Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 18:18 - ಕನ್ನಡ ಸತ್ಯವೇದವು C.L. Bible (BSI)

18 ಆಗ ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಆದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ ಮತ್ತು ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬವರು ಅಲ್ಲಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವರು ಅರಸನನ್ನು ಕೂಗಿ ಕರೆದಾಗ, ಹಿಲ್ಕೀಯನ ಮಗನೂ, ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬುವವರು ಅವರ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆಗ ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಆದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬವರು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಈ ಜನರು ರಾಜನನ್ನು ಕರೆದರು. ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಅದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಅವರನ್ನು ಭೇಟಿಮಾಡಲು ಹೊರಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವರು ಅರಸನನ್ನು ಕರೆಕಳುಹಿಸಿದರು. ಅರಮನೆಯ ಕಾರ್ಯನಿರ್ವಾಹಕನಾದ ಹಿಲ್ಕೀಯನ ಮಗ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ, ದಾಖಲೆಗಾರನಾದ ಆಸಾಫನ ಮಗ ಯೋವ ಎಂಬುವರು ಅವರ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 18:18
12 ತಿಳಿವುಗಳ ಹೋಲಿಕೆ  

ಇದಲ್ಲದೆ, ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಕಾರ್ಯದರ್ಶಿ ಶೆಬ್ನ, ಹಿರಿಯ ಯಾಜಕರು, ಇವರನ್ನು ಕರೆಯಿಸಿ, “ನೀವು ಗೋಣಿತಟ್ಟನ್ನು ಕಟ್ಟಿಕೊಂಡು, ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನ ಬಳಿಗೆ ಹೋಗಿ,


ಇದಲ್ಲದೆ, ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಕಾರ್ಯದರ್ಶಿ ಶೆಬ್ನ, ಹಿರಿಯ ಯಾಜಕರು ಇವರನ್ನು ಕರೆಸಿ : “ನೀವು ಗೋಣಿತಟ್ಟನ್ನು ಕಟ್ಟಿಕೊಂಡು, ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನ ಬಳಿಗೆ ಹೋಗಿ


ಬಳಿಕ, ಹಿಲ್ಕೀಯನ ಮಗನೂ ರಾಜ ಗೃಹಾಧಿಪತಿಯೂ ಆಗಿದ್ದ ಎಲ್ಯಾಕೀಮ್, ಕಾರ್ಯದರ್ಶಿ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬವರು ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, ಅರಸ ಹಿಜ್ಕೀಯನ ಬಳಿಗೆ ಬಂದು, ಅವನಿಗೆ ಆ ಸೇನಾಪತಿಯ ಮಾತುಗಳನ್ನು ತಿಳಿಸಿದರು.


ಆಮೇಲೆ ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಆದ ಎಲ್ಯಾಕೀಮ್, ಕಾರ್ಯದರ್ಶಿಯಾದ‍ ಶೆಬ್ನ ಮತ್ತು ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬ ಮೂವರು ಅಲ್ಲಿಗೆ ಬಂದರು.


ಅವನು ತನ್ನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ನಾಡನ್ನೂ ದೇವಾಲಯವನ್ನೂ ಶುದ್ಧಿಪಡಿಸಿದ ಮೇಲೆ ತನ್ನ ದೇವರಾದ ಸರ್ವೇಶ್ವರನ ಆಲಯವನ್ನು ದುರಸ್ತಿಮಾಡಿಸುವುದಕ್ಕಾಗಿ ಅಚಲ್ಯನ ಮಗ ಶಾಫಾನನನ್ನು ಪುರಾಧಿಕಾರಿಯಾದ ಮಾಸೇಯನನ್ನು ಮತ್ತು ಮುಖ್ಯಮಂತ್ರಿಯಾಗಿದ್ದ ಯೋವಾಹಾಜನ ಮಗ ಯೋವಾಹನನ್ನು ಕಳುಹಿಸಿದನು.


ಶೀಷನ ಮಕ್ಕಳಾದ ಎಲೀಹೋರೆಫ್ ಹಾಗು ಅಹೀಯಾಹು ಎಂಬುವರು ಕಾರ್ಯದರ್ಶಿಗಳು; ಅಹೀಲೂದನ ಮಗ ಯೆಹೋಷಾಫಾಟನು ಅವನ ಮಂತ್ರಿ;


ಅದೋರಾಮನು ಬಿಟ್ಟೀಕೆಲಸ ಮಾಡಿಸುವವನು, ಅಹೀಲೂದನ ಮಗ ಯೆಹೋಷಾಪಾಟನು ಮುಖ್ಯ ಲೇಖಕ.


ಆಗ ಹಿಲ್ಕೀಯನ ಮಗ ಎಲ್ಯಾಕೀಮ್, ಶೆಬ್ನ ಮತ್ತು ಯೋವ ಎಂಬವರು ರಬ್ಷಾಕೆಗೆ, “ದಯವಿಟ್ಟು ನಿಮ್ಮ ಸೇವಕರಾದ ನಮ್ಮೊಡನೆ ಅರಾಮಾಯಿಕ್ ಭಾಷೆಯಲ್ಲಿ ಮಾತನಾಡಿ. ಅದು ನಮಗೆ ಅರ್ಥವಾಗುತ್ತದೆ. ಆದರೆ ಹಿಬ್ರೂ ಭಾಷೆಯಲ್ಲಿ ಮಾತನಾಡಬೇಡಿ. ಅದು ಪೌಳಿಗೋಡೆಯ ಮೇಲಿರುವವರಿಗೂ ಅರ್ಥವಾಗುತ್ತದೆ,” ಎಂದರು.


ಬಳಿಕ ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಅಗಿದ್ದ ಎಲ್ಯಾಕೀಮ್, ಕಾರ್ಯದರ್ಶಿ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ, ಎಂಬವರು ಸಿಟ್ಟಿನಿಂದ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅರಸ ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.


ಇಗೋ, ವೀರರು ಹೊರಗೆ ಹಾಹಾಕಾರ ಮಾಡುತಿಹರು. ಶಾಂತಿದೂತರಾದ ರಾಯಭಾರಿಗಳು ಘೋರವಾಗಿ ಅಳುತಿಹರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು