2 ಅರಸುಗಳು 17:21 - ಕನ್ನಡ ಸತ್ಯವೇದವು C.L. Bible (BSI)21 ಇಸ್ರಯೇಲ್ ರಾಜ್ಯವನ್ನು ದಾವೀದ ಸಂತಾನದವರ ಕೈಯಿಂದ ಕಿತ್ತುಕೊಂಡ ನಂತರ, ಇಸ್ರಯೇಲರು ನೆಬಾಟನ ಮಗ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಅವನು ಅವರನ್ನು ಸರ್ವೇಶ್ವರನ ಭಕ್ತಿಮಾರ್ಗದಿಂದ ತಪ್ಪಿಸಿ ಮಹಾಪಾಪಕ್ಕೆ ಒಳಪಡಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆತನು ಇಸ್ರಾಯೇಲರ ರಾಜ್ಯವನ್ನು ದಾವೀದ ಸಂತಾನದವರ ಕೈಯಿಂದ ಕಿತ್ತುಕೊಂಡ ನಂತರ ಇಸ್ರಾಯೇಲರು ನೆಬಾಟನ ಮಗನಾದ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಅವನು ಅವರನ್ನು ಯೆಹೋವನ ಭಕ್ತಿಯಿಂದ ಬೀಳಿಸಿ ಮಹಾ ಪಾಪಕ್ಕೆ ಒಳಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆತನು ಇಸ್ರಾಯೇಲ್ ರಾಜ್ಯವನ್ನು ದಾವೀದಸಂತಾನದವರ ಕೈಯಿಂದ ಕಿತ್ತುಕೊಂಡನಂತರ ಇಸ್ರಾಯೇಲ್ಯರು ನೆಬಾಟನ ಮಗನಾದ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಳ್ಳಲು ಅವನು ಅವರನ್ನು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಯೆಹೋವನು ಇಸ್ರೇಲನ್ನು ದಾವೀದನ ವಂಶಾವಳಿಯಿಂದ ಕಿತ್ತುಹಾಕಿದನು. ಇಸ್ರೇಲರು ನೆಬಾಟನ ಮಗನಾದ ಯಾರೊಬ್ಬಾಮನನ್ನು ತಮ್ಮ ರಾಜನನ್ನಾಗಿಸಿಕೊಂಡರು. ಯಾರೊಬ್ಬಾಮನು ಇಸ್ರೇಲರನ್ನು ಯೆಹೋವನಿಂದ ದೂರಮಾಡಿದನು. ಇಸ್ರೇಲರು ಮಹಾಪಾಪಗಳನ್ನು ಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ದೇವರು ಇಸ್ರಾಯೇಲನ್ನು ದಾವೀದನ ಸಂತಾನದಿಂದ ವಿಭಾಗಿಸಿದಾಗ, ಅವರು ನೆಬಾಟನ ಮಗ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಆಗ ಯಾರೊಬ್ಬಾಮನು ಇಸ್ರಾಯೇಲನ್ನು ಯೆಹೋವ ದೇವರ ಮಾರ್ಗದಿಂದ ತಪ್ಪಿಸಿ, ಮಹಾ ಪಾಪಮಾಡಲು ಪ್ರೇರೇಪಿಸಿದನು. ಅಧ್ಯಾಯವನ್ನು ನೋಡಿ |