Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 16:20 - ಕನ್ನಡ ಸತ್ಯವೇದವು C.L. Bible (BSI)

20 ಅವನು ಸತ್ತು ಪಿತೃಗಳ ಬಳಿ ಸೇರಿದನು. ಅವನ ಶವವನ್ನು ದಾವೀದನಗರದೊಳಗೆ ಅವನ ಕುಟುಂಬ ಸ್ಮಶಾನದಲ್ಲಿ ಸಮಾಧಿ ಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಹಿಜ್ಕೀಯನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಹಾಜನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದನ ಪಟ್ಟಣದೊಳಗೆ ಅವನ ಕುಟುಂಬ ಸ್ಮಶಾನದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಹಿಜ್ಕೀಯನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದೊಳಗೆ ಅವನ ಕುಟುಂಬ ಶ್ಮಶಾನದಲ್ಲಿ ಸಮಾಧಿ ಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಹಿಜ್ಕೀಯ ಎಂಬವನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅಹಾಜನು ಸತ್ತಮೇಲೆ ಅವನನ್ನು ಅವನ ಪೂರ್ವಿಕರ ಬಳಿ ದಾವೀದನಗರದಲ್ಲಿ ಸಮಾಧಿಮಾಡಿದರು. ಅಹಾಜನ ಮಗನಾದ ಹಿಜ್ಕೀಯನು ಅವನ ನಂತರ ಹೊಸ ರಾಜನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಹಾಜನು ಮೃತನಾಗಿ ತನ್ನ ಪಿತೃಗಳ ಬಳಿಯಲ್ಲಿ ಸೇರಿದನು. ಅವನನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಬಳಿಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗ ಹಿಜ್ಕೀಯನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 16:20
13 ತಿಳಿವುಗಳ ಹೋಲಿಕೆ  

ಉಜ್ಜೀಯನಿಗೆ ಯೋತಾಮ್, ಯೋತಾಮನಿಗೆ ಅಹಾಜ್, ಅಹಾಜನಿಗೆ ಹಿಜ್ಕೀಯನು ಹುಟ್ಟಿದರು.


ಜುದೇಯ ನಾಡಿನ ಅರಸರಾಗಿದ್ದ ಉಜ್ಜೀಯ, ಯೋತಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಜುದೇಯ ಮತ್ತು ಜೆರುಸಲೇಮ್ ನಗರವನ್ನು ಕುರಿತು ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ ಇದು :


ಯೋಥಾಮ, ಆಹಾಜ, ಹಿಜ್ಕೀಯ ಇವರು ಜುದೇಯದ ಅರಸರು. ಇವರ ಕಾಲದಲ್ಲಿ ಮೋರೆಷೆತ್ ಊರಿನವನಾದ ಮೀಕನಿಗೆ ಒಂದು ದೈವದರ್ಶನವಾಯಿತು. ಅದು ಸಮಾರ್ಯ ಮತ್ತು ಜೆರುಸಲೇಮನ್ನು ಕುರಿತದ್ದಾಗಿತ್ತು.


ಜುದೇಯ ನಾಡಿನಲ್ಲಿ ಉಜ್ಜೀಯ, ಯೋತಾಮ, ಆಹಾಜ ಮತ್ತು ಹಿಜ್ಕೀಯ ಇವರು ಅರಸರಾಗಿದ್ದಾಗ ಹಾಗೂ ಇಸ್ರಯೇಲ್ ನಾಡಿನಲ್ಲಿ ಯೋವಾಷನ ಮಗ ಯಾರೊಬ್ಬಾಮನು ಆಳುತ್ತಿದ್ದ ಕಾಲದಲ್ಲಿ, ಬೆಯೇರಿಯನ ಮಗನಾದ ಹೊಶೇಯನಿಗೆ ದೇವರು ದಯಪಾಲಿಸಿದ ಸಂದೇಶವಿದು:


ಅವನು ಸತ್ತು ತನ್ನ ಪಿತೃಗಳ ಬಳಿಗೆ ಸೇರಲು ಅವನನ್ನು ಇಸ್ರಯೇಲ್ ರಾಜಸ್ಮಶಾನದಲ್ಲಿ ಹೂಣದೆ ಜೆರುಸಲೇಮ್ ಪಟ್ಟಣದೊಳಗಿನ ಒಂದು ಸ್ಥಳದಲ್ಲಿ ಹೂಣಿಟ್ಟರು. ಅವನಿಗೆ ಬದಲಾಗಿ ಅವನ ಮಗ ಹಿಜ್ಕೀಯನು ಅರಸನಾದನು.


ಅವನು ಸತ್ತು ಪಿತೃಗಳ ಬಳಿ ಸೇರಿದಾಗ ಅವನ ಶವವನ್ನು ಅವನ ಅರಮನೆಯಿರುವ ಉಜ್ಜನ ವನದಲ್ಲಿ ಸಮಾಧಿ ಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಆಮೋನನು ಅರಸನಾದನು.


ಇಸ್ರಯೇಲರ ಅರಸನೂ ಏಲನ ಮಗನೂ ಆದ ಹೋಶೇಯನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಜುದೇಯ ರಾಜನಾದ ಆಹಾಜನ ಮಗ ಹಿಜ್ಕೀಯನು ಆಳತೊಡಗಿದನು.


ಅವನ ಶವವನ್ನು ಉಜ್ಜನ ವನದಲ್ಲಿ ಸಮಾಧಿಮಾಡಿದರು. ಅಲ್ಲಿ ಅವನು ಮೊದಲೇ ತನಗಾಗಿ ಒಂದು ಸಮಾಧಿಯನ್ನು ಸಿದ್ಧಪಡಿಸಿಟ್ಟಿದ್ದನು. ಅವನ ಸ್ಥಾನದಲ್ಲಿ ಅವನ ಮಗ ಯೋಷೀಯನು ಅರಸನಾದನು.


ಅಹಾಜನ ಉಳಿದ ಪೂರ್ವೋತ್ತರ ಚರಿತ್ರೆ ಹಾಗು ಅವನ ಎಲ್ಲ ಪ್ರವರ್ತನೆಗಳು ಯೆಹೂದ್ಯರ ಮತ್ತು ಇಸ್ರಯೇಲರ ರಾಜಗ್ರಂಥದಲ್ಲಿ ಲಿಖಿತವಾಗಿವೆ.


ಅರಸ ಆಹಾಜನು ಕಾಲವಾದ ವರುಷದಲಿ ಕೇಳಿಬಂದಿತು ಈ ದೈವೋಕ್ತಿ :


ಅನಂತರ ದಾವೀದನು ಮರಣಹೊಂದಿ ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿ ಮಾಡಿದರು.


ಅವನು ನಿಧನನಾಗಿ ಪಿತೃಗಳ ಬಳಿ ಸೇರಲು ಅವನ ಶವವನ್ನು ದಾವೀದನಗರದೊಳಗೆ ಕುಟುಂಬ ಸ್ಮಶಾನ ಭೂಮಿಯಲ್ಲಿ ಸಮಾಧಿಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಅಹಜ್ಯನು ಅರಸನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು