2 ಅರಸುಗಳು 16:15 - ಕನ್ನಡ ಸತ್ಯವೇದವು C.L. Bible (BSI)15 ಯಾಜಕ ಊರೀಯನಿಗೆ, “ಪ್ರಾತಃಕಾಲದ ದಹನಬಲಿಯನ್ನು, ಸಾಯಂಕಾಲದ ನೈವೇದ್ಯವನ್ನು ಅರಸನು ತರುವ ದಹನಬಲಿ ದ್ರವ್ಯ, ಧಾನ್ಯನೈವೇದ್ಯ, ಇವುಗಳನ್ನು ಮತ್ತು ಜನರು ತರುವ ದಹನಬಲಿ ದ್ರವ್ಯ, ಧಾನ್ಯನೈವೇದ್ಯ, ಪಾನದ್ರವ್ಯ ಇವುಗಳನ್ನು ಈ ಮಹಾ ಪೂಜಾಪೀಠದ ಮೇಲೆ ಸಮರ್ಪಿಸಬೇಕು; ಮತ್ತು ದಹನಬಲಿ ಯಜ್ಞಗಳಿಗಾಗಿ ವಧಿಸುವ ಪಶುಗಳ ರಕ್ತವನ್ನು ಇದರ ಮೇಲೆಯೇ ಚಿಮುಕಿಸಬೇಕು. ದೈವೋತ್ತರಗಳನ್ನು ತಿಳಿದುಕೊಳ್ಳುವುದಕ್ಕಾಗಿ ತಾಮ್ರಪೀಠವನ್ನು ಉಪಯೋಗಿಸುವೆನು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅರಸನಾದ ಆಹಾಜನು ಯಾಜಕನಾದ ಊರೀಯನಿಗೆ, “ಉದಯಕಾಲದಲ್ಲಿ ಸರ್ವಾಂಗಹೋಮವನ್ನೂ, ಸಾಯಂಕಾಲದಲ್ಲಿ ಧಾನ್ಯನೈವೇದ್ಯವನ್ನೂ, ಅರಸನು ತರುವ ಸರ್ವಾಂಗಹೋಮದ್ರವ್ಯ, ಧಾನ್ಯನೈವೇದ್ಯ ಇವುಗಳನ್ನೂ, ಜನರು ತರುವ ಸರ್ವಾಂಗಹೋಮದ್ರವ್ಯ, ಧಾನ್ಯನೈವೇದ್ಯ, ಪಾನದ್ರವ್ಯ ಇವುಗಳನ್ನೂ ಈ ಮಹಾವೇದಿಯ ಮೇಲೆ ಸಮರ್ಪಿಸಬೇಕು ಮತ್ತು ಸರ್ವಾಂಗಹೋಮಯಜ್ಞಗಳಿಗಾಗಿ ವಧಿಸುವ ಪಶುಗಳ ರಕ್ತವನ್ನು ಇದರ ಮೇಲೆಯೇ ಚಿಮುಕಿಸಬೇಕು. ತಾಮ್ರ ಯಜ್ಞವೇದಿಯನ್ನು ಕುರಿತಾಗಿ ನಾನೇ ಆಲೋಚಿಸಿ ನೋಡಿಕೊಳ್ಳುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಯಾಜಕನಾದ ಊರೀಯನಿಗೆ - ಪ್ರಾತಃಕಾಲದ ಸರ್ವಾಂಗಹೋಮವನ್ನೂ ಸಾಯಂಕಾಲದ ನೈವೇದ್ಯವನ್ನೂ ಅರಸನು ತರುವ ಸರ್ವಾಂಗಹೋಮದ್ರವ್ಯ ಧಾನ್ಯನೈವೇದ್ಯ ಇವುಗಳನ್ನೂ ಜನರು ತರುವ ಸರ್ವಾಂಗಹೋಮದ್ರವ್ಯ ಧಾನ್ಯನೈವೇದ್ಯ ಪಾನದ್ರವ್ಯ ಇವುಗಳನ್ನೂ ಈ ಮಹಾವೇದಿಯ ಮೇಲೆ ಸಮರ್ಪಿಸಬೇಕು; ಮತ್ತು ಸರ್ವಾಂಗ ಹೋಮಯಜ್ಞಗಳಿಗಾಗಿ ವಧಿಸುವ ಪಶುಗಳ ರಕ್ತವನ್ನು ಇದರ ಮೇಲೆಯೇ ಚಿವಿುಕಿಸಬೇಕು. ದೈವೋತ್ತರಗಳನ್ನು ತಿಳಿದುಕೊಳ್ಳುವದಕ್ಕಾಗಿ ತಾಮ್ರವೇದಿಯನ್ನು ಉಪಯೋಗಿಸುವೆನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಅಹಾಜನು ಯಾಜಕನಾದ ಊರೀಯನಿಗೆ, “ಈ ದೇಶದ ಜನರೆಲ್ಲರೂ ಪ್ರಾತಃಕಾಲದಲ್ಲಿ ಸರ್ವಾಂಗಹೋಮವನ್ನೂ ಸಾಯಂಕಾಲದಲ್ಲಿ ಧಾನ್ಯನೈವೇದ್ಯವನ್ನೂ ಮತ್ತು ಪಾನದ್ರವ್ಯಗಳನ್ನೂ ಸಮರ್ಪಿಸಲು ಮಹಾವೇದಿಕೆಯನ್ನು ಬಳಸಬೇಕು; ಸರ್ವಾಂಗಹೋಮಕ್ಕಾಗಿ ಮತ್ತು ಸಮಾಧಾನಯಜ್ಞಕ್ಕಾಗಿ ವಧಿಸುವ ಪಶುಗಳ ರಕ್ತವನ್ನು ಈ ಮಹಾವೇದಿಕೆಯ ಮೇಲೆ ಚಿಮುಕಿಸಿ. ಆದರೆ ನಾನು ದೇವರಿಂದ ದೈವೋತ್ತರಗಳನ್ನು ಕೇಳಲು ತಾಮ್ರವೇದಿಕೆಯನ್ನು ಉಪಯೋಗಿಸುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆಗ ಅರಸನಾದ ಆಹಾಜನು ಯಾಜಕನಾದ ಊರೀಯನಿಗೆ, “ಉದಯದಲ್ಲಿ ದಹನಬಲಿಯನ್ನೂ, ಸಾಯಂಕಾಲದ ಧಾನ್ಯ ಸಮರ್ಪಣೆಯನ್ನೂ, ಪಾನದ್ರವ್ಯವನ್ನೂ ದೊಡ್ಡ ಹೊಸ ಬಲಿಪೀಠದ ಮೇಲೆ ಅರ್ಪಿಸಿ, ದಹನಬಲಿಯ ರಕ್ತವೆಲ್ಲವನ್ನೂ ಚಿಮುಕಿಸಿದನು. ಆದರೆ ಕಂಚಿನ ಬಲಿಪೀಠವನ್ನು ನಾನು ಮಾರ್ಗದರ್ಶನಕ್ಕಾಗಿ ಉಪಯೋಗಿಸುವೆನು,” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿ |