Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:14 - ಕನ್ನಡ ಸತ್ಯವೇದವು C.L. Bible (BSI)

14 ಆದರೆ ಅವರು, ದೇವರಾದ ಸರ್ವೇಶ್ವರನನ್ನು ನಂಬದೆ, ಅವರ ಆಜ್ಞೆಗಳಿಗೆ ಮಣಿಯದೆಯಿದ್ದ ತಮ್ಮ ಹಿರಿಯರಂತೆ, ಕಿವಿಗೊಡದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದರೆ ಅವರು ದೇವರಾದ ಯೆಹೋವನನ್ನು ನಂಬದೆ, ಆತನ ಆಜ್ಞೆಗಳಿಗೆ ಮಣಿಯದೆ ಇದ್ದ ತಮ್ಮ ಹಿರಿಯರಂತೆ ಯೆಹೋವನ ಮಾತಿಗೆ ಕಿವಿಗೊಡದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವರು ದೇವರಾದ ಯೆಹೋವನನ್ನು ನಂಬದೆ ಆತನ ಆಜ್ಞೆಗಳಿಗೆ ಮಣಿಯದೆ ಇದ್ದ ತಮ್ಮ ಹಿರಿಯರಂತೆ ಆತನಿಗೆ ಕಿವಿಗೊಡದೆ ಹೋದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೆ ಅವರು ಯೆಹೋವನ ಮಾತುಗಳಿಗೆ ಕಿವಿಗೊಡಲಿಲ್ಲ; ತಮ್ಮ ದೇವರಾದ ಯೆಹೋವನನ್ನು ನಂಬದೆಹೋದ ತಮ್ಮ ಪೂರ್ವಿಕರನ್ನೇ ಅನುಸರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೆ ಅವರು ಕೇಳದೆ ತಮ್ಮ ದೇವರಾದ ಯೆಹೋವ ದೇವರಲ್ಲಿ ನಂಬಿಕೆ ಇಡದೆ ತಮ್ಮ ಪಿತೃಗಳಂತೆ ದೇವರ ಆಜ್ಞೆಗಳಿಗೆ ಮಣಿಯದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:14
27 ತಿಳಿವುಗಳ ಹೋಲಿಕೆ  

ಸ್ತೇಫನನು ಮುಂದುವರೆದು, “ಎಷ್ಟು ಹಟಮಾರಿಗಳು ನೀವು; ಎಂಥಾ ಕಠಿಣ ಹೃದಯಿಗಳು ನೀವು’ ದೇವರ ಸಂದೇಶಕ್ಕೆ ಎಷ್ಟು ಕಿವುಡರು ನೀವು! ನಿಮ್ಮ ಪೂರ್ವಜರಂತೆ ನೀವು ಸಹ ಪವಿತ್ರಾತ್ಮ ಅವರನ್ನು ಯಾವಾಗಲೂ ಪ್ರತಿಭಟಿಸುತ್ತೀರಿ.


ಏಕೆಂದರೆ ನೀವು ಹಟಮಾರಿಗಳು, ಆಜ್ಞೆಗೆ ಒಳಗಾಗದವರೆಂಬುದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಸರ್ವೇಶ್ವರನಿಗೆ ವಿರುದ್ಧ ಪ್ರತಿಭಟಿಸಿದ್ದೀರಿ; ನಾನು ಹೋದ ತರುವಾಯ ನೀವು ಪ್ರತಿಭಟಿಸುವುದು ಮತ್ತಷ್ಟು ನಿಶ್ಚಯ.


ಸಹೋದರರೇ, ಜೀವಸ್ವರೂಪರಾದ ದೇವರನ್ನು ಬಿಟ್ಟಗಲುವ ಕೆಟ್ಟಬುದ್ಧಿಯೂ ಅವಿಶ್ವಾಸವೂ ನಿಮ್ಮಲ್ಲಿ ಯಾರಿಗೂ ಇರದಂತೆ ಎಚ್ಚರಿಕೆಯಾಗಿರಿ.


ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ. ನನ್ನ ಆಜ್ಞೆಗೆ ಮಣಿಯಲಿಲ್ಲ. ತಮ್ಮ ಪೂರ್ವಜರಿಗಿಂತಲೂ ಕೆಟ್ಟವರಾಗಿ ನಡೆದುಕೊಂಡರು.”


ತಿಳಿದಿದೆ ನನಗೆ ನಿನ್ನ ಹಟಮಾರಿತನ ನಿನ್ನ ಕುತ್ತಿಗೆಯ ನರಗಳು ಕಬ್ಬಿಣ ನಿನ್ನ ಹಣೆ ಕಂಚಿನಂತೆ ಕಠಿಣ.


ಎಷ್ಟು ಗದರಿಸಿದರೂ ತಗ್ಗದ ಹಟಮಾರಿ ಫಕ್ಕನೆ ಬೀಳುವನು, ಮತ್ತೆ ಏಳನು.


ಅವರೊ ಬೇಡವೆಂದರು ಆ ಚೆಲುವಿನ ನಾಡನು I ನಂಬದೆ ಹೋದರು ಅವನಿತ್ತಾ ವಾಗ್ದಾನವನು II


ಇಷ್ಟಾದರೂ ಪಾಪಮಾಡುತ ಬಂದವರು ಪದೇ ಪದೇ I ದೇವರ ಅದ್ಭುತಕಾರ್ಯಗಳನು ತೊರೆದರು ನಂಬದೆ II


ಏಕೆನೆ, ಅವರಿಗಿರಲಿಲ್ಲ ವಿಶ್ವಾಸ ದೇವರಲಿ I ಇರಲಿಲ್ಲ ನಂಬಿಕೆ ಆತನಾ ಸಲಹುವ ಶಕ್ತಿಯಲಿ II


ಇದಲ್ಲದೆ, ನೆಬೂಕದ್ನೆಚ್ಚರನಿಗೆ ಒಳಗಾಗುತ್ತೇನೆಂದು, ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿದ್ದರೂ, ಅವನಿಗೆ ವಿರುದ್ಧ ದಂಗೆ ಎದ್ದನು. ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಅಭಿಮುಖನಾಗಲೊಲ್ಲದೆ, ಹಟಹಿಡಿದು ಮನಸ್ಸನ್ನು ಕಠಿಣಮಾಡಿಕೊಂಡನು.


“ಆದರೂ ನೀವು ನಿಮ್ಮ ದೇವರಾದ ಸರ್ವೇಶ್ವರನನ್ನು ನಂಬಲೇ ಇಲ್ಲ.


ಈ ಜನರ ಸ್ವಭಾವ ನನಗೆ ಗೊತ್ತಿದೆ. ಇವರು ನನ್ನ ಆಜ್ಞೆಗೆ ಬಗ್ಗದ ಹಟಮಾರಿಗಳು.


ಆಗ ಸರ್ವೇಶ್ವರ, “ಎಲ್ಲಿಯವರೆಗೆ ನೀವು ನನ್ನ ಆಜ್ಞೆಯನ್ನೂ ನಾನು ಮಾಡಿರುವ ನಿಯಮವನ್ನೂ ಅನುಸರಿಸದೆ ಅಲಕ್ಷ್ಯ ಮಾಡುವಿರಿ?


ಅದು ಹಾಲೂ ಜೇನೂ ಹರಿಯುವ ಶ್ರೀಮಂತ ನಾಡು. ನಾನು ಸ್ವತಃ ನಿಮ್ಮ ಸಂಗಡ ಬರುವುದಿಲ್ಲ. ಏಕೆಂದರೆ ನೀವು ನನ್ನ ಆಜ್ಞೆಗೆ ತಲೆಬಾಗದ ಹಟಮಾರಿ ಜನ; ದಾರಿಯಲ್ಲೇ ನಾನು ನಿಮ್ಮನ್ನು ಸಂಹರಿಸಬೇಕಾಗಬಹುದು.


“ಅದಲ್ಲದೆ ಅವರು ನನಗೆ, ‘ಈ ಜನರ ಸ್ವಭಾವವನ್ನು ನಾನು ನೋಡುತ್ತಾ ಬಂದಿದ್ದೇನೆ;


ಮರೆಯರು ನನ್ನ ಮಹತ್ಕಾರ್ಯಗಳನು I ಇಡುವರು ನನ್ನಲ್ಲೇ ಭರವಸೆಯನು I ಕೈಗೊಳ್ಳುವರು ನನ್ನ ಆಜ್ಞೆಗಳನು II


ಒಬ್ಬ ಹಿಬ್ರಿಯನು ತನ್ನನ್ನೇ ನಿಮಗೆ ಮಾರಿಕೊಂಡು ಆರು ವರ್ಷ ನಿಮ್ಮ ಜೀತಗಾರನಾಗಿದ್ದರೆ ಅಂಥ ಸಹೋದರನನ್ನು ಏಳನೆಯ ವರ್ಷದಲ್ಲಿ ಸ್ವತಂತ್ರನನ್ನಾಗಿ ಬಿಟ್ಟುಬಿಡಿ ಎಂದು ವಿಧಿಸಿದ್ದೆ. ಆದರೆ ನಿಮ್ಮ ಪೂರ್ವಜರು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.


ನೀನು ಆ ದುಷ್ಟನನ್ನು ಎಚ್ಚರಿಸಿದರೂ ಅವನು ತನ್ನ ದುಷ್ಟತನವನ್ನೂ ದುರ್ಮಾರ್ಗವನ್ನೂ ಬಿಡದೆಹೋದರೆ ತನ್ನ ಅಪರಾಧಕ್ಕಾಗಿ ಸಾಯುವನು; ನೀನಾದರೋ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.


ಹಾಗೆ ಅವರ ಎದೆ ಗರ್ವದಿಂದ ಉಬ್ಬಿಹೋಯಿತು. ಮನಸ್ಸಿಗೆ ಸೊಕ್ಕೇರಿಹೋಯಿತು. ಅವರನ್ನೂ ರಾಜಾಸ್ಥಾನದಿಂದ ತಳ್ಳಲಾಯಿತು. ಮಾನ ಕಳೆದುಹೋಯಿತು.


ಸರ್ವೇಶ್ವರ ಅವರನ್ನು ತಮ್ಮ ಕಡೆಗೆ ತಿರುಗಿಸಿಕೊಳ್ಳುವುದಕ್ಕಾಗಿ ಅವರ ಬಳಿಗೆ ಪ್ರವಾದಿಗಳನ್ನು ಕಳುಹಿಸಿದರು. ಇವರ ಮುಖಾಂತರ ಎಷ್ಟು ಎಚ್ಚರಿಸಿದರೂ ಅವರು ಕಿವಿಗೊಡಲಿಲ್ಲ.


‘ಧರ್ಮೋಪದೇಶಕೆ ಮರಳಿ ಮನವೊಲಿದು ಬನ್ನಿ’ ಎಂದು ನೀವೆಷ್ಟೋ ಸಾರಿ ಅವರನ್ನೆಚ್ಚರಿಸಿದಿರಿ ಖಚಿತವಾಗಿ ಆದರೂ ಆಲಿಸಲಿಲ್ಲಾ ಗರ್ವಿಗಳು, ಅವಿಧೇಯರು, ಪಾಪಿಗಳು. ಜೀವಾಧಾರವಾದ ನಿಮ್ಮಾ ವಿಧಿನಿಯಮಗಳನು ಮೀರಿದರು ಮೊಂಡುಬಿದ್ದು ನಿಮ್ಮ ನೊಗಕೆ ಕೊರಳೊಡ್ಡದೆ ಹೋದರು.


ಅವಳು ಇಂಥವುಗಳನ್ನೆಲ್ಲ ಮಾಡಿದ ಮೇಲೆ ನನ್ನ ಬಳಿಗೆ ಮರಳಿ ಬಂದೇ ಬರುವಳು ಎಂದುಕೊಂಡಿದ್ದೆ. ಆದರೆ ಬರಲಿಲ್ಲ. ಆಗ ಜುದೇಯವೆಂಬ ದ್ರೋಹಿಯಾದ ಅವಳ ತಂಗಿ ಇದನ್ನು ನೋಡಿದಳು.


ಅವರು ನನಗೆ ಹೀಗೆ ಹೇಳಿದರು, “ನರಪುತ್ರನೇ, ನನಗೆ ವಿಮುಖರಾಗಿ ದ್ರೋಹಮಾಡಿದ ಜನಾಂಗದವರಾದ ಇಸ್ರಯೇಲರ ಬಳಿಗೆ ನಿನ್ನನ್ನು ಕಳುಹಿಸುವೆನು; ಈ ದಿನದವರೆಗೆ ಅವರೂ ಅವರ ಪಿತೃಗಳೂ ನನ್ನನ್ನು ಪ್ರತಿಭಟಿಸುತ್ತಲೇ ಬಂದಿದ್ದಾರೆ.


“ನರಪುತ್ರನೇ, ನೀನು ದ್ರೋಹಿವಂಶದ ಮಧ್ಯೆ ವಾಸಿಸುತ್ತಿರುವೆ. ಆ ವಂಶದವರು ದ್ರೋಹಿಗಳಾಗಿರುವುದರಿಂದ ಕಣ್ಣಿದ್ದರೂ ಕಾಣರು, ಕಿವಿಯಿದ್ದರೂ ಕೇಳರು.


ದೂರ ಸರಿದರು ಆ ಇಸ್ರಯೇಲರು ನಾ ಕರೆದರೂ ನನ್ನ ಬಳಿಗೆ ಅರ್ಪಿಸುತ್ತಾ ಬಂದರು ಯಜ್ಞವನ್ನು ಬಾಳ್ ದೇವತೆಗಳಿಗೆ ಧೂಪಾರತಿ ಬೆಳಗುತ್ತಾ ಬಂದರು ಆ ವಿಗ್ರಹಗಳಿಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು