Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 16:11 - ಕನ್ನಡ ಸತ್ಯವೇದವು C.L. Bible (BSI)

11 ಅರಸ ಆಹಾಜನು ದಮಸ್ಕದಿಂದ ಬರುವಷ್ಟರಲ್ಲಿ ಊರೀಯನು ಅರಸನಿಂದ ತನಗೆ ಬಂದ ಮಾದರಿಯ ಪ್ರಕಾರ ಒಂದು ಪೂಜಾಪೀಠವನ್ನು ಮಾಡಿಸಿಬಿಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅರಸನಾದ ಆಹಾಜನು ದಮಸ್ಕದಿಂದ ಬರುವಷ್ಟರಲ್ಲಿ ಊರೀಯನು ಅರಸನಿಂದ ತನಗೆ ಬಂದ ಮಾದರಿಯ ಪ್ರಕಾರ ಒಂದು ಯಜ್ಞವೇದಿಯನ್ನು ಮಾಡಿಸಿಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅರಸನಾದ ಆಹಾಜನು ದಮಸ್ಕದಿಂದ ಬರುವಷ್ಟರಲ್ಲಿ ಊರೀಯನು ಅರಸನಿಂದ ತನಗೆ ಬಂದ ಮಾದರಿಯ ಪ್ರಕಾರ ಒಂದು ವೇದಿಯನ್ನು ಮಾಡಿಸಿಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆಗ ಯಾಜಕನಾದ ಊರೀಯನು, ದಮಸ್ಕದಿಂದ ರಾಜನಾದ ಅಹಾಜನು ತನಗೆ ಕಳುಹಿಸಿದ ಯಜ್ಞವೇದಿಕೆಯ ಮಾದರಿಯಲ್ಲೇ ಮತ್ತೊಂದು ಯಜ್ಞವೇದಿಕೆಯೊಂದನ್ನು ನಿರ್ಮಿಸಿದನು. ಹೀಗೆ ರಾಜನಾದ ಅಹಾಜನು ದಮಸ್ಕದಿಂದ ಹಿಂತಿರುಗುವುದಕ್ಕೆ ಮೊದಲೇ ಊರೀಯನು ಯಜ್ಞವೇದಿಕೆಯೊಂದನ್ನು ನಿರ್ಮಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯಾಜಕನಾದ ಊರೀಯನು ಅದರ ಪ್ರಕಾರ ಒಂದು ಬಲಿಪೀಠವನ್ನು ಹಾಗೆಯೇ ಅರಸನಾದ ಆಹಾಜನು ದಮಸ್ಕದಿಂದ ಬರುವ ಮೊದಲೇ ಕಟ್ಟಿ ಮುಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 16:11
17 ತಿಳಿವುಗಳ ಹೋಲಿಕೆ  

ಇದರಿಂದ ನಾನು ಯಾರನ್ನು ಒಲಿಸಿಕೊಳ್ಳಲು ಯತ್ನಿಸುತ್ತಿದ್ದೇನೆ? ಮಾನವರನ್ನೋ? ದೇವರನ್ನೋ? ನಾನು ಮಾನವರ ಮೆಚ್ಚುಗೆಯನ್ನು ಗಳಿಸಿಕೊಳ್ಳಲು ಯತ್ನಿಸುತ್ತಿಲ್ಲ; ನಾನಿನ್ನೂ ಜನರ ಮೆಚ್ಚುಗೆಯನ್ನು ಗಳಿಸುವವನೇ ಆಗಿದ್ದರೆ ಕ್ರಿಸ್ತಯೇಸುವಿನ ದಾಸನಾಗಿರಲು ಸಾಧ್ಯವೇ ಇಲ್ಲ.


ದುರಾಚಾರಗಳನ್ನು ಅನುಸರಿಸಲು ನಿರ್ಧರಿಸಿದ ಕಾರಣ, ಎಫ್ರಯಿಮ್ ನ್ಯಾಯತೀರ್ಪಿಗೆ ಗುರಿಯಾಗಿದೆ; ಹಿಂಸೆಗೀಡಾಗಿದೆ; ನುಚ್ಚುನೂರಾಗಿದೆ.


ಜನರು ಜ್ಞಾನಹೀನರಾಗಿ ಅಳಿದುಹೋಗುತ್ತಿದ್ದಾರೆ. “ನೀವು ದೈವಜ್ಞಾನವನ್ನು ತಿರಸ್ಕರಿಸಿದ್ದೀರಿ; ನಾನು ಸಹ ಯಾಜಕವರ್ಗದಿಂದ ನಿಮ್ಮನ್ನು ವರ್ಜಿಸಿಬಿಡುತ್ತೇನೆ. ನೀವು ದೇವರ ಧರ್ಮೋಪದೇಶವನ್ನು ಮರೆತುಬಿಟ್ಟಿದ್ದೀರಿ; ನಾನು ನಿಮ್ಮ ಮಕ್ಕಳನ್ನು ಮರೆತುಬಿಡುತ್ತೇನೆ.


ಅಂತೆಯೇ ಸಮಸ್ತ ಜನಾಂಗ-ಕುಲ-ಭಾಷೆಗಳವರು ತುತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಎಲ್ಲರು ಅದೇ ಸಮಯದಲ್ಲಿ ಅಡ್ಡಬಿದ್ದು ರಾಜ ನೆಬೂಕದ್ನೆಚ್ಚರನು ನಿಲ್ಲಿಸಿದ್ದ ಆ ಬಂಗಾರದ ಪ್ರತಿಮೆಯನ್ನು ಆರಾಧಿಸಿದರು.


ಅಲ್ಲಿನ ಯಾಜಕರು ನನ್ನ ವಿಧಿಗಳನ್ನು ಉಲ್ಲಂಘಿಸಿದ್ದಾರೆ, ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರಗೊಳಿಸಿದ್ದಾರೆ; ಮೀಸಲಾದುದಕ್ಕೂ ಮೀಸಲಲ್ಲದ್ದಕ್ಕೂ ಭೇದವೆಣಿಸಲಿಲ್ಲ. ಶುದ್ಧಾ ಶುದ್ಧ ವಿವೇಚನೆಯನ್ನು ಬೋಧಿಸಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಕಡೆಗಣಿಸಿದ್ದಾರೆ. ಇದರಿಂದ ನಾನು ಅವರ ಮಧ್ಯೆ ಅಪಕೀರ್ತಿಗೆ ಗುರಿಯಾಗಿದ್ದೇನೆ.


“ಪ್ರವಾದಿಗಳು ಭ್ರಷ್ಟರು, ಯಾಜಕರೂ ಭ್ರಷ್ಟರು ! ನನ್ನಾಲಯದಲ್ಲೆ ಅವರು ನಡೆಸುವ ಕೆಟ್ಟತನವನ್ನು ನಾನು ಕಂಡಿರುವೆನು.


ನೀನು ಹೀಗೆ ಬರೆದುದಕ್ಕೆ ಯಾಜಕನಾದ ಊರೀಯ, ಯೆಬೆರೆಕ್ಕನ ಮಗನಾದ ಜೆಕರ್ಯ - ಈ ನಂಬಿಗಸ್ತರನ್ನು ಸಾಕ್ಷಿಗಳಾಗಿ ಕರೆದುಕೊ” ಎಂದು ಹೇಳಿದರು.


ಅರಸ ಆಹಾಜನು ಅಸ್ಸೀರಿಯದ ಅರಸ ತಿಗ್ಲತ್ಪಿಲೆಸರನ ದರ್ಶನಕ್ಕಾಗಿ ದಮಸ್ಕಕ್ಕೆ ಹೋದನು; ಅಲ್ಲಿದ್ದ ಬಲಿಪೀಠವನ್ನು ಕಂಡು ಅದರ ಒಂದು ಚಿತ್ರವನ್ನೂ ಅದರ ಎಲ್ಲಾ ಅಲಂಕಾರದ ನಕ್ಷೆಯನ್ನೂ ಬರೆಯಿಸಿ ಯಾಜಕ ಊರೀಯನಿಗೆ ಕಳುಹಿಸಿದನು.


ಅರಸನು ಹಿಂದಿರುಗಿ ಬಂದ ಮೇಲೆ ಆ ಬಲಿಪೀಠವನ್ನು ಕಂಡು ಅದರ ಸಮೀಪಕ್ಕೆ ಹೋಗಿ


ಇದಲ್ಲದೆ, ಸರ್ವೇಶ್ವರನ ಆಲಯಕ್ಕೂ ತನ್ನ ಪೂಜಾಪೀಠಕ್ಕೂ ಮಧ್ಯೆ, ಆವರೆಗೂ ಸರ್ವೇಶ್ವರನ ಸೇವೆಗೆ ಉಪಯೋಗಿಸಲಾಗುತ್ತಿದ್ದ ತಾಮ್ರಪೀಠವನ್ನು ಆಲಯದ ಎದುರಿನಿಂದ ತೆಗೆಯಿಸಿ, ತನ್ನ ಪೂಜಾಪೀಠದ ಉತ್ತರ ದಿಕ್ಕಿನಲ್ಲಿ ಇಡಿಸಿದನು.


ಯಾಜಕ ಊರೀಯನು ಅರಸನು ಹೇಳಿದಂತೆಯೇ ಮಾಡಿದನು.


ಸರ್ವೇಶ್ವರ ತಮ್ಮ ಹೆಸರನ್ನು ಸ್ಥಾಪಿಸುವುದಕ್ಕಾಗಿ ಆರಿಸಿಕೊಂಡ ಜೆರುಸಲೇಮಿನ ದೇವಾಲಯದ ಎರಡು ಪ್ರಾಕಾರಗಳಲ್ಲಿಯೂ


ತಾನು ಮಾಡಿಸಿದ ಅಶೇರ ವಿಗ್ರಹಸ್ತಂಭವನ್ನು ದೇವಾಲಯದಲ್ಲಿ ಇಡಿಸಿದನು. ಸರ್ವೇಶ್ವರ ಆ ಆಲಯದಲ್ಲಿ ದಾವೀದನಿಗೂ ಅವನ ಮಗ ಸೊಲೊಮೋನನಿಗೂ, “ಇಸ್ರಯೇಲರು ತಮಗೆ ಮೋಶೆಯ ಮುಖಾಂತರ ಕೊಡಲಾದ ನನ್ನ ಧರ್ಮಶಾಸ್ತ್ರದ ನಿಬಂಧನೆಗಳನ್ನು ಅನುಸರಿಸಿ ನಡೆಯುವುದಾದರೆ


ಸರ್ವೇಶ್ವರ ಜೆರುಸಲೇಮಿನಲ್ಲಿ ತನ್ನ ಹೆಸರನ್ನು ಸದಾಕಾಲ ಸ್ಥಾಪಿಸುವುದಕ್ಕಾಗಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು