Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:34 - ಕನ್ನಡ ಸತ್ಯವೇದವು C.L. Bible (BSI)

34 ಆ ಕಾಲದ ಪದ್ಧತಿಯನ್ನು ಇಂದಿಗೂ ಮುಂದುವರಿಸುತ್ತಿದ್ದಾರೆ. ಸರ್ವೇಶ್ವರನಲ್ಲಿ ಭಯಭಕ್ತಿ ಇಸ್ರಯೇಲರಿಗಿಲ್ಲ; ಅವರಿಂದಲೇ ಇಸ್ರಯೇಲನೆಂಬ ಹೆಸರು ಹೊಂದಿದ ಯಕೋಬನ ಸಂತಾನದವರಿಗೆ ಕೊಡಲಾದ ಆಜ್ಞಾನಿಯಮವಿಧಿ ಧರ್ಮಶಾಸ್ತ್ರಗಳನ್ನು ಅವರು ಅನುಸರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಅವರು ಆ ಕಾಲದಲ್ಲಿ ರೂಢಿಯಾದ ಪದ್ಧತಿಯಂತೆ ಇಂದಿನವರೆಗೂ ನಡೆಯುತ್ತಿದ್ದಾರೆ. ಅವರು ಯೆಹೋವನಲ್ಲಿ ಭಯಭಕ್ತಿಯುಳ್ಳವರಲ್ಲ. ಆತನಿಂದ ಇಸ್ರಾಯೇಲನೆಂಬ ಹೆಸರು ಹೊಂದಿದ ಯಾಕೋಬನ ಸಂತಾನದವರಿಗೆ ಕೊಡಲ್ಪಟ್ಟ ಆಜ್ಞಾವಿಧಿಗಳನ್ನು, ಧರ್ಮನಿಯಮಗಳನ್ನು ಅನುಸರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಅವರು ಆ ಕಾಲದಲ್ಲಿ ರೂಢಿಯಾದ ಪದ್ಧತಿಯಂತೆ ಇಂದಿನವರೆಗೂ ನಡೆಯುತ್ತಾರೆ. ಅವರು ಯೆಹೋವನಲ್ಲಿ ಭಯಭಕ್ತಿಯುಳ್ಳವರಲ್ಲ; ಆತನಿಂದ ಇಸ್ರಾಯೇಲನೆಂಬ ಹೆಸರು ಹೊಂದಿದ ಯಾಕೋಬನ ಸಂತಾನದವರಿಗೆ ಕೊಡಲ್ಪಟ್ಟ ಆಜ್ಞಾನಿಯಮ ವಿಧಿಧರ್ಮಶಾಸ್ತ್ರಗಳನ್ನು ಅನುಸರಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಇಂದಿಗೂ ಸಹ ಅವರು ಪೂರ್ವಕಾಲದಲ್ಲಿ ಮಾಡುತ್ತಿದ್ದಂತೆಯೇ ಜೀವಿಸುತ್ತಿದ್ದಾರೆ. ಅವರಿಗೆ ಯೆಹೋವನಲ್ಲಿ ಭಕ್ತಿಯಿಲ್ಲ. ಅವರು ಇಸ್ರೇಲರ ನಿಯಮಗಳಿಗೆ ಮತ್ತು ಆಜ್ಞೆಗಳಿಗೆ ವಿಧೇಯರಾಗುವುದಿಲ್ಲ. ಯೆಹೋವನು ಯಾಕೋಬನ ಸಂತತಿಗೆ ನೀಡಿದ ನಿಯಮಗಳನ್ನು ಮತ್ತು ಆಜ್ಞೆಗಳನ್ನು ಅನುಸರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಈ ದಿವಸದವರೆಗೂ ಅವರು ತಮ್ಮ ಪೂರ್ವದ ಪದ್ಧತಿಯ ಪ್ರಕಾರ ಮಾಡುತ್ತಾರೆ. ಅವರು ಯೆಹೋವ ದೇವರಿಗೆ ಭಯಪಡದೆ, ತಮ್ಮ ಕಟ್ಟಳೆಗಳ ಪ್ರಕಾರವಾಗಿಯೂ, ತಮ್ಮ ನೀತಿಗಳ ಪ್ರಕಾರವಾಗಿಯೂ, ನಿಯಮದ ಪ್ರಕಾರವಾಗಿಯೂ ಯೆಹೋವ ದೇವರು ಇಸ್ರಾಯೇಲೆಂದು ಹೆಸರಿಟ್ಟ ಯಾಕೋಬನ ಮಕ್ಕಳಿಗೆ ಆಜ್ಞಾಪಿಸಿದ ಆಜ್ಞೆಯ ಪ್ರಕಾರವಾಗಿಯೂ ಮಾಡದೆ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:34
14 ತಿಳಿವುಗಳ ಹೋಲಿಕೆ  

ಅವನಿಗೆ ದೇವರು, “ನಿನ್ನ ಹೆಸರು; ಯಕೋಬ ಅಲ್ಲವೇ? ಇನ್ನು ಮೇಲೆ ನೀನು ಯಕೋಬನೆನಿಸಿಕೊಳ್ಳದೆ 'ಇಸ್ರಯೇಲ್' ಎನಿಸಿಕೊಳ್ಳಬೇಕು” ಎಂದು ಹೇಳಿದರು. ಹೀಗೆ ಅವನ ಹೆಸರು ಇಸ್ರಯೇಲ್ ಆಯಿತು.


ಅವನು ಯಕೋಬನಿಗೆ, “ಇನ್ನು ಮೇಲೆ ನೀನು ಯಕೋಬ ಎನಿಸಿಕೊಳ್ಳುವುದಿಲ್ಲ; ದೇವರ ಸಂಗಡ ಹಾಗು ಮನುಷ್ಯರ ಸಂಗಡ ಹೋರಾಡಿ ಗೆದ್ದವನಾದ್ದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರುಂಟಾಗುವುದು,” ಎಂದು ಹೇಳಿದನು.


ಇಸ್ರಯೇಲೆಂಬ ನಾಮಧಾರಿಗಳೇ, ಯೆಹೂದ ವಂಶೋತ್ಪನ್ನರೇ, ಯಕೋಬ ಮನೆತನದವರೇ, ಇಡುತ್ತೀರಿ ನೀವು ಸರ್ವೇಶ್ವರನ ಮೇಲೆ ಆಣೆ ಸ್ಮರಿಸುತ್ತೀರಿ ನಿಸ್ಸಂದೇಹವಾಗಿ ಇಸ್ರಯೇಲಿನ ದೇವರನೆ. ಆದರೆ, ದೂರವಾಗಿದೆ ಸತ್ಯಕ್ಕೂ ಧರ್ಮಕ್ಕೂ ನಿಮ್ಮ ಕಾರ್ಯಾಚರಣೆ.


ಸರ್ವೇಶ್ವರನ ಭಕ್ತರಾಗಿದ್ದ ಅವರು ತಾವು ಬಿಟ್ಟುಬಂದ ದೇಶಗಳ ಪದ್ಧತಿಯ ಪ್ರಕಾರ ತಮ್ಮ ಕುಲದೇವತೆಗಳ ಆರಾಧನೆಯನ್ನೂ ಮಾಡುತ್ತಿದ್ದರು.


ಅವರಿಗೆ ಆರಂಭದಲ್ಲಿ ಸರ್ವೇಶ್ವರನಲ್ಲಿ ಭಯಭಕ್ತಿ ಇರಲಿಲ್ಲ. ಆದ್ದರಿಂದ ಸರ್ವೇಶ್ವರ ಸಿಂಹಗಳನ್ನು ಕಳುಹಿಸಿದರು; ಅವು ಅವರಲ್ಲಿ ಅನೇಕರನ್ನು ಕೊಂದವು.


ಸರ್ವೇಶ್ವರನಿಂದ ‘ಇಸ್ರಯೇಲ್’ ಎಂಬ ಹೆಸರು ಹೊಂದಿದ ಯಕೋಬನ ಮಕ್ಕಳಿಂದ ಉತ್ಪತ್ತಿಯಾದ ಕುಲಗಳ ಸಂಖ್ಯೆಗೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು,


ಹೀಗಿದ್ದರೂ ತಾವು ನನಗೆ, “ಎಲೀಯನು ಬಂದಿದ್ದಾನೆಂದು ನಿನ್ನ ಒಡೆಯನಿಗೆ ತಿಳಿಸು,” ಎಂಬುದಾಗಿ ಆಜ್ಞಾಪಿಸಬಹುದೆ?


ಯಾರೊಬ್ಬಾಮನಿಗೆ, “ನೀನು ಇವುಗಳಲ್ಲಿ ಹತ್ತು ತುಂಡುಗಳನ್ನು ತೆಗೆದುಕೋ. ಇಸ್ರಯೇಲ್ ದೇವರಾದ ಸರ್ವೆಶ್ವರ ರಾಜ್ಯವನ್ನು ಸೊಲೊಮೋನನಿಂದ ಕಿತ್ತುಕೊಂಡು


ಅಲ್ಲೇ ಒಂದು ಬಲಿಪೀಠವನ್ನು ಕಟ್ಟಿಸಿ ಅದಕ್ಕೆ 'ಏಲ್ - ಏಲೋಹೆ - ಇಸ್ರಯೇಲ್’ ಎಂದು ಹೆಸರಿಟ್ಟನು.


ಯಕೋಬನು, “ನಿಮ್ಮ ಹೆಸರನ್ನು ದಯವಿಟ್ಟು ನನಗೆ ತಿಳಿಸಬೇಕು,” ಎಂದಾಗ ಆ ಪುರುಷ, “ನನ್ನ ಹೆಸರನ್ನು ವಿಚಾರಿಸುವುದೇಕೆ?” ಎಂದು ಹೇಳಿ ಅಲ್ಲೇ ಅವನನ್ನು ಆಶೀರ್ವದಿಸಿದನು.


ಆದರೆ ಅವರು ಅದನ್ನು ಲಕ್ಷಿಸದೆ ತಮ್ಮ ಹಿಂದಿನ ಪದ್ಧತಿಗಳನ್ನೇ ಅನುಸರಿಸಿದರು.


ಮಿತ್ರರ ಮೇಲೆ ಕೈಯೆತ್ತಿರುವನು ಆ ನನ್ನ ಗೆಳೆಯನು I ತಾನು ಮಾಡಿದ ಒಪ್ಪಂದವನು ತಾನೆ ಮೀರಿ ನಡೆದಿಹನು II


ಸನ್ಮಾರ್ಗಿಯು ಸರ್ವೇಶ್ವರನಿಗೆ ಭಯಪಡುತ್ತಾನೆ; ದುರ್ಮಾರ್ಗಿಯು ಆತನನ್ನು ಅಸಡ್ಡೆಮಾಡುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು