2 ಅರಸುಗಳು 17:6 - ಕನ್ನಡ ಸತ್ಯವೇದವು C.L. Bible (BSI)6 ಅದು ಹೋಶೇಯನ ಆಳ್ವಿಕೆಯ ಒಂಬತ್ತನೆಯ ವರ್ಷದಲ್ಲಿ ಅವನ ಸ್ವಾಧೀನವಾಯಿತು. ಅವನು ಎಲ್ಲಾ ಇಸ್ರಯೇಲರನ್ನು ಅಸ್ಸೀರಿಯ ದೇಶಕ್ಕೆ ಒಯ್ದು ಹಲಹು ಎಂಬ ಪ್ರಾಂತ್ಯದಲ್ಲಿ, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತ್ಯದಲ್ಲಿ ಹಾಗು ಮೇದ್ಯರ ಪಟ್ಟಣಗಳಲ್ಲಿ ಇರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಹೋಶೇಯನ ಆಳ್ವಿಕೆಯ ಒಂಭತ್ತನೆಯ ವರ್ಷದಲ್ಲಿ, ಅಶ್ಶೂರದ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು, ಎಲ್ಲಾ ಇಸ್ರಾಯೇಲರನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ಒಯ್ದನು. ಅವರನ್ನು ಹಲಹು ಪ್ರಾಂತ್ಯದಲ್ಲಿಯೂ, ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತ್ಯದಲ್ಲಿಯೂ, ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅದು ಹೋಶೇಯನ ಆಳಿಕೆಯ ಒಂಭತ್ತನೆಯ ವರುಷದಲ್ಲಿ ಅವನ ಸ್ವಾಧೀನವಾಗಲು ಅವನು ಎಲ್ಲಾ ಇಸ್ರಾಯೇಲ್ಯರನ್ನು ಅಶ್ಶೂರ್‍ದೇಶಕ್ಕೆ ಒಯ್ದು ಹಲಹು ಪ್ರಾಂತದಲ್ಲಿಯೂ ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತದಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಹೋಶೇಯನು ಇಸ್ರೇಲಿನ ರಾಜನಾಗಿದ್ದ ಒಂಭತ್ತನೆಯ ವರ್ಷದಲ್ಲಿ ಅಶ್ಶೂರದ ರಾಜನು ಸಮಾರ್ಯವನ್ನು ಸ್ವಾಧೀನಪಡಿಸಿಕೊಂಡನು. ಅಶ್ಶೂರದ ರಾಜನು ಇಸ್ರೇಲರನ್ನು ಸೆರೆಯಾಳುಗಳನ್ನಾಗಿ ಒಯ್ದು ಹಲಹು ಪ್ರಾಂತ್ಯದಲ್ಲಿಯೂ ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತ್ಯದಲ್ಲಿಯೂ ಮೇದ್ಯರ ನಗರಗಳಲ್ಲಿಯೂ ಇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಹೋಶೇಯನ ಒಂಬತ್ತನೆಯ ವರ್ಷದಲ್ಲಿ ಅಸ್ಸೀರಿಯದ ಅರಸನು ಸಮಾರ್ಯವನ್ನು ವಶಪಡಿಸಿಕೊಂಡನು. ಅವನು ಇಸ್ರಾಯೇಲನ್ನು ಅಸ್ಸೀರಿಯ ದೇಶಕ್ಕೆ ಸೆರೆಯಾಗಿ ಒಯ್ದು ಹಲಹ ಪ್ರಾಂತದಲ್ಲಿಯೂ, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತದಲ್ಲಿಯೂ ಮತ್ತು ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು. ಅಧ್ಯಾಯವನ್ನು ನೋಡಿ |
ಆದುದರಿಂದ ಅಸ್ಸೀರಿಯದ ರಾಜಪೂಲ್ (ಇವನಿಗೆ ತಿಲ್ಗತ್ಪಿಲೆಸರ್ ಎಂಬ ಹೆಸರೂ ಇದೆ) ಅವರ ಮೇಲೆ ದಾಳಿಮಾಡುವಂತೆ ಇಸ್ರಯೇಲ್ ದೇವರು ಪ್ರೇರಿಸಿದರು. ಅವನು ರೂಬೇನ್, ಗಾದ್ ಮತ್ತು ಪೂರ್ವದಲ್ಲಿಯ ಮನಸ್ಸೆ ಗೋತ್ರ ಗೋತ್ರಗಳವರನ್ನು ಗಡೀಪಾರು ಮಾಡಿ ಅವರನ್ನು ಹಲಹ, ಹಾಬೋರ್, ಹಾರ ಎಂಬ ಪ್ರಾಂತ್ಯಗಳಿಗೂ ಗೋಜಾನ್ ನದಿಯ ಪ್ರದೇಶಗಳಿಗೂ ಸೆರೆ ಒಯ್ದನು. ಅವರು ಅಲ್ಲಿಯೇ ನೆಲೆಸುವಂತೆ ಮಾಡಿದನು.