2 ಅರಸುಗಳು 16:4 - ಕನ್ನಡ ಸತ್ಯವೇದವು C.L. Bible (BSI)4 ಪೂಜಾಸ್ಥಳಗಳಲ್ಲೂ ದಿಣ್ಣೆಗಳ ಮೇಲೂ ಎಲ್ಲಾ ಹಸಿರು ಮರಗಳ ಕೆಳಗೂ ಯಜ್ಞಧೂಪಗಳನ್ನು ಸಮರ್ಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಪೂಜಾಸ್ಥಳಗಳಲ್ಲಿಯೂ, ದಿನ್ನೆಗಳ ಮೇಲೆಯೂ, ಎಲ್ಲಾ ಹಸಿರು ಮರಗಳ ಕೆಳಗಡೆಯೂ ಯಜ್ಞಧೂಪಗಳನ್ನು ಸಮರ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಪೂಜಾಸ್ಥಳಗಳಲ್ಲಿಯೂ ದಿನ್ನೆಗಳ ಮೇಲೆಯೂ ಎಲ್ಲಾ ಹಸುರು ಮರಗಳ ಕೆಳಗೆಯೂ ಯಜ್ಞಧೂಪಗಳನ್ನು ಸಮರ್ಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅಹಾಜನು ಉನ್ನತಸ್ಥಳಗಳಲ್ಲಿ ಮತ್ತು ಬೆಟ್ಟಗಳ ಮೇಲೆ ಮತ್ತು ಹಸಿರು ಮರಗಳ ಕೆಳಗೆ ಯಜ್ಞಗಳನ್ನು ಅರ್ಪಿಸಿದನು ಮತ್ತು ಧೂಪವನ್ನು ಸುಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಇದಲ್ಲದೆ ಅವನು ಪೂಜಾಸ್ಥಳಗಳ ಮೇಲೆಯೂ ಬೆಟ್ಟಗಳ ಮೇಲೆಯೂ ಎಲ್ಲಾ ಹಸಿರಾದ ಮರಗಳ ಕೆಳಗೂ ಬಲಿಗಳನ್ನೂ ಧೂಪವನ್ನೂ ಅರ್ಪಿಸಿದನು. ಅಧ್ಯಾಯವನ್ನು ನೋಡಿ |
ಯೆಹೋವಾಷನು ಯಾಜಕರಿಗೆ, “ಸರ್ವೇಶ್ವರನ ಆಲಯಕ್ಕೆ ಸೇರುವ ಎಲ್ಲಾ ಪರಿಶುದ್ಧ ದ್ರವ್ಯವನ್ನು, ಅಂದರೆ ಜನಗಣತಿಯಲ್ಲಿ ಎಣಿಕೆಯಾದ ಪ್ರತಿಯೊಬ್ಬನು ತಂದುಕೊಡುವ ಹಣ, ದೇವರಿಗೆ ಪ್ರತಿಷ್ಟಿತನಾದ ವ್ಯಕ್ತಿ ತನ್ನ ಪ್ರಾಣವನನ್ನು ಬಿಡಿಸಿಕೊಳ್ಳುವುದಕ್ಕಾಗಿ ತೆರುವ ಹಣ, ಜನರು ಸರ್ವೇಶ್ವರನ ಆಲಯಕ್ಕೆ ಸ್ವೇಚ್ಛೆಯಿಂದ ತಂದು ಒಪ್ಪಿಸುವ ಹಣ, ಇವುಗಳನ್ನು ತೆಗೆದುಕೊಂಡು ದೇವಾಲಯವು ಎಲ್ಲೆಲ್ಲಿ ಶಿಥಿಲವಾಗಿ ಇರುತ್ತದೆ ಎಂದು ನೋಡಿ ಅದನ್ನು ಸರಿಮಾಡುವುದಕ್ಕಾಗಿ ವಿನಿಯೋಗಿಸಿರಿ.