Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:16 - ಕನ್ನಡ ಸತ್ಯವೇದವು C.L. Bible (BSI)

16 ತಮ್ಮ ದೇವರಾದ ಸರ್ವೇಶ್ವರನ ಆಜ್ಞೆಗಳನ್ನೆಲ್ಲಾ ಮೀರಿ, ಎರಡು ಎರಕದ ಹೋರಿಕರುಗಳ ಮೂರ್ತಿಗಳನ್ನು ಮಾಡಿಕೊಂಡರು; ಅಶೇರ ವಿಗ್ರಹಸ್ಥಂಭಗಳನ್ನು ನಿಲ್ಲಿಸಿಕೊಂಡರು; ಆಕಾಶಸೈನ್ಯ ಹಾಗು ಬಾಳ್ ದೇವತೆಗಳನ್ನು ಪೂಜಿಸಿದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ತಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ಮೀರಿ ಎರಡು ಎರಕದ ಬಸವನಮೂರ್ತಿಗಳು, ಅಶೇರ ವಿಗ್ರಹಸ್ತಂಭ ಇವುಗಳನ್ನು ಮಾಡಿಕೊಂಡರು. ಆಕಾಶಸೈನ್ಯ, ಬಾಳ್ ದೇವತೆ ಇವುಗಳನ್ನು ಪೂಜಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ತಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ಮೀರಿ ಎರಡು ಎರಕದ ಬಸವಮೂರ್ತಿಗಳು, ಅಶೇರವಿಗ್ರಹಸ್ತಂಭ ಇವುಗಳನ್ನು ಮಾಡಿಕೊಂಡರು; ಆಕಾಶಸೈನ್ಯ ಬಾಳ್‍ದೇವತೆ ಇವುಗಳನ್ನು ಪೂಜಿಸಿದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಜನರು ತಮ್ಮ ದೇವರಾದ ಯೆಹೋವನ ಆಜ್ಞೆಗಳನ್ನು ಅನುಸರಿಸುವುದನ್ನು ನಿಲ್ಲಿಸಿದರು. ಅವರು ಚಿನ್ನದ ಎರಡು ಬಸವನ ಮೂರ್ತಿಗಳನ್ನು ನಿರ್ಮಿಸಿದರು. ಅವರು ಅಶೇರ ಸ್ತಂಭಗಳನ್ನು ನಿರ್ಮಿಸಿದರು. ಅವರು ಪರಲೋಕದ ಎಲ್ಲಾ ನಕ್ಷತ್ರಗಳನ್ನು ಮತ್ತು ಬಾಳ್ ದೇವರನ್ನು ಪೂಜಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇದಲ್ಲದೆ ಅವರು ತಮ್ಮ ದೇವರಾದ ಯೆಹೋವ ದೇವರ ಸಮಸ್ತ ಆಜ್ಞೆಗಳನ್ನು ಬಿಟ್ಟುಬಿಟ್ಟು, ತಮಗೆ ತಾವೇ ಎರಡು ಎರಕದ ಕರುಗಳ ಮೂರ್ತಿಗಳನ್ನು ಮಾಡಿಕೊಂಡರು. ಅವರು ಅಶೇರ ಸ್ತಂಭವನ್ನು ನಿಲ್ಲಿಸಿ, ಆಕಾಶದ ಸೈನ್ಯಕ್ಕೆಲ್ಲಾ ಅಡ್ಡಬಿದ್ದು, ಬಾಳನನ್ನು ಸೇವಿಸಿ ತಮ್ಮ ಪುತ್ರಪುತ್ರಿಯರನ್ನೂ ಬೆಂಕಿಯಲ್ಲಿ ಬಲಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:16
26 ತಿಳಿವುಗಳ ಹೋಲಿಕೆ  

ಇವನು ನೆಬಾಟನ ಮಗ ಯಾರೊಬ್ಬಾಮನ ದುರ್ಮಾರ್ಗದಲ್ಲಿ ನಡೆದದ್ದು ಸಾಲದೆಂದು, ಸಿದೋನ್ಯರ ಅರಸ ಎತ್ಬಾಳನ ಮಗಳು ಈಜೆಬೆಲ್ ಎಂಬಾಕೆಯನ್ನು ಮದುವೆ ಮಾಡಿಕೊಂಡು ಬಾಳ್ ದೇವರನ್ನು ಪೂಜಿಸತೊಡಗಿದನು.


ಪಿತೃಗಳಂತೆಯೇ ಅವರೂ ತಮಗಾಗಿ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡರು. ಪ್ರತಿಯೊಂದು ದಿಣ್ಣೆಯ ಮೇಲೆ ಹಾಗು ಚೆನ್ನಾಗಿ ಬೆಳೆದಿದ್ದ ಪ್ರತಿಯೊಂದು ಮರದ ಕೆಳಗೆ, ಕಲ್ಲಿನ ಕಂಬಗಳನ್ನೂ ಅಶೇರ ವಿಗ್ರಹಸ್ತಂಭಗಳನ್ನೂ ನಿಲ್ಲಿಸಿದರು.


ಸರ್ವೇಶ್ವರ ಇಸ್ರಯೇಲರನ್ನು ಹೊಡೆಯುವರು. ಆಗ ಅವರು ನೀರಿನಲ್ಲಿರುವ ಆಪು ಹುಲ್ಲೋ ಎಂಬಂತೆ ಹೊಯ್ದಾಡುವರು. ಅಶೇರ ವಿಗ್ರಹಸ್ತಂಭಗಳನ್ನು ಮಾಡಿಕೊಂಡು ಸರ್ವೇಶ್ವರನಿಗೆ ಕೋಪವನ್ನೆಬ್ಬಿಸಿದ ಅವರನ್ನು, ಅವರ ಪಿತೃಗಳಿಗೆ ಕೊಟ್ಟ ನಾಡಿನಿಂದ ಬೇರುಸಹಿತ ಕಿತ್ತುಹಾಕಿ ಯೂಫ್ರೆಟಿಸ್ ನದಿಯ ಆಚೆಯಲ್ಲಿರುವ ದೇಶದಲ್ಲೆಲ್ಲಾ ಚದರಿಸಿಬಿಡುವರು.


ಬಹಳವಾಗಿ ಆಲೋಚಿಸಿ, ಕಡೆಗೆ ಬಂಗಾರದ ಎರಡು ಹೋರಿಕರುಗಳ ಮೂರ್ತಿಗಳನ್ನು ಮಾಡಿಸಿ, ಇಸ್ರಯೇಲರಿಗೆ, “ನೀವು ಜಾತ್ರೆಗಾಗಿ ಜೆರುಸಲೇಮಿಗೆ ಹೋದದ್ದು ಇನ್ನು ಸಾಕು. ಇಗೋ, ನಿಮ್ಮನ್ನು ಈಜಿಪ್ಟಿನಿಂದ ಕರೆದುತಂದ ದೇವರುಗಳು ಇಲ್ಲಿರುತ್ತವೆ,” ಎಂದು ಹೇಳಿ


ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ ಭ್ರಮೆಗೊಂಡು, ಸೂರ್ಯ, ಚಂದ್ರ, ನಕ್ಷತ್ರಗಳೆನಿಸಿಕೊಳ್ಳುವ ಆಕಾಶದ ಪರಿವಾರಗಳನ್ನು ಆರಾಧಿಸಬಾರದು, ಪೂಜಿಸಬಾರದು. ಏಕೆಂದರೆ ನಿಮ್ಮ ದೇವರಾದ ಸರ್ವೇಶ್ವರ ಅವುಗಳನ್ನು ಜಗದ ಬೇರೆ ಎಲ್ಲ ಜನಾಂಗಗಳಿಗಾಗಿ ಕೊಟ್ಟಿದ್ದಾರೆ.


ತನ್ನ ತಂದೆ ಹಿಜ್ಕೀಯನು ತೆಗೆದುಹಾಕಿದ್ದ ಪೂಜಾಸ್ಥಳಗಳನ್ನು ಮತ್ತೆ ಸ್ಥಾಪಿಸಿ ಇಸ್ರಯೇಲರ ಅರಸನಾದ ಅಹಾಬನಂತೆ ಬಾಳ್ ದೇವತೆಗಾಗಿ ಬಲಿಪೀಠಗಳನ್ನು ಕಟ್ಟಿಸಿ, ಅಶೇರ ವಿಗ್ರಹಸ್ತಂಭವನ್ನು ನಿಲ್ಲಿಸಿ, ನಕ್ಷತ್ರಮಂಡಲಕ್ಕೆ ಕೈಮುಗಿದು, ಆರಾಧಿಸಿದನು.


ಯೆಹೂದ್ಯರೆಲ್ಲರೂ ಬಾಳ್ ದೇವತೆಯ ದೇವಸ್ಥಾನಕ್ಕೆ ಹೋಗಿ ಬಾಳನ ಪೂಜಾರಿಯಾದ ಮತ್ತಾನನನ್ನು ಪೀಠಗಳ ಮುಂದೆಯೇ ಕೊಂದು, ಆ ದೇವಸ್ಥಾನವನ್ನೂ ಅದರಲ್ಲಿದ್ದ ಪೀಠ ಹಾಗು ವಿಗ್ರಹಗಳನ್ನೂ ಸಂಪೂರ್ಣವಾಗಿ ಹಾಳುಮಾಡಿದರು. ಯೆಹೋಯಾದಾವನು ದೇವಾಲಯಕ್ಕೆ ಕಾವಲಿಟ್ಟನು;


ತನ್ನ ತಂದೆಯಂತೆ ಬಾಳ್ ದೇವರನ್ನು ಪೂಜಿಸಿ ಇಸ್ರಯೇಲರ ದೇವರಾದ ಸರ್ವೇಶ್ವರನನ್ನು ರೇಗಿಸಿದನು.


ಇದಲ್ಲದೆ, ಅಶೇರ ವಿಗ್ರಹಸ್ತಂಭವನ್ನು ನಿಲ್ಲಿಸಿದನು; ಹೀಗೆ ಇನ್ನು ಎಷ್ಟೋ ಅಧರ್ಮ ಕೆಲಸಗಳನ್ನು ಮಾಡಿ, ಮುಂದೆಯಿದ್ದ ಎಲ್ಲ ಇಸ್ರಯೇಲ್ ರಾಜರಿಗಿಂತಲೂ ಹೆಚ್ಚಾಗಿ ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ರೇಗಿಸಿದನು.


ಇವನ ತಾಯಿ ಮಾಕಳು ಅಶೇರ ದೇವತೆಯ ಒಂದು ಅಸಹ್ಯವಾದ ಮೂರ್ತಿಯನ್ನು ಮಾಡಿಸಿದ್ದರಿಂದ ಆಸನು ಆಕೆಯನ್ನು ‘ರಾಜಮಾತೆ’ ಎಂಬ ಪದವಿಯಿಂದ ತೆಗೆದುಹಾಕಿ ಆ ಮೂರ್ತಿಯನ್ನು ಕಡಿದು ಕಿದ್ರೋನ್ ಹಳ್ಳದ ಹತ್ತಿರ ಸುಡಿಸಿದನು.


ಅವರು ಪ್ರೀತಿಸಿ, ಸೇವಿಸಿ, ಹಿಂಬಾಲಿಸಿ, ಆಶ್ರಯಿಸಿ, ಪೂಜಿಸಿದ ಸೂರ್ಯ,‍ ಚಂದ್ರ, ತಾರಾಗಣಗಳ ಎದುರಿಗೇ ಆ ಎಲುಬುಗಳನ್ನು ಹರಡಿಬಿಡುವರು. ಅವುಗಳನ್ನು ಯಾರೂ ಕೂಡಿಸಿ ಮತ್ತೆ ಹೂಣಿಡುವುದಿಲ್ಲ. ಅವು ಭೂಮಿಯ ಮೇಲೆ ಗೊಬ್ಬರದಂತೆ ಬಿದ್ದಿರುವುವು.


ಎಲ್ಲಾ ದಿಣ್ಣೆಗಳ ಮೇಲೆ ಮತ್ತು ಎಲ್ಲಾ ಹಸಿರು ಮರಗಳ ಕೆಳಗೆ ಕಲ್ಲುಗಂಬ, ಅಶೇರುವಿಗ್ರಹಸ್ಥಂಭ ಇವುಗಳನ್ನು ಸ್ಥಾಪಿಸಿದರು.


ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಇಷ್ಟು ಬೇಗನೆ ತೊರೆದುಬಿಟ್ಟು ತಮಗೇ ಲೋಹದ ಹೋರಿಕರುವನ್ನು ಮಾಡಿಸಿಕೊಂಡು, ಅದಕ್ಕೆ ಅಡ್ಡಬಿದ್ದು, ಬಲಿಗಳನ್ನರ್ಪಿಸಿ, ‘ಇಸ್ರಯೇಲರೇ ನೋಡಿ, ನಿಮ್ಮನ್ನು ಈಜಿಪ್ಟಿನಿಂದ ಕರೆದುತಂದ ದೇವರು’ ಎಂದು ಹೇಳಿಕೊಳ್ಳುತ್ತಿದ್ದಾರೆ.


ಅವನು ಆ ಚಿನ್ನವನ್ನು ತನ್ನ ವಶಕ್ಕೆ ತೆಗೆದುಕೊಂಡು, ಹೋರಿಕರುವಿನ ಆಕಾರವನ್ನು ಉಳಿಯಿಂದ ರೂಪಿಸಿ ಎರಕ ಹೊಯಿಸಿದನು. ಆಗ ಜನರು, “ಇಸ್ರಯೇಲರೇ ನೋಡಿ, ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರು ಇದೇ” ಎಂದು ಹೇಳಿದರು.


“ನಿಮ್ಮ ದೇವರಾದ ಸರ್ವೇಶ್ವರನಿಗಾಗಿ ನೀವು ಕಟ್ಟಿಸಿಕೊಳ್ಳುವ ಬಲಿಪೀಠದ ಬಳಿ ಅಶೇರವೆಂಬ ವಿಗ್ರಹಸ್ತಂಭವನ್ನು, ಅದು ಯಾವ ವಿಧವಾದ ಮರದಿಂದ ಮಾಡಿರಲಿ, ಅದನ್ನು ನೆಡಬಾರದು.


ಜೆರುಸಲೇಮಿನ ಮನೆಗಳೂ ಜುದೇಯದ ಅರಸರ ಮನೆಗಳೂ, ಅಂದರೆ ಯಾವ ಯಾವ ಮನೆಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆಲ್ಲ ಧೂಪಾರತಿ ಎತ್ತಿ ಅನ್ಯದೇವತೆಗಳಿಗೆ ಪಾನನೈವೇದ್ಯಗಳನ್ನು ಸುರಿದಿದ್ದಾರೋ ಆ ಮನೆಗಳೆಲ್ಲ ಹೊಲಸಾಗಿ ತೋಫೆತ್ ಸ್ಥಳಕ್ಕೆ ಸಮಾನವಾಗುವುವು.”


ನಾವು, ನಮ್ಮ ಪೂರ್ವಜರು, ನಮ್ಮ ಅರಸರು, ಅಧಿಕಾರಿಗಳು ಜುದೇಯದ ಊರುಗಳಲ್ಲಿ ಮತ್ತು ಜೆರುಸಲೇಮಿನ ಬೀದಿಗಳಲ್ಲಿ ಮಾಡಿದಂತೆ ಗಗನದೊಡತಿಯಾದ ದೇವತೆಗೆ ಧೂಪಾರತಿ ಎತ್ತುತ್ತೇವೆ. ಪಾನನೈವೇದ್ಯವನ್ನು ಸುರಿಯುತ್ತೇವೆ. ನಾವು ಬಾಯಿಬಿಟ್ಟು ಹೇಳಿದ ಈ ಮಾತುಗಳನ್ನೆಲ್ಲಾ ಖಂಡಿತವಾಗಿ ನೆರವೇರಿಸುತ್ತೇವೆ. ಏಕೆಂದರೆ ಹಾಗೆ ಮಾಡುತ್ತಿದ್ದಾಗ ನಾವು ಯಾವ ಕೇಡನ್ನೂ ಕಾಣದೆ ಹೊಟ್ಟೆತುಂಬ ಉಂಡು ಸುಖಪಡುತ್ತಿದ್ದೆವು.


ಅವಳು ಈಜಿಪ್ಟಿನಲ್ಲಿ ಇದ್ದಂದಿನಿಂದಲೂ ತನ್ನ ಸೂಳೆತನವನ್ನು ಬಿಡಲಿಲ್ಲ; ಬಾಲ್ಯದಲ್ಲಿಯೇ ಅಲ್ಲಿಯವರು ಅವಳೊಂದಿಗೆ ಮಲಗಿ, ಅವಳ ಎಳೆಯ ತೊಟ್ಟುಗಳನ್ನು ನಸುಕಿ, ಅವಳ ಸಂಗಡ ಸೂಳೆಗಾರಿಕೆಯನ್ನು ಹೆಚ್ಚೆಚ್ಚಾಗಿ ಮಾಡಿದರು.


“ನೀವು ವಿಗ್ರಹಗಳನ್ನು ಮಾಡಿಸಿಕೊಳ್ಳಬೇಡಿ; ಕೆತ್ತಿದ ಪ್ರತಿಮೆಯನ್ನಾಗಲಿ, ಕಲ್ಲಿನ ಕಂಬವನ್ನಾಗಲಿ ನಿಲ್ಲಿಸಿಕೊಳ್ಳಬೇಡಿ; ಆರಾಧನೆಗಾಗಿ ವಿಚಿತ್ರವಾಗಿ ಕೆತ್ತಿದ ಸ್ತಂಭಗಳನ್ನು ನಿಮ್ಮ ನಾಡಿನಲ್ಲಿ ಇಡಬೇಡಿ. ನಾನೇ ನಿಮ್ಮ ಸರ್ವೇಶ್ವರನಾದ ದೇವರು.


ಅಹಜ್ಯನು ಸಮಾರಿಯದಲ್ಲಿದ್ದ ತನ್ನ ಮೇಲುಪ್ಪರಿಗೆಯ ಕಿಟಕಿಯೊಂದರಿಂದ ಬಿದ್ದು ಅಸ್ವಸ್ಥನಾಗಿದ್ದನು. ಅವನು ತನ್ನ ಸೇವಕರನ್ನು ಕರೆದು, “ನೀವು ಎಕ್ರೋನಿನ ದೇವರಾದ ‘ಬಾಳ್ಜೆಬೂಬ’ನ ಸನ್ನಿಧಿಗೆ ಹೋಗಿ ನಾನು ಈ ಅಸ್ವಸ್ಥತೆಯಿಂದ ಗುಣವಾಗುವೆನೋ ಇಲ್ಲವೋ, ಎಂದು ವಿಚಾರಿಸಿ ಬನ್ನಿ,” ಎಂದು ಹೇಳಿ ಕಳುಹಿಸಿದನು.


ಇಸ್ರಯೇಲ್ ರಾಜರ ಮಾರ್ಗದಲ್ಲೇ ನಡೆದನು; ಇದಲ್ಲದೆ ಇಸ್ರಯೇಲರ ನಾಡಿನಿಂದ ಸರ್ವೇಶ್ವರ ಓಡಿಸಿಬಿಟ್ಟ ಜನಾಂಗಗಳ ಅಸಹ್ಯ ಆಚಾರಗಳನ್ನು ಅನುಸರಿಸಿ ತನ್ನ ಮಗನನ್ನೆ ಬಲಿಯಗ್ನಿಪರೀಕ್ಷೆಗೆ ಗುರಿಮಾಡಿದನು.


ಇದಲ್ಲದೆ, ಇವನು ಸರ್ವೇಶ್ವರನನ್ನೇ ಹೊಂದಿಕೊಂಡು ಅವರನ್ನು ಬಿಡದೆ ಅನುಸರಿಸುತ್ತಾ, ಅವರು ಮೋಶೆಯ ಮುಖಾಂತರ ಅನುಗ್ರಹಿಸಿದ ಆಜ್ಞೆಗಳನ್ನು ಕೈಗೊಂಡನು.


ದೇಶದಲ್ಲಿ ವಿಗ್ರಹಗಳು ತುಂಬಿ ತುಳುಕುತ್ತಿವೆ. ಜನರು ತಮ್ಮ ಕೈಯಿಂದ ಮಾಡಿದ ವಿಗ್ರಹಗಳನ್ನೇ ಪೂಜಿಸುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು