Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:20 - ಕನ್ನಡ ಸತ್ಯವೇದವು C.L. Bible (BSI)

20 ಇಸ್ರಯೇಲ್ ಕುಲಗಳಲ್ಲಿ ಉಳಿದಿದ್ದ ಇವರನ್ನೂ ಹೇಸಿ, ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟು, ಸೂರೆಮಾಡುವವರಿಗೆ ಒಪ್ಪಿಸಿ, ಶಿಕ್ಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೆಹೋವನು ಇಸ್ರಾಯೇಲರ ಕುಲಗಳಲ್ಲಿ ಉಳಿದಿದ್ದವರನ್ನೂ ಅಲಕ್ಷ್ಯಮಾಡಿ, ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟು, ಸೂರೆಮಾಡುವವರಿಗೆ ಒಪ್ಪಿಸಿ ಅವರನ್ನು ಬಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆತನು ಇಸ್ರಾಯೇಲ್‍ಕುಲಗಳಲ್ಲಿ ಉಳಿದಿದ್ದ ಇವರನ್ನೂ ಹೇಸಿ ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟು ಸೂರೆಮಾಡುವವರಿಗೆ ಒಪ್ಪಿಸಿ ಬಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೆಹೋವನು ಇಸ್ರೇಲಿನ ಜನರೆಲ್ಲರನ್ನೂ ತಿರಸ್ಕರಿಸಿದನು. ಅವನು ಅವರಿಗೆ ಅನೇಕ ತೊಂದರೆಗಳನ್ನು ಉಂಟುಮಾಡಿದನು. ಅವರನ್ನು ನಾಶಗೊಳಿಸಲು ನಾಶಕರಿಗೆ ಆತನು ಅವಕಾಶ ನೀಡಿದನು. ಕೊನೆಗೆ, ಆತನು ಅವರನ್ನು ದೂರತಳ್ಳಿ, ತನ್ನ ದೃಷ್ಟಿಯಿಂದ ಅವರನ್ನೂ ದೂರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆದ್ದರಿಂದ ಯೆಹೋವ ದೇವರು ಇಸ್ರಾಯೇಲಿನ ಸಂತತಿಯನ್ನೆಲ್ಲಾ ಅಲಕ್ಷ್ಯಮಾಡಿ, ಅವರನ್ನು ಕುಂದಿಸಿ, ಅವರನ್ನು ತಮ್ಮ ಸಮ್ಮುಖದಿಂದ ತಳ್ಳಿಬಿಡುವವರೆಗೆ ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:20
42 ತಿಳಿವುಗಳ ಹೋಲಿಕೆ  

ಇಸ್ರಯೇಲರ ಅರಸನಾದ ಪೆಕಹನ ಕಾಲದಲ್ಲಿ ಅಸ್ಸೀರಿಯಾ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬವನು ಬಂದು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನೂ ಮತ್ತು ಗಿಲ್ಯಾದ್ ಹಾಗು ಗಲಿಲೇಯ ಪ್ರಾಂತ್ಯಗಳನ್ನೂ ಸ್ವಾಧೀನಪಡಿಸಿಕೊಂಡು, ಅವುಗಳ ನಿವಾಸಿಗಳನ್ನು ಅಸ್ಸೀರಿಯಾ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡು ಹೋದನು.


ಸರ್ವೇಶ್ವರ ಆದ ನಾನು ಅವರನ್ನು ತಳ್ಳಿಬಿಟ್ಟಿರುವುದರಿಂದ ಅವರು ಕಂದುಬೆಳ್ಳಿ ಎನಿಸಿಕೊಳ್ಳುವರು.”


ಆದುದರಿಂದ ಸರ್ವೇಶ್ವರಸ್ವಾಮಿ ಇಸ್ರಯೇಲರ ಮೇಲೆ ಕೋಪಗೊಂಡು, ಅವರನ್ನು ಸಿರಿಯಾದವರ ಅರಸನಾದ ಹಜಾಯೇಲನ ಕೈಗೂ ಅವನ ಮಗನಾದ ಬೆನ್ಹದದನ ಕೈಗೂ ಒಪ್ಪಿಸಿದರು. ಇಸ್ರಯೇಲರು ಯೆಹೋವಾಹಾಜನ ಜೀವಮಾನದಲ್ಲೆಲ್ಲಾ ಸಿರಿಯಾದವರ ಕೈಕೆಳಗಿದ್ದರು.


ಇವರು ಪ್ರಭುವಿನ ಸನ್ನಿಧಿಯಿಂದಲೂ ಅವರ ಪ್ರಭಾವದ ಮಹಿಮೆಯಿಂದಲೂ ಬಹಿಷ್ಕೃತರಾಗಿ, ನಿತ್ಯದಂಡನೆಗೆ ಗುರಿಯಾಗುವರು.


“ಅನಂತರ ಆತನು ತನ್ನ ಎಡಗಡೆ ಇರುವವರನ್ನು ನೋಡಿ, ‘ಶಾಪಗ್ರಸ್ತರೇ, ನನ್ನಿಂದ ತೊಲಗಿರಿ. ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


ಅಲ್ಲದೆ ತಾನು ಆ ಸ್ವಾಮಿಯ ಸನ್ನಿಧಿಯಿಂದ ಓಡಿಹೋಗುತ್ತಿರುವುದಾಗಿಯೂ ತಿಳಿಸಿದನು. ಇದನ್ನು ಕೇಳಿದ್ದೇ ನಾವಿಕರು ಭಯಭ್ರಾಂತರಾದರು. “ಎಂಥಾ ತಪ್ಪುಮಾಡಿದೆ!” ಎಂದು ಅವನನ್ನು ಖಂಡಿಸಿದರು.


ಆದರೆ ಯೋನನು ಆ ಸ್ವಾಮಿಯ ಸನ್ನಿಧಿಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ನಿನೆವೆಗೆ ಹೋಗುವುದರ ಬದಲು ತಾರ್ಷಿಷಿಗೆ ಅಭಿಮುಖವಾಗಿ ಓಡಿಹೋಗಲು ಹೊರಟನು. ಜೊಪ್ಪ ಎಂಬ ಊರನ್ನು ತಲುಪಿದಾಗ ತಾರ್ಷಿಷಿಗೆ ಹೊರಡಲಿದ್ದ ಹಡಗೊಂದನ್ನು ಕಂಡನು. ಪ್ರಯಾಣದ ದರವನ್ನು ತೆತ್ತು ಸಹನಾವಿಕರೊಂದಿಗೆ ಹಡಗನ್ನು ಹತ್ತಿದನು. ಹೀಗೆ ಯೋನನು ಸರ್ವೇಶ್ವರಸ್ವಾಮಿಯ ಸನ್ನಿಧಿಯಿಂದ ದೂರಹೋಗಬಹುದೆಂದು ಭಾವಿಸಿದನು.


ಯಾವ ರಾಷ್ಟ್ರಗಳಿಗೆ ನಿನ್ನನ್ನು ಅಟ್ಟಿದೆನೋ ಆ ರಾಷ್ಟ್ರಗಳನ್ನೆಲ್ಲ ನಿರ್ಮೂಲ ಮಾಡುವೆನು. ನಿನ್ನನ್ನಾದರೋ, ನಿರ್ಮೂಲ ಮಾಡೆನು ಮಿತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷಿಸದೆ ಬಿಡೆನು. ಸರ್ವೇಶ್ವರನಾದ ನನ್ನ ನುಡಿ ಇದು.”


ಪಡೆವರು ಇಸ್ರಯೇಲಿನ ವಂಶಜರೆಲ್ಲರು ಸರ್ವೇಶ್ವರನಲ್ಲೇ ಜೀವೋದ್ಧಾರವನು, ಆನಂದವನು.”


ಇಸ್ರಯೇಲ್ ಸಂತಾನದವರು, ಎಲ್ಲ ಅನ್ಯಕುಲದವರಿಂದ ತಮ್ಮನ್ನು ಬೇರ್ಪಡಿಸಿಕೊಂಡು ನಿಂತು, ತಮ್ಮ ಪಾಪಗಳನ್ನೂ ತಮ್ಮ ಪಿತೃಗಳ ಪಾಪಗಳನ್ನೂ ಅರಿಕೆಮಾಡಿದರು.


ನೆನೆಯಿರಿ ಆತನ ಅದ್ಭುತಗಳನು, ಮಹತ್ಕಾರ್ಯಗಳನು I ಆತನ ವದನ ವಿಧಿಸಿದ ನ್ಯಾಯನಿರ್ಣಯಗಳನು II


ಇಸ್ರಯೇಲರ ಅರಸನೂ ಏಲನ ಮಗನೂ ಆದ ಹೋಶೇಯನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಅಂದರೆ ಹಿಜ್ಕೀಯನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಅಸ್ಸೀರಿಯದ ಅರಸನಾದ ಶಲ್ಮನೆಸೆರನು ಸಮಾರಿಯಕ್ಕೆ ವಿರುದ್ಧ ದಂಡೆತ್ತಿಬಂದಿದ್ದನು.


ಈ ಪ್ರಕಾರ ನಡೆದುದರಿಂದ ಸರ್ವೇಶ್ವರ ಅವರ ಮೇಲೆ ಕಡುಕೋಪಗೊಂಡು ಯೆಹೂದಕುಲದವರ ಹೊರತು, ಉಳಿದ ಎಲ್ಲಾ ಕುಲಗಳವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು.


ಸರ್ವೇಶ್ವರ ತಮ್ಮ ಪೂರ್ವಜರಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ ತಮಗೆ ಹೇಳಿಸಿದ ಬುದ್ಧಿವಾಕ್ಯಗಳನ್ನೂ ತಿರಸ್ಕರಿಸಿ, ಮಿಥ್ಯಾದೇವತೆಗಳನ್ನು ಪೂಜಿಸಿ ನಿಸ್ಸಾರ್ಥಕರಾದರು. ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಸರ್ವೇಶ್ವರ ಆಜ್ಞಾಪಿಸಿದ್ದರೂ ಕೇಳದೆ ಆ ಜನಾಂಗಗಳನ್ನೇ ಅನುಸರಿಸಿದರು.


ಯೆಹೋವಾಹಾಜನಿಗೆ ಐವತ್ತುಮಂದಿ ರಾಹುತರು, ಹತ್ತು ರಥಗಳು, ಹತ್ತುಸಾವಿರ ಮಂದಿ ಕಾಲಾಳುಗಳು ಮಾತ್ರ ಉಳಿದಿದ್ದರು. ಸಿರಿಯಾದವರ ಅರಸನು ಬೇರೆ ಎಲ್ಲರನ್ನೂ ಸಂಹರಿಸಿ, ಕಣದ ಧೂಳಿಪಟದಂತೆ ಮಾಡಿಬಿಟ್ಟನು.


ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನಾನು ಸೌಲನನ್ನು ಇಸ್ರಯೇಲರ ಅರಸನಾಗಿರುವುದಕ್ಕೆ ಅಯೋಗ್ಯನೆಂದು ತಳ್ಳಿಬಿಟ್ಟೆನಲ್ಲವೆ? ನೀನು ಅವನಿಗಾಗಿ ಎಷ್ಟರವರೆಗೆ ದುಃಖಿಸುತ್ತಿರುವೆ? ಕೊಂಬನ್ನು ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೆತ್ಲೆಹೇಮಿನವನಾದ ಜೆಸ್ಸೆಯನ ಬಳಿಗೆ ಕಳುಹಿಸುತ್ತೇನೆ. ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ,” ಎಂದು ಹೇಳಿದರು.


ಅದಕ್ಕೆ ಸಮುವೇಲನು, “ನಾನು ಹಿಂದಿರುಗಿ ನಿನ್ನ ಜೊತೆಯಲ್ಲಿ ಬರುವುದಿಲ್ಲ; ನೀನು ಸರ್ವೇಶ್ವರನ ಮಾತನ್ನು ತಳ್ಳಿಬಿಟ್ಟಿದ್ದರಿಂದ ಅವರು ನಿನ್ನನ್ನು ಇಸ್ರಯೇಲರ ಅರಸುತನದಿಂದ ತಳ್ಳಿಬಿಟ್ಟಿದ್ದಾರೆ,” ಎಂದು ಹೇಳಿ ಹಿಂದಿರುಗಿ ಅಲ್ಲಿಂದ ಹೊರಟನು.


ತಂತ್ರಮಂತ್ರಗಳಷ್ಟೇ ಕೆಟ್ಟದು ಪ್ರತಿಭಟನೆ ಕಳ್ಳಭಕ್ತಿಗೂ ವಿಗ್ರಹಾರಾಧನೆಗೂ ಸಮಾನ ಹಟಮಾರಿತನ. ನೀ ತಳ್ಳಿಬಿಟ್ಟೆ ಸರ್ವೇಶ್ವರನ ಆದೇಶವನ್ನು; ತಳ್ಳಿಬಿಟ್ಟರವರು ನಿನ್ನ ಅರಸುತನವನ್ನು,” ಎಂದು ನುಡಿದನು.


ಅದು ನಿಮ್ಮ ದೇವರಾದ ಸರ್ವೇಶ್ವರ ಪರಾಂಬರಿಸುವ ನಾಡು; ಸಂವತ್ಸರದ ಪ್ರಾರಂಭ ಮೊದಲುಗೊಂಡು ಕೊನೆಯವರೆಗೂ ಅವರು ಅದನ್ನು ಸದಾ ಕಟಾಕ್ಷಿಸುವರು.


ಆದ್ದರಿಂದ ಸರ್ವೇಶ್ವರನ ಕೋಪ ಅವರ ಮೇಲೆ ಉರಿಯಹತ್ತಿತು; ಅವರನ್ನು ಕೊಳ್ಳೆಹೊಡೆಯುವವರ ಕೈಗೆ ಒಪ್ಪಿಸಿದರು. ಶತ್ರುಗಳು ಅವರನ್ನು ಸುಲಿಗೆ ಮಾಡಿದರು. ಸರ್ವೇಶ್ವರ ಅವರನ್ನು ಅಕ್ಕಪಕ್ಕದ ವೈರಿಗಳಿಗೆ ಮಾರಿಬಿಟ್ಟರು. ಆ ಶತ್ರುಗಳ ಮುಂದೆ ಇಸ್ರಯೇಲರು ನಿಲ್ಲಲಾರದೆ ಹೋದರು.


ದಿಗ್ಭ್ರಾಂತರಾಗುವರಿದೋ ಹಿಂದೆಂದು ಇಲ್ಲದಂತೆ ದುರುಳರು I ದೇವರಿಂದ ತಿರಸ್ಕೃತವಾದ ಅವರು ಪರಾಜಿತರಾಗುವರು I ದಿಕ್ಕುಪಾಲಾಗುವುವು ನಿಮ್ಮ ಮೇಲೆ ಬಿದ್ದವರ ಮೂಳೆಗಳು II


ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದರು : “ಮೋಶೆ ಮತ್ತು ಸಮುವೇಲನು ನನ್ನ ಮುಂದೆ ನಿಂತು ವಿಜ್ಞಾಪಿಸಿದರೂ ನಾನು ಈ ಜನರ ಬಗ್ಗೆ ನನ್ನ ಮನಸ್ಸನ್ನು ಬದಲಾಯಿಸೆನು. ಇವರನ್ನು ನನ್ನ ಸಮ್ಮುಖದಿಂದ ತಳ್ಳಿಬಿಡು; ತೊಲಗಿಹೋಗಲಿ!


ಎಂದೇ ಇಂತೆಂದುಕೊಂಡನು; ಇವರಿಗೆ ವಿಮುಖನಾಗುವೆನು, ಇವರಿಗೊದಗಲಿರುವ ಗತಿಯನು ನೋಡುವೆನು. ಸತ್ಯವರಿತೂ ಅನುಸರಿಸದೆ ಹೋದರು ಈ ವಿದ್ರೋಹ ಮಕ್ಕಳಂತವರು.


ಮಿಶ್ರವಾದರೆ ನಿಮ್ಮ ದೇವರಾದ ಸರ್ವೇಶ್ವರ ಅವರನ್ನು ನಿಮ್ಮ ಮಧ್ಯೆಯಿಂದ ಹೊರಡಿಸುವುದೇ ಇಲ್ಲವೆಂಬುದು ನಿಮಗೆ ತಿಳಿದಿರಲಿ. ಆ ಜನರೇ ನಿಮಗೆ ಉರುಳೂ ಬೋನೂ ಆಗುವರು; ಪಕ್ಕೆಗೆ ಬಡಿಯುವ ಕೊರಡಾಗಿಯೂ ಇರಿಯುವ ಶೂಲವಾಗಿಯೂ ಕಣ್ಣಿಗೆ ಚುಚ್ಚುವ ಮುಳ್ಳಾಗಿಯೂ ಮಾರ್ಪಡುವರು. ಕಡೆಗೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಟ್ಟ ಈ ಚೆಲುವ ನಾಡಲ್ಲಿ ನೀವೇ ಇಲ್ಲದಂತಾಗುವಿರಿ.


ಇದಲ್ಲದೆ ದಾನ್ಯರು ಆ ವಿಗ್ರಹವನ್ನು ತಮ್ಮ ಪಟ್ಟಣದಲ್ಲಿಟ್ಟರು. ಇಸ್ರಯೇಲರು ಸೆರೆಗೆ ಹೋಗುವವರೆಗೆ ಮೋಶೆಯ ಮೊಮ್ಮಗನೂ ಗೇರ್ಷೋಮನ ಮಗನೂ ಆದ ಯೆಹೋನಾತಾನನೂ ಅವನ ವಂಶದವರೂ ದಾನ್ಯರಿಗೆ ಯಾಜಕರಾಗಿದ್ದರು.


ಆದರೂ ಸರ್ವೇಶ್ವರ ಅವರನ್ನು ಸಂಪೂರ್ಣವಾಗಿ ಹಾಳುಮಾಡಗೊಡಲಿಲ್ಲ. ಅವರನ್ನು ಈ ಕಾಲದಲ್ಲಿಯೂ ತಮ್ಮ ಸನ್ನಿಧಿಯಿಂದ ತಳ್ಳಿಬಿಡಲಿಲ್ಲ. ತಾವು ಅಬ್ರಹಾಮ್, ಇಸಾಕ್, ಯಕೋಬರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಸ್ಮರಿಸಿ, ಅವರಿಗೆ ದಯೆತೋರಿಸಿದರು; ಕರುಳುಕರಗಿದವರಾಗಿ ಅವರಿಗೆ ಪ್ರಸನ್ನರಾದರು.


ನನ್ನ ಪ್ರಜೆಗಳಲ್ಲಿ ಉಳಿದಿರುವವರನ್ನು ತಳ್ಳಿಬಿಟ್ಟು ಶತ್ರುಗಳ ಕೈಗೆ ಒಪ್ಪಿಸುವೆನು. ಅವರ ಶತ್ರುಗಳೆಲ್ಲಾ ಬಂದು ಅವರನ್ನು ಸುಲಿದು ಸೂರೆಮಾಡುವರು.


ಸರ್ವೇಶ್ವರ, “ಇಸ್ರಯೇಲರನ್ನು ತೆಗೆದುಹಾಕಿದಂತೆ ಯೆಹೂದ್ಯರನ್ನೂ ನನ್ನ ಸನ್ನಿಧಿಯಿಂದ ತೆಗೆದುಹಾಕುವೆನು; ನಾನು ಆರಿಸಿಕೊಂಡ ಜೆರುಸಲೇಮ್ ಪಟ್ಟಣವನ್ನೂ ನನ್ನ ನಾಮಮಹತ್ತಿಗಾಗಿ ಸ್ವೀಕರಿಸಿಕೊಂಡಾ ದೇವಾಲಯವನ್ನೂ ತಿರಸ್ಕರಿಸುವೆನು,” ಎಂದು ಹೇಳಿದರು.


ನಿರಪರಾಧಿಗಳ ಹತ್ಯೆಯಿಂದ ಜೆರುಸಲೇಮನ್ನು ರಕ್ತಮಯವಾಗಿಸಿದ್ದ ಮನಸ್ಸೆಯ ದುಷ್ಕೃತ್ಯಗಳನ್ನು ಸರ್ವೇಶ್ವರ ಕ್ಷಮಿಸದೆ ಹೋದರು;


ಬೋಧಿಸುವೆನಾಗ ನಿನ್ನ ಮಾರ್ಗವನು ದುರುಳರಿಗೆ I ತಿರುಗಿಕೊಳ್ವರಾಗ ದ್ರೋಹಿಗಳು ನಿನ್ನ ಕಡೆಗೆ II


ನಾಶಮಾಡುವುವು ಅದನು ಕಾಡುಹಂದಿಗಳು I ತಿಂದುಹಾಕುವುವು ಅದನು ಅರಣ್ಯಮೃಗಗಳು II


ಹೇ ಸರ್ವೇಶ್ವರಾ ಯಕೋಬ ಮನೆತನದವರನ್ನು ನೀವು ಕೈ ಬಿಟ್ಟಿದ್ದೀರಿ. ಏಕೆಂದರೆ ಅವರು ಪೌರಸ್ತ್ಯರಂತೆ ಮಾಟಮಂತ್ರ ಮಾಡುವವರು. ಫಿಲಿಷ್ಟಿಯರಂತೆ ಕಣಿಹೇಳುವವರು, ಅನ್ಯದೇಶಿಯರಂತೆ ಆಚಾರವಿಚಾರಗಳನ್ನು ಅನುಕರಿಸುವವರು ಆಗಿಬಿಟ್ಟಿದ್ದಾರೆ.


ನಿಮ್ಮ ಬಂಧುಬಳಗದವರನ್ನು ಅಂದರೆ, ಇಡಿ ಎಫ್ರಯಿಮ್ ವಂಶದವರನ್ನು ತೊಲಗಿಸಿಬಿಟ್ಟಂತೆ, ನಿಮ್ಮನ್ನೂ ನನ್ನ ಸನ್ನಿಧಿಯಿಂದ ತೊಲಗಿಸುವೆನು.”


ಸರ್ವೇಶ್ವರ ಸ್ವಾಮಿ ಬಹಳ ಕೋಪಗೊಂಡು ಜೆರುಸಲೇಮಿನವರ ಮೇಲೂ ಬೇರೆ ಎಲ್ಲ ಯೆಹೂದ್ಯರ ಮೇಲೂ ಇದನ್ನೆಲ್ಲ ಬರಮಾಡಿ, ಕಡೆಗೆ ಅವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು. ಚಿದ್ಕೀಯನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ವಿರುದ್ಧ ತಿರುಗಿಬಿದ್ದ.


ಗೋಮೆರಳು ಪುನಃ ಗರ್ಭಿಣಿಯಾಗಿ ಒಂದು ಹೆಣ್ಣುಮಗುವನ್ನು ಹೆತ್ತಳು. ಆಗ ಸರ್ವೇಶ್ವರ, ಹೊಶೇಯನಿಗೆ: “ಇವಳನ್ನು ‘ಲೋರುಹಾಮ’ ಎಂದು ಕರೆ. ಏಕೆಂದರೆ, ನಾನು ಇನ್ನು ಇಸ್ರಯೇಲರನ್ನು ಪ್ರೀತಿಸೆನು; ಇನ್ನು ಅವರನ್ನು ಕ್ಷಮಿಸೆನು.


ಯಕೋಬನು ಅಣ್ಣನ ಜೊತೆ ತಾಯಿಯ ಗರ್ಭದಲ್ಲಿರುವಾಗಲೇ ಅವನ ಹಿಮ್ಮಡಿಯನ್ನು ಹಿಡಿದು ವಂಚಿಸಿದನು. ಪ್ರಾಯಕ್ಕೆ ಬಂದಮೇಲೆ ದೇವರೊಡನೆ ಹೋರಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು