2 ಅರಸುಗಳು 18:14 - ಕನ್ನಡ ಸತ್ಯವೇದವು C.L. Bible (BSI)14 ಆಗ ಜುದೇಯದ ಅರಸನಾದ ಹಿಜ್ಕೀಯನು ಲಾಕೀಷಿನಲ್ಲಿದ್ದ ಅಸ್ಸೀರಿಯದ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನಾನು ಅಪರಾಧಿ; ತಾವು ನನ್ನನ್ನು ಬಿಟ್ಟುಹೋಗಬೇಕು; ತಾವು ನನಗೆ ವಿಧಿಸುವಷ್ಟನ್ನೂ ಕೊಡುತ್ತೇನೆ,” ಎಂದು ಹೇಳಿ ಕಳುಹಿಸಿದನು. ಅಸ್ಸೀರಿಯದ ಅರಸನು ಹತ್ತು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನೂ ಒಂದು ಸಾವಿರ ಕಿಲೋಗ್ರಾಂ ಬಂಗಾರವನ್ನೂ ಕೊಡಬೇಕೆಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆಗ ಯೆಹೂದ್ಯರ ಅರಸನಾದ ಹಿಜ್ಕೀಯನು ಲಾಕೀಷಿನಲ್ಲಿದ್ದ ಅಶ್ಶೂರದ ಅರಸನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾನು ಅಪರಾಧಿ; ನೀನು ನನ್ನನ್ನು ಬಿಟ್ಟು ಹೋಗು. ನೀನು ನನಗೆ ವಿಧಿಸುವಷ್ಟು ದಂಡವನ್ನು ಕೊಡುತ್ತೇನೆ” ಎಂದು ಹೇಳಿ ಕಳುಹಿಸಿದನು. ಅಶ್ಶೂರದ ಅರಸನು ಮುನ್ನೂರು ತಲಾಂತು ಬೆಳ್ಳಿಯನ್ನೂ, ಮೂವತ್ತು ತಲಾಂತು ಬಂಗಾರವನ್ನೂ ಕೊಡಬೇಕೆಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆಗ ಯೆಹೂದದ ಅರಸನಾದ ಹಿಜ್ಕೀಯನು ಲಾಕೀಷಿನಲ್ಲಿದ್ದ ಅಶ್ಶೂರದ ಅರಸನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ - ನಾನು ಅಪರಾಧಿ; ನೀನು ನನ್ನನ್ನು ಬಿಟ್ಟುಹೋಗು, ನೀನು ನನಗೆ ವಿಧಿಸುವಷ್ಟನ್ನು ಕೊಡುತ್ತೇನೆ ಎಂದು ಹೇಳಿ ಕಳುಹಿಸಿದನು. ಅಶ್ಶೂರದ ಅರಸನು ಮುನ್ನೂರು ತಲಾಂತು ಬೆಳ್ಳಿಯನ್ನೂ ಮೂವತ್ತು ತಲಾಂತು ಬಂಗಾರವನ್ನೂ ಕೊಡಬೇಕೆಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆಗ ಯೆಹೂದದ ರಾಜನಾದ ಹಿಜ್ಕೀಯನು ಲಾಕೀಷಿನಲ್ಲಿದ್ದ ಅಶ್ಶೂರದ ರಾಜನಿಗೆ ಒಂದು ಸಂದೇಶವನ್ನು ಕಳುಹಿಸಿದನು. ಹಿಜ್ಕೀಯನು, “ನಾನು ತಪ್ಪು ಮಾಡಿದ್ದೇನೆ. ನನ್ನನ್ನು ಒಬ್ಬಂಟಿಗನನ್ನಾಗಿ ಬಿಡು. ನಂತರ ನೀನು ಅಪೇಕ್ಷಿಸಿದ್ದನ್ನೆಲ್ಲಾ ಕೊಡುತ್ತೇನೆ” ಎಂದು ಹೇಳಿದನು. ಆಗ ಅಶ್ಶೂರದ ರಾಜನು ಯೆಹೂದದ ರಾಜನಾದ ಹಿಜ್ಕೀಯನಿಗೆ ಸುಮಾರು ಹನ್ನೊಂದು ಟನ್ ಬೆಳ್ಳಿಯನ್ನು ಮತ್ತು ಒಂದು ಟನ್ ಚಿನ್ನವನ್ನು ಕೊಡುವಂತೆ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ ಯೆಹೂದದ ಅರಸನಾದ ಹಿಜ್ಕೀಯನು ಲಾಕೀಷಿನಲ್ಲಿದ್ದ ಅಸ್ಸೀರಿಯದ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನಾನು ತಪ್ಪು ಮಾಡಿದ್ದೇನೆ. ನನ್ನನ್ನು ಬಿಟ್ಟು ಹಿಂದಿರುಗಿ ಹೋಗು. ನೀನು ನನ್ನ ಮೇಲೆ ವಿಧಿಸುವುದನ್ನು ನಾನು ಕೊಡುತ್ತೇನೆ,” ಎಂದು ಹೇಳಿ ಕಳುಹಿಸಿದನು. ಆಗ ಅಸ್ಸೀರಿಯದ ಅರಸನು ಯೆಹೂದದ ಅರಸನಾದ ಹಿಜ್ಕೀಯನು ಹತ್ತು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನೂ, ಒಂದು ಸಾವಿರ ಕಿಲೋಗ್ರಾಂ ಬಂಗಾರವನ್ನೂ ಕೊಡಬೇಕೆಂದು ನೇಮಕಮಾಡಿದನು. ಅಧ್ಯಾಯವನ್ನು ನೋಡಿ |