Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:24 - ಕನ್ನಡ ಸತ್ಯವೇದವು C.L. Bible (BSI)

24 ಅಸ್ಸೀರಿಯಾದ ಅರಸನು ಸಮಾರಿಯಾ ಪಟ್ಟಣಗಳಲ್ಲಿ ವಾಸವಾಗಿದ್ದ ಇಸ್ರಯೇಲರನ್ನು ಸೆರೆಯಾಗಿ ಒಯ್ದನಂತರ ಅವರಿಗೆ ಬದಲಾಗಿ ಆ ಪಟ್ಟಣಗಳಿಗೆ ಬಾಬೆಲ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಎಂಬ ಊರುಗಳವರನ್ನು ಕಳುಹಿಸಿದನು. ಅವರು ಸಮಾರಿಯಾ ನಾಡನ್ನು ಸ್ವತಂತ್ರಿಸಿಕೊಂಡು ಅದರ ಪಟ್ಟಣಗಳಲ್ಲಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅಶ್ಶೂರದ ಅರಸನು ಸಮಾರ್ಯಪಟ್ಟಣಗಳಲ್ಲಿ ವಾಸವಾಗಿದ್ದ ಇಸ್ರಾಯೇಲರನ್ನು ಸೆರೆಯಾಗಿ ಒಯ್ದ ನಂತರ ಅವರಿಗೆ ಬದಲಾಗಿ ಆ ಪಟ್ಟಣಗಳಿಗೆ ಬಾಬೆಲ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಎಂಬ ಊರುಗಳವರನ್ನು ಅಲ್ಲಿಗೆ ಕಳುಹಿಸಿದನು. ಅವರು ಸಮಾರ್ಯ ದೇಶವನ್ನು ಸ್ವತಂತ್ರಪಡಿಸಿಕೊಂಡು ಅದರ ಪಟ್ಟಣಗಳಲ್ಲಿ ವಾಸಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅಶ್ಶೂರದ ಅರಸನು ಸಮಾರ್ಯಪಟ್ಟಣಗಳಲ್ಲಿ ವಾಸವಾಗಿದ್ದ ಇಸ್ರಾಯೇಲ್ಯರನ್ನು ಸೆರೆಯಾಗಿ ಒಯ್ದನಂತರ ಅವರಿಗೆ ಬದಲಾಗಿ ಆ ಪಟ್ಟಣಗಳಿಗೆ ಬಾಬೆಲ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಎಂಬ ಊರುಗಳವರನ್ನು ಕಳುಹಿಸಿದನು. ಅವರು ಸಮಾರ್ಯದೇಶವನ್ನು ಸ್ವತಂತ್ರಿಸಿಕೊಂಡು ಅದರ ಪಟ್ಟಣಗಳಲ್ಲಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಇಸ್ರೇಲರನ್ನು ಸಮಾರ್ಯದಿಂದ ಅಶ್ಶೂರದ ರಾಜನು ಒಯ್ದನು. ನಂತರ ಅಶ್ಶೂರದ ರಾಜನು ಬಾಬಿಲೋನ್, ಕೂತಾ, ಅವ್ವಾ, ಹಮಾತ್ ಮತ್ತು ಸೆಫರ್ವಯಿಮ್‌ಗಳಿಂದ ಜನರನ್ನು ಕರೆತಂದು ಇಸ್ರೇಲರ ಬದಲಾಗಿ ಅವರನ್ನು ಸಮಾರ್ಯದಲ್ಲಿ ನೆಲೆಗೊಳಿಸಿದನು. ಅವರು ಸಮಾರ್ಯವನ್ನು ಹೊಂದಿಕೊಂಡು ಅವರ ಸುತ್ತಲಿನ ನಗರಗಳಲ್ಲಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅಸ್ಸೀರಿಯದ ಅರಸನು ಬಾಬಿಲೋನ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಊರುಗಳ ಜನರನ್ನು ಬರಮಾಡಿ, ಅವರನ್ನು ಇಸ್ರಾಯೇಲರಿಗೆ ಬದಲಾಗಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದನು. ಅವರು ಸಮಾರ್ಯವನ್ನು ಸ್ವತಂತ್ರಿಸಿಕೊಂಡು, ಅದರ ಪಟ್ಟಣಗಳಲ್ಲಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:24
16 ತಿಳಿವುಗಳ ಹೋಲಿಕೆ  

ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ, ಎಂಬ ಊರುಗಳ ದೇವರುಗಳು ಏನಾದರು? ಅವರು ಸಮಾರಿಯವನ್ನು ನನ್ನ ಕೈಯಿಂದ ತಪ್ಪಿಸಿ ಬಿಡಿಸಿಕೊಂಡರೋ?


ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ್ ಮತ್ತು ಇವ್ವಾ ಎಂಬ ನಗರಗಳ ಅರಸರ ಗತಿ ಏನಾಯಿತು?” ಎಂದು ಪತ್ರ ಬರೆದು ದೂತರ ಸಮೇತ ಕಳುಹಿಸಿದನು.


ಆ ಹನ್ನೆರಡುಮಂದಿಯ ನಿಯೋಗವನ್ನು ಕಳುಹಿಸುವಾಗ ಯೇಸುಸ್ವಾಮಿ ಅವರಿಗೆ ಕೊಟ್ಟ ಆದೇಶ ಇದು: “ಪರಕೀಯರತ್ತ ಹೋಗಲೇಬೇಡಿ; ಸಮಾರಿಯದವರ ಯಾವ ಊರಿಗೂ ಕಾಲಿಡಬೇಡಿ.


ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ್ ಮತ್ತು ಇವ್ವಾ ಎಂಬ ನಗರಗಳ ಅರಸರ ಗತಿ ಏನಾಯಿತು?” ಎಂದು ಪತ್ರ ಬರೆದು ದೂತರ ಸಮೇತ ಕಳುಹಿಸಿದನು.


ಹಮಾತ್, ಅರ್ಪಾದ್, ಸೆಫರ್ವಯಿಮ್ ಎಂಬ ಊರುಗಳ ದೇವರುಗಳು ಏನಾದರು? ಅವರು ಸಮಾರ್ಯವನ್ನು ನನ್ನ ಅರಸನ ಕೈಯಿಂದ ಬಿಡಿಸಿಕೊಂಡರೋ?


ಕರ್ಕೆಮೀಷಿನ ಗತಿ ಕಲ್ನೋವಿಗೂ ಬಂತಲ್ಲವೇ? ಅರ್ಪದಿಗೆ ಬಂದ ಪಾಡು ಹಮಾತಿಗೂ ಬಂದಿತಷ್ಟೆ. ದಮಸ್ಕಸ್ಸಿನ ಅವಸ್ಥೆಯು ಸಮಾರ್ಯಕ್ಕೂ ಸಂಭವಿಸಿತು.


ಆದುದರಿಂದ ಅಸ್ಸೀರಿಯದ ಅರಸನ ಸೈನ್ಯಾಧಿಪತಿಗಳನ್ನು ಅವನ ಮೇಲೆ ಬರಮಾಡಿದರು. ಆ ಸೇನಾಧಿಪತಿಗಳು ಮನಸ್ಸೆಯನ್ನು ಹಿಡಿದು ಅವನನ್ನು ಬಂಧಿಸಿ, ಬೇಡಿಹಾಕಿ, ಬಾಬಿಲೋನಿಗೆ ಒಯ್ದರು.


ಅಸ್ಸೀರಿಯದ ಅರಸನಾದ ನನ್ನ ಮಾತನ್ನು ಕೇಳಿ; ನನ್ನೊಡನೆ ಒಪ್ಪಂದಮಾಡಿಕೊಂಡು ನನ್ನ ಆಶ್ರಯವನ್ನು ಸೇರಿರಿ, ಆಗ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಅಂಜೂರಮರದ ಹಾಗು ದ್ರಾಕ್ಷಾಲತೆಯ ಹಣ್ಣುಗಳನ್ನು ತಿನ್ನುವನು; ತನ್ನ ಬಾವಿಯ ನೀರನ್ನೇ ಕುಡಿಯುವನು.


ಅದು ಹೋಶೇಯನ ಆಳ್ವಿಕೆಯ ಒಂಬತ್ತನೆಯ ವರ್ಷದಲ್ಲಿ ಅವನ ಸ್ವಾಧೀನವಾಯಿತು. ಅವನು ಎಲ್ಲಾ ಇಸ್ರಯೇಲರನ್ನು ಅಸ್ಸೀರಿಯ ದೇಶಕ್ಕೆ ಒಯ್ದು ಹಲಹು ಎಂಬ ಪ್ರಾಂತ್ಯದಲ್ಲಿ, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತ್ಯದಲ್ಲಿ ಹಾಗು ಮೇದ್ಯರ ಪಟ್ಟಣಗಳಲ್ಲಿ ಇರಿಸಿದನು.


ಹೀಗೆ ಸೊಲೊಮೋನನು ಹಬ್ಬವನ್ನು ಆಚರಿಸಿದನು. ಅಂತೆಯೇ ಹಮಾತಿನ ದಾರಿ ಇಂದ ಈಜಿಪ್ಟಿನ ಹಳ್ಳದವರೆಗಿರುವ ಪ್ರಾಂತ್ಯಗಳಿಂದ ಮಹಾಸಮೂಹವಾಗಿ ಕೂಡಿಬಂದಿದ್ದ ಎಲ್ಲ ಇಸ್ರಯೇಲರು ಆಚರಿಸಿದರು; ಎರಡು ವಾರ, ಅಂದರೆ ಹದಿನಾಲ್ಕು ದಿವಸಗಳವರೆಗೆ, ನಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಹಬ್ಬಮಾಡಿದರು.


ಸರ್ವೇಶ್ವರಾ, ಅಸ್ಸೀರಿಯರ ರಾಜರು ಸಕಲ ರಾಷ್ಟ್ರಗಳನ್ನೂ ಹಾಗೂ ಅವರ ನಾಡುಗಳನ್ನೂ ಹಾಳುಮಾಡಿದ್ದಾರೆ.


ಇವರು ಬಂದು, “ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ನಮಗೆ ವಿರುದ್ಧ ಯುದ್ಧಮಾಡುತ್ತಿರುವುದು ತಿಳಿದ ವಿಷಯ. ಸರ್ವೇಶ್ವರ ಸ್ವಾಮಿ ನಮ್ಮ ಪಕ್ಷ ವಹಿಸುವರೆ? ತಮ್ಮ ಅದ್ಭುತಗಳಲ್ಲಿ ಒಂದನ್ನು ಮಾಡಿ ಈ ಶತ್ರುವನ್ನು ನಮ್ಮಿಂದ ತೊಲಗುವಂತೆ ಮಾಡಬಹುದೆ? ದಯಮಾಡಿ ಸರ್ವೇಶ್ವರನ ಚಿತ್ತವೇನೆಂದು ವಿಚಾರಿಸಿ ತಿಳಿಸಬೇಕು,” ಎಂದು ವಿನಂತಿಸಿದರು.


ಬಾಬಿಲೋನಿಯರ ದೇಶವಾದ ಬಾಬಿಲೋನಿಯದ ಕುರಿತು ಪ್ರವಾದಿ ಯೆರೆಮೀಯನಿಂದ ಸರ್ವೇಶ್ವರ ಸ್ವಾಮಿ ನುಡಿಸಿದ ವಾಕ್ಯ ಇದು:


ಆ ದಿನದಂದು ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಸುಡಾನ್, ಏಲಾಮ್, ಬಾಬಿಲೋನಿಯ, ಹಮಾಥ್ ಹಾಗೂ ಸಮುದ್ರದ ಕರಾವಳಿ - ಈ ಸ್ಥಳಗಳಿಂದ ಸರ್ವೇಶ್ವರ ತಮ್ಮ ಅಳಿದುಳಿದ ಜನರನ್ನು ಬಿಡಿಸಿ ಬರಮಾಡಿಕೊಳ್ಳಲು ಮತ್ತೆ ಕೈನೀಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು