2 ಅರಸುಗಳು 18:3 - ಕನ್ನಡ ಸತ್ಯವೇದವು C.L. Bible (BSI)3 ಇವನು ಎಲ್ಲಾ ವಿಷಯಗಳಲ್ಲೂ ತನ್ನ ಪೂರ್ವಜ ದಾವೀದನಂತೆ ಸರ್ವೇಶ್ವರನ ಚಿತ್ತಾನುಸಾರ ನಡೆದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇವನು ಎಲ್ಲಾ ವಿಷಯಗಳಲ್ಲಿಯೂ ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಇವನು ಎಲ್ಲಾ ವಿಷಯಗಳಲ್ಲಿಯೂ ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಹಿಜ್ಕೀಯನು ತನ್ನ ಪೂರ್ವಿಕನಾದ ದಾವೀದನಂತೆ, ಯೆಹೋವನು ಯೋಗ್ಯವೆಂದು ಹೇಳಿದ್ದನ್ನು ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಹಿಜ್ಕೀಯನು ತನ್ನ ತಂದೆ ದಾವೀದನು ಮಾಡಿದ ಪ್ರಕಾರ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದನು. ಅಧ್ಯಾಯವನ್ನು ನೋಡಿ |
ಅಲ್ಲಿ ಸರ್ವೇಶ್ವರ ಇಸ್ರಯೇಲರಿಗೆ ಒಂದು ನಿಯಮವನ್ನು ಕೊಟ್ಟರು. ಅದು ಮಾತ್ರವಲ್ಲ, ಅವರನ್ನು ಪರೀಕ್ಷಿಸಿದರು. ಅವರಿಗೆ, “ನೀವು ನಿಮ್ಮ ದೇವರಾದ ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ, ನನ್ನ ದೃಷ್ಟಿಗೆ ಸರಿಬೀಳುವುದನ್ನೆ ಮಾಡಿ ನನ್ನ ಆಜ್ಞೆಗಳಿಗೆ ವಿಧೇಯರಾಗಿದ್ದು, ನನ್ನ ಕಟ್ಟಳೆಗಳನ್ನೆಲ್ಲ ಅನುಸರಿಸಿ ನಡೆದರೆ ನಾನು ಈಜಿಪ್ಟಿನವರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಮಾಡುವುದಿಲ್ಲ. ಸರ್ವೇಶ್ವರನೆಂಬ ನಾನೇ ನಿಮಗೆ ಆರೋಗ್ಯದಾಯಕ,” ಎಂದರು.