2 ಅರಸುಗಳು 18:17 - ಕನ್ನಡ ಸತ್ಯವೇದವು C.L. Bible (BSI)17 ಅಸ್ಸೀರಿಯದ ಅರಸನು ಲಾಕೀಷಿನಿಂದ ಮಹಾ ಸೈನ್ಯಸಹಿತರಾದ ತರ್ತಾನ್, ರಬ್ಸಾರೀಸ್, ರಬ್ಷಾಕೆ ಎಂಬವರನ್ನು ಜೆರುಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಇವರು ದಿಣ್ಣೆ ಹತ್ತಿ ಜೆರುಸಲೇಮಿಗೆ ಬಂದು, ಅಗಸರ ಹೊಲದ ಮೇಲೆ ಹಾದುಹೋಗುವ ರಾಜಮಾರ್ಗದ ಹತ್ತಿರವಿರುವ, ಕೆರೆಯ ಕಾಲುವೆಯ ಬಳಿ, ಪಾಳೆಯ ಮಾಡಿಕೊಂಡು ಅರಸನನ್ನು ಕೂಗಿ ಕರೆದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆದರೆ ಅಶ್ಶೂರದ ಅರಸನು ಲಾಕೀಷಿನಿಂದ ಮಹಾಸೈನ್ಯ ಸಹಿತವಾಗಿ ತರ್ತಾನ್, ರಬ್ಸಾರೀಸ್, ರಬ್ಷಾಕೆ ಎಂಬುವವರನ್ನು ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಇವರು ಗಟ್ಟಾ ಹತ್ತಿ ಯೆರೂಸಲೇಮಿಗೆ ಬಂದು ಅಗಸರ ಹೊಲದ ಮೇಲೆ ಹೋಗುವ ರಾಜಮಾರ್ಗದ ಹತ್ತಿರ ಇರುವ ಕೆರೆಯ ಕಾಲುವೆಯ ಬಳಿಯಲ್ಲಿ ಪಾಳೆಯ ಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅಶ್ಶೂರದ ಅರಸನು ಲಾಕೀಷಿನಿಂದ ಮಹಾಸೈನ್ಯ ಸಹಿತರಾದ ತರ್ತಾನ್, ರಬ್ಸಾರೀಸ್, ರಬ್ಷಾಕೆ ಎಂಬವರನ್ನು ಯೆರೂಸಲೇವಿುನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಇವರು ಗಟ್ಟಾ ಹತ್ತಿ ಯೆರೂಸಲೇವಿುಗೆ ಬಂದು ಮಡಿವಾಳರ ಹೊಲದ ಮೇಲೆ ಹೋಗುವ ರಾಜಮಾರ್ಗದ ಹತ್ತಿರ ಅಲ್ಲಿನ ಕೆರೆಯ ಕಾಲುವೆಯ ಬಳಿಯಲ್ಲಿ ಪಾಳೆಯಮಾಡಿಕೊಂಡು ಅರಸನನ್ನು ಕೂಗಿ ಕರೆದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಅಶ್ಶೂರದ ರಾಜ ಜೆರುಸಲೇಮಿನಲ್ಲಿದ್ದ ರಾಜನಾದ ಹಿಜ್ಕೀಯನ ಬಳಿಗೆ ತನ್ನ ಮೂವರು ಮಹಾಸೇನಾಧಿಪತಿಗಳಾದ ತರ್ತಾನ್, ರಬ್ಸಾರೀಸ್, ರಬ್ಷಾಕೆ ಎಂಬವರನ್ನು ಮಹಾಸೈನ್ಯದೊಂದಿಗೆ ಕಳುಹಿಸಿದನು. ಅವರು ಲಾಕೀಷಿನಿಂದ ಜೆರುಸಲೇಮಿಗೆ ಹೋದರು. ಅವರು ಮೇಲಿನ ಕೆರೆಯ ನೀರಿನ ಕೊಳವೆಯ ಬಳಿ ನಿಂತರು. (ಮೇಲಿನ ಕೆರೆಯು ರಸ್ತೆಯ ಮೇಲೆ ದೋಭಿಘಾಟ್ ಬಳಿಯಿತ್ತು.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅಸ್ಸೀರಿಯದ ಅರಸನು ತನ್ನ ಅತಿ ಪ್ರಮುಖ ಅಧಿಕಾರಿಯನ್ನೂ, ಮುಖ್ಯ ನಾಯಕರನ್ನೂ, ಸೈನ್ಯಾಧಿಕಾರಿಯನ್ನೂ ಲಾಕೀಷಿನಿಂದ ದೊಡ್ಡ ಸೈನ್ಯದೊಂದಿಗೆ ರಬ್ಷಾಕೆ ಎಂಬವನನ್ನೂ ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಅವರು ಯೆರೂಸಲೇಮಿಗೆ ಬಂದು ಅಗಸರ ಹೊಲದ ಮಾರ್ಗದಲ್ಲಿ ಮೇಲಿನ ಕೆರೆಯ ಕಾಲುವೆಯ ಸಮೀಪದಲ್ಲಿ ನಿಂತುಕೊಂಡರು. ಅಧ್ಯಾಯವನ್ನು ನೋಡಿ |
ನೀನು ನಿನ್ನ ದೂತರ ಮೂಲಕ ಸರ್ವೇಶ್ವರನನ್ನು ನಿಂದಿಸಿರುವೆ, ಅಲ್ಲದೆ ಈ ಮಾತುಗಳನ್ನಾಡಿ ಜಂಬಕೊಚ್ಚಿಕೊಂಡಿರುವೆ: ‘ಹತ್ತಿದ್ದೇನೆ ಗಿರಿಶಿಖರಗಳನ್ನು ರಥಸಮೂಹದೊಡನೆ ಸೇರಿದ್ದೇನೆ ಲೆಬನೋನಿನ ದುರ್ಗಮ ಸ್ಥಳಗಳನ್ನೇ! ಕಡಿದಿದ್ದೇನೆ ಅದರ ಎತ್ತರವಾದ ದೇವದಾರು ವೃಕ್ಷಗಳನ್ನೇ ಕತ್ತರಿಸಿದ್ದೇನೆ ಅದರ ಶ್ರೇಷ್ಠವಾದ ತುರಾಯಿ ಮರಗಳನ್ನೇ ಒಳಹೊಕ್ಕಿದ್ದೇನೆ ಅಲ್ಲಿನ ದೂರದ ನಿವಾಸಸ್ಥಳಗಳನ್ನೇ, ಶಿಖರವನ್ನೇ, ಪ್ರವೇಶಿಸಿದ್ದೇನೆ ದಟ್ಟವಾದ ಆ ಕಾಡು ಮೇಡುಗಳನ್ನೇ!