2 ಅರಸುಗಳು 18:24 - ಕನ್ನಡ ಸತ್ಯವೇದವು C.L. Bible (BSI)24 ಇದು ಕೂಡ ನಿನಗೆ ಅಸಾಧ್ಯವಾದರೆ ನನ್ನ ಒಡೆಯನ ಸೇನಾಪತಿಗಳಲ್ಲಿ ಅತ್ಯಲ್ಪನನ್ನಾದರೂ ಸೋಲಿಸುವುದು ಹೇಗೆ ತಾನೆ ಸಾಧ್ಯ? ರಥಾಶ್ವಬಲಗಳಿಗಾಗಿ ಈಜಿಪ್ಟಿನವರನ್ನು ನೀನು ನಂಬಿಕೊಂಡಿರುವಂತೆ ಕಾಣುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಹೀಗಿದ್ದಾಗ ನೀನು ನನ್ನ ಒಡೆಯನ ಸೇನಾಧಿಪತಿಗಳಲ್ಲಿ ಅತಿ ಸಣ್ಣವನನ್ನಾದರೂ ಸೋಲಿಸುವುದು ಸಾಧ್ಯವೇ? ರಥಾಶ್ವಬಲಗಳ ವಿಷಯವಾಗಿ ನೀನು ಐಗುಪ್ತರ ಮೇಲೆ ಭರವಸೆಯಿಟ್ಟಿರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಇದೂ ನಿನಗೆ ಅಸಾಧ್ಯವಾಗುವದಾದರೆ ನನ್ನ ಒಡೆಯನ ಸೇನಾಪತಿಗಳಲ್ಲಿ ಅತ್ಯಲ್ಪನನ್ನಾದರೂ ಸೋಲಿಸುವದು ಹೇಗೆ? ರಥಾಶ್ವಬಲಗಳ ವಿಷಯವಾಗಿ ಐಗುಪ್ತ್ಯರನ್ನು ನಂಬಿರುತ್ತೀಯೆಂದು ಕಾಣುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ನನ್ನ ಒಡೆಯನ ಅಧಿಕಾರಿಗಳಲ್ಲಿ ಕನಿಷ್ಠನಾದ ಒಬ್ಬ ಅಧಿಕಾರಿಯನ್ನು ನೀನು ಸೋಲಿಸಲಾಗುವುದಿಲ್ಲ! ನಿನಗೆ ರಥಗಳನ್ನು ಮತ್ತು ಕುದುರೆಯ ಸವಾರರನ್ನು ಕೊಡಲು ನೀನು ಈಜಿಪ್ಟನ್ನು ಅವಲಂಬಿಸಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಇದಾಗದಿದ್ದರೆ ನನ್ನ ಯಜಮಾನನ ಸೇವಕರಲ್ಲಿ ಚಿಕ್ಕವನಾದ ಒಬ್ಬ ಸೈನ್ಯಾಧಿಪತಿಯನ್ನು ಹೇಗೆ ಎದುರಿಸುತ್ತೀ? ನೀನು ರಥಗಳಿಗೋಸ್ಕರವೂ, ರಾಹುತರಿಗೋಸ್ಕರವೂ ಈಜಿಪ್ಟಿನ ಮೇಲೆ ಭರವಸೆ ಇಟ್ಟಿದ್ದೀಯೋ? ಅಧ್ಯಾಯವನ್ನು ನೋಡಿ |