Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:39 - ಕನ್ನಡ ಸತ್ಯವೇದವು C.L. Bible (BSI)

39 ನಿಮ್ಮ ದೇವರಾಗಿರುವ ಸರ್ವೇಶ್ವರನಾದ ನನ್ನಲ್ಲಿ ಭಯಭಕ್ತಿಯುಳ್ಳವರಾಗಿರಬೇಕು; ಆಗ ನಿಮ್ಮನ್ನು ಯಾವ ಶತ್ರುಗಳ ಕೈಗೂ ಸಿಕ್ಕದಂತೆ ತಪ್ಪಿಸುವೆನು,” ಎಂದು ಹೇಳಿ ಅವರೊಡನೆ ಒಡಂಬಡಿಕೆ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಆದರೆ, ನಿಮ್ಮ ದೇವರಾದ ಯೆಹೋವನಲ್ಲಿ ನೀವು ಭಯಭಕ್ತಿಯುಳ್ಳವರಾಗಿರಬೇಕು. ಆಗ ಆತನು ನಿಮ್ಮನ್ನು ಎಲ್ಲಾ ಶತ್ರುಗಳ ಕೈಗೆ ಸಿಕ್ಕದಂತೆ ಕಾಪಾಡುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ನಿಮ್ಮ ದೇವರಾಗಿರುವ ಯೆಹೋವನಾದ ನನ್ನಲ್ಲಿ ಭಯಭಕ್ತಿಯುಳ್ಳವರಾಗಿರಬೇಕು; ಆಗ ನಿಮ್ಮನ್ನು ಎಲ್ಲಾ ಶತ್ರುಗಳ ಕೈಗೆ ಸಿಕ್ಕದಂತೆ ತಪ್ಪಿಸುವೆನು ಎಂದು ಹೇಳಿ ಅವರೊಡನೆ ಒಡಂಬಡಿಕೆ ಮಾಡಿಕೊಂಡನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ನೀವು ನಿಮ್ಮ ದೇವರಾದ ಯೆಹೋವನನ್ನು ಮಾತ್ರ ಆರಾಧಿಸಬೇಕು. ಆಗ ಆತನು ನಿಮ್ಮನ್ನು ನಿಮ್ಮ ಶತ್ರುಗಳಿಂದ ರಕ್ಷಿಸುತ್ತಾನೆ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ನಿಮ್ಮ ದೇವರಾಗಿರುವ ಯೆಹೋವ ದೇವರಿಗೆ ಭಯಪಡಿರಿ. ಆಗ ಅವರು ನಿಮ್ಮನ್ನು ನಿಮ್ಮ ಶತ್ರುಗಳ ಕೈಯೊಳಗಿಂದ ವಿಮೋಚನೆ ಮಾಡುವರು,” ಎಂದು ಹೇಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:39
12 ತಿಳಿವುಗಳ ಹೋಲಿಕೆ  

ಆತನಲ್ಲಿ ಭಯಭಕ್ತಿಯುಳ್ಳವರಿಗೆ I ಆತನ ಪ್ರೀತಿ ತಲತಲಾಂತರದವರೆಗೆ II


ದೇಹವನ್ನು ಕೊಂದು ಹಾಕುವವರಿಗೆ ಭಯಪಡಬೇಡಿ; ಏಕೆಂದರೆ, ಅವರಿಂದ ಆತ್ಮವನ್ನು ಕೊಲ್ಲಲು ಆಗದು. ಆದರೆ ದೇಹಾತ್ಮಗಳೆರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿ.


ಜನಾಂಗಗಳ ಒಡೆಯಾ, ಅರಸರೇ, ನಿಮಗೆ ಅಂಜದೆ ಇರುವವರಾರು? ಹೌದು, ನೀವು ಭಯಭಕ್ತಿಗೆ ಪಾತ್ರರು ರಾಷ್ಟ್ರಗಳ ಜ್ಞಾನಿಗಳಲ್ಲೂ ರಾಜಪರಂಪರೆಯಲ್ಲೂ ಯಾವನೂ ಇಲ್ಲ ನಿಮಗೆ ಸಮಾನನು.


ಎಂದೇ ನೀವಿತ್ತಿರಿ ಅವರನು ಕ್ರೂರ ಶತ್ರುಗಳ ವಶಕೆ ಆದರೆ ಸಂಕಟದಲಿ ಮೊರೆಯಿಡಲು, ಪರದಿಂದ ಕಿವಿಗೊಟ್ಟಿರವರಿಗೆ! ರಕ್ಷಕರನು ಕಳುಹಿಸಿದಿರಿ ಕರುಣಾತಿಶಯದಿಂದ ಈ ಪರಿ ಬಿಡಿಸಿದಿರಿ ವಿರೋಧಿಗಳ ಕೈಯಿಂದ.


ನಿಮ್ಮನ್ನು ಮಹಾಶಕ್ತಿ ಹಾಗು ಭುಜಪರಾಕ್ರಮಗಳ ಮೂಲಕ ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದ ಸರ್ವೇಶ್ವರನಾದ ನನ್ನಲ್ಲೇ ಭಯಭಕ್ತಿಯುಳ್ಳವರಾಗಿ ನನಗೊಬ್ಬನಿಗೇ ಕೈಮುಗಿದು ಬಲಿಯರ್ಪಿಸಬೇಕು.


ನೀವಾದರೋ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿದ್ದು, ಅವರು ನಿಮಗಾಗಿ ಮಾಡಿದ ಮಹತ್ಕಾರ್ಯಗಳನ್ನು ಸ್ಮರಿಸಿಕೊಂಡು, ಅವರಿಗೆ ಶ್ರದ್ಧೆಯಿಂದಲೂ ಪೂರ್ಣಮನಸ್ಸಿನಿಂದಲೂ ಸೇವೆಸಲ್ಲಿಸುತ್ತಾ ಬರಬೇಕು.


‘ಹಗೆಗಳಿಂದ, ದ್ವೇಷಿಗಳೆಲ್ಲರ ಹಿಡಿತದಿಂದ ನಿಮಗೆ ಅನುಗ್ರಹಿಸುವೆನು ಸಂರಕ್ಷಣೆ’ II


ಅನ್ಯದೇವತೆಗಳನ್ನು ಪೂಜಿಸಬಾರದು; ನನ್ನ ನಿಬಂಧನೆಯನ್ನು ಮರೆತು ಅನ್ಯದೇವತೆಗಳನ್ನು ಪೂಜಿಸಬಾರದು.


ಆದರೆ ಅವರು ಅದನ್ನು ಲಕ್ಷಿಸದೆ ತಮ್ಮ ಹಿಂದಿನ ಪದ್ಧತಿಗಳನ್ನೇ ಅನುಸರಿಸಿದರು.


ಆಗ ಸಮುವೇಲನು ಅವರಿಗೆ, “ನೀವು ಪೂರ್ಣಮನಸ್ಸಿನಿಂದ ಸರ್ವೇಶ್ವರನಿಗೆ ಅಭಿಮುಖರಾಗಿ ನಿಮ್ಮ ಮಧ್ಯದಲ್ಲಿರುವ ಅಷ್ಟೋರೆತ್ ಮೊದಲಾದ ಅನ್ಯದೇವತೆಗಳನ್ನು ತೆಗೆದುಹಾಕಿರಿ. ಸರ್ವೇಶ್ವರನ ಮೇಲೆಯೇ ಮನಸ್ಸಿಟ್ಟು ಅವರೊಬ್ಬರಿಗೇ ಸೇವೆಸಲ್ಲಿಸಿರಿ; ಆಗ ಅವರು ನಿಮ್ಮನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವರು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು