2 ಅರಸುಗಳು 17:26 - ಕನ್ನಡ ಸತ್ಯವೇದವು C.L. Bible (BSI)26 ಅಸ್ಸೀರಿಯದ ರಾಜನ ಸೇವಕರು ಅವನಿಗೆ, “ನೀವು ಸಮಾರಿಯಾ ಪಟ್ಟಣಗಳಿಗೆ ಕಳುಹಿಸಿದ ಆಯಾ ಊರುಗಳ ಜನರು, ಆ ನಾಡಿನ ದೇವರಿಗೆ ಸೇವೆಮಾಡುವ ರೀತಿಯನ್ನು ಅರಿಯದವರಾಗಿದ್ದಾರೆ. ಆದುದರಿಂದ ಅಲ್ಲಿನ ದೇವರು ಸಿಂಹಗಳನ್ನು ಕಳುಹಿಸಿ ಅವರನ್ನು ಸಂಹರಿಸುತ್ತಿರುತ್ತಾನೆ,” ಎಂದು ತಿಳಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅಶ್ಶೂರದ ಅರಸನ ಸೇವಕರು ತಮ್ಮ ಅರಸನಿಗೆ, “ನೀನು ಸಮಾರ್ಯ ಪಟ್ಟಣಗಳಿಗೆ ಕಳುಹಿಸಿದ ಆಯಾ ಊರುಗಳ ಜನರು ಆ ದೇಶದ ದೇವರಿಗೆ ನಡೆಯತಕ್ಕ ರೀತಿಯನ್ನು ಅರಿಯದವರಾಗಿದ್ದಾರೆ. ಆದುದರಿಂದ ಅಲ್ಲಿ ದೇವರು ಸಿಂಹಗಳನ್ನು ಕಳುಹಿಸಿ ಅವರನ್ನು ಸಂಹರಿಸುತ್ತಿದ್ದಾನೆ” ಎಂದು ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅಶ್ಶೂರದ ಅರಸನ ಸೇವಕರು ತಮ್ಮ ಅರಸನಿಗೆ - ನೀನು ಸಮಾರ್ಯಪಟ್ಟಣಗಳಿಗೆ ಕಳುಹಿಸಿದ ಆಯಾ ಊರುಗಳ ಜನರು ಆ ದೇಶದ ದೇವರಿಗೆ ನಡೆಯತಕ್ಕ ರೀತಿಯನ್ನು ಅರಿಯದವರಾಗಿದ್ದಾರೆ. ಆದದರಿಂದ ಅಲ್ಲಿನ ದೇವರು ಸಿಂಹಗಳನ್ನು ಕಳುಹಿಸಿ ಅವರನ್ನು ಸಂಹರಿಸುತ್ತಿರುತ್ತಾನೆ ಎಂದು ತಿಳಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಅಶ್ಶೂರದ ರಾಜನಿಗೆ ಕೆಲವು ಜನರು, “ನೀನು ಕೆಲವು ಜನರನ್ನು ಒಯ್ದು ಸಮಾರ್ಯ ನಗರಗಳಲ್ಲಿ ಇರಿಸಿದೆ. ಅವರು ಆ ದೇಶದ ದೇವರ ನಿಯಮಗಳ ಬಗ್ಗೆ ತಿಳಿದುಕೊಂಡಿಲ್ಲ. ಆದ್ದರಿಂದ ಅವರನ್ನು ಆಕ್ರಮಣಮಾಡಲು ದೇವರು ಸಿಂಹಗಳನ್ನು ಕಳುಹಿಸಿದನು. ಆ ದೇಶದ ದೇವರ ನಿಯಮಗಳನ್ನು ಅವರು ತಿಳಿದಿಲ್ಲದಿರುವುದರಿಂದ ಅವರನ್ನು ಸಿಂಹಗಳು ಕೊಂದುಹಾಕಿದವು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆದಕಾರಣ ಸೇವಕರು ಅಸ್ಸೀರಿಯದ ಅರಸನಿಗೆ, “ನೀನು ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದ ಜನರು ಆ ದೇಶದ ದೇವರು ಅಪೇಕ್ಷಿಸುವುದನ್ನು ತಿಳಿಯದೆ ಇದ್ದಾರೆ. ಆದುದರಿಂದ, ದೇವರು ಅವರ ಮಧ್ಯದಲ್ಲಿ ಸಿಂಹಗಳನ್ನು ಕಳುಹಿಸಿದ್ದಾರೆ. ಅವು ಅವರನ್ನು ಕೊಂದುಹಾಕುತ್ತವೆ,” ಎಂದು ತಿಳಿಸಿದರು. ಅಧ್ಯಾಯವನ್ನು ನೋಡಿ |