನ್ನೂ ಯಾಜಕನಾದ ಊರೀಯನಿಗೆ ಕಳುಹಿಸಿದನು. ಅಧ್ಯಾಯವನ್ನು ನೋಡಿ |