Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:15 - ಕನ್ನಡ ಸತ್ಯವೇದವು C.L. Bible (BSI)

15 ಸರ್ವೇಶ್ವರ ತಮ್ಮ ಪೂರ್ವಜರಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ ತಮಗೆ ಹೇಳಿಸಿದ ಬುದ್ಧಿವಾಕ್ಯಗಳನ್ನೂ ತಿರಸ್ಕರಿಸಿ, ಮಿಥ್ಯಾದೇವತೆಗಳನ್ನು ಪೂಜಿಸಿ ನಿಸ್ಸಾರ್ಥಕರಾದರು. ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಸರ್ವೇಶ್ವರ ಆಜ್ಞಾಪಿಸಿದ್ದರೂ ಕೇಳದೆ ಆ ಜನಾಂಗಗಳನ್ನೇ ಅನುಸರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆತನು ತಮ್ಮ ಪೂರ್ವಿಕರಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ, ತಮಗೆ ಹೇಳಿಸಿದ ಒಡಂಬಡಿಕೆಯನ್ನು ತಿರಸ್ಕರಿಸಿ, ವ್ಯರ್ಥವಾದ ದೇವತೆಗಳನ್ನು ಸೇವಿಸಿ ನಿಷ್ಪ್ರಯೋಜಕರಾದರು. ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಯೆಹೋವನು ಆಜ್ಞಾಪಿಸಿದರೂ ಅವರು ಕೇಳದೆ, ಅವರನ್ನು ಅನುಸರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆತನು ತಮ್ಮ ಪಿತೃಗಳಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ ತಮಗೆ ಹೇಳಿಸಿದ ಬುದ್ಧಿ ವಾಕ್ಯಗಳನ್ನೂ ತಿರಸ್ಕರಿಸಿ ವಿುಥ್ಯಾದೇವತೆಗಳನ್ನು ಸೇವಿಸಿ ನಿಷ್ಪ್ರಯೋಜಕರಾದರು; ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಯೆಹೋವನು ಆಜ್ಞಾಪಿಸಿದರೂ ಅವರು ಕೇಳದೆ ಅವರನ್ನು ಅನುಸರಿಸಿದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೆಹೋವನು ಅವರ ಪೂರ್ವಿಕರೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯನ್ನು ಮತ್ತು ಆತನ ನಿಯಮಗಳನ್ನು ಅವರು ಒಪ್ಪಲಿಲ್ಲ. ಅವರು ಯೆಹೋವನ ಎಚ್ಚರಿಕೆಗೆ ಗಮನವನ್ನೂ ನೀಡಲಿಲ್ಲ. ಅವರು ನಿರರ್ಥಕವಾದ ವಿಗ್ರಹಗಳನ್ನು ಅನುಸರಿಸಿ ನಿಷ್ಪ್ರಯೋಜಕರಾದರು, ಅವರು ತಮ್ಮ ಸುತ್ತಮುತ್ತಲಿನ ಜನಾಂಗಗಳನ್ನು ಅನುಸರಿಸಿದರು. ಯೆಹೋವನು ಇಸ್ರೇಲಿನ ಜನರಿಗೆ ಮಾಡಬಾರದೆಂದು ಎಚ್ಚರಿಸಿ ಹೇಳಿದ್ದನ್ನು ಈ ಜನಾಂಗಗಳು ಮಾಡಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ದೇವರ ಕಟ್ಟಳೆಗಳನ್ನೂ, ದೇವರು ತಮ್ಮ ಪಿತೃಗಳ ಸಂಗಡ ಮಾಡಿದ ಒಡಂಬಡಿಕೆಯನ್ನೂ, ಅವರಿಗೆ ಹೇಳಿದ ಎಚ್ಚರಿಕೆಯನ್ನೂ ತಿರಸ್ಕರಿಸಿದರು. ಅವರು ವ್ಯರ್ಥವಾದ ವಿಗ್ರಹಗಳನ್ನು ಹಿಂಬಾಲಿಸಿ, ನಿಷ್ಪ್ರಯೋಜಕರಾದರು. “ನೀವು ಅವರ ಹಾಗೆ ಮಾಡಬೇಡಿರಿ,” ಎಂದು ಯೆಹೋವ ದೇವರು ಅವರಿಗೆ ಆಜ್ಞಾಪಿಸಿದ್ದರೂ, ಅವರು ತಮ್ಮ ಸುತ್ತಲಿನ ಜನರನ್ನೇ ಅನುಸರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:15
40 ತಿಳಿವುಗಳ ಹೋಲಿಕೆ  

‘ರೇಗಿಸಿದರೆನ್ನನು ದೇವರಲ್ಲದವುಗಳ ಮೂಲಕ, ಸಿಟ್ಟೇರಿಸಿದರು ಅಚೇತ ವಿಗ್ರಹಗಳ ಮೂಲಕ. ನಾನವರಲಿ ಅಸೂಯೆ ಹುಟ್ಟಿಸುವೆನು ಜನಾಂಗವಲ್ಲದವರ ಮುಖಾಂತರ, ನಾನವರನು ಸಿಟ್ಟಿಗೆಬ್ಬಿಸುವೆನು ಸಭ್ಯರಲ್ಲದಾ ಜನರ ಮುಖಾಂತರ.


“ನಿಮ್ಮ ಪಿತೃಗಳು ನನ್ನಲ್ಲಿ ಯಾವ ಕೊರತೆಯನ್ನು ಕಂಡು ನನ್ನಿಂದ ದೂರವಾದರು? ಅವರು ವ್ಯರ್ಥಾಚಾರಗಳನ್ನು ಅನುಸರಿಸುತ್ತಾ ತಾವೇ ವ್ಯರ್ಥವಾಗಿಬಿಟ್ಟರು !


ಜ್ಞಾನಿಗಳು ನಾಚಿಕೆಪಡುವರು, ನಿಬ್ಬೆರಗಾಗಿ ಬೋನಿಗೆ ಸಿಕ್ಕಿಬೀಳುವರು. ಏಕೆಂದರೆ ಸರ್ವೇಶ್ವರನಾದ ನನ್ನ ಮಾತನ್ನು ಅವರು ನಿರಾಕರಿಸಿದ್ದಾರೆ. ಇದು ತಾನೋ ಅವರ ಜ್ಞಾನ?


ಈ ಕಾರಣ ಪ್ರವಾದಿ ಯೇಹುವಿನ ಮುಖಾಂತರ ಸರ್ವೇಶ್ವರ ಬಾಷನ ಮನೆಗೆ ದುರ್ಗತಿಯನ್ನು ಮುಂತಿಳಿಸಿದ್ದರು. ಜಿಮ್ರಿಯು ಬಾಷನ ಮನೆಯವರೆಲ್ಲರನ್ನೂ ನಿರ್ನಾಮಗೊಳಿಸಿದಾಗ ಆ ಮಾತು ನೆರವೇರಿತು.


ವಿಗ್ರಹಗಳಿಗೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವ ಬಗ್ಗೆ ನನ್ನ ಅಭಿಪ್ರಾಯ ಹೀಗಿದೆ: ವಿಗ್ರಹಗಳಿಗೆ ನಿಜವಾದ ಅಸ್ತಿತ್ವವಿಲ್ಲ. ದೇವರು ಒಬ್ಬರೇ ಹೊರತು ಬೇರೆ ದೇವರಿಲ್ಲ. ಇದು ನಮಗೆ ತಿಳಿದ ವಿಷಯ.


ನೀವು ಸರ್ವೇಶ್ವರ ಸ್ವಾಮಿಯ ಮಾತನ್ನು ಕೇಳದೆ, ಅವರ ಧರ್ಮಶಾಸ್ತ್ರವನ್ನೂ ನಿಬಂಧನೆಗಳನ್ನೂ ಕಟ್ಟಳೆಗಳನ್ನೂ ಅನುಸರಿಸದೆ, ಪಾಪಮಾಡಿ ಅನ್ಯದೇವತೆಗಳಿಗೆ ಧೂಪಾರತಿ ಎತ್ತಿದ್ದರಿಂದಲೇ ಇಂಥಾ ವಿಪತ್ತು ನಿಮಗೆ ಸಂಭವಿಸಿದೆ.”


ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲಾ ಅವರ ಬಳಿಗೆ ತಡಮಾಡದೆ ಕಳುಹಿಸುತ್ತಾಬಂದೆ. ‘ಎಚ್ಚರಿಕೆ, ನಾನು ಹೇಸುವ ಈ ಅಸಹ್ಯಕಾರ್ಯಗಳನ್ನು ಮಾಡಬೇಡಿ’ ಎಂದು ಪ್ರಕಟಿಸುತ್ತಾ ಬಂದೆ.


ಈ ಒಡಂಬಡಿಕೆ, ನಾನು ಅವರ ಪೂರ್ವಜರನ್ನು ಕೈ ಹಿಡಿದು ಈಜಿಪ್ಟಿನಿಂದ ಕರೆದು ತಂದಾಗ ಅವರೊಡನೆ ಮಾಡಿಕೊಂಡ ಒಡಂಬಡಿಕೆ ಅಂಥದಾಗಿ ಇರುವುದಿಲ್ಲ. ನಾನು ಅವರಿಗೆ ಯಜಮಾನನಾಗಿ ಇದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿನಡೆದರು.


ಅವು ವ್ಯರ್ಥವಾದುವುಗಳು, ಹಾಸ್ಯಾಸ್ಪದವಾದುವುಗಳು ದಂಡನೆಯ ಕಾಲದಲ್ಲಿ ಅಳಿದುಹೋಗುವಂಥವುಗಳು.


ಕೇವಲ ಪಶುಪ್ರಾಯರು, ಮಂದಮತಿಗಳು, ಅವರೆಲ್ಲರು ಬೊಂಬೆ ಪೂಜೆಯಿಂದ ಬರುವ ಜ್ಞಾನ ಮರದಂತೆ ಮೊದ್ದು.


ಅವುಗಳಂತಾಗುವರು ಅವುಗಳನು ಮಾಡುವವರು I ಅವುಗಳಂತಾಗುವರು ಅವುಗಳನು ನಂಬುವವರು II


ಬಳಿಕ ಅವಿಧೇಯರಾದರು, ನಿಮಗೆ ವಿರುದ್ಧ ದಂಗೆ ಎದ್ದರು; ನಿಮ್ಮ ಉಪದೇಶವನು ಉಲ್ಲಂಘಿಸಿದರು, ನಿಮ್ಮ ಪ್ರವಾದಿಗಳನು ಕೊಂದರು; ಹೌದು, ನಿಮಗೆ ಅಭಿಮುಖರಾಗಲು ಎಚ್ಚರಿಸಿದವರನೆ ಕೊಂದರು. ಕಡೆಗೆ ನಿಮ್ಮನ್ನೇ ಅಸಡ್ಡೆಮಾಡಿ, ಘೋರ ಅಪರಾಧಿಗಳಾದರು.


ಆದರೆ ಯೆಹೂದ್ಯರೂ ಜೆರುಸಲೇಮಿನವರೂ ಮನಸ್ಸೆಯಿಂದ ಪ್ರಚೋದಿತರಾಗಿ ಇಸ್ರಯೇಲರ ಮುಂದೆಯೇ ಸರ್ವೇಶ್ವರನಿಂದ ನಾಶಹೊಂದಿದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.


ಸರ್ವೇಶ್ವರ ಇಸ್ರಯೇಲರ ನಾಡಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯಕಾರ್ಯಗಳನ್ನು ಅವನು ಅನುಸರಿಸಿ ಆ ಸರ್ವೇಶ್ವರನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.


ತಮ್ಮ ನಾಡಿನಿಂದ ಸರ್ವೇಶ್ವರ ಹೊರಡಿಸಿಬಿಟ್ಟಿದ್ದ ಜನಾಂಗಗಳ ಮತ್ತು ಇಸ್ರಯೇಲ್ ರಾಜರ ದುರಾಚಾರಗಳನ್ನು ಅವರು ಅನುಸರಿಸಿದರು.


ದೇವರಲ್ಲದವುಗಳನ್ನು ಹಿಂಬಾಲಿಸಬೇಡಿ; ಅವುಗಳಿಂದ ನಿಮಗೆ ಲಾಭವಿಲ್ಲ; ರಕ್ಷಣೆಯೂ ಸಿಕ್ಕುವುದಿಲ್ಲ. ಅವು ವ್ಯರ್ಥವಾದವುಗಳೇ ಸರಿ.


‘ನಮ್ಮಾಶ್ರಯ ದುರ್ಗ ಅವರ ಆಶ್ರಯದುರ್ಗದಂತಲ್ಲ’ ಎಂದು ಅವರ ಶತ್ರುಗಳೇ ಒಪ್ಪಿಕೊಳ್ಳುತ್ತಾರಲ್ಲವೆ?


ಯೇಸು, “ಈಗ ತೋಡಿಕೊಂಡು ಹೋಗಿ ಔತಣದ ಮೇಲ್ವಿಚಾರಕನಿಗೆ ಕೊಡಿ,” ಎಂದು ಹೇಳಲು ಅವರು ಹಾಗೆಯೇ ಮಾಡಿದರು.


ನನ್ನ ನಿಯಮಗಳನ್ನು ಅಲ್ಲಗಳೆದು, ನನ್ನ ವಿಧಿಗಳನ್ನು ತಳ್ಳಿಬಿಟ್ಟು, ನನ್ನ ಆಜ್ಞೆಗಳಿಗೆ ವಿಧೇಯರಾಗದೆ ನಿಬಂಧನೆಗಳನ್ನೂ ಮೀರಿ ನಡೆದರೆ


ಆದ್ದರಿಂದ ಸರ್ವೇಶ್ವರ ಅವನ ಮೇಲೆ ಕೋಪಗೊಂಡು, “ನೀನು ಹೀಗೆ ಮಾಡಿ ನನ್ನ ನಿಬಂಧನೆಗಳನ್ನು ಮೀರಿದ್ದರಿಂದ ನಿನ್ನ ರಾಜ್ಯವನ್ನು ಕಿತ್ತುಕೊಂಡು ನಿನ್ನ ದಾಸನಿಗೆ ಕೊಡುವೆನು.


ಪಾಲಿಸಲಿಲ್ಲ ಅವರು ದೇವರ ನಿಬಂಧನೆಯನು I ಅನುಸರಿಸಲಿಲ್ಲ ಆತನ ಧರ್ಮಶಾಸ್ತ್ರವನು II


ಪ್ರವಾಸಿಗಳಾಗಿ ನೀವು ಬಂದಿರುವ ಈಜಿಪ್ಟಿನಲ್ಲಿ ಅನ್ಯದೇವತೆಗಳಿಗೆ ಧೂಪಾರತಿ ಎತ್ತುವ ದುಷ್ಕೃತ್ಯವನ್ನು ನಡೆಸುತ್ತಾ ನನ್ನನ್ನು ಕೆಣಕುತ್ತಿದ್ದೀರಿ. ಆದ್ದರಿಂದ ನೀವೂ ನಿರ್ಮೂಲರಾಗಿ ಎಲ್ಲ ಭೂರಾಜ್ಯಗಳ ಶಾಪ, ನಿಂದೆ, ದೂಷಣೆಗಳಿಗೆ ಗುರಿಯಾಗುವಿರಿ.


ನಿರರ್ಥಕ ವಿಗ್ರಹಗಳನಾರಾಧಿಪ ಜನರು ತೊರೆದಿಹರು ಹಾರ್ದಿಕ ಭಕ್ತಿಯನು


ಆಗ ಸರ್ವೇಶ್ವರ, “ಎಲ್ಲಿಯವರೆಗೆ ನೀವು ನನ್ನ ಆಜ್ಞೆಯನ್ನೂ ನಾನು ಮಾಡಿರುವ ನಿಯಮವನ್ನೂ ಅನುಸರಿಸದೆ ಅಲಕ್ಷ್ಯ ಮಾಡುವಿರಿ?


ಮಕ್ಕಳನ್ನು ಆಹುತಿಕೊಡುವವರು, ಕಣಿಹೇಳುವವರು, ಶಕುನ ನೋಡುವವರು, ಯಂತ್ರಮಂತ್ರಗಳನ್ನು ಮಾಡುವವರು,


‘ಸರ್ವೇಶ್ವರ ಈ ನಾಡಿಗೆ ಹೀಗೆ ಮಾಡಿದ್ದೇಕೆ? ಇಂಥ ಕೋಪಾಗ್ನಿಗೆ ಕಾರಣ ಏನಿರಬಹುದು?’ ಎಂದು ವಿಚಾರಿಸುವರು.


ಸರ್ವೇಶ್ವರ ಅವರನ್ನು ತಮ್ಮ ಕಡೆಗೆ ತಿರುಗಿಸಿಕೊಳ್ಳುವುದಕ್ಕಾಗಿ ಅವರ ಬಳಿಗೆ ಪ್ರವಾದಿಗಳನ್ನು ಕಳುಹಿಸಿದರು. ಇವರ ಮುಖಾಂತರ ಎಷ್ಟು ಎಚ್ಚರಿಸಿದರೂ ಅವರು ಕಿವಿಗೊಡಲಿಲ್ಲ.


ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ. ನನ್ನ ಆಜ್ಞೆಗೆ ಮಣಿಯಲಿಲ್ಲ. ತಮ್ಮ ಪೂರ್ವಜರಿಗಿಂತಲೂ ಕೆಟ್ಟವರಾಗಿ ನಡೆದುಕೊಂಡರು.”


ನೀವು ನಡೆಸಿದ ದುರಾಚಾರಗಳನ್ನು ಹಾಗು ಅಸಹ್ಯಕಾರ್ಯಗಳನ್ನು ಸರ್ವೇಶ್ವರ ಇನ್ನು ಸಹಿಸಲಾರದೆ ಹೋದುದರಿಂದಲೇ ನಿಮ್ಮ ನಾಡು ಹಾಳುಬಿದ್ದಿದೆ. ನಿರ್ಜನವಾಗಿ ಭಯಭೀತಿಗೆ ಎಡೆ ಆಗಿದೆ. ಅದರ ಸ್ಥಿತಿ ಈಗಲೂ ಬದಲಾಗಿಲ್ಲ.


ಅವರು ನನಗೆ ಹೀಗೆ ಹೇಳಿದರು, “ನರಪುತ್ರನೇ, ನನಗೆ ವಿಮುಖರಾಗಿ ದ್ರೋಹಮಾಡಿದ ಜನಾಂಗದವರಾದ ಇಸ್ರಯೇಲರ ಬಳಿಗೆ ನಿನ್ನನ್ನು ಕಳುಹಿಸುವೆನು; ಈ ದಿನದವರೆಗೆ ಅವರೂ ಅವರ ಪಿತೃಗಳೂ ನನ್ನನ್ನು ಪ್ರತಿಭಟಿಸುತ್ತಲೇ ಬಂದಿದ್ದಾರೆ.


“ನರಪುತ್ರನೇ, ನೀನು ದ್ರೋಹಿವಂಶದ ಮಧ್ಯೆ ವಾಸಿಸುತ್ತಿರುವೆ. ಆ ವಂಶದವರು ದ್ರೋಹಿಗಳಾಗಿರುವುದರಿಂದ ಕಣ್ಣಿದ್ದರೂ ಕಾಣರು, ಕಿವಿಯಿದ್ದರೂ ಕೇಳರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು