Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:23 - ಕನ್ನಡ ಸತ್ಯವೇದವು C.L. Bible (BSI)

23 ಸರ್ವೇಶ್ವರ, ತಮ್ಮ ದಾಸರಾದ ಎಲ್ಲಾ ಪ್ರವಾದಿಗಳ ಮುಖಾಂತರ ಭವಿಷ್ಯ ನುಡಿದಂತೆ, ಅವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು. ಅವರು ಸೆರೆಯವರಾಗಿ ತಮ್ಮ ನಾಡಿನಿಂದ ಅಸ್ಸೀರಿಯಾ ದೇಶಕ್ಕೆ ಒಯ್ಯಲ್ಪಟ್ಟು ಇಂದಿನವರೆಗೂ ಅಲ್ಲೇ ಇರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯೆಹೋವನು ತನ್ನ ಸೇವಕರಾದ ಎಲ್ಲಾ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದಂತೆ, ಇಸ್ರಾಯೇಲರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು. ಅವರು ಸೆರೆಯವರಾಗಿ ತಮ್ಮ ದೇಶದಿಂದ ಅಶ್ಶೂರ್ ದೇಶಕ್ಕೆ ಒಯ್ಯಲ್ಪಟ್ಟು ಇಂದಿನವರೆಗೂ ಅಲ್ಲಿಯೇ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ದುರ್ಮಾರ್ಗದಲ್ಲಿ ನಡೆಯುವದನ್ನು ಬಿಡಲಿಲ್ಲವಾದದರಿಂದ ಯೆಹೋವನು ತನ್ನ ಸೇವಕರಾದ ಎಲ್ಲಾ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದಂತೆ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು. ಅವರು ಸೆರೆಯವರಾಗಿ ತಮ್ಮ ದೇಶದಿಂದ ಅಶ್ಶೂರ್ ದೇಶಕ್ಕೆ ಒಯ್ಯಲ್ಪಟ್ಟು ಇಂದಿನವರೆಗೂ ಅಲ್ಲೇ ಇರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯೆಹೋವನು ಇಸ್ರೇಲನ್ನು ತನ್ನ ದೃಷ್ಟಿಯಿಂದ ದೂರ ತಳ್ಳುವವರೆಗೆ, ಅವರು ಈ ಪಾಪಗಳನ್ನು ಮಾಡುವುದನ್ನು ನಿಲ್ಲಿಸಲೇ ಇಲ್ಲ. ಇದು ಸಂಭವಿಸುತ್ತದೆಂದು ಯೆಹೋವನು ಹೇಳಿದ್ದನು! ಆತನು ಜನರಿಗೆ ಇದನ್ನು ಮುಂಚೆಯೇ ತಿಳಿಸಲು ತನ್ನ ಪ್ರವಾದಿಗಳನ್ನು ಕಳುಹಿಸಿದ್ದನು. ಆದ್ದರಿಂದಲೇ ಇಸ್ರೇಲರನ್ನು ತಮ್ಮ ದೇಶದಿಂದ ಅಶ್ಶೂರಿಗೆ ಸೆರೆಹಿಡಿದು ಒಯ್ದರು. ಅವರು ಇಂದಿಗೂ ಅಲ್ಲಿಯೇ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಯೆಹೋವ ದೇವರು ಪ್ರವಾದಿಗಳಾದ ತಮ್ಮ ಸೇವಕರ ಮುಖಾಂತರ ಎಚ್ಚರಿಸಿದ ಹಾಗೆ, ಇಸ್ರಾಯೇಲನ್ನು ದೇವರು ತಮ್ಮ ಸಮ್ಮುಖದಿಂದ ತೆಗೆದುಹಾಕಿದರು. ಹೀಗೆ ಇಸ್ರಾಯೇಲರು ಬಹು ಕಾಲದವರೆಗೂ ತಮ್ಮ ದೇಶದಿಂದ ಅಸ್ಸೀರಿಯ ದೇಶಕ್ಕೆ ಸೆರೆಯಾಗಿ ಇರಬೇಕಾಯಿತು. ಅವರು ಇಂದಿನವರೆಗೂ ಅಲ್ಲಿಯೇ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:23
29 ತಿಳಿವುಗಳ ಹೋಲಿಕೆ  

ಅದು ಹೋಶೇಯನ ಆಳ್ವಿಕೆಯ ಒಂಬತ್ತನೆಯ ವರ್ಷದಲ್ಲಿ ಅವನ ಸ್ವಾಧೀನವಾಯಿತು. ಅವನು ಎಲ್ಲಾ ಇಸ್ರಯೇಲರನ್ನು ಅಸ್ಸೀರಿಯ ದೇಶಕ್ಕೆ ಒಯ್ದು ಹಲಹು ಎಂಬ ಪ್ರಾಂತ್ಯದಲ್ಲಿ, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತ್ಯದಲ್ಲಿ ಹಾಗು ಮೇದ್ಯರ ಪಟ್ಟಣಗಳಲ್ಲಿ ಇರಿಸಿದನು.


ದರ್ಶಿನಿಗಳೆನಿಸಿಕೊಂಡ ತಮ್ಮ ಪ್ರವಾದಿಗಳ ಮುಖಾಂತರ ಇಸ್ರಯೇಲ ಯೆಹೂದ್ಯರಿಗೆ, “ನೀವು ನಿಮ್ಮ ದುರಾಚಾರವನ್ನು ಬಿಟ್ಟು ನಾನು ನಿಮ್ಮ ಪೂರ್ವಜರಿಗೂ ನನ್ನ ದಾಸರಾದ ಪ್ರವಾದಿಗಳ ಮುಖಾಂತರ ನಿಮಗೂ ಕೊಟ್ಟಂಥ ನನ್ನ ಎಲ್ಲಾ ಆಜ್ಞಾವಿಧಿನಿಯಮಗಳನ್ನು ಕೈಕೊಂಡು ನಡೆಯಿರಿ,” ಎಂದು ಖಂಡಿತವಾಗಿ ಹೇಳಿದರು.


ಏಕೆಂದರೆ ನಾನು ನಿಮ್ಮನ್ನು ದಮಸ್ಕದಿಂದ ಆಚೆ ತಳ್ಳಿ, ಸೆರೆಯಾಳುಗಳನ್ನಾಗಿ ಕಳುಹಿಸುವೆನು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಇಸ್ರಯೇಲ್ ಕುಲಗಳಲ್ಲಿ ಉಳಿದಿದ್ದ ಇವರನ್ನೂ ಹೇಸಿ, ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟು, ಸೂರೆಮಾಡುವವರಿಗೆ ಒಪ್ಪಿಸಿ, ಶಿಕ್ಷಿಸಿದರು.


ಈ ಪ್ರಕಾರ ನಡೆದುದರಿಂದ ಸರ್ವೇಶ್ವರ ಅವರ ಮೇಲೆ ಕಡುಕೋಪಗೊಂಡು ಯೆಹೂದಕುಲದವರ ಹೊರತು, ಉಳಿದ ಎಲ್ಲಾ ಕುಲಗಳವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು.


ಯಾರೊಬ್ಬಾಮನ ಪಾಪಗಳ ನಿಮಿತ್ತ ಹಾಗು ಅವನ ಪ್ರೇರಣೆಯಿಂದ ಇಸ್ರಯೇಲರು ಮಾಡಿದ ಪಾಪಗಳ ನಿಮಿತ್ತ ಸರ್ವೇಶ್ವರ ಅವರನ್ನು ಶತ್ರುಗಳಿಗೆ ಒಪ್ಪಿಸುವರು,” ಎಂದು ಆಕೆಗೆ ಹೇಳಿದನು.


ಆದಕಾರಣ, “ನಾನು ಸಮಾರ್ಯವನ್ನು ಧೂಳಿನ ರಾಶಿಯನ್ನಾಗಿಯೂ ದ್ರಾಕ್ಷಾತೋಟಕ್ಕೆ ಒಳ್ಳೆಯ ಬಯಲನ್ನಾಗಿಯೂ ಮಾಡುವೆನು. ಕಲ್ಲುಹೆಂಟೆಗಳನ್ನು ಕಣಿವೆಗೆ ಸುರಿದುಬಿಡುವೆನು. ಅದರ ತಳಪಾಯವೇ ತೆರೆದು ಕಾಣುವಂತೆ ಮಾಡುವೆನು.


ಆ ಭಕ್ತನು ಸರ್ವೇಶ್ವರನ ಅಪ್ಪಣೆಯಿಂದ ಆ ಪೀಠವನ್ನು ಉದ್ದೇಶಿಸಿ, “ಎಲೈ ಪೀಠವೇ, ಪೀಠವೇ, ದಾವೀದನ ಸಂತಾನದಲ್ಲಿ ಯೋಷೀಯ ಎಂಬೊಬ್ಬನು ಹುಟ್ಟುವನು. ಅವನು, ನಿನ್ನ ಮೇಲೆ ಧೂಪಸುಡುವ ಪೂಜಾಸ್ಥಳಗಳ ಯಾಜಕರನ್ನು ಹಿಡಿದು, ಅವರನ್ನು ನಿನ್ನ ಮೇಲೆಯೇ ಬಲಿಕೊಡುವನು. ಮನುಷ್ಯರ ಎಲುಬುಗಳನ್ನು ನಿನ್ನ ಮೇಲೆ ಸುಡಲಾಗುವುದು ಎಂದು ಸರ್ವೇಶ್ವರ ಹೇಳುತ್ತಾರೆ,” ಎಂದನು.


ನಾನು ಕೊಟ್ಟ ನಾಡಿನಿಂದ ಇಸ್ರಯೇಲರನ್ನು ತೆಗೆದುಹಾಕುವೆನು; ನನ್ನ ಹೆಸರಿಗಾಗಿ ಪ್ರತಿಷ್ಠಿಸಿಕೊಂಡ ಆಲಯವನ್ನು ನಿರಾಕರಿಸಿಬಿಡುವೆನು. ಇಸ್ರಯೇಲರು ಎಲ್ಲಾ ಜನಾಂಗಗಳವರ ಲಾವಣಿಗೂ ನಿಂದೆಪರಿಹಾಸ್ಯಕ್ಕೂ ಗುರಿಯಾಗುವರು.


ಅವರು ಯಾರೊಬ್ಬಾಮನ ದುರ್ಮಾರ್ಗದಲ್ಲೇ ನಡೆಯುವುದನ್ನು ಬಿಡಲಿಲ್ಲವಾದುದರಿಂದ


ಎಂದೇ ಇಂತೆಂದುಕೊಂಡನು; ಇವರಿಗೆ ವಿಮುಖನಾಗುವೆನು, ಇವರಿಗೊದಗಲಿರುವ ಗತಿಯನು ನೋಡುವೆನು. ಸತ್ಯವರಿತೂ ಅನುಸರಿಸದೆ ಹೋದರು ಈ ವಿದ್ರೋಹ ಮಕ್ಕಳಂತವರು.


ಮಿಶ್ರವಾದರೆ ನಿಮ್ಮ ದೇವರಾದ ಸರ್ವೇಶ್ವರ ಅವರನ್ನು ನಿಮ್ಮ ಮಧ್ಯೆಯಿಂದ ಹೊರಡಿಸುವುದೇ ಇಲ್ಲವೆಂಬುದು ನಿಮಗೆ ತಿಳಿದಿರಲಿ. ಆ ಜನರೇ ನಿಮಗೆ ಉರುಳೂ ಬೋನೂ ಆಗುವರು; ಪಕ್ಕೆಗೆ ಬಡಿಯುವ ಕೊರಡಾಗಿಯೂ ಇರಿಯುವ ಶೂಲವಾಗಿಯೂ ಕಣ್ಣಿಗೆ ಚುಚ್ಚುವ ಮುಳ್ಳಾಗಿಯೂ ಮಾರ್ಪಡುವರು. ಕಡೆಗೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಟ್ಟ ಈ ಚೆಲುವ ನಾಡಲ್ಲಿ ನೀವೇ ಇಲ್ಲದಂತಾಗುವಿರಿ.


ಇದಲ್ಲದೆ ದಾನ್ಯರು ಆ ವಿಗ್ರಹವನ್ನು ತಮ್ಮ ಪಟ್ಟಣದಲ್ಲಿಟ್ಟರು. ಇಸ್ರಯೇಲರು ಸೆರೆಗೆ ಹೋಗುವವರೆಗೆ ಮೋಶೆಯ ಮೊಮ್ಮಗನೂ ಗೇರ್ಷೋಮನ ಮಗನೂ ಆದ ಯೆಹೋನಾತಾನನೂ ಅವನ ವಂಶದವರೂ ದಾನ್ಯರಿಗೆ ಯಾಜಕರಾಗಿದ್ದರು.


ಆದರೂ ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗ ಯಾರೊಬ್ಬಾಮನ ಮಾರ್ಗವನ್ನು ಬಿಡಲೇ ಇಲ್ಲ.


ಆದರೂ ಸರ್ವೇಶ್ವರ ಅವರನ್ನು ಸಂಪೂರ್ಣವಾಗಿ ಹಾಳುಮಾಡಗೊಡಲಿಲ್ಲ. ಅವರನ್ನು ಈ ಕಾಲದಲ್ಲಿಯೂ ತಮ್ಮ ಸನ್ನಿಧಿಯಿಂದ ತಳ್ಳಿಬಿಡಲಿಲ್ಲ. ತಾವು ಅಬ್ರಹಾಮ್, ಇಸಾಕ್, ಯಕೋಬರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಸ್ಮರಿಸಿ, ಅವರಿಗೆ ದಯೆತೋರಿಸಿದರು; ಕರುಳುಕರಗಿದವರಾಗಿ ಅವರಿಗೆ ಪ್ರಸನ್ನರಾದರು.


ನನ್ನ ಪ್ರಜೆಗಳಲ್ಲಿ ಉಳಿದಿರುವವರನ್ನು ತಳ್ಳಿಬಿಟ್ಟು ಶತ್ರುಗಳ ಕೈಗೆ ಒಪ್ಪಿಸುವೆನು. ಅವರ ಶತ್ರುಗಳೆಲ್ಲಾ ಬಂದು ಅವರನ್ನು ಸುಲಿದು ಸೂರೆಮಾಡುವರು.


ಸರ್ವೇಶ್ವರ, “ಇಸ್ರಯೇಲರನ್ನು ತೆಗೆದುಹಾಕಿದಂತೆ ಯೆಹೂದ್ಯರನ್ನೂ ನನ್ನ ಸನ್ನಿಧಿಯಿಂದ ತೆಗೆದುಹಾಕುವೆನು; ನಾನು ಆರಿಸಿಕೊಂಡ ಜೆರುಸಲೇಮ್ ಪಟ್ಟಣವನ್ನೂ ನನ್ನ ನಾಮಮಹತ್ತಿಗಾಗಿ ಸ್ವೀಕರಿಸಿಕೊಂಡಾ ದೇವಾಲಯವನ್ನೂ ತಿರಸ್ಕರಿಸುವೆನು,” ಎಂದು ಹೇಳಿದರು.


ನಿರಪರಾಧಿಗಳ ಹತ್ಯೆಯಿಂದ ಜೆರುಸಲೇಮನ್ನು ರಕ್ತಮಯವಾಗಿಸಿದ್ದ ಮನಸ್ಸೆಯ ದುಷ್ಕೃತ್ಯಗಳನ್ನು ಸರ್ವೇಶ್ವರ ಕ್ಷಮಿಸದೆ ಹೋದರು;


ಅವನು ಅವರನ್ನು ಅಲ್ಲಿಯೇ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯಾಳುಗಳಾಗಿ ತಮ್ಮ ನಾಡನ್ನೇ ಬಿಟ್ಟು ಹೋಗಬೇಕಾಯಿತು.


ಓ ನಮ್ಮ ದೇವರೇ, ನೀವು ಮಹೋನ್ನತರು, ಶಕ್ತಿಸಾಮರ್ಥ್ಯರು, ಭಯಭಕ್ತಿಗೆ ಪಾತ್ರರು, ಕೃಪಾವಾಗ್ದಾನಗಳ ನೆರವೇರಿಸುವವರು. ಅಲ್ಪವೆಂದೆಣಿಸಬೇಡಿ - ನಮ್ಮ ರಾಜರು, ರಾಜ್ಯಪಾಲರು. ಯಾಜಕರು, ಪ್ರವಾದಿಗಳು, ಹಿರಿಯರು, ಪ್ರಜೆಗಳು ಸಹಿಸಬೇಕಾಗಿಬಂದಿರುವ ಈ ಕಷ್ಟಕಾರ್ಪಣ್ಯಗಳನು.


ಬೋಧಿಸುವೆನಾಗ ನಿನ್ನ ಮಾರ್ಗವನು ದುರುಳರಿಗೆ I ತಿರುಗಿಕೊಳ್ವರಾಗ ದ್ರೋಹಿಗಳು ನಿನ್ನ ಕಡೆಗೆ II


ಕಾರಣ, ರಾಜಧಾನಿಯಾದ ದಮಸ್ಕಸ್ಸಿಗಿಂತ ಸಿರಿಯ ಹೆಚ್ಚಲ್ಲ, ರಾಜನಾದ ರೆಚೀನನಿಗಿಂತ ದಮಸ್ಕಸ್‍ ಹೆಚ್ಚಲ್ಲ. ಇಸ್ರಯೇಲಿನ ಬಗ್ಗೆ ಹೇಳುವುದಾದರೆ, ಅದು ಅರವತ್ತೈದು ವರ್ಷದೊಳಗೆ ನುಚ್ಚುನೂರಾಗುವುದು, ಅಖಂಡ ರಾಷ್ಟ್ರವಾಗಿ ಉಳಿಯದು.


ನಿಮ್ಮ ಬಂಧುಬಳಗದವರನ್ನು ಅಂದರೆ, ಇಡಿ ಎಫ್ರಯಿಮ್ ವಂಶದವರನ್ನು ತೊಲಗಿಸಿಬಿಟ್ಟಂತೆ, ನಿಮ್ಮನ್ನೂ ನನ್ನ ಸನ್ನಿಧಿಯಿಂದ ತೊಲಗಿಸುವೆನು.”


ಸರ್ವೇಶ್ವರ ಸ್ವಾಮಿ ಬಹಳ ಕೋಪಗೊಂಡು ಜೆರುಸಲೇಮಿನವರ ಮೇಲೂ ಬೇರೆ ಎಲ್ಲ ಯೆಹೂದ್ಯರ ಮೇಲೂ ಇದನ್ನೆಲ್ಲ ಬರಮಾಡಿ, ಕಡೆಗೆ ಅವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು. ಚಿದ್ಕೀಯನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ವಿರುದ್ಧ ತಿರುಗಿಬಿದ್ದ.


ಯಕೋಬನು ಅಣ್ಣನ ಜೊತೆ ತಾಯಿಯ ಗರ್ಭದಲ್ಲಿರುವಾಗಲೇ ಅವನ ಹಿಮ್ಮಡಿಯನ್ನು ಹಿಡಿದು ವಂಚಿಸಿದನು. ಪ್ರಾಯಕ್ಕೆ ಬಂದಮೇಲೆ ದೇವರೊಡನೆ ಹೋರಾಡಿದನು.


ಇದಕ್ಕೆಲ್ಲಾ ಕಾರಣ ಯಕೋಬನ ದ್ರೋಹ. ಇಸ್ರಯೇಲ್ ಮನೆತನದ ಪಾಪ. ಯಕೋಬನ ದ್ರೋಹಕ್ಕೆ ಕಾರಣ ಯಾವುದು? ಸಮಾರ್ಯ ಅಲ್ಲವೆ? ಜುದೇಯದ ವಿಗ್ರಹಾರಾಧನೆಯ ಸ್ಥಳ ಯಾವುದು? ಜೆರುಸಲೇಮ್ ಅಲ್ಲವೆ?


ಹೀಗಿರಲು ನೂಲೆಳೆದು ಭೂಮಿಯನ್ನು ಹಂಚಿಕೊಡಲು ಸ್ವಾಮಿಯ ಸಭೆಯಲ್ಲಿ ಯಾರೂ ಇರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು