Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 16:5 - ಕನ್ನಡ ಸತ್ಯವೇದವು C.L. Bible (BSI)

5 ಇವನ ಕಾಲದಲ್ಲಿ ಸಿರಿಯಾದವರ ಅರಸನಾದ ರೆಚೀನ್ ಮತ್ತು ಇಸ್ರಯೇಲರ ಅರಸನೂ ರೆಮಲ್ಯನ ಮಗನೂ ಆದ ಪೆಕಹ ಎಂಬವರು ಕೂಡಿಕೊಂಡು ಜೆರುಸಲೇಮಿಗೆ ವಿರುದ್ಧ ದಾಳಿಮಾಡಿ ಆಹಾಜನನ್ನು ಸುತ್ತಿಕೊಂಡರು. ಆದರೆ ಅವನನ್ನು ಜಯಿಸಲು ಅವರಿಂದ ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇವನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ್, ಇಸ್ರಾಯೇಲರ ಅರಸನೂ, ರೆಮಲ್ಯನ ಮಗನೂ ಆದ ಪೆಕಹ ಎಂಬುವವರು ಒಟ್ಟಿಗೆ ಸೇರಿ ಯೆರೂಸಲೇಮಿಗೆ ವಿರೋಧವಾಗಿ ಬಂದು ಆಹಾಜನನ್ನು ಸುತ್ತಿಕೊಂಡರು. ಆದರೆ ಅವನನ್ನು ಜಯಿಸುವುದು ಅವರಿಂದ ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇವನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ್, ಇಸ್ರಾಯೇಲ್ಯರ ಅರಸನೂ ರೆಮಲ್ಯನ ಮಗನೂ ಆದ ಪೆಕಹ ಎಂಬವರು ಕೂಡಿಕೊಂಡು ಯೆರೂಸಲೇವಿುಗೆ ವಿರೋಧವಾಗಿ ಬಂದು ಆಹಾಜನನ್ನು ಸುತ್ತಿಕೊಂಡರು. ಆದರೆ ಅವನನ್ನು ಜಯಿಸುವದು ಅವರಿಂದ ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅರಾಮ್ಯರ ರಾಜನಾದ ರೆಚೀನನು ಮತ್ತು ರೆಮಲ್ಯನ ಮಗನೂ ಇಸ್ರೇಲಿನ ರಾಜನೂ ಆದ ಪೆಕಹನು ಜೆರುಸಲೇಮಿನ ವಿರುದ್ಧ ಯುದ್ಧಕ್ಕೆ ಬಂದರು. ರೆಚೀನ ಮತ್ತು ಪೆಕಹ ಅಹಾಜನಿಗೆ ಮುತ್ತಿಗೆ ಹಾಕಿದರು. ಆದರೆ ಅವನನ್ನು ಸೋಲಿಸಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಅರಾಮಿನ ಅರಸನಾದ ರೆಚೀನ್, ಮತ್ತು ಇಸ್ರಾಯೇಲರ ಅರಸನೂ ರೆಮಲ್ಯನ ಮಗನೂ ಆದ ಪೆಕಹನು ಯುದ್ಧಮಾಡಲು ಯೆರೂಸಲೇಮಿಗೆ ಬಂದು ಆಹಾಜನನ್ನು ಮುತ್ತಿಗೆ ಹಾಕಿದರು. ಆದರೆ ಅವನನ್ನು ಜಯಿಸುವುದು ಅವರಿಂದ ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 16:5
10 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಆ ಕಾಲದಲ್ಲಿ ಸಿರಿಯಾದ ಅರಸ ರೆಚೀನನನ್ನೂ ರೆಮಲ್ಯನ ಮಗ ಪೆಕಹನನ್ನೂ ಯೆಹೂದ್ಯರಿಗೆ ವಿರುದ್ಧ ಕಳುಹಿಸತೊಡಗಿದರು.


“ಈ ಜನರು ಸುಲಲಿತವಾಗಿ ಹರಿಯುವ ಸಿಲೋವದ ನೀರನ್ನು ಅಲ್ಲಗಳೆದು, ಅರಸನಾದ ರೆಚೀನ ಹಾಗೂ ಪೆಕಹ ಇವರುಗಳನ್ನು ನೆಚ್ಚಿಕೊಂಡು ನಲಿಯುತ್ತಿದ್ದಾರೆ.


ಆಗಲಿ, ಸರ್ವೇಶ್ವರ ನಿಮಗೊಂದು ಗುರುತನ್ನು ಕೊಡುವರು. ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು. ಇಮ್ಮಾನುವೇಲ್ ಎಂದು ಆತನಿಗೆ ಹೆಸರಿಡುವಳು.


ನಾನು ನನ್ನ ಹೆಸರಿಗಾಗಿ ಆರಿಸಿಕೊಂಡ ಜೆರುಸಲೇಮ್ ಪಟ್ಟಣದಲ್ಲಿ ನನ್ನ ದಾಸ ದಾವೀದನ ದೀಪ ನನ್ನ ಸನ್ನಿಧಿಯಲ್ಲಿ ಉರಿಯುತ್ತಲೇ ಇರುವಂತೆ ಅವನ ಮಗನಿಗೆ ಒಂದು ಕುಲವನ್ನು ಉಳಿಸುವೆನು.


ಹಿತ್ತಿಯನಾದ ಊರೀಯನ ವಿಷಯವೊಂದನ್ನು ಬಿಟ್ಟರೆ, ಬೇರೆ ಯಾವ ವಿಷಯದಲ್ಲೂ ತಮ್ಮ ಆಜ್ಞೆಯನ್ನು ಮೀರದೆ, ಜೀವದಿಂದಿರುವವರೆಗೂ ತಮ್ಮ ಚಿತ್ತಕ್ಕನುಸಾರ ನಡೆದ ದಾವೀದನ ನಿಮಿತ್ತ, ಸರ್ವೇಶ್ವರಸ್ವಾಮಿ ಜೆರುಸಲೇಮಿನಲ್ಲಿನ ಇವನ ದೀಪವನ್ನು ಆರಿಸಲಿಲ್ಲ.


ನೀನು ಗರ್ವಪಡುತ್ತಿದ್ದ ಆ ಕಾಲದಲ್ಲಿ ಸೊದೋಮೆಂಬ ನಿನ್ನ ತಂಗಿಯ ಹೆಸರು ನಿನ್ನ ಬಾಯಲ್ಲಿ ಬರಲೇ ಇಲ್ಲ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು