Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 16:9 - ಕನ್ನಡ ಸತ್ಯವೇದವು C.L. Bible (BSI)

9 ಅವನು ಇವನ ಮಾತಿಗೆ ಒಪ್ಪಿ, ದಮಸ್ಕ ಪಟ್ಟಣಕ್ಕೆ ಮುತ್ತಿಗೆ ಹಾಕಿ, ರೆಚೀನನನ್ನು ಕೊಂದು, ನಿವಾಸಿಗಳನ್ನು ಸೆರೆಹಿಡಿದು ಕೀರ್ ಪ್ರಾಂತ್ಯಕ್ಕೆ ಒಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅಶ್ಶೂರದ ಅರಸನು ಇವನ ಮಾತಿಗೆ ಒಪ್ಪಿ, ದಮಸ್ಕ ಪಟ್ಟಣಕ್ಕೆ ವಿರೋಧವಾಗಿ ಹೋಗಿ ರೆಚೀನನನ್ನು ಕೊಂದು ನಿವಾಸಿಗಳನ್ನು ಸೆರೆಹಿಡಿದು, ಕೀರ್ ಪ್ರಾಂತ್ಯಕ್ಕೆ ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವನು ಇವನ ಮಾತಿಗೆ ಒಪ್ಪಿ ದಮಸ್ಕ ಪಟ್ಟಣಕ್ಕೆ ವಿರೋಧವಾಗಿ ಹೋಗಿ ರೆಚೀನನನ್ನು ಕೊಂದು ನಿವಾಸಿಗಳನ್ನು ಸೆರೆಹಿಡಿದು ಕೀರ್ ಪ್ರಾಂತಕ್ಕೆ ಒಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅಶ್ಶೂರದ ರಾಜನು ಅಹಾಜನ ಮಾತುಗಳನ್ನು ಕೇಳಿ ದಮಸ್ಕದ ವಿರುದ್ಧ ಯುದ್ಧಕ್ಕೆ ಹೊರಟು ಆ ನಗರಕ್ಕೆ ಮುತ್ತಿಗೆಹಾಕಿ, ದಮಸ್ಕದ ಜನರನ್ನು ಸೆರೆಹಿಡಿದುಕೊಂಡು ಕೀರ್‌ಗೆ ಒಯ್ದನು. ಅವನು ರೆಚೀನನನ್ನು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಅಸ್ಸೀರಿಯದ ಅರಸನು ಅವನ ಮಾತು ಕೇಳಿ, ದಮಸ್ಕಕ್ಕೆ ಹೋಗಿ, ಅದನ್ನು ಮುತ್ತಿಗೆ ಹಾಕಿ, ಅದರ ನಿವಾಸಿಗಳನ್ನು ಕೀರ್ ಪ್ರಾಂತಕ್ಕೆ ಸೆರೆಯಾಗಿ ತಂದು, ರೆಚೀನನನ್ನು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 16:9
12 ತಿಳಿವುಗಳ ಹೋಲಿಕೆ  

“ಇಸ್ರಯೇಲಿನ ಜನರೇ, ನನ್ನ ದೃಷ್ಟಿಯಲ್ಲಿ ನೀವಾಗಲಿ ಎಥಿಯೋಪಿಯದವರಾಗಲೀ, ಒಂದೇ ಅಲ್ಲವೆ? ನಾನು ನಿಮ್ಮನ್ನು ಈಜಿಪ್ಟಿನಿಂದ ಕರೆತಂದಂತೆ ಫಿಲಿಷ್ಟಿಯರನ್ನು ಕಫ್ತೋರಿನಿಂದಲೂ, ಅರಾಮ್ಯರನ್ನು ಕೀರ್ ನಾಡಿನಿಂದಲೂ ಕರೆತರಲಿಲ್ಲವೆ?


ಏಲಾಮಿನ ಸೈನಿಕರು ಬಿಲ್ಲುಬಾಣಗಳನ್ನೂ, ರಥಾಶ್ವಗಳನ್ನೂ ಸಜ್ಜುಗೊಳಿಸಿರುವರು. ಕೀರಿನವರು ಗುರಾಣಿಗಳನ್ನು ಅಣಿಗೊಳಿಸಿರುವರು.


ಸ್ವಾಮಿಯು ರೆಚೀನನ ಶತ್ರುಗಳನ್ನು ಅವರ ವಿರುದ್ಧವಾಗಿ ಎತ್ತಿಕಟ್ಟಿರುವರು. ಅವರ ಮುಂದೆ ಸೀರಿಯರನ್ನು, ಅವರ ಹಿಂದೆ ಫಿಲಿಷ್ಟಿಯರನ್ನು - ಹೀಗೆ ಎಲ್ಲಾ ಶತ್ರುಗಳನ್ನು ಎಬ್ಬಿಸಿರುವರು.


ಆ ಮಗು ‘ಕೆಟ್ಟದ್ದು ಬೇಡ, ಒಳ್ಳೆಯದು ಬೇಕು’ ಎನ್ನುವಷ್ಟು ಬಲ್ಲವನಾಗುವುದರೊಳಗೆ, ನೀನು ಯಾವ ಇಬ್ಬರು ಅರಸರುಗಳಿಗೆ ಹೆದರಿ ನಡುಗುತ್ತಿರುವಿಯೋ ಆ ಅರಸರುಗಳ ದೇಶ ನಿರ್ಜನವಾಗುವುದು.


ಅಹಾಜನು, ಸರ್ವೇಶ್ವರನ ಆಲಯದ ಹಾಗು ಅರಮನೆಯ ಅಧಿಪತಿಗಳ ಆಸ್ತಿಯನ್ನು ಸೂರೆಮಾಡಿಕೊಂಡು ಹೋಗಿ, ಅಸ್ಸೀರಿಯದ ಅರಸನಿಗೆ ಕಾಣಿಕೆಯನ್ನಾಗಿ ಕೊಟ್ಟರೂ ಅವನಿಂದ ಏನೂ ಸಹಾಯವಾಗಲಿಲ್ಲ.


ಈ ಕಾರಣ ದೇವರಾದ ಸರ್ವೇಶ್ವರ ಅಹಾಜನನ್ನು ಸಿರಿಯಾದ ಅರಸನ ಕೈಗೆ ಒಪ್ಪಿಸಿದನು. ಸಿರಿಯಾದವರು ಅವನನ್ನು ಸೋಲಿಸಿ ಅವನ ಜನರಲ್ಲಿ ದೊಡ್ಡ ಗುಂಪನ್ನು ಸೆರೆಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ, ಅವನು ಇಸ್ರಯೇಲ್ ರಾಜನ ಕೈವಶವಾಗಿ ಅವನಿಂದಲೂ ಪೂರ್ಣವಾಗಿ ಅಪಜಯ ಹೊಂದಿದನು.


ಕರ್ಕೆಮೀಷಿನ ಗತಿ ಕಲ್ನೋವಿಗೂ ಬಂತಲ್ಲವೇ? ಅರ್ಪದಿಗೆ ಬಂದ ಪಾಡು ಹಮಾತಿಗೂ ಬಂದಿತಷ್ಟೆ. ದಮಸ್ಕಸ್ಸಿನ ಅವಸ್ಥೆಯು ಸಮಾರ್ಯಕ್ಕೂ ಸಂಭವಿಸಿತು.


ದಮಸ್ಕಸ್ ವಿಷಯವಾಗಿ ದೈವೋಕ್ತಿ : “ಇದೋ, ದಮಸ್ಕಸ್ ಊರಾಗಿ ಉಳಿಯದು, ಅದೊಂದು ಹಾಳುದಿಬ್ಬವಾಗುವುದು.


ಸರ್ವೇಶ್ವರಾ, ಅಸ್ಸೀರಿಯರ ರಾಜರು ಸಕಲ ರಾಷ್ಟ್ರಗಳನ್ನೂ ಹಾಗೂ ಅವರ ನಾಡುಗಳನ್ನೂ ಹಾಳುಮಾಡಿದ್ದಾರೆ.


ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ, ತನ್ನ ಸೈನ್ಯಾಧಿಪತಿಗಳನ್ನು ಇಸ್ರಯೇಲರ ಪಟ್ಟಣಗಳಿಗೆ ವಿರುದ್ಧ ಕಳುಹಿಸಿದನು; ಅವರು ಇಯ್ಯೋನ್, ದಾನ್, ಆಬೇಲ್ಮಯಿಮ್ ಇವುಗಳನ್ನೂ ನಫ್ತಾಲ್ಯರ ಪಟ್ಟಣಗಳ ಎಲ್ಲ ಉಗ್ರಾಣಗಳನ್ನೂ ಹಾಳುಮಾಡಿದರು.


ಎಫ್ರಯಿಮ್ ಜನರಿಗೂ ಸಮಾರ್ಯದ ನಿವಾಸಿಗಳಿಗೂ ಅದು ಗೊತ್ತಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು