Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:19 - ಕನ್ನಡ ಸತ್ಯವೇದವು C.L. Bible (BSI)

19 ಜುದೇಯದವರು ಸಹ ತಮ್ಮ ದೇವರಾದ ಸರ್ವೇಶ್ವರನ ಆಜ್ಞೆಯನ್ನು ಕೈಕೊಳ್ಳದೆ ಇಸ್ರಯೇಲರ ಪದ್ಧತಿಯನ್ನು ಅನುಸರಿಸಿದ್ದರಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯೆಹೂದ್ಯರೂ ಸಹ ತಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಕೈಕೊಳ್ಳದೆ ಇಸ್ರಾಯೇಲರ ಪದ್ಧತಿಯನ್ನು ಅನುಸರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯೆಹೂದ್ಯರು ಸಹ ತಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಕೈಕೊಳ್ಳದೆ ಇಸ್ರಾಯೇಲ್ಯರ ಪದ್ಧತಿಯನ್ನು ಅನುಸರಿಸಿದದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆದರೆ ಯೆಹೂದದ ಜನರೂ ಸಹ ತಮ್ಮ ದೇವರಾದ ಯೆಹೋವನ ಆಜ್ಞೆಗಳಿಗೆ ವಿಧೇಯರಾಗಿರಲಿಲ್ಲ. ಯೆಹೂದದ ಜನರು ಇಸ್ರೇಲಿನ ಜನರಂತೆಯೇ ಜೀವಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯೆಹೂದದವರು ಸಹ ತಮ್ಮ ಯೆಹೋವ ದೇವರ ಆಜ್ಞೆಗಳನ್ನು ಕೈಕೊಳ್ಳದೆ, ಇಸ್ರಾಯೇಲರ ಪದ್ಧತಿಗಳಲ್ಲಿಯೇ ನಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:19
17 ತಿಳಿವುಗಳ ಹೋಲಿಕೆ  

ಇಸ್ರಯೇಲ್ ರಾಜರ ಮಾರ್ಗದಲ್ಲೇ ನಡೆದನು; ಇದಲ್ಲದೆ ಇಸ್ರಯೇಲರ ನಾಡಿನಿಂದ ಸರ್ವೇಶ್ವರ ಓಡಿಸಿಬಿಟ್ಟ ಜನಾಂಗಗಳ ಅಸಹ್ಯ ಆಚಾರಗಳನ್ನು ಅನುಸರಿಸಿ ತನ್ನ ಮಗನನ್ನೆ ಬಲಿಯಗ್ನಿಪರೀಕ್ಷೆಗೆ ಗುರಿಮಾಡಿದನು.


ಇಸ್ರಯೇಲ್ ಅರಸರ ಹೆಜ್ಜೆಯಲ್ಲೇ ನಡೆದು, ಅಹಾಬನ ಮನೆಯವರಲ್ಲಿ ಪ್ರಬಲವಾಗಿದ್ದ ದೇವದ್ರೋಹವನ್ನು ಮಾಡುವಂತೆ ಯೆಹೂದ್ಯರನ್ನೂ ಜೆರುಸಲೇಮಿನವರನ್ನೂ ಪ್ರೇರೇಪಿಸಿದೆ; ಮತ್ತು ನಿನ್ನ ತಂದೆಯ ಕುಟುಂಬದವರೂ ನಿನಗಿಂತ ಉತ್ತಮರೂ ನಿನ್ನ ಸಹೋದರರೂ ಆಗಿದ್ದವರನ್ನು ವಧಿಸಿದೆ;


ಅವನು ಜುದೇಯದ ಗುಡ್ಡಗಳಲ್ಲಿ ಪೂಜಾಸ್ಥಳಗಳನ್ನು ಏರ್ಪಡಿಸಿ, ಜೆರುಸಲೇಮಿನವರು ದೇವದ್ರೋಹ ಮಾಡುವಂತೆ ಪ್ರೇರೇಪಿಸಿ, ಯೆಹೂದ್ಯರನ್ನು ಸನ್ಮಾರ್ಗದಿಂದ ತಪ್ಪಿಸಿದನು.


“ಎಲೈ ಯೆಹೂದ ಜನರೇ, ನೀವು ನಿರ್ಮಿಸಿಕೊಂಡ ದೇವರುಗಳು ಎಲ್ಲಿ? ನಿಮಗೆ ಕೇಡು ಸಂಭವಿಸಿದಾಗ ನಿಮ್ನನ್ನು ಉದ್ಧರಿಸಲು ಅವರು ಶಕ್ತರಾಗಿದ್ದರೆ ಎದ್ದುಬರಲಿ ! ನಿಮಗೆ ನಗರಗಳು ಎಷ್ಟಿವೆಯೋ ಅಷ್ಟೂ ದೇವರುಗಳು ಇದ್ದಾರೆ!


ಇವನಿಗೂ ಅಹಾಬನ ಕುಟುಂಬದವರಿಗೂ ಬೀಗತನ ಇದ್ದುದರಿಂದ ಇವನು ಅವರ ಹೆಜ್ಜೆಯಲ್ಲೇ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.


ಇವನು ಅಹಾಬನ ಮಗಳನ್ನು ಮದುವೆಮಾಡಿಕೊಂಡದ್ದರಿಂದ ಅಹಾಬನ ಕುಟುಂಬದವರಾದ ಇಸ್ರಯೇಲ್ ಅರಸರ ಹೆಜ್ಜೆಯಲ್ಲೇ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.


ತಮ್ಮ ನಾಡಿನಿಂದ ಸರ್ವೇಶ್ವರ ಹೊರಡಿಸಿಬಿಟ್ಟಿದ್ದ ಜನಾಂಗಗಳ ಮತ್ತು ಇಸ್ರಯೇಲ್ ರಾಜರ ದುರಾಚಾರಗಳನ್ನು ಅವರು ಅನುಸರಿಸಿದರು.


ಸರ್ವೇಶ್ವರ ಇಂತೆನ್ನುತ್ತಾರೆ: “ಜುದೇಯದ ಜನರು ಪದೇಪದೇ ಮಾಡಿದ ಪಾಪಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಏಕೆಂದರೆ ಅವರು ನನ್ನ ಧರ್ಮಶಾಸ್ತ್ರವನ್ನು ತೃಣೀಕರಿಸಿದ್ದಾರೆ. ನನ್ನ ವಿಧಿನಿಯಮಗಳನ್ನು ಮೀರಿದ್ದಾರೆ. ಅವರ ಪೂರ್ವಜರು ಆರಾಧಿಸಿದ ಸುಳ್ಳುದೇವತೆಗಳನ್ನು ಪೂಜಿಸುತ್ತಾ ದಾರಿತಪ್ಪಿದ್ದಾರೆ.


ಇದಲ್ಲದೆ, ಇವನು ಸರ್ವೇಶ್ವರನನ್ನೇ ಹೊಂದಿಕೊಂಡು ಅವರನ್ನು ಬಿಡದೆ ಅನುಸರಿಸುತ್ತಾ, ಅವರು ಮೋಶೆಯ ಮುಖಾಂತರ ಅನುಗ್ರಹಿಸಿದ ಆಜ್ಞೆಗಳನ್ನು ಕೈಗೊಂಡನು.


ನನ್ನ ಪ್ರಜೆಗಳಲ್ಲಿ ಉಳಿದಿರುವವರನ್ನು ತಳ್ಳಿಬಿಟ್ಟು ಶತ್ರುಗಳ ಕೈಗೆ ಒಪ್ಪಿಸುವೆನು. ಅವರ ಶತ್ರುಗಳೆಲ್ಲಾ ಬಂದು ಅವರನ್ನು ಸುಲಿದು ಸೂರೆಮಾಡುವರು.


ಇವನು ಇಸ್ರಯೇಲರಂತೆ ನಡೆಯದೆ, ತನ್ನ ಪಿತೃವಿನ ದೇವರಲ್ಲಿ ಭಕ್ತಿಯಿಟ್ಟು ಅವರ ಆಜ್ಞೆಗಳನ್ನು ಅನುಸರಿಸಿದನು.


ನೀನು ನಿನ್ನ ಅಕ್ಕನ ಹಾದಿಯಲ್ಲೆ ನಡೆದುಕೊಂಡದ್ದರಿಂದ ಅವಳು ಕುಡಿದ ಪಾತ್ರೆಯನ್ನೇ ನಿನ್ನ ಕೈಗೆ ಕೊಡುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು