2 ಅರಸುಗಳು 16:2 - ಕನ್ನಡ ಸತ್ಯವೇದವು C.L. Bible (BSI)2 ಪಟ್ಟಕ್ಕೆ ಬಂದಾಗ ಇವನಿಗೆ ಇಪ್ಪತ್ತು ವರ್ಷ ವಯಸ್ಸು. ಜೆರುಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಇವನು ತನ್ನ ದೇವರಾದ ಸರ್ವೇಶ್ವರಸ್ವಾಮಿಯ ದೃಷ್ಟಿಯಲ್ಲಿ ಒಳ್ಳೆಯವನಾಗಿರಲಿಲ್ಲ. ತನ್ನ ಪೂರ್ವಜ ದಾವೀದನ ಮಾರ್ಗವನ್ನು ಬಿಟ್ಟು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಹಾಜನು ಪಟ್ಟಕ್ಕೆ ಬಂದಾಗ ಇಪ್ಪತ್ತು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಇವನು ತನ್ನ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿರಲಿಲ್ಲ. ತನ್ನ ಪೂರ್ವಿಕನಾದ ದಾವೀದನ ಮಾರ್ಗವನ್ನು ಬಿಟ್ಟು ಇಸ್ರಾಯೇಲರ ಮಾರ್ಗವನ್ನು ಹಿಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಇವನು ಪಟ್ಟಕ್ಕೆ ಬಂದಾಗ ಇಪ್ಪತ್ತು ವರುಷದವನಾಗಿದ್ದು ಯೆರೂಸಲೇವಿುನಲ್ಲಿ ಹದಿನಾರು ವರುಷ ಆಳಿದನು. ಇವನು ತನ್ನ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿರಲಿಲ್ಲ. ತನ್ನ ಪೂರ್ವಿಕನಾದ ದಾವೀದನ ಮಾರ್ಗವನ್ನು ಬಿಟ್ಟು ಇಸ್ರಾಯೇಲ್ ರಾಜರ ಮಾರ್ಗದಲ್ಲಿ ನಡೆದನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅಹಾಜನು ರಾಜನಾದಾಗ ಅವನಿಗೆ ಇಪ್ಪತ್ತು ವರ್ಷ ವಯಸ್ಸಾಗಿತ್ತು. ಅಹಾಜನು ಜೆರುಸಲೇಮನ್ನು ಹದಿನಾರು ವರ್ಷ ಆಳಿದನು. ಯೆಹೋವನ ದೃಷ್ಟಿಯಲ್ಲಿ ಒಳ್ಳೆಯದಾಗಿದ್ದ ಕಾರ್ಯಗಳನ್ನು ಅಹಾಜನು ಮಾಡಲಿಲ್ಲ. ಅವನ ಪೂರ್ವಿಕನಾದ ದಾವೀದನು ದೇವರಿಗೆ ವಿಧೇಯನಾಗಿದ್ದನು; ಆದರೆ ಅಹಾಜನು ವಿಧೇಯನಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಹಾಜನು ಆಳಲು ಆರಂಭಿಸಿದಾಗ ಇಪ್ಪತ್ತು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಆದರೆ ಅವನು ತನ್ನ ತಂದೆಯಾದ ದಾವೀದನ ಹಾಗೆ ನಡೆಯದೆ, ತನ್ನ ದೇವರಾದ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಲಿಲ್ಲ, ಅಧ್ಯಾಯವನ್ನು ನೋಡಿ |