2 ಅರಸುಗಳು 18:30 - ಕನ್ನಡ ಸತ್ಯವೇದವು C.L. Bible (BSI)30 ಹಿಜ್ಕೀಯನು ನಿಮಗೆ, ‘ಸರ್ವೇಶ್ವರ ಸ್ವಾಮಿಯಲ್ಲೇ ನಂಬಿಕೆಯಿಡಿ; ಅವರು ನಿಮ್ಮನ್ನು ಹೇಗಾದರೂ ಮಾಡಿ ರಕ್ಷಿಸುವರು; ಈ ಪಟ್ಟಣವು ಅಸ್ಸೀರಿಯದ ರಾಜನ ವಶವಾಗುವುದಿಲ್ಲ,’ ಎಂಬುದಾಗಿ ಹೇಳಿದರೆ ಅವನಿಗೆ ಕಿವಿಗೊಡಬೇಡಿ, ಒಪ್ಪಿಕೊಳ್ಳಬೇಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಹಿಜ್ಕೀಯನು ನಿಮಗೆ, ‘ಯೆಹೋವನ ಮೇಲೆ ಭರವಸದಿಂದಿರಿ; ಆತನು ನಿಮ್ಮನ್ನು ಹೇಗೂ ರಕ್ಷಿಸುವನು. ಈ ಪಟ್ಟಣವು ಅಶ್ಶೂರದ ಅರಸನ ವಶವಾಗುವುದಿಲ್ಲ’ ಎಂಬುದಾಗಿ ಹೇಳಿದರೆ ಅವನ ಮಾತಿಗೆ ಕಿವಿಗೊಡಬೇಡಿರಿ, ಒಪ್ಪಬೇಡಿರಿ” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಹಿಜ್ಕೀಯನು ನಿಮಗೆ - ಯೆಹೋವನನ್ನು ನಂಬಿರಿ; ಆತನು ನಮ್ಮನ್ನು ಹೇಗೂ ರಕ್ಷಿಸುವನು; ಈ ಪಟ್ಟಣವು ಅಶ್ಶೂರದ ಅರಸನ ವಶವಾಗುವದಿಲ್ಲ ಎಂಬದಾಗಿ ಹೇಳಿದರೆ ಅವನಿಗೆ ಕಿವಿಗೊಡಬೇಡಿರಿ, ಒಪ್ಪಬೇಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಯೆಹೋವನನ್ನು ನೀವು ನಂಬುವಂತೆ ಮಾಡಲು ಹಿಜ್ಕೀಯನಿಗೆ ಅವಕಾಶ ನೀಡಬೇಡಿ! ಯೆಹೋವನು ನಮ್ಮನ್ನು ರಕ್ಷಿಸುತ್ತಾನೆ! ಅಶ್ಶೂರದ ರಾಜನು ಈ ನಗರವನ್ನು ಸೋಲಿಸಲಾಗುವುದಿಲ್ಲ!’ ಎಂದು ಹಿಜ್ಕೀಯನು ಹೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಇದಲ್ಲದೆ, ‘ಯೆಹೋವ ದೇವರು ನಮ್ಮನ್ನು ನಿಶ್ಚಯವಾಗಿ ರಕ್ಷಿಸುವರು, ಈ ಪಟ್ಟಣವು ಅಸ್ಸೀರಿಯದ ಅರಸನ ಕೈಯಲ್ಲಿ ಒಪ್ಪಿಸುವುದಿಲ್ಲ,’ ಎಂದು ಹೇಳಿ, ಹಿಜ್ಕೀಯನು ನಿಮಗೆ ಯೆಹೋವ ದೇವರಲ್ಲಿ ಭರವಸೆ ಇಡುವಂತೆ ಮಾಡುವನು. ಅಧ್ಯಾಯವನ್ನು ನೋಡಿ |