Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 18:12 - ಕನ್ನಡ ಸತ್ಯವೇದವು C.L. Bible (BSI)

12 ಇಸ್ರಯೇಲರು ತಮ್ಮ ದೇವರಾದ ಸರ್ವೇಶ್ವರನ ಮಾತನ್ನು ಕೇಳದೆಹೋದದ್ದೂ ಅವರ ನಿಬಂಧನೆಯನ್ನು ಉಲ್ಲಂಘಿಸಿದ್ದೂ ಅವರ ದಾಸ ಮೋಶೆಯ ಆಜ್ಞೆಗಳಿಗೆ ಅವಿಧೇಯರಾಗಿ ನಡೆದದ್ದೂ ಇದಕ್ಕೆ ಕಾರಣಗಳಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಏಕೆಂದರೆ ಅವರು ತಮ್ಮ ದೇವರಾದ ಯೆಹೋವನ ಮಾತನ್ನು ಕೇಳದೆ ಆತನ ಒಡಂಬಡಿಕೆಯನ್ನು ಮೀರಿ, ಆತನ ಸೇವಕನಾದ ಮೋಶೆಯ ಆಜ್ಞೆಗಳಿಗೆ ವಿಧೇಯರಾಗಿ ನಡೆಯಲಿಲ್ಲ. ದೇವರ ಆಜ್ಞೆಗಳಿಗೆ ಕಿವಿಗೊಡದೇ ಅವುಗಳಂತೆ ನಡೆಯದೇ ಇದ್ದುದರಿಂದಲೇ ಹೀಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವರು ತಮ್ಮ ದೇವರಾದ ಯೆಹೋವನ ಮಾತನ್ನು ಕೇಳದೆಹೋದದ್ದೂ ಆತನ ನಿಬಂಧನೆಯನ್ನು ಉಲ್ಲಂಘಿಸಿದ್ದೂ ಆತನ ಸೇವಕನಾದ ಮೋಶೆಯ ಆಜ್ಞೆಗಳಿಗೆ ಅವಿಧೇಯರಾಗಿ ನಡೆದದ್ದೂ ಇದಕ್ಕೆ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಇಸ್ರೇಲರು ತಮ್ಮ ದೇವರಾದ ಯೆಹೋವನಿಗೆ ಅವಿಧೇಯರಾದದ್ದೂ ಆತನ ಒಡಂಬಡಿಕೆಯನ್ನು ಉಲ್ಲಂಘಿಸಿದ್ದೂ ಆತನ ಸೇವಕನಾದ ಮೋಶೆಯ ಆಜ್ಞೆಗಳಿಗೆ ಅವಿಧೇಯರಾದದ್ದೂ ಇದಕ್ಕೆ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಏಕೆಂದರೆ ಅವರು ತಮ್ಮ ದೇವರಾದ ಯೆಹೋವ ದೇವರ ಮಾತನ್ನು ಕೇಳದೆ, ಅವರ ಒಡಂಬಡಿಕೆಯನ್ನೂ, ಯೆಹೋವ ದೇವರ ಸೇವಕನಾದ ಮೋಶೆಯು ಆಜ್ಞಾಪಿಸಿದ್ದ ಸಮಸ್ತವನ್ನೂ ಮೀರಿದರು. ಅವರು ದೇವರ ಆಜ್ಞೆಗಳಿಗೆ ಕಿವಿಗೊಡಲಿಲ್ಲ, ಅವುಗಳಂತೆ ನಡೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 18:12
29 ತಿಳಿವುಗಳ ಹೋಲಿಕೆ  

ನ್ಯಾಯತೀರ್ಪಿನ ಕಾಲವು ಬಂದಿದೆ. ಮೊತ್ತಮೊದಲು ದೇವರ ಸ್ವಂತಜನರೇ ಆ ತೀರ್ಪಿಗೆ ಗುರಿಯಾಗುವರು. ದೇವಜನರಾದ ನಾವೇ ಅದಕ್ಕೆ ಮೊದಲು ಒಳಗಾಗುವುದಾದರೆ ದೇವರ ಶುಭಸಂದೇಶದಲ್ಲಿ ವಿಶ್ವಾಸವಿಡದವರ ಗತಿಯಾದರೂ ಏನು?


“ಜನರು ಎಡವಿಬೀಳುವ ಕಲ್ಲಿದು; ಅವರು ಮುಗ್ಗರಿಸಿ ಬೀಳುವ ಬಂಡೆಯಿದು.” ವಿಶ್ವಾಸವಿಡದವರಿಗಾದರೋ ಮೇಲಿನ ವಾಕ್ಯಗಳು ಅನ್ವಯಿಸುತ್ತವೆ. ಜನರು ದೇವರ ವಾಕ್ಯದಲ್ಲಿ ವಿಶ್ವಾಸವಿಡದಿರುವುದರಿಂದಲೇ ಎಡವಿಬೀಳುತ್ತಾರೆ. ಅವರ ಬಗ್ಗೆ ದೈವಸಂಕಲ್ಪವೂ ಇದೇ ಆಗಿತ್ತು.


ಪ್ರಭುವಿನ ಶರಣನಿಗೆ ಜಗಳ ಸಲ್ಲದು. ಆತನು ಎಲ್ಲರೊಡನೆ ಸೌಹಾರ್ದದಿಂದ ನಡೆದುಕೊಳ್ಳಬೇಕು.


ಇಷ್ಟೆಲ್ಲಾ ಮಾಡಿದಂಥ ನೀವು ಸರ್ವೇಶ್ವರಸ್ವಾಮಿಗೆ ಮೊರೆಯಿಡುತ್ತೀರಿ. ಆದರೆ ಅವರು ನಿಮಗೆ ಉತ್ತರಕೊಡುವುದಿಲ್ಲ. ಬದಲಿಗೆ ನಿಮ್ಮ ದುಷ್ಕೃತ್ಯಗಳ ನಿಮಿತ್ತ ನಿಮಗೆ ವಿಮುಖರಾಗುವರು.”


ನಾನು ಕೊಟ್ಟ ಒಂದು ಕಟ್ಟಳೆಯೆಂದರೆ ಇದು - ನನ್ನ ಮಾತಿಗೆ ಕಿವಿಗೊಡಿ, ನಾನು ನಿಮ್ಮ ದೇವರಾಗಿರುತ್ತೇನೆ, ನೀವು ನನ್ನ ಪ್ರಜೆಯಾಗಿರಿ. ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೆ ನಡೆಯಿರಿ.


ಭ್ರಷ್ಟಳಾದ ಇಸ್ರಯೇಲ್ ನನಗೆ ವಿಮುಖಳಾಗಿ ವ್ಯಭಿಚಾರಿಣಿಯಂತೆ ವರ್ತಿಸಿದ ಕಾರಣದಿಂದಲೆ, ನಾನು ಅವಳನ್ನು ನಿರಾಕರಿಸಿ ವಿವಾಹ ವಿಚ್ಛೇದನ ಪತ್ರಕೊಟ್ಟದ್ದನ್ನು ಜುದೇಯವೆಂಬ ದ್ರೋಹಿಯಾದ ಅವಳ ತಂಗಿ ನೋಡಿಯೂ ಅಂಜದೆಹೋದಳು. ತಾನೂ ಹೋಗಿ ವೇಶ್ಯೆಯಂತೆ ವರ್ತಿಸಿದಳು.


ನೀವು ಮನಃಪೂರ್ವಕವಾಗಿ ನನಗೆ ವಿಧೇಯರಾದರೆ ಈ ನಾಡಿನ ಸತ್ಫಲವನ್ನು ಸವಿಯುವಿರಿ.


ರೋಗಿಗಳಾದರವರು ಅನಾಚಾರದ ನಿಮಿತ್ತ I ಬಾಧೆಗೊಳಗಾದರವರು ಪಾಪಕಾರ್ಯಗಳ ನಿಮಿತ್ತ II


ಮರೆತುಬಿಟ್ಟರು ನೀವೆಸಗಿದ ಮಹಾತ್ಕಾರ್ಯಗಳನು ಹಟಹಿಡಿದರು ತಮಗೊಬ್ಬ ನಾಯಕನ ನೇಮಿಸಿಕೊಳ್ಳಲು; ಈಜಿಪ್ಟಿಗೆ ತೆರಳಲಿದ್ದರು ಮರಳಿ ಗುಲಾಮರಾಗಲು. ನೀವಾದರೋ ಪಾಪಿಗಳನು ಕ್ಷಮಿಸುವವರು ದಯಾಪೂರಿತರು, ದೀರ್ಘಶಾಂತರು, ಕೃಪಾಳು ದೇವರು, ಅವರನು ಕೈಬಿಡದೆ ಕಾಪಾಡಿ ನಡೆಸಿದವರು.


ಆದರೆ ನೀವಾಗಲಿ, ನಿಮ್ಮ ಮಕ್ಕಳಾಗಲಿ, ನನ್ನ ಆಜ್ಞಾವಿಧಿಗಳನ್ನು ಕೈಗೊಳ್ಳದೆ, ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಹಿಂಬಾಲಿಸಿ, ಅವುಗಳಿಗೆ ಕೈಮುಗಿದರೆ,


ಸರ್ವೇಶ್ವರಸ್ವಾಮಿ, ತಮ್ಮ ದಾಸ ಮೋಶೆ ಮರಣಹೊಂದಿದ ಮೇಲೆ ಅವನ ಶಿಷ್ಯನಾದ ನೂನನ ಮಗ ಯೆಹೋಶುವನಿಗೆ ಹೀಗೆಂದು ಆಜ್ಞಾಪಿಸಿದರು:


ಸರ್ವೇಶ್ವರನ ಮಾತಿನಂತೆ ಅವರ ದಾಸ ಮೋಶೆ ಅಲ್ಲೇ ಮೋವಾಬ್ಯರ ದೇಶದಲ್ಲಿ ಮೃತನಾದನು.


ಆಗ ನಾನು ಅವರ ಮೇಲೆ ಬಹಳ ಸಿಟ್ಟುಗೊಂಡು, ಅವರನ್ನು ಬಿಟ್ಟು, ಅವರಿಗೆ ವಿಮುಖನಾಗುವೆನು. ಆದುದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಅನೇಕ ಕಷ್ಟಗಳೂ ವಿಪತ್ತುಗಳೂ ಅವರಿಗೆ ಒದಗುವುವು. ಆಗ ಅವರು, ‘ನಮ್ಮ ದೇವರು, ನಮ್ಮ ಮಧ್ಯೆ ಇಲ್ಲದೆ ಹೋದುದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿವೆ,’ ಎಂದುಕೊಳ್ಳುವರು.


ಈ ಆಜ್ಞೆಗಳಿಗೆ ವಿಧೇಯರಾಗದೆ, ನಾನು ಈಗ ಬೋಧಿಸುವ ಮಾರ್ಗವನ್ನು ಬಿಟ್ಟು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ಅವಲಂಬಿಸಿದರೆ, ನಿಮಗೆ ಶಾಪ ತಗಲುವುದು.


ನೀವು ನಿಮ್ಮ ದೇವರಾದ ಸರ್ವೇಶ್ವರನ ಮಾತನ್ನು ಕೇಳದೆಹೋದರೆ, ಅವರಿಂದ ನಿಮ್ಮ ಮುಂದೆಯೇ ನಾಶವಾಗಿಹೋಗುವ ಅನ್ಯಜನಾಂಗಗಳಂತೆ ನೀವೂ ನಾಶವಾಗಿಹೋಗುವಿರಿ.


ನನ್ನ ದಾಸನಾದ ಮೋಶೆ ಅಂಥವನಲ್ಲ ಅವನೇ ನಂಬಿಗಸ್ತ ನನ್ನ ಮನೆಯಲ್ಲೆಲ್ಲಾ.


ನನ್ನ ನಾಮಮಹತ್ತು ಈ ದೇವಾಲಯದಲ್ಲು, ಇಸ್ರಯೇಲರ ಊರುಗಳಲ್ಲು ಹಾಗು ನನಗೆ ಪ್ರಿಯವಾಗಿರುವ ಜೆರುಸಲೇಮಿನಲ್ಲು ಸದಾಕಾಲ ಇರುವುದು. ಇಸ್ರಯೇಲರು ಇನ್ನು ಮುಂದೆ ದೇಶಭ್ರಷ್ಟರಾಗಿ ಅಲೆದಾಡದೆ ತಮ್ಮ ಪಿತೃಗಳಿಗೆ ಕೊಡಲಾದ ನಾಡಿನಲ್ಲಿಯೇ ವಾಸವಾಗಿರುವಂತೆ ಮಾಡುವೆನು,” ಎಂದು ಹೇಳಿದ್ದರು.


ಪಾಲಿಸಲಿಲ್ಲ ಅವರು ದೇವರ ನಿಬಂಧನೆಯನು I ಅನುಸರಿಸಲಿಲ್ಲ ಆತನ ಧರ್ಮಶಾಸ್ತ್ರವನು II


ಸರ್ವೇಶ್ವರ ಇಂತೆನ್ನುತ್ತಾರೆ: “ಇಸ್ರಯೇಲಿನ ಜನರು ಪದೇಪದೇ ಮಾಡಿದ ಪಾಪಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ಬೆಳ್ಳಿಬಂಗಾರಕ್ಕಾಗಿ ಸಜ್ಜನರನ್ನು ಮಾರಿಬಿಡುತ್ತಾರೆ. ಒಂದು ಜೊತೆ ಜೋಡುಗಳ ಸಾಲವನ್ನು ಸಹ ತೀರಿಸಲಾಗದ ಬಡಬಗ್ಗರನ್ನೂ ವಿಕ್ರಯಿಸುತ್ತಾರೆ.


ಸರ್ವೇಶ್ವರ ಮೋಶೆಗೆ, “ನೀನು ಮೃತನಾಗಿ ಪಿತೃಗಳಲ್ಲಿಗೆ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು, ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ, ದೇವದ್ರೋಹಿಗಳಾಗಿ ತಾವು ಹೋಗುವ ನಾಡಿನಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.


“ಎಂತಲೇ ಕೈಬಿಟ್ಟೆ ಅವರನು ಹಟಮಾರಿಗಳೆಂದು I ತಮಗಿಷ್ಟಬಂದಂತೆಯೆ ನಡೆದುಕೊಳ್ಳಲಿಯೆಂದು, II


ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು; ನೀವು ನನ್ನ ವಿಧಿಗಳನ್ನು ಕೈಗೊಳ್ಳದೆ, ನನ್ನ ನಿಯಮಗಳನ್ನು ಅನುಸರಿಸದೆ, ನಿಮ್ಮ ಸುತ್ತಲಿನ ಜನಾಂಗಗಳ ಆಚಾರಗಳನ್ನೇ ಅನುಸರಿಸಿದ್ದರಿಂದ ಇದೆಲ್ಲಾ ಆಗುವುದು.”


“ನಾವು ಪಾಪಾಪರಾಧಗಳನ್ನು ಮಾಡಿ, ಕೆಟ್ಟವರಾಗಿ ನಡೆದಿದ್ದೇವೆ; ನಿಮಗೆ ವಿರುದ್ಧ ತಿರುಗಿಬಿದ್ದು, ನಿಮ್ಮ ಆಜ್ಞಾವಿಧಿಗಳನ್ನು ತೊರೆದುಬಿಟ್ಟಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು