Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:40 - ಕನ್ನಡ ಸತ್ಯವೇದವು C.L. Bible (BSI)

40 ಆದರೆ ಅವರು ಅದನ್ನು ಲಕ್ಷಿಸದೆ ತಮ್ಮ ಹಿಂದಿನ ಪದ್ಧತಿಗಳನ್ನೇ ಅನುಸರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಅವರು ಅದನ್ನು ಲಕ್ಷ್ಯಕ್ಕೆ ತಂದುಕೊಳ್ಳದೆ ತಮ್ಮ ಹಿಂದಿನ ಪದ್ಧತಿಗಳನ್ನೇ ಅನುಸರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಅವರು ಅದನ್ನು ಲಕ್ಷಿಸದೆ ತಮ್ಮ ಮುಂಚಿನ ಪದ್ಧತಿಗಳನ್ನೇ ಅನುಸರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಆದರೆ ಇಸ್ರೇಲರು ಆತನ ಮಾತಿಗೆ ಕಿವಿಗೊಡದೆ ತಮ್ಮ ಮೊದಲಿನ ಕಾರ್ಯಗಳನ್ನೇ ಮುಂದುವರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಆದರೆ ಜನರು ಕೇಳದೆ ತಮ್ಮ ಪೂರ್ವದ ಪದ್ಧತಿಯ ಹಾಗೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:40
7 ತಿಳಿವುಗಳ ಹೋಲಿಕೆ  

ಎಥಿಯೋಪಿಯದವನು ತನ್ನ ಚರ್ಮದ ಬಣ್ಣವನ್ನು ಮಾರ್ಪಡಿಸಬಲ್ಲನೆ? ಚಿರತೆಯು ತನ್ನ ಚುಕ್ಕೆಗಳನ್ನು ಬದಲಾಯಿಸೀತೆ? ಅಂತೆಯೇ ದುಷ್ಟತನದಲ್ಲಿ ಅಷ್ಟಾಗಿ ನುರಿತ ನೀನು ಶಿಷ್ಟತನದಲ್ಲಿ ನಡೆಯಲಾರೆ.


ಆ ಕಾಲದ ಪದ್ಧತಿಯನ್ನು ಇಂದಿಗೂ ಮುಂದುವರಿಸುತ್ತಿದ್ದಾರೆ. ಸರ್ವೇಶ್ವರನಲ್ಲಿ ಭಯಭಕ್ತಿ ಇಸ್ರಯೇಲರಿಗಿಲ್ಲ; ಅವರಿಂದಲೇ ಇಸ್ರಯೇಲನೆಂಬ ಹೆಸರು ಹೊಂದಿದ ಯಕೋಬನ ಸಂತಾನದವರಿಗೆ ಕೊಡಲಾದ ಆಜ್ಞಾನಿಯಮವಿಧಿ ಧರ್ಮಶಾಸ್ತ್ರಗಳನ್ನು ಅವರು ಅನುಸರಿಸಲಿಲ್ಲ.


ಸರ್ವೇಶ್ವರನ ಆಜ್ಞೆಯನ್ನು ಮೀರಿ ವಿಗ್ರಹಗಳನ್ನು ಆರಾಧಿಸಿದರು.


ತಮ್ಮ ನಾಡಿನಿಂದ ಸರ್ವೇಶ್ವರ ಹೊರಡಿಸಿಬಿಟ್ಟಿದ್ದ ಜನಾಂಗಗಳ ಮತ್ತು ಇಸ್ರಯೇಲ್ ರಾಜರ ದುರಾಚಾರಗಳನ್ನು ಅವರು ಅನುಸರಿಸಿದರು.


ಅಲ್ಲಿ ಮಾನವರ ಕೈಯಿಂದ ಮಾಡಲಾದ ಮರ ಮತ್ತು ಕಲ್ಲಿನ ದೇವರುಗಳನ್ನು ಪೂಜಿಸುವಿರಿ; ಅವುಗಳಿಂದ ನೋಡುವುದಕ್ಕಾಗಲಿ, ಕೇಳುವುದಕ್ಕಾಗಲಿ, ತಿನ್ನಲಿಕ್ಕಾಗಲಿ, ಮೂಸುವುದಕ್ಕಾಗಲಿ ಆಗದು.


ನಿಮ್ಮ ದೇವರಾಗಿರುವ ಸರ್ವೇಶ್ವರನಾದ ನನ್ನಲ್ಲಿ ಭಯಭಕ್ತಿಯುಳ್ಳವರಾಗಿರಬೇಕು; ಆಗ ನಿಮ್ಮನ್ನು ಯಾವ ಶತ್ರುಗಳ ಕೈಗೂ ಸಿಕ್ಕದಂತೆ ತಪ್ಪಿಸುವೆನು,” ಎಂದು ಹೇಳಿ ಅವರೊಡನೆ ಒಡಂಬಡಿಕೆ ಮಾಡಿಕೊಂಡರು.


ಆ ಜನಾಂಗಗಳವರು ಸರ್ವೇಶ್ವರನ ಭಕ್ತರಾಗಿದ್ದರೂ ತಮ್ಮ ವಿಗ್ರಹಗಳನ್ನು ಆರಾಧಿಸುತ್ತಿದ್ದರು. ಅವರ ಸಂತಾನದವರು ಇಂದಿನವರೆಗೂ ಹಾಗೆಯೇ ಮಾಡುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು