Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 18:19 - ಕನ್ನಡ ಸತ್ಯವೇದವು C.L. Bible (BSI)

19 ರಬ್ಷಾಕೆಯು ಅವರಿಗೆ, “ನೀವು ಹೋಗಿ ಅಸ್ಸೀರಿಯದ ಮಹಾರಾಜನ ಈ ಮಾತುಗಳನ್ನು ಹಿಜ್ಕೀಯನಿಗೆ ತಿಳಿಸಿರಿ: ‘ನಿನ್ನ ಭರವಸೆಗೆ ಆಧಾರವಾದರೂ ಏನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ರಬ್ಷಾಕೆಯು ಅವರಿಗೆ, ನೀವು ಹೋಗಿ ಹಿಜ್ಕೀಯನಿಗೆ ಮಹಾರಾಜನಾದ ಅಶ್ಶೂರದ ಅರಸನ ಮಾತುಗಳನ್ನು ತಿಳಿಸಿರಿ. ಅವನು, “ನಿನ್ನ ಭರವಸಕ್ಕೆ ಯಾವ ಆಧಾರವುಂಟು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ರಬ್ಷಾಕೆಯು ಅವರಿಗೆ - ನೀವು ಹೋಗಿ ಹಿಜ್ಕೀಯನಿಗೆ ಮಹಾರಾಜನಾದ ಅಶ್ಶೂರದ ಅರಸನ ಮಾತುಗಳನ್ನು ತಿಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಸೇನಾಧಿಪತಿಗಳಲ್ಲಿ ಒಬ್ಬನಾದ ರಬ್ಷಾಕೆಯು ಅವರಿಗೆ, “ಅಶ್ಶೂರದ ಮಹಾರಾಜನು ಹಿಜ್ಕೀಯನಿಗೆ ತಿಳಿಸುವುದೇನೆಂದರೆ: ‘ನಿನ್ನ ನಂಬಿಕೆಗೆ ಆಧಾರವು ಎಲ್ಲಿದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ರಬ್ಷಾಕೆಯು ಅವರಿಗೆ, “ನೀವು ಹಿಜ್ಕೀಯನಿಗೆ ಹೀಗೆ ಹೇಳಬೇಕು: “ ‘ಮಹಾರಾಜನಾದ ಅಸ್ಸೀರಿಯದ ಅರಸನು ಹೇಳುವುದೇನೆಂದರೆ, ಈ ನಿನ್ನ ಭರವಸೆಗೆ ಆಧಾರ ಏನು?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 18:19
16 ತಿಳಿವುಗಳ ಹೋಲಿಕೆ  

ದಳಪತಿ ಅವರಿಗೆ, “ನೀವು ಹೋಗಿ ಅಸ್ಸೀರಿಯದ ಮಹಾರಾಜನ ಈ ಮಾತುಗಳನ್ನು ಹಿಜ್ಕೀಯನಿಗೆ ತಿಳಿಸಿರಿ : “ನಿನ್ನ ಭರವಸೆಗೆ ಆಧಾರವಾದರೂ ಏನು?


ಆಗ ಅವನು, “ಹಾ, ಬಾಬಿಲೋನ್ ಎಂಥಾ ಮಹಾನಗರ! ಇಗೋ, ನನ್ನ ಶಕ್ತಿ ಸಾಮರ್ಥ್ಯದಿಂದ ನಾನು ಕಟ್ಟಿಸಿರುವ ರಾಜಭವನ! ನನ್ನ ಕೀರ್ತಿ ಪರಾಕ್ರಮವನ್ನು ಇದು ಪ್ರಕಟಿಸುತ್ತಿದೆ!” ಎಂದು ಕೊಚ್ಚಿಕೊಂಡನು.


“ಜೆರುಸಲೇಮ್ ನನ್ನ ವಶವಾಗುವುದಿಲ್ಲವೆಂದು ನೀನು ನಂಬುವ ದೇವರು ನಿನಗೆ ಹೇಳಿ ನಿನ್ನನ್ನು ಮೋಸಗೊಳಿಸಬಹುದು.


ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ್ ಮತ್ತು ಇವ್ವಾ ಎಂಬ ನಗರಗಳ ಅರಸರ ಗತಿ ಏನಾಯಿತು?” ಎಂದು ಪತ್ರ ಬರೆದು ದೂತರ ಸಮೇತ ಕಳುಹಿಸಿದನು.


“ಜೆರುಸಲೇಮ್ ನನ್ನ ವಶವಾಗುವುದಿಲ್ಲವೆಂದು ನೀನು ನಂಬುವ ದೇವರು ಹೇಳಿ, ನಿನ್ನನ್ನು ಮೋಸಗೊಳಿಸಿದ್ದಾನೆ.


‘ಬಹುಶಃ, ನೀನು ‘ನಮ್ಮ ದೇವರಾದ ಸರ್ವೇಶ್ವರನನ್ನೇ ನಂಬಿಕೊಂಡಿದ್ದೇವೆ’, ಎಂದು ಹೇಳಬಹುದು. ಹಿಜ್ಕೀಯನು, ಇದೇ ಬಲಿಪೀಠದ ಮುಂದೆ ಆರಾಧನೆಮಾಡಬೇಕು ಎಂದು ಯೆಹೂದ್ಯರಿಗೆ ಮತ್ತು ಜೆರುಸಲೇಮಿನವರಿಗೆ ಆಜ್ಞಾಪಿಸಿ ಆ ಸರ್ವೇಶ್ವರ ಸ್ವಾಮಿಯ ಪೂಜಾಸ್ಥಳಗಳನ್ನೂ ಬೇರೆ ಎಲ್ಲಾ ಬಲಿಪೀಠಗಳನ್ನೂ ಹಾಳುಮಾಡಿದನಲ್ಲವೆ?


ಎಲೆ ಮಾನವ, ಎಲ್ಲಿಯತನಕ ಕೆಡಿಸುವೆ ಎನ್ನ ಘನತೆಯ? I ಅದೆಷ್ಟು ಕಾಲ ಹುರುಳಿಲ್ಲದನು ಬಯಸಿ ಅರಸುವೆ ಹುಸಿಯ? II


“ಬಹುಶಃ, ನೀವು ‘ನಮ್ಮ ದೇವರಾದ ಸರ್ವೇಶ್ವರನನ್ನೇ ನಂಬಿಕೊಂಡಿದ್ದೇವೆ,’ ಎಂದು ಹೇಳಬಹುದು. ಜೆರುಸಲೇಮಿನ ಬಲಿಪೀಠದ ಮುಂದೆಯೇ ಆರಾಧನೆಮಾಡಬೇಕು ಎಂದು ಯೆಹೂದ್ಯರಿಗೂ ಮತ್ತು ಜೆರುಸಲೇಮಿನವರಿಗೂ ಹಿಜ್ಕೀಯನು ಆಜ್ಞಾಪಿಸಿ ಆ ಸರ್ವೇಶ್ವರ ಸ್ವಾಮಿಯ ಪೂಜಾಸ್ಥಳಗಳನ್ನೂ ಬೇರೆ ಎಲ್ಲಾ ಬಲಿಪೀಠಗಳನ್ನೂ ಹಾಳುಮಾಡಿದನಲ್ಲವೆ?


ಅಸ್ಸೀರಿಯದ ಅರಸನು ಲಾಕೀಷಿನಿಂದ ಮಹಾ ಸೈನ್ಯಸಹಿತರಾದ ತರ್ತಾನ್, ರಬ್ಸಾರೀಸ್, ರಬ್ಷಾಕೆ ಎಂಬವರನ್ನು ಜೆರುಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಇವರು ದಿಣ್ಣೆ ಹತ್ತಿ ಜೆರುಸಲೇಮಿಗೆ ಬಂದು, ಅಗಸರ ಹೊಲದ ಮೇಲೆ ಹಾದುಹೋಗುವ ರಾಜಮಾರ್ಗದ ಹತ್ತಿರವಿರುವ, ಕೆರೆಯ ಕಾಲುವೆಯ ಬಳಿ, ಪಾಳೆಯ ಮಾಡಿಕೊಂಡು ಅರಸನನ್ನು ಕೂಗಿ ಕರೆದರು.


ಮುರಿದ ಜೊಂಡಿಗೆ ಸಮಾನವಾದ ಈಜಿಪ್ಟ್ ಎಂಬ ಊರುಗೋಲಿನ ಮೇಲೆ ನಿನಗೆ ಭರವಸೆಯಿದೆಯಷ್ಟೆ. ಆದರೆ ಅದು ಊರಿಕೊಳ್ಳುವವನ ಕೈಯನ್ನು ಚುಚ್ಚಿ ತಿವಿಯುವ ಕೋಲು. ಈಜಿಪ್ಟಿನ ರಾಜ ಫರೋಹನಲ್ಲಿ ಭರವಸೆಯಿಟ್ಟವರಿಗೆ ಆಗುವ ಗತಿ ಇದೇ.


ಇವನು ಇಸ್ರಯೇಲ್ ದೇವರಾದ ಸರ್ವೇಶ್ವರಸ್ವಾಮಿಯಲ್ಲೆ ಭರವಸೆಯಿಟ್ಟಿದ್ದನು. ಯೆಹೂದ್ಯರಲ್ಲಿ ಇವನಿಗೆ ಸಮಾನನಾದ ಅರಸನು ಹಿಂದೆಯೂ ಅನಂತರವೂ ಇರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು