Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:7 - ಕನ್ನಡ ಸತ್ಯವೇದವು C.L. Bible (BSI)

7 ಇಸ್ರಯೇಲರ ಈ ದುರ್ಗತಿಗೆ ಅವರ ದುರ್ನಡತೆಯೇ ಕಾರಣ: ಹೇಗೆಂದರೆ, ಅವರು ತಮ್ಮನ್ನು ಈಜಿಪ್ಟಿನ ಅರಸನಾದ ಫರೋಹನ ಕೈಯಿಂದ ಬಿಡಿಸಿ ಅವನ ರಾಜ್ಯದಿಂದ ಹೊರತಂದ ದೇವರಾದ ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿ ಅನ್ಯದೇವತೆಗಳನ್ನು ಪೂಜಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇಸ್ರಾಯೇಲರ ಈ ದುರ್ಗತಿಗೆ, ಅವರ ದುರ್ನಡತೆಯೇ ಕಾರಣ. ಹೇಗೆಂದರೆ ಅವರು ತಮ್ಮನ್ನು ಐಗುಪ್ತದ ಅರಸನಾದ ಫರೋಹನ ಕೈಯಿಂದ ಬಿಡಿಸಿ, ಅವನ ರಾಜ್ಯದಿಂದ ಹೊರತಂದ ದೇವರಾದ ಯೆಹೋವನಿಗೆ ಭಯಪಡದೆ, ಪಾಪಮಾಡಿ ಅನ್ಯದೇವತೆಗಳನ್ನು ಸೇವಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇಸ್ರಾಯೇಲ್ಯರ ಈ ದುರ್ಗತಿಗೆ ಅವರ ದುರ್ನಡತೆಯೇ ಕಾರಣ; ಹೇಗಂದರೆ - ಅವರು ತಮ್ಮನ್ನು ಐಗುಪ್ತದ ಅರಸನಾದ ಫರೋಹನ ಕೈಯಿಂದ ಬಿಡಿಸಿ ಅವನ ರಾಜ್ಯದಿಂದ ಹೊರತಂದ ದೇವರಾದ ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿ ಅನ್ಯದೇವತೆಗಳನ್ನು ಸೇವಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಇಸ್ರೇಲರು ತಮ್ಮ ದೇವರಾದ ಯೆಹೋವನ ವಿರುದ್ಧ ಪಾಪಗಳನ್ನು ಮಾಡಿದ್ದರಿಂದ ಇವೆಲ್ಲವೂ ಸಂಭವಿಸಿದವು. ಈಜಿಪ್ಟಿನ ರಾಜನಾದ ಫರೋಹನ ಆಳ್ವಿಕೆಯಿಂದ ಇಸ್ರೇಲರನ್ನು ತಪ್ಪಿಸಿ ಯೆಹೋವನು ಅವರನ್ನು ಈಜಿಪ್ಟ್ ದೇಶದಿಂದ ಹೊರತಂದಿದ್ದನು. ಆದರೆ ಇಸ್ರೇಲರು ಬೇರೆ ದೇವರುಗಳನ್ನು ಪೂಜಿಸಲು ಆರಂಭಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಇಸ್ರಾಯೇಲರನ್ನು ಈಜಿಪ್ಟಿನ ಅರಸನಾದ ಫರೋಹನ ಕೈಯಿಂದ ಬಿಡಿಸಿ ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದ ತಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದರಿಂದ ಇದೆಲ್ಲವೂ ಆಯಿತು. ಅವರು ಬೇರೆ ದೇವರುಗಳನ್ನು ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:7
27 ತಿಳಿವುಗಳ ಹೋಲಿಕೆ  

ದೇವರಾದ ಸರ್ವೇಶ್ವರನ ನಿಬಂಧನೆಯನ್ನು ನೀವು ಮೀರಿ ಅನ್ಯದೇವತೆಗಳಿಗೆ ಸೇವೆಸಲ್ಲಿಸಿ, ಅಡ್ಡಬಿದ್ದರೆ, ಸರ್ವೇಶ್ವರನ ಕೋಪಾಗ್ನಿ ನಿಮ್ಮ ಮೇಲೆ ಎರಗುವುದು; ಅವರು ನಿಮಗೆ ಕೊಟ್ಟ ಈ ಒಳ್ಳೆಯ ನಾಡಿನಿಂದ ಹೊರದೂಡಲ್ಪಟ್ಟು ಬೇಗನೆ ನಾಶವಾಗುವಿರಿ,” ಎಂದನು.


ಸೌತೆ ತೋಟದ ಬೆದರುಗಂಬದಂತಿರುವ ಈ ಬೊಂಬೆಗಳು ಮಾತನಾಡಲಾರವು. ಅವನ್ನು ಹೊತ್ತುಕೊಂಡು ಹೋಗಬೇಕು, ಅವು ನಡೆಯಲಾರವು. ಅವುಗಳಿಗೆ ನೀವು ಅಂಜಬೇಕಾಗಿಲ್ಲ, ಅವು ಕೇಡುಮಾಡಲಾರವು; ಮೇಲುಮಾಡಲಿಕ್ಕೂ ಸಾಮರ್ಥ್ಯವಿಲ್ಲದಿರುವುವು.”


ಬಳಿಕ ಅವಿಧೇಯರಾದರು, ನಿಮಗೆ ವಿರುದ್ಧ ದಂಗೆ ಎದ್ದರು; ನಿಮ್ಮ ಉಪದೇಶವನು ಉಲ್ಲಂಘಿಸಿದರು, ನಿಮ್ಮ ಪ್ರವಾದಿಗಳನು ಕೊಂದರು; ಹೌದು, ನಿಮಗೆ ಅಭಿಮುಖರಾಗಲು ಎಚ್ಚರಿಸಿದವರನೆ ಕೊಂದರು. ಕಡೆಗೆ ನಿಮ್ಮನ್ನೇ ಅಸಡ್ಡೆಮಾಡಿ, ಘೋರ ಅಪರಾಧಿಗಳಾದರು.


“ನಾನೇ ನಿನ್ನ ದೇವರಾದ ಸರ್ವೇಶ್ವರ; ಗುಲಾಮತನದಲ್ಲಿದ್ದ ನಿನ್ನನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದವನು.


ಯೆಹೋಯಾಕೀಮನು ಅರಸನಾದಾಗ ಅವನಿಗೆ ಇಪ್ಪತ್ತೈದು ವರ್ಷ ವಯಸ್ಸು. ಅವನು ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನು ತನ್ನ ದೇವರಾದ ಸರ್ವೇಶ್ವರನ ಚಿತ್ತಕ್ಕೆ ವಿರುದ್ಧ ನಡೆದನು.


ಇಸ್ರಯೇಲರಿಗೆ ಸರ್ವೇಶ್ವರ, “ನೀವು ಅನ್ಯದೇವತೆಗಳನ್ನು ಆರಾಧಿಸಬಾರದು, ಅವುಗಳಿಗೆ ಕೈಮುಗಿಯಲೂಬಾರದು. ಸೇವೆಮಾಡಬಾರದು, ಬಲಿ ಅರ್ಪಿಸಲೂಬಾರದು.


ಪಟ್ಟಕ್ಕೆ ಬಂದಾಗ ಇವನಿಗೆ ಇಪ್ಪತ್ತು ವರ್ಷ ವಯಸ್ಸು. ಜೆರುಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಇವನು ತನ್ನ ದೇವರಾದ ಸರ್ವೇಶ್ವರಸ್ವಾಮಿಯ ದೃಷ್ಟಿಯಲ್ಲಿ ಒಳ್ಳೆಯವನಾಗಿರಲಿಲ್ಲ. ತನ್ನ ಪೂರ್ವಜ ದಾವೀದನ ಮಾರ್ಗವನ್ನು ಬಿಟ್ಟು


ತನ್ನ ತಂದೆ ಮಾಡಿದ ಪಾಪಕೃತ್ಯಗಳನ್ನು ಇವನೂ ಮಾಡಿದನು. ಇವನ ಪೂರ್ವಜ ದಾವೀದನು ದೇವರಾದ ಸರ್ವೇಶ್ವರನಿಗೆ ಪೂರ್ಣಮನಸ್ಸಿನಿಂದ ಸೇವೆಸಲ್ಲಿಸಿದಂತೆ ಇವನು ಸೇವೆಸಲ್ಲಿಸಲಿಲ್ಲ.


ಅವನು ವೃದ್ಧನಾದಾಗ ಇವರು ಅವನ ಹೃದಯವನ್ನು ಅನ್ಯದೇವತೆಗಳ ಕಡೆಗೆ ತಿರುಗಿಸಿದರು. ಈ ಕಾರಣ ಅವನು ತನ್ನ ದೇವರಾದ ಸರ್ವೇಶ್ವರನಲ್ಲಿಟ್ಟಿದ್ದ ಯಥಾರ್ಥ ಭಕ್ತಿಯನ್ನು ಕಳೆದುಕೊಂಡನು. ತನ್ನ ತಂದೆಯಾದ ದಾವೀದನಂತೆ ನಡೆಯಲಿಲ್ಲ.


ಸರ್ವೇಶ್ವರನೆಂಬ ನಾನೇ ನಿಮ್ಮ ದೇವರಾಗಿದ್ದೇನೆಂದೂ ನೀವು ಅಮೋರಿಯರ ಮಧ್ಯೆ ವಾಸಿಸುವಾಗ ಅವರ ದೇವತೆಗಳನ್ನು ಪೂಜಿಸಬಾರದೆಂದೂ ಹೇಳಿದೆ. ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ’.”


ನಾನು ಹೋದ ಮೇಲೆ, ನೀವು ದ್ರೋಹಿಗಳಾಗಿ, ನಾನು ಬೋಧಿಸಿದ ಮಾರ್ಗವನ್ನು ತಪ್ಪಿಹೋಗುವಿರಿ; ಅನಂತರ ನೀವು ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡೆಸಿ, ದುರಾಚಾರಿಗಳಾಗುವಿರಿ; ಅವರನ್ನು ಕೋಪಗೊಳಿಸುವುದರಿಂದ ನಿಮಗೆ ಆಪತ್ತುಗಳು ಬಂದೊದಗುವುದೆಂದು ನಾನು ಬಲ್ಲೆ,” ಎಂದು ಹೇಳಿದನು.


ಆದರೆ ಜನರು ತಮ್ಮ ಪಿತೃಗಳ ದೇವರಿಗೆ ಅವಿಧೇಯರಾದರು. ಆ ಪ್ರದೇಶದಿಂದ ದೇವರೇ ಹೊರದೂಡಿದ ಬೇರೆ ಜನಾಂಗಗಳ ದೇವತೆಗಳನ್ನು ಪೂಜಿಸಿದರು.


ಅವರ ಅಶುದ್ಧತನಕ್ಕೂ ದುರಾಚಾರಗಳಿಗೂ ತಕ್ಕಂತೆ ನಾನು ಅವರನ್ನು ದಂಡಿಸಿ ಅವರಿಗೆ ವಿಮುಖನಾದೆನು.”


ಎಫ್ರಯಿಮ್ ದೇವರನ್ನು ಉಗ್ರವಾಗಿ ರೇಗಿಸಿದೆ; ರಕ್ತಾಪರಾಧವನ್ನು ಅದರ ಮೇಲೆ ಹೊರಿಸಲಾಗುವುದು. ಅದು ಮಾಡಿದ ಅವಮಾನಕ್ಕೆ ಪ್ರತಿಯಾಗಿ ದೇವರು ಅದನ್ನು ಅವಮಾನಕ್ಕೆ ಗುರಿಪಡಿಸುವರು.


ಆ ಈಜಿಪ್ಟ್ ದೇಶದೊಳು, ಸೋನ್ ಬಯಲು ಸೀಮೆಯೊಳು I ಆತನೆಸಗಿದ ಪವಾಡಗಳು ಪೂರ್ವಜರ ಇದಿರೊಳು II


ಓಕ್‍ಮರಗಳ ತೋಪುಗಳಲ್ಲೂ ಸೊಂಪಾಗಿ ಹರಡಿರುವ ಮರಗಳ ಅಡಿಯಲ್ಲೂ ಕಾಮಾಗ್ನಿಯಿಂದ ಕುದಿಯುತ್ತೀರಿ. ಹೊಳೆಕೊರೆದ ಡೊಗರುಗಳಲ್ಲೂ ಬಂಡೆಬಿರುಕುಗಳಲ್ಲೂ ಮಕ್ಕಳನ್ನು ಬಲಿಕೊಡುತ್ತೀರಿ. ನೀವು ವಿದ್ರೋಹಿಗಳ ಸಂತಾನ, ಸುಳ್ಳುಗಾರರ ಸಂತತಿ.


ನನ್ನ ಜನರು ಮರದ ತುಂಡನ್ನು ಹಿಡಿದು ಕಣಿ ಕೇಳುತ್ತಾರೆ; ಕೈಯಲ್ಲಿ ಹಿಡಿದ ದೊಣ್ಣೆಯಿಂದ ವಿವೇಕವಾಣಿಯನ್ನು ಪಡೆಯಲೆತ್ನಿಸುತ್ತಾರೆ. ವ್ಯಭಿಚಾರಗುಣ ಅವರನ್ನು ತಪ್ಪುದಾರಿಗೆ ಎಳೆದಿದೆ. ದೇವರ ಸದ್ಭಕ್ತಿಯನ್ನು ತೊರೆದು ಅವರು ಧರ್ಮಭ್ರಷ್ಠರಾಗಿದ್ದಾರೆ.


ಅವರು ಗಿರಿಶಿಖರಗಳ ಮೇಲೆ ಬಲಿಯನರ್ಪಿಸುತ್ತಾರೆ. ಬೆಟ್ಟಗುಡ್ಡಗಳ ಮೇಲೆ ಧೂಪಹಾಕುತ್ತಾರೆ. ದಟ್ಟ ನೆರಳಿನ ಅಲ್ಲೋನ್, ಲಿಬ್ನೆ, ಏಲಾ ವೃಕ್ಷಗಳ ಅಡಿಯಲ್ಲಿ ಇಂತಹುದನ್ನೆಲ್ಲ ಮಾಡುತ್ತಾರೆ. ಹೀಗಿರಲು ನಿಮ್ಮ ಪುತ್ರಿಯರು ಸೂಳೆಯರಾಗುವರು. ನಿಮ್ಮ ಸೊಸೆಗಳು ವ್ಯಭಿಚಾರಿಣಿಗಳಾಗುವರು. ಇದರಲ್ಲಿ ಆಶ್ಚರ್ಯವೇನಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು