2 ಅರಸುಗಳು 17:9 - ಕನ್ನಡ ಸತ್ಯವೇದವು C.L. Bible (BSI)9 ತಮ್ಮ ದೇವರಾದ ಆ ಸರ್ವೇಶ್ವರನಿಗೆ ವಿರೋಧವಾದ ಕೃತ್ಯಗಳನ್ನು ಗುಪ್ತವಾಗಿ ನಡೆಸಿದರು; ಕಾವಲುಗಾರರ ಗೋಪುರವುಳ್ಳ ಚಿಕ್ಕ ಊರು ಮೊದಲುಗೊಂಡು ಕೋಟೆಕೊತ್ತಲುಗಳುಳ್ಳ ಪಟ್ಟಣದವರೆಗಿರುವ ಎಲ್ಲಾ ಊರುಗಳಲ್ಲಿ ತಮಗಾಗಿ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡರು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಇಸ್ರಾಯೇಲರು ತಮ್ಮ ದೇವರಾದ ಯೆಹೋವನಿಗೆ ವಿರುದ್ಧವಾದ ಗುಪ್ತವಾದ ದುಷ್ಟ ಕೃತ್ಯಗಳನ್ನು ನಡಿಸಿದರು. ಕಾವಲುಗಾರರ ಗೋಪುರವುಳ್ಳ ಚಿಕ್ಕ ಊರು ಮೊದಲುಗೊಂಡು ಕೋಟೆಕೊತ್ತಲುಗಳುಳ್ಳ ಪಟ್ಟಣದವರೆಗಿರುವ ಎಲ್ಲಾ ಊರುಗಳಲ್ಲಿ ತಮಗೋಸ್ಕರ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಗುಪ್ತವಾಗಿ ತಮ್ಮ ದೇವರಾದ ಯೆಹೋವನಿಗೆ ವಿರೋಧವಾದ ಕೃತ್ಯಗಳನ್ನು ನಡಿಸಿದರು; ಕಾವಲುಗಾರರ ಬುರುಜುಳ್ಳ ಚಿಕ್ಕ ಊರು ಮೊದಲುಗೊಂಡು ಕೋಟೆಕೊತ್ತಲುಗಳುಳ್ಳ ಪಟ್ಟಣದವರೆಗಿರುವ ಎಲ್ಲಾ ಊರುಗಳಲ್ಲಿ ತಮಗೋಸ್ಕರ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಇಸ್ರೇಲರು ತಮ್ಮ ದೇವರಾದ ಯೆಹೋವನ ವಿರುದ್ಧ ರಹಸ್ಯವಾದ ಕೆಟ್ಟಕಾರ್ಯಗಳನ್ನು ಮಾಡಿದರು. ಇಸ್ರೇಲರು ಚಿಕ್ಕ ಊರಿನಿಂದಿಡಿದು ದೊಡ್ಡ ನಗರದವರೆಗೂ ತಮ್ಮ ಎಲ್ಲಾ ನಗರಗಳಲ್ಲಿ ಉನ್ನತಸ್ಥಳಗಳನ್ನು ನಿರ್ಮಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಇಸ್ರಾಯೇಲರು ರಹಸ್ಯವಾಗಿ ತಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಅಯುಕ್ತವಾದವುಗಳನ್ನು ಮಾಡಿ ಬರುವ ಸ್ಥಳಗಳು ಮೊದಲುಗೊಂಡು ಕೋಟೆಯುಳ್ಳ ಪಟ್ಟಣಗಳವರೆಗೂ, ತಮ್ಮ ಸಮಸ್ತ ಪಟ್ಟಣಗಳಲ್ಲಿ ತಮಗೆ ಪೂಜಾಸ್ಥಳಗಳನ್ನು ಕಟ್ಟಿಸಿಕೊಂಡಿದ್ದರು. ಅಧ್ಯಾಯವನ್ನು ನೋಡಿ |