Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:25 - ಕನ್ನಡ ಸತ್ಯವೇದವು C.L. Bible (BSI)

25 ಅವರಿಗೆ ಆರಂಭದಲ್ಲಿ ಸರ್ವೇಶ್ವರನಲ್ಲಿ ಭಯಭಕ್ತಿ ಇರಲಿಲ್ಲ. ಆದ್ದರಿಂದ ಸರ್ವೇಶ್ವರ ಸಿಂಹಗಳನ್ನು ಕಳುಹಿಸಿದರು; ಅವು ಅವರಲ್ಲಿ ಅನೇಕರನ್ನು ಕೊಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವರಿಗೆ ಆರಂಭದಲ್ಲಿ ಯೆಹೋವನ ಭಯಭಕ್ತಿ ಇರಲಿಲ್ಲ. ಆದುದರಿಂದ ಆತನು ಸಿಂಹಗಳನ್ನು ಕಳುಹಿಸಿದನು. ಅವು ಅವರಲ್ಲಿ ಕೆಲವರನ್ನು ಕೊಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವರಿಗೆ ಆರಂಭದಲ್ಲಿ ಯೆಹೋವನ ಭಯಭಕ್ತಿ ಇರಲಿಲ್ಲವಾದದರಿಂದ ಆತನು ಸಿಂಹಗಳನ್ನು ಕಳುಹಿಸಿದನು; ಅವು ಅವರಲ್ಲಿ ಅನೇಕರನ್ನು ಕೊಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆದರೆ ಅವರು ಯೆಹೋವನನ್ನು ಗೌರವಿಸಲಿಲ್ಲ. ಆದ್ದರಿಂದ ಅವರ ಮೇಲೆ ಆಕ್ರಮಣಮಾಡಲು ಯೆಹೋವನು ಸಿಂಹಗಳನ್ನು ಕಳುಹಿಸಿದನು. ಈ ಸಿಂಹಗಳು ಆ ಜನರಲ್ಲಿ ಕೆಲವರನ್ನು ಕೊಂದುಹಾಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆದರೆ ಅವರು ಅಲ್ಲಿ ವಾಸಿಸಲು ಆರಂಭಿಸಿದಾಗ, ಯೆಹೋವ ದೇವರಿಗೆ ಭಯಪಡದ ಕಾರಣ, ಯೆಹೋವ ದೇವರು ಅವರ ಮಧ್ಯದಲ್ಲಿ ಸಿಂಹಗಳನ್ನು ಕಳುಹಿಸಿದರು. ಅವು ಅವರಲ್ಲಿ ಕೆಲವರನ್ನು ಕೊಂದುಹಾಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:25
18 ತಿಳಿವುಗಳ ಹೋಲಿಕೆ  

ಆ ಜನಾಂಗಗಳವರು ಸರ್ವೇಶ್ವರನ ಭಕ್ತರಾಗಿದ್ದರೂ ತಮ್ಮ ವಿಗ್ರಹಗಳನ್ನು ಆರಾಧಿಸುತ್ತಿದ್ದರು. ಅವರ ಸಂತಾನದವರು ಇಂದಿನವರೆಗೂ ಹಾಗೆಯೇ ಮಾಡುತ್ತಿದ್ದಾರೆ.


ಆ ಕಾಲದ ಪದ್ಧತಿಯನ್ನು ಇಂದಿಗೂ ಮುಂದುವರಿಸುತ್ತಿದ್ದಾರೆ. ಸರ್ವೇಶ್ವರನಲ್ಲಿ ಭಯಭಕ್ತಿ ಇಸ್ರಯೇಲರಿಗಿಲ್ಲ; ಅವರಿಂದಲೇ ಇಸ್ರಯೇಲನೆಂಬ ಹೆಸರು ಹೊಂದಿದ ಯಕೋಬನ ಸಂತಾನದವರಿಗೆ ಕೊಡಲಾದ ಆಜ್ಞಾನಿಯಮವಿಧಿ ಧರ್ಮಶಾಸ್ತ್ರಗಳನ್ನು ಅವರು ಅನುಸರಿಸಲಿಲ್ಲ.


ಅವರು ಸರ್ವೇಶ್ವರನ ಭಕ್ತರಾಗಿದ್ದರೂ ತಮ್ಮಲ್ಲೆ ಯಾರ್ಯಾರನ್ನೋ ಉನ್ನತ ಪೂಜಾಸ್ಥಳಗಳ ಯಾಜಕರನ್ನಾಗಿ ನೇಮಿಸಿಕೊಂಡು, ಅವರ ಮುಖಾಂತರ ಪೂಜಾಸ್ಥಳದ ಗುಡಿಗಳಲ್ಲಿ ಆರಾಧನೆ ನಡೆಸುತ್ತಿದ್ದರು.


ಅದಕ್ಕೆ ಯೋನನು: “ನಾನು ಹಿಬ್ರಿಯನು. ಸಮುದ್ರವನ್ನೂ ಭೂಮಿಯನ್ನೂ ಸೃಷ್ಟಿಸಿದ ಪರಲೋಕ ದೇವರಾದ ಸರ್ವೇಶ್ವರನ ಭಕ್ತನು ನಾನು,” ಎಂದು ಉತ್ತರಿಸಿದನು.


ನನ್ನ ರಾಜ್ಯದ ಪ್ರಜೆಗಳೆಲ್ಲರಿಗೆ ನಾನು ಆಜ್ಞಾಪಿಸುವುದೇನೆಂದರೆ: ನೀವೆಲ್ಲರು ದಾನಿಯೇಲನ ದೇವರ ಮುಂದೆ ಭಯಭಕ್ತಿಯಿಂದ ನಡೆದುಕೊಳ್ಳತಕ್ಕದ್ದು. ಏಕೆಂದರೆ ಆತನೇ ಜೀವಸ್ವರೂಪನಾದ ಸನಾತನ ದೇವರು! ಆತನ ರಾಜ್ಯ ಎಂದೆಂದಿಗೂ ಅಳಿಯದು ಆತನ ಆಳ್ವಿಕೆ ಶಾಶ್ವತವಾದುದು!


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನಾನು ಖಡ್ಗ, ಕ್ಷಾಮ, ದುಷ್ಟಮೃಗ, ವ್ಯಾಧಿ ಎಂಬ ನಾಲ್ಕು ಬಾಧೆಗಳನ್ನು ಜೆರುಸಲೇಮಿನ ಮೇಲೆ ಒಟ್ಟಿಗೆ ಬರಮಾಡಿ ಜನ ಜಾನುವಾರಗಳನ್ನು ನಿರ್ಮೂಲ ಮಾಡುವಾಗ ಹೇಳತಕ್ಕದ್ದೇನು!


“ನನ್ನ ಅಪ್ಪಣೆಯ ಮೇರೆಗೆ ದುಷ್ಟಮೃಗಗಳು ಆ ನಾಡಿನಲ್ಲಿ ತಿರುಗುತ್ತಾ ಅದನ್ನು ನಿರ್ಜನಗೊಳಿಸಿ, ಹಾಳುಮಾಡಿ, ಯಾರೂ ಹಾದುಹೋಗದಂತೆ ಹೆದರಿಸುವ ಪಕ್ಷದಲ್ಲಿ


“ನಾನು ಅವರಿಗೆ ನಾಲ್ಕು ವಿಧವಾದ ಬಾಧೆಗಳನ್ನು ವಿಧಿಸುವೆನು : ಕಡಿಯುವುದಕ್ಕೆ ಖಡ್ಗವನ್ನು, ಸೀಳುವುದಕ್ಕೆ ನಾಯಿಯನ್ನು, ನುಂಗಿ ನಾಶಮಾಡುವುದಕ್ಕೆ ಪ್ರಾಣಿಪಕ್ಷಿಗಳನ್ನು ನೇಮಿಸುವೆನು.


ಜನಾಂಗಗಳ ಒಡೆಯಾ, ಅರಸರೇ, ನಿಮಗೆ ಅಂಜದೆ ಇರುವವರಾರು? ಹೌದು, ನೀವು ಭಯಭಕ್ತಿಗೆ ಪಾತ್ರರು ರಾಷ್ಟ್ರಗಳ ಜ್ಞಾನಿಗಳಲ್ಲೂ ರಾಜಪರಂಪರೆಯಲ್ಲೂ ಯಾವನೂ ಇಲ್ಲ ನಿಮಗೆ ಸಮಾನನು.


ಆದಕಾರಣ ಅಡವಿಯ ಸಿಂಹ ಅವರನ್ನು ಕೊಲ್ಲುವುದು ಕಾಡಿನ ತೋಳ ಕೊಳ್ಳೆಹೊಡೆಯುವುದು ಚಿರತೆ ಅವರ ಪಟ್ಟಣಗಳಿಗೆ ಹೊಂಚುಹಾಕುವುದು ಅಲ್ಲಿಂದ ಹೊರಬರುವ ಪ್ರತಿಯೊಬ್ಬನನ್ನು ಸೀಳುವುದು. ಅವರ ಅಪರಾಧಗಳೋ ಬಹಳ, ಅವರ ದ್ರೋಹಗಳೋ ಅಪಾರ !


ಅವರು ಸಮಾರಿಯಾದಿಂದ ಸೆರೆಯವರಾಗಿ ಬಂದಿದ್ದ ಒಬ್ಬ ಯಾಜಕನನ್ನು ಅಲ್ಲಿಗೆ ಕಳುಹಿಸಿದರು. ಇವನು ಬೇತೇಲಿನಲ್ಲಿ ವಾಸವಾಗಿದ್ದು, ಜನರಿಗೆ ಸರ್ವೇಶ್ವರನ ಭಕ್ತಿಯನ್ನು ಬೋಧಿಸಿದನು.


ಎಲೀಷನು ಅವರ ಕಡೆಗೆ ತಿರುಗಿ, ಸರ್ವೇಶ್ವರನ ಹೆಸರಿನಲ್ಲಿ ಅವರನ್ನು ಶಪಿಸಿದನು. ಕೂಡಲೆ ಕಾಡಿನಿಂದ ಎರಡು ಹೆಣ್ಣುಕರಡಿಗಳು ಬಂದು ಆ ಹುಡುಗರಲ್ಲಿ ನಾಲ್ವತ್ತೆರಡು ಮಂದಿಯನ್ನು ಸೀಳಿಬಿಟ್ಟವು.


ಆಗ ಆ ಪ್ರವಾದಿ ಅವನಿಗೆ, “ನೀನು ಸರ್ವೇಶ್ವರನ ಮಾತನ್ನು ಕೇಳದೆಹೋದುದರಿಂದ ನನ್ನನ್ನು ಬಿಟ್ಟು ಹೊರಟಕೂಡಲೆ ಒಂದು ಸಿಂಹವು ಬಂದು ನಿನ್ನನ್ನು ಕೊಲ್ಲುವುದು,” ಎಂದನು. ಅಂತೆಯೇ ಅವನು ಇವನನ್ನು ಬಿಟ್ಟುಹೋದ ಕೂಡಲೆ, ಒಂದು ಸಿಂಹವು ಬಂದು ಅವನನ್ನು ಕೊಂದುಹಾಕಿತು.


ಆ ದೈವಭಕ್ತನು ಸ್ವಲ್ಪ ದೂರಹೋದ ನಂತರ ಒಂದು ಸಿಂಹವು ಅವನಿಗೆ ಎದುರಾಗಿ ಬಂದು ಅವನನ್ನು ಕೊಂದುಹಾಕಿತು. ಅವನ ಶವ ದಾರಿಯಲ್ಲಿಯೇ ಬಿದ್ದಿತ್ತು; ಕತ್ತೆಯೂ ಸಿಂಹವೂ ಶವದ ಹತ್ತಿರ ನಿಂತುಕೊಂಡಿದ್ದವು.


ರೂಬೇನ್ಯರೇ, ಗಾದ್ಯರೇ, ಸರ್ವೇಶ್ವರ ನಿಮಗೂ ನಮಗೂ ನಡುವೆ ಈ ಜೋರ್ಡನ್ ನದಿಯನ್ನು ಸರಹದ್ದಾಗಿ ಇಟ್ಟಿದ್ದಾರೆ. ಸರ್ವೇಶ್ವರನಲ್ಲಿ ನಿಮಗೆ ಯಾವ ಪಾಲೂ ಇಲ್ಲ, ಎಂದು ಹೇಳಿ ನಿಮ್ಮ ಮಕ್ಕಳು ನಮ್ಮ ಮಕ್ಕಳನ್ನು ದೇವಭಕ್ತಿಯಿಂದ ಬೇರ್ಪಡಿಸಿಯಾರೆಂದು ಭಯಪಟ್ಟೆವು.


ನಿಮ್ಮ ಮೇಲೆ ಕ್ರೂರಪ್ರಾಣಿಗಳನ್ನು ಬರಮಾಡುವೆನು. ಅವು ನಿಮ್ಮ ಮಕ್ಕಳನ್ನು ಕೊಂದುಹಾಕುವುವು; ನಿಮ್ಮ ಪಶುಪ್ರಾಣಿಗಳನ್ನು ನಾಶಮಾಡುವುವು; ನಿಮ್ಮನ್ನು ಅಲ್ಪಸಂಖ್ಯಾತರನ್ನಾಗಿ ಮಾಡುವುವು, ನಿಮ್ಮ ದಾರಿಗಳು ಪಾಳುಬೀಳುವುವು.


ಅಸ್ಸೀರಿಯದ ರಾಜನ ಸೇವಕರು ಅವನಿಗೆ, “ನೀವು ಸಮಾರಿಯಾ ಪಟ್ಟಣಗಳಿಗೆ ಕಳುಹಿಸಿದ ಆಯಾ ಊರುಗಳ ಜನರು, ಆ ನಾಡಿನ ದೇವರಿಗೆ ಸೇವೆಮಾಡುವ ರೀತಿಯನ್ನು ಅರಿಯದವರಾಗಿದ್ದಾರೆ. ಆದುದರಿಂದ ಅಲ್ಲಿನ ದೇವರು ಸಿಂಹಗಳನ್ನು ಕಳುಹಿಸಿ ಅವರನ್ನು ಸಂಹರಿಸುತ್ತಿರುತ್ತಾನೆ,” ಎಂದು ತಿಳಿಸಿದರು.


ಹರಿಯುತಿದೆ ದೀಮೋನಿನ ನದಿ ರಕ್ತಮಯವಾಗಿ, ಕಾದಿದೆ ದೀಮೋನರಿಗೆ ಇನ್ನೂ ಹೆಚ್ಚಿನ ಹಾನಿ, ಎರಗಲಿದೆ ಅಳಿದುಳಿದ ಮೋವಾಬ್ಯರ ಮೇಲೆ ಒಂದು ಕೇಸರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು